Site icon Vistara News

Kannada Cinema In OTT: ಒಟಿಟಿಗೆ ಲಗ್ಗೆ ಇಟ್ಟ ʼಬ್ಯಾಡ್‌ ಮ್ಯಾನರ್ಸ್‌ʼ, ‘O2’; ಸ್ಟ್ರೀಮಿಂಗ್ ಎಲ್ಲಿ?

Kannada Cinema In OTT bad manners 02 Kannada Movie

ಬೆಂಗಳೂರು: ಇತ್ತೀಚಿಗೆ ‘ಯುವ’, ‘ಬ್ಲಿಂಕ್’, ‘ಅವತಾರ ಪುರುಷ’-2, ‘ಶಾಖಾಹಾರಿ’, ‘ಜೂನಿ’ ರೀತಿಯ ಸಿನಿಮಾಗಳು ವೀಕ್ಷಕರನ್ನು (Kannada Cinema In OTT) ರಂಜಿಸಿವೆ. ಅದರಲ್ಲೂ ‘ಬ್ಲಿಂಕ್’ ಹಾಗೂ ‘ಶಾಖಾಹಾರಿ’ ಚಿತ್ರಗಳು ಪ್ರೇಕ್ಷಕರ ಮನ ಗೆದ್ದಿವೆ. ದುನಿಯಾ ಸೂರಿ ಹಾಗೂ ಅಭಿಷೇಕ್ ಅಂಬರೀಶ್ ಕಾಂಬಿನೇಷನ್‌ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ, ಆಶಿಕಾ ರಂಗನಾಥ್ ನಟನೆಯ ‘O2’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿವೆ.

ʼಬ್ಯಾಡ್‌ ಮ್ಯಾನರ್ಸ್‌ʼ

ʼಬ್ಯಾಡ್‌ ಮ್ಯಾನರ್ಸ್‌ʼ ಚಿತ್ರಕ್ಕೆ ದುನಿಯಾ ಸೂರಿ ನಿರ್ದೇಶನವಿದೆ. ವಿಶೇಷ ಎಂದರೆ ಈ ಚಿತ್ರದಲ್ಲಿ ಅಭಿಷೇಕ್‌ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದರು ಡಿಂಪಲ್‌ ಕ್ವೀನ್‌ ರಚಿತಾ ರಾಮ್‌. ಕಳೆದ ವರ್ಷ ನವೆಂಬರ್ 24ಕ್ಕೆ ತೆರೆಗಪ್ಪಳಿಸಿದ್ದ ‘ಬ್ಯಾಡ್‌ ಮ್ಯಾನರ್ಸ್’ ಸಿನಿಮಾ ಇದೀಗ ಸನ್‌ನೆಕ್ಸ್ಟ್ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಬ್ಯಾಡ್ ಮ್ಯಾನರ್ಸ್‌ ಹಾಡಿಗೆ ಧನು ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದರು. ಸಿನಿಮಾಟೋಗ್ರಾಫರ್ ಶೇಖರ್ ಅದನ್ನು ಅಷ್ಟೇ ಅದ್ಭುತವಾಗಿ ಸೆರೆ ಹಿಡಿದಿದ್ದರು.ಯುಗಾದಿ ಹಬ್ಬಕ್ಕೆ ಬ್ಯಾಡ್‌ ಮ್ಯಾನರ್ಸ್ ಟೈಟಲ್‌ ಟ್ರ್ಯಾಕ್‌ ಸಿನಿರಸಿಕರಿಗೆ ಸಖತ್‌ ಕಿಕ್‌ ನೀಡಿತ್ತು.

ಬಹು ಭಾಷಾ ಗಾಯಕಿ ಉಷಾ ಉತ್ತುಪ್‌ ಅವರ ಅದ್ಭುತ ಕಂಠಸಿರಿಯಲ್ಲಿ ಈ ಹಾಡು ಮೂಡಿ ಬಂದಿತ್ತು. ಗೀತೆಯಲ್ಲಿ ಅಭಿಷೇಕ್‌ ಅಂಬರೀಶ್‌ ನಿರ್ವಹಿಸಿರುವ ಪಾತ್ರದ ಚಿತ್ರಣ ಇತ್ತು. ಪ್ರತಿ ಸಾಲಿನಲ್ಲೂ ಅಭಿ ಪಾತ್ರದ ಸಾಫ್ಟ್‌ ಮತ್ತು ಹಾರ್ಡ್‌ ಮ್ಯಾನರಿಸಂನ ಝಲಕ್ ಇತ್ತು. ನಿರ್ದೇಶಕ ದುನಿಯಾ ಸೂರಿ ಅವರ ಕಲ್ಪನೆಯ ಈ ಗೀತೆಯ ಮೇಕಿಂಗ್ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಹವಾ ಕ್ರಿಯೇಟ್‌ ಮಾಡಿತ್ತು.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

‘O2’ ಸಿನಿಮಾ

ಆಶಿಕಾ ರಂಗನಾಥ್ ನಟನೆಯ ‘O2’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ನೋಡಿದವರು ಮೆಚ್ಚಿಕೊಂಡಿದ್ದರು. ನೀವು ನೋಡಿ ಎಂದು ಸಲಹೆ ನೀಡಿದ್ದರು. ಪುನೀತ್ ರಾಜ್‌ಕುಮಾರ್ ಕಥೆ ಕೇಳಿ ಒಪ್ಪಿ ತಮ್ಮ ಬ್ಯಾನರ್‌ನಲ್ಲಿ ಆರಂಭಿಸಿದ್ದ ಕೊನೆಯ ಸಿನಿಮಾ ‘O2’. ಆಶಿಕಾ ರಂಗನಾಥ್‌ ಜೊತೆ ಪ್ರವೀಣ್‌ ತೇಜ, ರಾಘವ್‌ ನಾಯಕ್‌, ಸಿರಿ ರವಿಕುಮಾರ್, ಗೋಪಾಲ್‌ ದೇಶಪಾಂಡೆ, ಪ್ರಕಾಶ್‌ ಬೆಳವಾಡಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.ಇನ್ನು ಆಶಿಕಾ ರಂಗನಾಥ್ ಮುಖ್ಯಭೂಮಿಕೆಯಲ್ಲಿರುವ ಥ್ರಿಲ್ಲರ್ ಸಿನಿಮಾ ‘O2’ ಅಮೇಜಾನ್ ಪ್ರೈಂನಲ್ಲಿ ಸಿಗುತ್ತಿದೆ. ಸೂರಿ ನಿರ್ದೇಶನದ ‘ಬ್ಯಾಡ್‌ ಮ್ಯಾನರ್ಸ್’ ಬಾಕ್ಸ್‌ಆಫೀಸ್‌ನಲ್ಲಿ ಸದ್ದು ಮಾಡಿರಲಿಲ್ಲ. ’02’ ಒಂದು ಮೆಡಿಕಲ್‌ ಥ್ರಿಲ್ಲರ್‌ ಸಿನಿಮಾ.

Exit mobile version