ಬೆಂಗಳೂರು: ನಟ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ (Kannada New Movie) ಈಗ ಆದಿತ್ಯ ಶಶಿಕುಮಾರ್ (Aditya Shashikumar) ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. `ಕಾದಾಡಿ’ (Kaadaadi Movie Kannada) ಎನ್ನುವ ಚಿತ್ರದಲ್ಲಿ ಆದಿತ್ಯ ಶಶಿಕುಮಾರ್ ನಟಿಸಿದ್ದಾರೆ. ಕನ್ನಡ, ತೆಲುಗು,ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸಿದ್ದಗೊಂಡಿರುವ ಸಿನಿಮಾವನ್ನು ಸತೀಶ್ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ. ಪ್ರಚಾರದ ಸಲುವಾಗಿ ಮೊನ್ನೆಯಷ್ಟೇ ನಾಯಕನ ಪರಿಚಯದ ಎರಡನೇ ಲಿರಿಕಲ್ ವಿಡಿಯೋ ಹಾಡನ್ನು ಬಿಡುಗಡೆ ಮಾಡಲಾಗಿದೆ.
ಎನ್.ಮಾರುತಿ ಸಾಹಿತ್ಯದ ’ಕಲೆಯು ಇರಬೇಕು, ಮನೆಯು ಇರಬೇಕುʼʼ ಹಾಡಿಗೆ ಶಶಾಂಕ್ ಶೇಷಗಿರಿ ಧ್ವನಿಯಾಗಿದ್ದಾರೆ. ನಮ್ಮ ಜೀವನವನ್ನು ತ್ಯಾಗ ಮಾಡುವ ಮೂಲಕ ಸಮಾಜಕ್ಕೆ ಏನನ್ನಾದರೂ ಕೊಡಬೇಕು. ಇಂತಹ ಅಂಶಗಳನ್ನು ಥ್ರಿಲ್ಲರ್ ಮೂಲಕ ತೋರಿಸುವ ಪ್ರಯತ್ನ ಮಾಡಲಾಗಿದೆ.
ಲಾವಣ್ಯಸಾಹುಕಾರ, ಚಾಂದಿನಿತಮಿಳರಸನ್ ಈ ಸಿನಿಮಾಗೆ ನಾಯಕಿಯರು. ಉಳಿದಂತೆ ಪೋಸಾನಿ, ರವಿಕಾಳೆ, ಮಾರಿಮುತ್ತು, ಪ್ರೇಮ್‌ಮನೋಹರ್, ಶ್ರವಣ್‌ರಾಘವೇಂದ್ರ ಮುಂತಾದವರು ನಟಿಸಿದ್ದಾರೆ. ಆರು ಹಾಡುಗಳಿಗೆ ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜಿಸಿದ್ದಾರೆ. ಡಿ.ಯೋಗಿಪ್ರಸಾದ್ ಛಾಯಾಗ್ರಹಣ ಡಿ.ಯೋಗಿಪ್ರಸಾದ್, ಕಲೆ ಅರ್ಜುನ್ ಸೂರಿ ಸೆಟ್ಟಿ, ಪ್ರಕಾಶ್‌ತೋಟ ಸಂಕಲನ, ನೃತ್ಯ ರಾಜ್‌ಪಿಡಿ-ರಾಜ್‌ಕೃಷ್ಣ, ಸಾಹಸ ಸಿನಿಮಾಕ್ಕಿದೆ.
ಇದನ್ನೂ ಓದಿ: Kannada New Movie: ʼಕೋಟಿʼ ಚಿತ್ರಕ್ಕೆ ಕಿಚ್ಚನ ಬಲ; ಹೊಸ ಪೋಸ್ಟರ್ ರಿಲೀಸ್
ಗೋವಾ, ಚಿಕ್ಕಮಗಳೂರು, ಹೈದರಬಾದ್, ಚೆನ್ನೈ ಸುಂದರ ತಾಣಗಳಲ್ಲಿ ಚಿತ್ರೀಕರಣ ಸನಡೆಸಲಾಗಿದೆ. ಅಂದಹಾಗೆ ಸಿನಿಮಾವು ಜೂನ್ ತಿಂಗಳಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.
90ರ ದಶಕದಲ್ಲಿ ಯಶಸ್ವಿಯ ಉತ್ತುಂಗದಲ್ಲಿದ್ದ ಶಶಿಕುಮಾರ್ ಕನ್ನಡ, ತಮಿಳು ಮತ್ತು ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದು ಸೈ ಎನಿಸಿಕೊಂಡಿದ್ದರು. ಇದೀಗ ಅವರ ಪುತ್ರ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದು ತಂದೆಯಂತೆ ಆದಿತ್ಯ ಸ್ಯಾಂಡಲ್ವುಡ್ ನಲ್ಲಿ ತಮ್ಮ ಮಿಂಚು ಹರಿಸುತ್ತಾರೆ ಕಾದು ನೋಡಬೇಕು.