Site icon Vistara News

Kannada New Movie: ’ಶಾಖಾಹಾರಿ’ ಸಿನಿಮಾಗೆ ಸಾಥ್ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್!

Kannada New Movie ashwini puneeth rajkumar suppor

ಬೆಂಗಳೂರು: ಕನ್ನಡ ಚಿತ್ರರಂಗದ (Kannada New Movie) ಅದ್ಭುತ ಕಲಾವಿದರಲ್ಲಿ ಒಬ್ಬರು ರಂಗಾಯಣ ರಘು. ಅವರ ಅಮೋಘ ಅಭಿನಯದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಸಂದೀಪ್ ಸುಂಕದ್ ಚೊಚ್ಚಲ ಹೆಜ್ಜೆ ʻಶಾಖಾಹಾರಿʼ. ಈ ಸಿನಿಮಾದಲ್ಲಿ ರಂಗಾಯಣ ರಘು ಗಂಭೀರ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸನ್ನದ್ಧರಾಗಿದ್ದಾರೆ.

ಇದೇ ತಿಂಗಳ 16ರಂದು ಮಲೆನಾಡ ಸೊಗಡಿನ ಥ್ರಿಲ್ಲಿಂಗ್ ಕಥಾಹಂದರ `ಶಾಖಾಹಾರಿ’ ಸಿನಿಮಾ ತೆರೆಗೆ ಬರುತ್ತಿದೆ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಅದರ ಭಾಗವೆಂಬಂತೆ ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಪ್ರೀ ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ನಿರ್ದೇಶಕ ಸುಕ್ಕ ಸೂರಿ ವಿಶೇಷ ಅಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಸಾಥ್ ಕೊಟ್ಟರು. ಇದೇ ವೇಳೆ ರಂಗಾಯಣ ರಘು ಅವರಿಗೆ ಶಾಖಾಹಾರಿ ಸಿನಿ ಬಳಗ ಅಭಿನಯಾಸುರು ಎಂಬ ಬಿರುದು ನೀಡಿ ಗೌರವಿಸಿತು. ಇಲ್ಲಿವರೆಗೂ ಯಾವುದೇ ಚಿತ್ರತಂಡ ಅವರಿಗೆ ಈ ರೀತಿ ಬಿರುದು ಕೊಟ್ಟಿರಲಿಲ್ಲ. ಇದೇ ಮೊದಲ ಬಾರಿಗೆ ಅವರ ಕಲಾಸೇವೆ ಚಿತ್ರತಂಡ ಈ ರೀತಿ ಗೌರವ ಸೂಚಿಸಿದೆ.

ಇದೇ ವೇಳೆ ಮಾತನಾಡಿದ ನಿರ್ದೇಶಕ ದುನಿಯಾ ಸೂರಿ ಮಾತನಾಡಿ, ʻʻಈ ಹಿಂದೆ ನಾವು ಯೋಗರಾಜ್ ಮಣಿ ಎಂಬ ಸಿನಿಮಾ ಮಾಡಬೇಕಾದರೆ ರಘು ಸರ್ ಸಗುತ್ತಾರೆ. ನಮಗೆ ಅಲ್ಲಿಂದ ದೊಡ್ಮನೆ ಹುಡುಗ ಸಿನಿಮಾದವರೆಗೂ ಜತೆಯಲಿ ಇದ್ದರು. ಈ ನಡುವೆ ಅಣ್ಣ ಮಾಡುವ ಪಾತ್ರ ಇಲ್ಲ ಎಂದು ಬಿಟ್ಟುಕೊಡುತ್ತೇವೆ. ನಾನು ಒಂದು ವಿಷಯ ತೆಗೆದುಕೊಂಡು ಹೋದರೆ ಅದಕ್ಕೊಂದು ಹಿನ್ನೆಲೆ ಹೇಳಿ ಗಟ್ಟಿ ಮಾಡುತ್ತಾರೆ. ಯೋಗರಾಜ್, ಸರ್ ನಮಗೆ ಗುರು. ಅನುಭವ ಹೇಳ್ತಾರೆ, ಹೆದರಬೇಡ ಅಂತಾರೇ. ನಾನು ಆಕ್ಷನ್ ಕಟ್ ಹೇಳಬಹುದು. ನಾನು ಇಂದು ಏನಾದ್ರೂ ಮಾಡಿದ್ದೇನೆ ಎಂದರೆ ಅದರಲ್ಲಿ ರಘು ಸರ್ ದ್ದೂ ದೊಡ್ಡ ಪಾಲು. ನಮ್ಮ ಬರವಣಿಗೆಯನ್ನು ಸ್ಕ್ರೀನ್ ಗೆ ತರುವುದು ಇದೆಯಲ್ಲ. ಅದಕ್ಕೆ ಕಲಾವಿದ ಜೀವ ತುಂಬಬೇಕು. ನನಗೆ ಅನಿಸುತ್ತದೆ ನಾವು ರಘು ಸರ್ ಅವರನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲವೇನೋ? ಅನಿಸುತ್ತೆʼʼ ಎಂದರು.

ಇದನ್ನೂ ಓದಿ: Kannada New Movie: ಸಂಕ್ರಾಂತಿಯಲ್ಲಿ ಮುಹೂರ್ತ ಕಂಡಿದ್ದ ʻಶಭ್ಬಾಷ್’ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

ರಂಗಾಯಣ ರಘು ಮಾತನಾಡಿ, “ನನ್ನ ಒಟ್ಟು ಜೀವನದಲ್ಲಿ ನನಗೆ ತುಂಬಾ ಅಮೂಲ್ಯ ನೆನಪು ಕೊಟ್ಟಂತಹವರು ಸೂರಿ ಅವರು ಹಾಗೂ ಅಶ್ವಿನಿ ಮೇಡಂ. ನಾನು ಇಂಡಸ್ಟ್ರೀ್ಗೆ ಬಂದು ಸುಮಾರು 35 ವರ್ಷವಾಯ್ತು. ನಾನು ಒಂದ ಸಿನಿಮಾಗೋಸ್ಕರ ಬಂದವನು. 94 ರಿಂದ 2001ರವೆಗೆ ನಾನು ಮಾಡಿದ ಸಿನಿಮಾಗಳ ಬಗ್ಗೆ ಊರಲೆಲ್ಲಾ ಹಾಗೇ ಮಾಡಿದ್ದೇನೆ. ಹೀಗೆ ಮಾಡಿದ್ದೇನೆ ಹೇಳಿಕೊಂಡು ಬರುತ್ತಿದ್ದೆ. ರಂಗಾಯಣದ ಬಗ್ಗೆ ನಾನು ಎಷ್ಟು ನೆನಪು ಮಾಡಿಕೊಂಡರೇ ಸಾಲದು. ನನ್ನದು 350 ಸಿನಿಮಾವಾಗಿದೆ. ಈ ರೀತಿ ಪಾತ್ರ ಮಾಡಬೇಕು ಎಂದು ನಾನು ಯೋಚಿಸಿಲ್ಲ ಅಪ್ಪು ಸರ್ ಋಣ ಜಾಸ್ತಿ ಇದೆ, ಮೇಡಂ ಬಂದಿರುವುದು ಅಷ್ಟೇ ಖುಷಿಯಾಗುತ್ತಿದೆ. ನಮಗೆ ದೊಡ್ಮನೆಯಿಂದ ದೊಡ್ಡ ಆಶೀರ್ವಾದ ಸಿಕ್ಕಿದೆ. ಇಡೀ ಇಂಡಸ್ಟ್ರೀಯ ಎಲ್ಲಾ ನಟರ ಜೊತೆ ಮಾಡಿದ್ದೇನೆ. ಹೊಸಬರ jತೆಯೂ ಮಾಡಿದ್ದೇನೆ. ಹೊಸಬರು ಮತ್ತಷ್ಟು ಬರಲಿ’ ಎಂದರು.

ನಿರ್ದೇಶಕ ಸಂದೀಪ್ ಸುಂಕದ್ ಮಾತನಾಡಿ, “ಇದೇ ತಿಂಗಳ 16 ಸಿನಿಮಾ ರಿಲೀಸ್ ಆಗುತ್ತಿದೆ. ಸಿನಿಮಾ ರೆಡಿಯಾಗುವವರೆಗೂ ಅದೊಂದು ಆರ್ಟ್. ರೆಡಿಯಾದ್ಮೇಲೆ ಅದೊಂದು ಪ್ರಾಡಕ್ಟ್‌. ಪ್ರಾಡೆಕ್ಟ್ ಬಳಿಕ ಬ್ಯುಸಿನೆಸ್ ಆಗುತ್ತದೆ. ಬ್ಯುಸಿನೆಸ್ ಬಳಿಕ ಮಾರ್ಕೆಟ್ ಬರುತ್ತದೆ. ಒಂದೊಳ್ಳೆ ಪ್ರಾಡಕ್ಟ್‌ಗೆ ಒಂದೊಳ್ಳೆ ಬ್ಯುಸಿನೆಸ್ ಆಗುತ್ತೇ ಎಂಬ ನಂಬಿಕೆ ಇದೆ. ಇದೇ ನಂಬಿಕೆಯಿಂದ ಸಿನಿಮಾ ತೆರೆಗೆ ಬರ್ತಿದ್ದು, ನಿಮ್ಮ ಬೆಂಬಲ ಇರಲಿ” ಎಂದರು.

ಶಿವಮೊಗ್ಗದ ತೀರ್ಥಹಳ್ಳಿಯ ಒಂದು ಊರಿನಲ್ಲಿ ನಡೆಯುವ ಕಥೆ. ಮಲೆನಾಡಿನಲ್ಲಿ ನಡೆಯುವ ಒಂದಿಷ್ಟು ನಿಗೂಢ ಘಟನೆಗಳ ಸುತ್ತಮುತ್ತ ಈ ಕಥೆಯನ್ನು ಹೆಣೆಯಲಾಗಿದೆ. ರಂಗಾಯಣ ರಘು ಅಡುಗೆ ಭಟ್ಟನಾಗಿ, ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಹಾಗೇ ಸುಜಯ್ ಶಾಸ್ತ್ರಿ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ಸಿನಿಮಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನ ‘ಶಾಖಾಹಾರಿ’ ಸಿನಿಮಾ ಬಂಡವಾಳ ಹೂಡಿದ್ದಾರೆ. ನಿರ್ದೇಶಕ ಸಂದೀಪ್‌ ಜೊತೆಗಾಗಿ ವಿಶ್ವಜಿತ್ ರಾವ್ ಕ್ಯಾಮರಾ, ಶಶಾಂಕ್ ನಾರಾಯಣ ಎಡಿಟಿಂಗ್, ಮಯೂರ್ ಅಂಬೆಕಲ್ಲು ಸಂಗೀತ ಈ ಸಿನಿಮಾಗಿದೆ. ಪ್ರಚಾರದ ಪಡಸಾಲೆಯಲ್ಲಿರುವ ಚಿತ್ರತಂಡ ಇದೇ ತಿಂಗಳ 16ರಂದು ಚಿತ್ರವನ್ನು ತೆರೆಗೆ ತರುತ್ತಿದೆ.

Exit mobile version