Kannada New Movie: `ವಿಷ್ಣುಪ್ರಿಯ'ನ ರೊಮ್ಯಾಂಟಿಕ್ ಹಾಡಿಗೆ ಪ್ರೇಕ್ಷಕರು ಫಿದಾ! - Vistara News

ಸ್ಯಾಂಡಲ್ ವುಡ್

Kannada New Movie: `ವಿಷ್ಣುಪ್ರಿಯ’ನ ರೊಮ್ಯಾಂಟಿಕ್ ಹಾಡಿಗೆ ಪ್ರೇಕ್ಷಕರು ಫಿದಾ!

Kannada New Movie: ಇದೀಗ ದಿನದಿಂದ ದಿನಕ್ಕೆ ಆ ಹಾಡು ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ. ಕೇಳಿದಾಕ್ಷಣವೇ ಪ್ರೇಮದೂರಿಗೆ ಕೈ ಹಿಡಿದು ಕರೆದೊಯ್ಯುವ ಛಾತಿ ಹೊಂದಿರುವ ಆ ಪ್ರೇಮಗೀತೆ ಹೆಚ್ಚೆಚ್ಚು ವೀಕ್ಷಣೆ ಪಡೆದುಕೊಳ್ಳುತ್ತಾ, ಮೆಚ್ಚುಗೆ ಗಳಿಸುತ್ತಾ ಮುಂದುವರಿಯುತ್ತಿದೆ.

VISTARANEWS.COM


on

Kannada New Movie Chiguru Chiguru Video Song Vishnu Priya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತೊಂಬತ್ತರ ದಶಕದ ಸಮ್ಮೋಹಕ ಪ್ರೇಮ ಕಥಾನಕ ಹೊಂದಿರುವ ಚಿತ್ರ (Kannada New Movie) `ವಿಷ್ಣುಪ್ರಿಯ’. ಈ ಹಿಂದೆ ʻಪಡ್ಡೆಹುಲಿʼಯಾಗಿ ಭರವಸೆ ಮೂಡಿಸಿದ್ದ ಶ್ರೇಯಸ್ ಮಂಜು ವಿಷ್ಣುಪ್ರಿಯನಾಗಿ, ವಿಶಿಷ್ಟವಾದ ಪಾತ್ರದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಈ ಚಿತ್ರದ ಚೆಂದದ ಹಾಡೊಂದು ವಾರಗಳ ಹಿಂದೆ ಬಿಡುಗಡೆಗೊಂಡಿತ್ತು. ಇದೀಗ ದಿನದಿಂದ ದಿನಕ್ಕೆ ಆ ಹಾಡು ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ. ಕೇಳಿದಾಕ್ಷಣವೇ ಪ್ರೇಮದೂರಿಗೆ ಕೈ ಹಿಡಿದು ಕರೆದೊಯ್ಯುವ ಛಾತಿ ಹೊಂದಿರುವ ಆ ಪ್ರೇಮಗೀತೆ ಹೆಚ್ಚೆಚ್ಚು ವೀಕ್ಷಣೆ ಪಡೆದುಕೊಳ್ಳುತ್ತಾ, ಮೆಚ್ಚುಗೆ ಗಳಿಸುತ್ತಾ ಮುಂದುವರಿಯುತ್ತಿದೆ.

ಚಿಗುರು ಚಿಗುರು ಸಮಯ ಹಿತವಾದ ಒಂದು ಮೌನ, ಒಲವು ಚಿಗುರೊ ಸಮಯ ಎದೆ ಬೇರಿನಲ್ಲಿ ಮೌನ… ಎಂಬ ಈ ಹಾಡು ಸಂಗೀತ, ಸಾಹಿತ್ಯ ಹಾಗೂ ದೃಷ್ಯ ಸೇರಿದಂತೆ ಎಲ್ಲ ಕೋನಗಳಲ್ಲಿಯೂ ಸಮ್ಮೋಹಕವಾಗಿದೆ. ಇದಕ್ಕೆ ಸಾಹಿತ್ಯ ಒದಗಿಸಿರುವವರು ಡಾ. ವಿ ನಾಗೇಂದ್ರ ಪ್ರಸಾದ್. ಬಹುಶಃ ಈ ಮೂಲಕ ವರ್ಷಾರಂಭದಲ್ಲಿಯೇ ನವಿರು ಭಾವವೊಂದನ್ನು ನಾಗೇಂದ್ರ ಪ್ರಸಾದ್ ಕೇಳುಗರ ಬೊಗಸೆ ತುಂಬಿಸಿದ್ದಾರೆ. ನಜೀನ್ ಅರ್ಷಾದ್ ಕಂಠಸಿರಿಯಲ್ಲಿ ಈ ಹಾಡು ಅತ್ಯಂತ ಪರಿಣಾಮಕಾರಿಯಾಗಿ ಮೂಡಿ ಬಂದಿದೆ. ಈ ಮೂಲಕ ಕೇರಳದ ಪ್ರಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಕನ್ನಡದಲ್ಲಿಯೂ ಕಮಾಲ್ ಮಾಡಿದ್ದಾರೆ.

ಮತ್ತೆ ಮತ್ತೆ ಕೇಳಿಸಿಕೊಳ್ಳುವ ಗುಣ ಹೊಂದಿರುವ ಈ ಪ್ರೇಮ ಗೀತೆಯ ಪ್ರಭೆಯಲ್ಲಿ ವಿಷ್ಣುಪ್ರಿಯನ ಕ್ರೇಜ್ ಮತ್ತಷ್ಟು ಮಿರುಗುತ್ತಿದೆ. ಈ ವರ್ಷದ ಮೆಲೋಡಿಯಸ್ ಹಾಡೆಂದು ಗುರುತಿಸಿಕೊಳ್ಳುವ ಎಲ್ಲ ಗುಣಗಳೂ ಈ ಚಿಗುರು ಚಿಗುರು ಹಾಡಿಗಿದೆ. ಅಂದಹಾಗೆ, ಇದು ವಿ.ಕೆ ಪ್ರಕಾಶ್ ನಿರ್ದೇಶನದ ಚಿತ್ರ. ತೊಂಬತ್ತರ ದಶಕದಲ್ಲಿ ಘಟಿಸುವ ಈ ಕಥನದಲ್ಲಿ ಶ್ರೇಯಸ್ ಮಂಜು ನಾಯಕನಾಗಿ ನಟಿಸಿದ್ದರೆ, ಒರು ಅಡಾರ್ ಲವ್ ಖ್ಯಾತಿಯ ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ನಾಯಕಿಯಾಗಿ ಜೊತೆಯಾಗಿದ್ದಾರೆ. ಈ ಪ್ರೇಮಕಥೆ ಅದೆಷ್ಟು ತಾಜಾತನದಿಂದ ನಳನಳಿಸುತ್ತಿದೆ ಎಂಬುದರ ಸ್ಪಷ್ಟ ಸೂಚನೆಯೊಂದು ಈ ಹಾಡಿನ ಮೂಲಕವೇ ಪ್ರೇಕ್ಷಕರನ್ನು ತಲುಪಿಕೊಂಡಿದೆ.

ಇದನ್ನೂ ಓದಿ: Kannada New Movie: ’ಶಾಖಾಹಾರಿ’ ಸಿನಿಮಾಗೆ ಸಾಥ್ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್!

ಗಂಡುಗಲಿ ಕೆ.ಮಂಜು ನಿರ್ಮಾಣದ ವಿಷ್ಣುಪ್ರಿಯ ಚಿತ್ರದಲ್ಲಿ ಸುಚೇಂದ್ರಪ್ರಸಾದ್, ಅಚ್ಯುತ್ ಕುಮಾರ್ ಮುಂತಾದವರು ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ. ಇದು ಪ್ರೇಮಕಥೆ ಮಾತ್ರವಲ್ಲ; ತೊಂಬತ್ತರ ದಶಕದಲ್ಲಿ ನಡೆದಿದ್ದ ನೈಜ ಕಥನವೂ ಹೌದು. ಈ ಹಿಂದೆ ಮೊದಲ ಚಿತ್ರ ಪಡ್ಡೆಹುಲಿಯಲ್ಲಿ ಮೈದುಂಬಿ ನಟಿಸುವ ಮೂಲಕ ಸೈ ಅನ್ನಿಸಿಕೊಂಡಿದ್ದವರು ಶ್ರೇಯಸ್ ಮಂಜು. ಅವರ ಪಾತ್ರದ ಚಹರೆಗಳು ಈ ಹಾಡಿನ ಮೂಲಕ ಜಾಹೀರಾಗಿದೆ. ಈ ಹಾಡು ಕೇಳಿದವರು, ನೋಡಿದವರೆಲ್ಲ ವಿಷ್ಣುಪ್ರಿಯನನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Hombale Films: ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ಸಿನಿಮಾದಲ್ಲಿ ಇರಲಿದ್ಯಾ ಹಿಂದಿ ಹೇರಿಕೆ ವಿವಾದ? ಕೀರ್ತಿ ಸುರೇಶ್‌ ಹೇಳಿದ್ದೇನು?

Hombale Films: ಇತ್ತೀಚೆಗೆ ಈ ಕಾಮಿಡಿ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ನೆರವೇರಿದೆ. ಎನ್‌ಸಿಸಿ ಕೆಡೆಟ್ ಆಗಿ ಚಿತ್ರದಲ್ಲಿ ಕೀರ್ತಿ ಸುರೇಶ್ ಕಾಣಿಸಿಕೊಂಡಿದ್ದಾರೆ. ಚಿತ್ರದ ಟೀಸರ್ ನೋಡಿದಾಗ ಹಿಂದಿ ಹೇರಿಕೆ ವಿರುದ್ಧ ನಾಯಕಿ ಹೋರಾಟ ಮಾಡುವುದನ್ನು ನೋಡಬಹುದು.

VISTARANEWS.COM


on

Hombale Films Keerthy Suresh Talks 'Raghu Thatha' and Anti-Hindi Speculations
Koo

ಬೆಂಗಳೂರು: `ಕೆಜಿಎಫ್‌ʼ ಸರಣಿ, ʼಕಾಂತಾರʼ, ʼಸಲಾರ್‌ʼ ಮುಂತಾದ ಚಿತ್ರಗಳನ್ನು ನಿರ್ಮಿಸಿ ದೇಶಾದ್ಯಂತ ಸಂಚಲನ ಸೃಷಿಸಿದ ಕನ್ನಡದ ಹೊಂಬಾಳೆ ಫಿಲ್ಮ್ಸ್‌ನ (Hombale Films) ಮೊದಲ ತಮಿಳು ಸಿನಿಮಾ ‘ರಘು ತಾತಾ’ (Raghu Thatha). ಇದುವರೆಗೂ ಕನ್ನಡ, ತೆಲುಗು ಮತ್ತು ಮಲಯಾಳಂ ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್‌ ನ ಮೊದಲ ಈ ತಮಿಳು ಸಿನಿಮಾದಲ್ಲಿ ಬಹುಭಾಷಾ ನಟಿ, ಪ್ರತಿಭಾವಂತ ಕಲಾವಿದೆ ಕೀರ್ತಿ ಸುರೇಶ್‌ (Keerthy Suresh) ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಈ ಕಾಮಿಡಿ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ನೆರವೇರಿದೆ. ಎನ್‌ಸಿಸಿ ಕೆಡೆಟ್ ಆಗಿ ಚಿತ್ರದಲ್ಲಿ ಕೀರ್ತಿ ಸುರೇಶ್ ಕಾಣಿಸಿಕೊಂಡಿದ್ದಾರೆ. ಚಿತ್ರದ ಟೀಸರ್ ನೋಡಿದಾಗ ಹಿಂದಿ ಹೇರಿಕೆ ವಿರುದ್ಧ ನಾಯಕಿ ಹೋರಾಟ ಮಾಡುವುದನ್ನು ನೋಡಬಹುದು.

ಆಗಸ್ಟ್‌ನಲ್ಲಿ ಪ್ರಥಮ ಪ್ರದರ್ಶನಗೊಳ್ಳಲಿದೆ. ಸಮಾರಂಭದಲ್ಲಿ ಮಾತನಾಡಿದ ಕೀರ್ತಿ, ” ‘ರಘು ತಾತಾ’ ” ಚಿತ್ರದಲ್ಲಿ ನಟಿಸುವ ಬಗ್ಗೆ ಮೊದಲು ಹಲವಾರು ಪ್ರಶ್ನೆಗಳು ಇತ್ತು. ಹಿಂದೆ ಹೇರಿಕೆ ಅನ್ನೋದನ್ನು ಇಟ್ಟುಕೊಂಡು ಕಥೆಯನ್ನು ಕೊಂಡು ಹೋಗಿದ್ದಾರೆ. ಈ ಚಿತ್ರದಲ್ಲಿ ಯಾವುದೇ ವಿವಾದ, ರಾಜಕೀಯ ಅಂಶ ಇಲ್ಲ. ಫನ್ ಮಾತ್ರ ಇದೆ. ಇದೊಂದು ಕಾಮೆಡಿ ಎಂಟರ್‌ಟೈನರ್ ಸಿನಿಮಾ. ಟೀಸರ್‌ನಲ್ಲಿ ಹಿಂದಿ ಹೇರಿಕೆ ಬಗ್ಗೆ ನೋಡಿರಬಹುದು. ಮುಖ್ಯವಾಗಿ ಇದು ಹೇರಿಕೆಯ ಬಗ್ಗೆ ಇರುವ ಕಥೆ. ಹೆಣ್ಣುಮಕ್ಕಳ ಮೇಲಿನ ಹೇರಿಕೆಯ ಕುರಿತಾದ ಸಿನಿಮಾʼʼಎಂದರು..

‘ರಘು ತಾತಾ’ ಚಿತ್ರದಲ್ಲಿ ಕೀರ್ತಿ ಸುರೇಶ್ ನಟಿಸಿದ್ದಾರೆ. ಜೊತೆಗೆ MS ಭಾಸ್ಕರ್, ದೇವದರ್ಶಿನಿ ಮತ್ತು ರವೀಂದ್ರ ವಿಜಯ್ ಪೋಷಕ ತಾರಾಗಣದಲ್ಲಿದ್ದಾರೆ. ಸೀನ್ ರೋಲ್ಡನ್ ಬರೆದಿರುವ ಈ ಚಿತ್ರವನ್ನು ಸುಮನ್ ಕುಮಾರ್ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: Niveditha Shivarajkumar: ʻಫೈರ್ ಫ್ಲೈ’ ಸಿನಿಮಾಗೆ ‘ಹೆಂಗೆ ನಾವು’ ಹುಡುಗಿ ನಾಯಕಿ! ಯಾವಾಗ ತೆರೆಗೆ?

ಈ ಹಿಂದೆ, ‘ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ʼʼರಘುತಾತಾ’ ಮಹಿಳಾ ಪ್ರಧಾನ ಕಥೆಯನ್ನೊಳಗೊಂಡ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರ ಅಸಿತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎಂಬುದನ್ನು ಈ ಕಥೆಯಲ್ಲಿ ಹಾಸ್ಯಮಯವಾಗಿ ಚಿತ್ರಿಸಲಾಗಿದೆʼʼ ಎಂದು ಚಿತ್ರತಂಡ ಈ ಹಿಂದೆ ಹೇಳಿಕೊಂಡಿತ್ತು. 

ಈ ಸಿನಿಮಾ ಅಗಸ್ಟ್‌ 15ರಂದು ತೆರೆಗೆ ಅಪ್ಪಳಿಸಲಿದೆ. ಎಂ.ಎಸ್. ಭಾಸ್ಕರ್, ದೇವದರ್ಶಿನಿ, ರವೀಂದ್ರ ವಿಜಯ್, ಆನಂದ್‌ಸಾಮಿ, ರಾಜೇಶ್ ಬಾಲಕೃಷ್ಣನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಯಾಮಿನಿ ಯಜ್ನಮೂರ್ತಿ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದು, ʼಜೈ ಭೀಮ್ʼ ಖ್ಯಾತಿಯ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Chaitra Vasudevan: ನಾನು ಸಿಲ್ಲಿ ಹುಡುಗಿ ಅಲ್ಲ..ನನ್ನಂತವರಿಗೂ ಮೋಸ ಆಗುತ್ತದೆ ಅಂದುಕೊಂಡಿರಲಿಲ್ಲ ಎಂದ ಆ್ಯಂಕರ್ ಚೈತ್ರಾ!

Chaitra Vasudevan: ಈವೆಂಟ್‌ವೊಂದರಲ್ಲಿ ಚೈತ್ರಾ ಅವರನ್ನ ನೋಡಿ ಉದ್ಯಮಿ ಸತ್ಯ ನಾಯ್ಡು (Sathya Naidu) ಅವರು ಇಷ್ಟಪಟ್ಟು ಹಿರಿಯರನ್ನ ಒಪ್ಪಿಸಿ, 2017ರಲ್ಲಿ ಮದುವೆಯಾದರು. ಆದರೆ ಜೋಡಿ ತಮ್ಮ ಮಧ್ಯೆ ಇರುವ ಸಮಸ್ಯೆಯನ್ನ ಸರಿಪಡಿಸಿಕೊಳ್ಳಲು ಪ್ರಯತ್ನಪಟ್ಟಿತ್ತು. ಆದರೆ ಅದು ಸಾಧ್ಯವಾಗದ ಕಾರಣ ಯೋಚಿಸಿ, ಇಬ್ಬರ ಸಮ್ಮತಿಯ ಮೇರೆಗೆ ಡಿವೋರ್ಸ್‌ ಪಡೆದುಕೊಂಡರು. ಇದೀಗ ಸಂದರ್ಶನವೊಂದರಲ್ಲಿ ಚೈತ್ರಾ ಅವರು ನೋವು ತೋಡಿಕೊಂಡಿದ್ದಾರೆ.

VISTARANEWS.COM


on

Chaitra Vasudevan says not a silly girl never thought that someone cheated me
Koo

ಬೆಂಗಳೂರು: ಬಿಗ್‌ ಬಾಸ್‌ʼನಿಂದ ಹೆಚ್ಚು ಜನಪ್ರಿಯರಾಗಿರುವ ಆ್ಯಂಕರ್ ಚೈತ್ರಾ ವಾಸುದೇವನ್‌ (Chaitra Vasudevan) ಅವರು ತಮ್ಮ ದಾಂಪತ್ಯಕ್ಕೆ ವಿಚ್ಛೇದನ ನೀಡಿರುವುದು ಗೊತ್ತೇ ಈದೆ. ಚೈತ್ರಾ ಅನೌನ್ಸ್‌ ಮಾಡಿದ ಬಳಿಕ ಈ ಬಗ್ಗೆ ಸಾಕಷ್ಟು ಚರ್ಚೆಗಳು ಸೋಷಿಯಲ್‌ ಮೀಡಿಯಾದಲ್ಲಿ ನಡೆಯಿತು. ಈವೆಂಟ್‌ವೊಂದರಲ್ಲಿ ಚೈತ್ರಾ ಅವರನ್ನ ನೋಡಿ ಉದ್ಯಮಿ ಸತ್ಯ ನಾಯ್ಡು (Sathya Naidu) ಅವರು ಇಷ್ಟಪಟ್ಟು ಹಿರಿಯರನ್ನ ಒಪ್ಪಿಸಿ, 2017ರಲ್ಲಿ ಮದುವೆಯಾದರು. ಆದರೆ ಜೋಡಿ ತಮ್ಮ ಮಧ್ಯೆ ಇರುವ ಸಮಸ್ಯೆಯನ್ನ ಸರಿಪಡಿಸಿಕೊಳ್ಳಲು ಪ್ರಯತ್ನಪಟ್ಟಿತ್ತು. ಆದರೆ ಅದು ಸಾಧ್ಯವಾಗದ ಕಾರಣ ಯೋಚಿಸಿ, ಇಬ್ಬರ ಸಮ್ಮತಿಯ ಮೇರೆಗೆ ಡಿವೋರ್ಸ್‌ ಪಡೆದುಕೊಂಡರು. ಇದೀಗ ಸಂದರ್ಶನವೊಂದರಲ್ಲಿ ಚೈತ್ರಾ ಅವರು ನೋವು ತೋಡಿಕೊಂಡಿದ್ದಾರೆ.

ಚೈತ್ರಾ ಮಾತನಾಡಿ ʻʻನಾನು ಈ ಬಗ್ಗೆ ಅನೌನ್ಸ್‌ ಮಾಡುವೆ ಮೊದಲೇ ಡಿವೋರ್ಸ್‌ ಮಾಡಿದ್ದೆ. ಈ ಬಗ್ಗೆ ನಾನು ಎಲ್ಲಿಯೂ ಹೇಳಲು ಇಷ್ಟ ಪಟ್ಟಿರಲಿಲ್ಲ. ನನ್ನ ತಂದೆ ತಾಯಿ ಕೂಡ ಆಗ ನನ್ನ ಜತೆ ನಿಂತು, ನಿನ್ನ ಜವಾಬ್ದಾರಿ ಅಂದಿದ್ದರು. ಬೇರೆಯವರ ಕರ್ಮ ಅವರು ಅನುಭವಿಸುತ್ತಾರೆ. ಎಲ್ಲೂ ಕಂಪ್ಲೇನ್‌ ಮಾಡಬೇಡು ಎಂದು ತಂದೆ ತಾಯಿ ಹೇಳಿದ್ದರು. ಕ್ಷುಲ್ಲಕ ಕಾರಣಕ್ಕೆ ಸಪ್‌ರೇಟ್‌ ಆದರು ಎನ್ನುವ ಗಾಸಿಪ್‌ ಹರಡಿತ್ತು. ಆದರೆ ರಿಯಲ್‌ ರೀಸನ್‌ ಬೇರೆ ಇದೆ. ನನ್ನ ಕುಟುಂಬ ಅಂದರೆ ನಾನು, ನನ್ನ ತಂದೆ ತಾಯಿ, ಸೇರಿ ಮೋಸ ಹೋದೆವು. ಮಾನಸಿಕವಾಗಿ, ದೈಹಿಕವಾಗಿ, ಭಾವನಾತ್ಮಕವಾಗಿ ಮೋಸ ಹೋದೆವು. ಆದರೆ ನಾನು 5 ವರ್ಷಗಳ ಕಾಲ ಕಾದೆ. ಎನೋ ಒಂದು ಆಗತ್ತೆ ಅಂತ. ನಾನು ಸಿಲ್ಲಿ ಹುಡುಗಿ ಅಲ್ಲ. ಏನೋ ಅಚೀವ್‌ ಮಾಡಬೇಕು..ಏನೋ ಮಾಡಬೇಕು ಎಂದು ದುಡ್ಡು ದುಡೀಬೇಕು ಎಂಬ ಕಾರಣಕ್ಕೆ ಸಪ್‌ರೇಟ್‌ ಆಗ್ತೀನಿ ಎನ್ನುವ ಸಿಲ್ಲಿ ಹುಡುಗಿ ನಾನಲ್ಲ. ನಾನು ಪ್ಲ್ಯಾನ್‌ ಮುಂಚೆ ಹೇಗ್‌ ಮಾಡಿದ್ದೆ ಅಂದರೆ, ನನ್ನ ಕುಟುಂಬ, ನನ್ನ ಫ್ಯಾಮಿಲಿ, ಅತ್ತೆ ಮಾವ ಹೀಗೆ ಜತೆಗೆ ಇರಬೇಕು, ಮಕ್ಕಳು ಇರಬೇಕು ಎಂದು ಬಯಸಿದ್ದೆ. ಆದರೆ ಕನಸು ನನಸಾಗಿಲ್ಲ. ಕಳೆದ ಎರಡು ವರ್ಷದ ಹಿಂದೆ ಏನು ಮಾಡಕ್ಕೆ ಆಗದೇ ಸುಮ್ಮನೇ ಇದ್ದೆ. ಕೆಟ್ಟ ದಿನಗಳು ಆಗಿದ್ದವು. ಯಾರಾದರೂ ಬಂದು ನನ್ನ ಸೇವ್‌ ಮಾಡ್ತಾರಾ ಎನ್ನುವ ಪರಿಸ್ಥಿತಿ ಇತ್ತು. ಆ ತರ ನಾನು ಹಾತೊರೆಯುತ್ತಿದ್ದೆ. ಪ್ರೀತಿ ಮಾಡಿ, ಆದರೆ ನಿಜ ಹೇಳಿ. ಆದರೆ ಯಾರಿಗೂ ಮೋಸ ಮಾಡಬೇಡಿ. ಆದರೆ ನಾನು ಯಾರಿಗೂ ಮೋಸ ಮಾಡಿಲ್ಲ. ಆದರೆ ನನಗೆ ಹೀಗ್‌ ಆಯ್ತುʼʼಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Chaitra Vasudevan: ಅಹಂಕಾರದಿಂದ ಬೇರೆಯಾಗಿಲ್ಲ ಎಂದು ಡಿವೋರ್ಸ್‌ ಅಸಲಿ ಕಾರಣ ತಿಳಿಸಿದ ಆ್ಯಂಕರ್ ಚೈತ್ರಾ!

ಕುಂದಾಪುರದ ಹುಡುಗಿ ಚೈತ್ರಾ ಜತೆ ಸತ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಿನಿಮಾ ಕಾರ್ಯಕ್ರಮದ ನಿರೂಪಣೆ, ಬಿಗ್ ಬಾಸ್ ಮನೆಗೆ ಕಾಲಿಟ್ಟ ಚೈತ್ರಾ ಅಭಿಮಾನಿಗಳ ಗಮನ ಸೆಳೆದರು.

ಡಿವೋರ್ಸ್‌ ಪೋಸ್ಟ್‌ ಹಂಚಿಕೊಂಡಿದ್ದ ಚೈತ್ರಾ

‘ಎಲ್ಲರಿಗೂ ನಮಸ್ಕಾರ. ಹಲವಾರು ತಿಂಗಳುಗಳಿಂದ ಸಾಕಷ್ಟು ಯೋಚಿಸಿದ ನಂತರ ನಾನು ನನ್ನ ವಿಚ್ಛೇದನದ ಬಗ್ಗೆ ನಿಮಗೆ ಹೇಳಲು ಧೈರ್ಯವನ್ನು ತೆಗೆದುಕೊಂಡಿದ್ದೇನೆ. ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ. ನಿಂದನೆ /ದ್ವೇಷ ಬೇಡ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ನನ್ನ ಈ ಸ್ಥಿತಿಯಿಂದ ಹೊರಬರಲು ಕಷ್ಟ ಪಡುತ್ತಿದ್ದೇನೆ. ಕೆಲಸ ಮಾತ್ರ ಜೀವನದಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ. ನಾನು ಈವೆಂಟ್ ಮತ್ತು ಟಿವಿ ಉದ್ಯಮದಲ್ಲಿ 10 ವರ್ಷಗಳಿಂದ ಕೆಲಸ ಮಾಡಿದ್ದೇನೆ. ನನ್ನ ಸೇವೆಯನ್ನು ಇನ್ನು ಮುಂದೆಯೂ ಮುಂದುವರಿಸಲು ಬಯಸುತ್ತೇನೆ ಮತ್ತು ನಿಮ್ಮಿಂದ ಹೆಚ್ಚಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ಎದುರು ನೋಡುತ್ತಿದ್ದೇನೆ’ ಎಂದು ಚೈತ್ರಾ ಬರೆದುಕೊಂಡಿದ್ದರು.

ಆ್ಯಂಕರ್ ಆಗಿದ್ದ ಚೈತ್ರಾ ‘ಬಿಗ್ ಬಾಸ್ (big boss) ಕನ್ನಡ ಸೀಸನ್ 7’ರ ಸ್ಪರ್ಧಿಯಾಗಿದ್ದರು. ಚೈತ್ರಾ ವಾಸುದೇವನ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಚೈತ್ರಾ ತಮ್ಮದೇ ಆದ ಈವೆಂಟ್ ಮ್ಯಾನೇಜ್​ಮೆಂಟ್ ಕಂಪನಿ ನಡೆಸುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Tharun Sudhir: ನವರಂಗ್‌ ಥಿಯೇಟರ್‌ನಲ್ಲೇ ಪ್ರೀ ವೆಡ್ಡಿಂಗ್‌ ಫೋಟೊಶೂಟ್‌ ಮಾಡಿಸಿದ್ದೇಕೆ ತರುಣ್‌ ಸುಧೀರ್‌?

Tharun Sudhir: ಸಾಮಾನ್ಯವಾಗಿ ಪ್ರೀವೆಂಡಿಂಗ್ ಅಂದರೆ ಜನರು ಸಿನಿಮಾ ಸ್ಟೈಲ್ ನಲ್ಲಿ ಇರಬೇಕು ಎಂದು ಸಿನಿಮ್ಯಾಟಿಕ್ ಆಗಿ ಶೂಟ್ ಮಾಡ್ತಾರೆ. ಆದರೆ ತರುಣ್ ಮತ್ತು ಸೋನಾಲ್ ಇಬ್ಬರೂ ಸಿನಿಮಾದವರೇ ಆಗಿರೋದ್ರಿಂದ ಬೇರೆಯದ್ದೇ ಸ್ಟೈಲ್ ನಲ್ಲಿ ಇರಲಿ ಅಂತ ಥಿಯೇಟರ್ ನಲ್ಲಿ ಶೂಟ್ ಮಾಡಿದ್ದಾರೆ.

VISTARANEWS.COM


on

Tharun Sudhir do a pre-wedding photo shoot at Navarang Theatre reason
Koo

ಪ್ರತಿ ಸಿನಿಮಾದಲ್ಲಿಯೂ ತಮ್ಮ ಕ್ರಿಯೆಟಿವಿಟಿ ಮೂಲಕ ಪ್ರೇಕ್ಷಕರ ಮುಂದೆ ಹೊಸ ಹೊಸ ಕಥೆ ತರುವ ನಿರ್ದೇಶಕ ತರುಣ್ ಸುಧೀರ್ (Tharun Sudhir) ಈಗ ತಮ್ಮ ಜೀವನದ ರಿಯಲ್ ನಾಯಕಿಯನ್ನ ಆಯ್ಕೆ ಮಾಡಿಕೊಂಡಿದ್ದಾರೆ.

ತರುಣ್ ಸುಧೀರ್ ಮತ್ತು ಸೋನಾಲ್ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ ಈ ವಿಚಾರವನ್ನ ಬ್ಯೂಟಿಫುಲ್ ಆಗಿರುವ ವಿಡಿಯೋ ಮೂಲಕ ತಿಳಿಸುತ್ತಿದ್ದಾರೆ..ತರುಣ್ ಮತ್ತು ಸೋನಾಲ್ ಇಬ್ಬರು ಸಿನಿಮಾ ಇಂಡಸ್ಟ್ರೀಯವರೇ ಆಗಿರೋದ್ರಿಂದ ತಮ್ಮ ಪ್ರೀವೆಂಡಿಂಗ್ ವಿಡಿಯೋವನ್ನ ಥಿಯೇಟರ್ ನಲ್ಲಿಯೇ ಶೂಟ್ ಮಾಡಿದ್ದಾರೆ.

ಇದನ್ನೂ ಓದಿ: Tharun Sudhir: ತರುಣ್​-ಸೋನಲ್​ ಟೇಕ್‌ ಓಕೆ ಆಯ್ತು; ಜೋಡಿಯ ಕಲ್ಯಾಣಕ್ಕೆ ಅಧಿಕೃತ ಮುದ್ರೆ ಬಿದ್ದೇ ಬಿಡ್ತು!

ನವರಂಗ್ ಥಿಯೇಟರ್‌ನಲ್ಲಿ ವಿಡಿಯೊ ಹಾಗೂ ಫೋಟೊ ಶೂಟ್ ಮಾಡಿದ್ದು ಸಿನಿಮಾ ಸೀನ್ ರೀತಿಯೇ ತರುಣ್ ಮತ್ತು ಸೋನಾಲ್ ವಿಡಿಯೋ ಮೂಡಿ ಬಂದಿದೆ. ಸಿನಿಮಾಟೋಗ್ರಾಫರ್ ಎ ಜೆ ಶೆಟ್ಟಿ ಈ ವಿಡಿಯೋ ಶೂಟ್ ಮಾಡಿದ್ದಾರೆ. ಆಗಸ್ಟ್ 11ರಂದು ಬೆಂಗಳೂರಿನ ಕೆಂಗೇರಿ ಬಳಿ ಇರೋ ಪೂರ್ಣಿಮಾ ಫ್ಯಾಲೆಸ್ ನಲ್ಲಿ ವಿವಾಹ ಜರುಗಲಿದೆ.

ಸಾಮಾನ್ಯವಾಗಿ ಪ್ರೀವೆಂಡಿಂಗ್ ಅಂದರೆ ಜನರು ಸಿನಿಮಾ ಸ್ಟೈಲ್ ನಲ್ಲಿ ಇರಬೇಕು ಎಂದು ಸಿನಿಮ್ಯಾಟಿಕ್ ಆಗಿ ಶೂಟ್ ಮಾಡ್ತಾರೆ. ಆದರೆ ತರುಣ್ ಮತ್ತು ಸೋನಾಲ್ ಇಬ್ಬರೂ ಸಿನಿಮಾದವರೇ ಆಗಿರೋದ್ರಿಂದ ಬೇರೆಯದ್ದೇ ಸ್ಟೈಲ್ ನಲ್ಲಿ ಇರಲಿ ಅಂತ ಥಿಯೇಟರ್ ನಲ್ಲಿ ಶೂಟ್ ಮಾಡಿದ್ದಾರೆ. ಅದಷ್ಟೇ ಅಲ್ಲದೆ ಸಿನಿಮಾ ಅಂದ್ರೆ ಸಿಂಗಲ್ ಸ್ಕ್ರೀನ್ ಥಿಯೇಟರ್ ಅದ್ರಲ್ಲೂ ನಿರ್ದೇಶಕ ತರುಣ್ ಚಿಕ್ಕ ವಯಸ್ಸಿನಿಂದಲೂ ನವರಂಗ್ ಥಿಯೇಟರ್ ನಲ್ಲಿ ಸಿನಿಮಾಗಳನ್ನ ನೋಡಿಕೊಂಡು ಬಂದವ್ರು, ಈಗ ತಮ್ಮ ನಿರ್ದೇಶನದ ಸಿನಿಮಾಗಳು ನವರಂಗ್ ಥಿಯೇಟರ್ ನಲ್ಲಿ ಶತದಿನೋತ್ಸವ ಪೂರೈಸಿವೆ. ಹಾಗಾಗಿ ನವರಂಗ್ ಥಿಯೇಟರ್‌ನಲ್ಲೇ ತಮ್ಮ ಪ್ರೀವೆಂಡ್ಡಿಂಗ್ ಶೂಟ್ ಮಾಡಿಸಿದ್ದಾರೆ. ಇನ್ನು ಪ್ರೀವೆಡ್ಡಿಂಗ್ ಶೂಟ್‌ನಲ್ಲಿ ತರುಣ್ ಮತ್ತು ಸೋನಾಲ್ ಬ್ಲಾಕ್ ಅಂಡ್ ಬ್ಲಾಕ್ ಔಟ್ ಫಿಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. ತರುಣ್ ಅವರಿಗೆ ಡಿಸೈನರ್ ಚೇತನ್ ಕಾಸ್ಟ್ಯೂಮ್ಸ್ ಡಿಸೈನ್ ಮಾಡಿದ್ದು ಸೋನಾಲ್ ಅವ್ರಿಗೆ ರಶ್ಮಿ ಅವ್ರು ಡಿಸೈನ್ ಮಾಡಿದ್ದಾರೆ …ಸದ್ಯ ತರುಣ್ ಮತ್ತು ಸೋನಾಲ್ ಮದುವೆ ಸಂಭ್ರಮ ಜೋರಾಗಿದ್ದು ಇಷ್ಟು ದಿನ ಹೀರೋಯಿನ್ ಮತ್ತು ಡೈರೆಕ್ಟರ್ ಆಗಿದ್ದ ಸೋನಾಲ್ ಮತ್ತು ತರುಣ್ ಇನ್ನು ಕೆಲವೇ ದಿನಗಳಲ್ಲಿ ಸತಿ-ಪತಿಗಳಾಗಿ ಜೀವನ ಶುರು ಮಾಡಲಿದ್ದಾರೆ…

Continue Reading

ಕರ್ನಾಟಕ

Kannada New Movie: ಗಣೇಶ್ ಅಭಿನಯದ ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ʼದ್ವಾಪರ ದಾಟುತʼ ಹಾಡು ರಿಲೀಸ್‌!

Kannada New Movie: ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈ ಚಿತ್ರಕ್ಕಾಗಿ ಡಾ. ವಿ.ನಾಗೇಂದ್ರ ಪ್ರಸಾದ್ ಅವರು ಬರೆದಿರುವ “ದ್ವಾಪರ ದಾಟುತ” ಎಂದು ಆರಂಭವಾಗುವ ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ಸುಮಧುರ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ ಜನಪ್ರಿಯವಾಗುತ್ತಿದೆ.

VISTARANEWS.COM


on

Golden Star Ganesh starrer Krishnam Pranaya Sakhi movie Dwapara Datuta song released
Koo

ಬೆಂಗಳೂರು: ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರ (Kannada New Movie) ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈ ಚಿತ್ರಕ್ಕಾಗಿ ಡಾ. ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ “ದ್ವಾಪರ ದಾಟುತ” ಎಂದು ಆರಂಭವಾಗುವ ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ಸುಮಧುರ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ ಜನಪ್ರಿಯವಾಗುತ್ತಿದೆ.

ಅರ್ಜುನ್ ಜನ್ಯ ಸಂಗೀತ ನೀಡಿರುವ ಆರು ಹಾಡುಗಳು ಈ ಚಿತ್ರದಲ್ಲಿದೆ. ಆ ಪೈಕಿ ಈಗಾಗಲೇ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್” ಹಾಗೂ “ಚಿನ್ನಮ್ಮ” ಹಾಡುಗಳು ಬಿಡುಗಡೆಯಾಗಿದ್ದು, ಮಿಲಿಯನ್ ಗಟ್ಟಲೆ ವೀಕ್ಷಣೆಯಾಗಿ ಜನರಮನ ಗೆದ್ದಿದೆ. “ದ್ವಾಪರ ದಾಟುತ” ಎಂದು ಆರಂಭವಾಗುವ ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ಸುಮಧುರ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ ಜನಪ್ರಿಯವಾಗುತ್ತಿದೆ. “ಸರಿಗಮಪ” ಖ್ಯಾತಿಯ ಜಸ್ಕರಣ್ ಸಿಂಗ್ ಈ ಹಾಡನ್ನು ಇಂಪಾಗಿ ಹಾಡಿದ್ದಾರೆ. ಹಾಡುಗಳ ಮೂಲಕ ಈಗಾಗಲೇ ಗೆದ್ದಿರುವ ಈ ಚಿತ್ರ ಆಗಸ್ಟ್ 15 ರಂದು ತೆರೆಗೆ ಬರಲಿದೆ.

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ. ರುದ್ರಪ್ಪ ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ‌.

ಇದನ್ನೂ ಓದಿ: Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ

“ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

Continue Reading
Advertisement
Chaluvadi Narayanaswamy
ಕರ್ನಾಟಕ17 mins ago

Chaluvadi Narayanaswamy : ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್​​ನ ಪ್ರತಿಪಕ್ಷದ ನಾಯಕ

NEET
ಕರ್ನಾಟಕ30 mins ago

NEET: ನೀಟ್‌ ಪರೀಕ್ಷೆಗೆ ವಿರೋಧ, ಬೆಂಗಳೂರು ವಿಭಜನೆಗೆ ಅಸ್ತು; ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

DK Shivakumar
ಕರ್ನಾಟಕ54 mins ago

DK Shivakumar: ರೈತನಿಗೆ ಪ್ರವೇಶ ನಿರ್ಬಂಧ ಖಂಡನೀಯ; ಮಾಲ್ ಸೇರಿ ಇತರೆಡೆ ಶೀಘ್ರ ವಸ್ತ್ರ ಸಂಹಿತೆ ಜಾರಿ ಎಂದ ಡಿಕೆಶಿ

Veerabaswanthreddy Mudnal
ಶ್ರದ್ಧಾಂಜಲಿ1 hour ago

Veerabaswanthreddy Mudnal: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಅನಾರೋಗ್ಯದಿಂದ ನಿಧನ

Rahat Fateh Ali Khan
ವಿದೇಶ1 hour ago

Rahat Fateh Ali Khan: ದುಬೈನಲ್ಲಿ ಪಾಕಿಸ್ತಾನದ ಗಾಯಕನ ಬಂಧನ; ಎಸಗಿದ ಕೃತ್ಯವೇನು?

Valmiki Corporation Scam
ಕರ್ನಾಟಕ1 hour ago

Valmiki Corporation Scam: ಬಿ. ನಾಗೇಂದ್ರ ಹೆಸರೇಳುವಂತೆ ಒತ್ತಡ; ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

Tata Curvv
ಆಟೋಮೊಬೈಲ್1 hour ago

Tata Curvv : ಎಸ್​ಯುವಿ ವಿಭಾಗದಲ್ಲಿ ವಿಭಿನ್ನ ವಿನ್ಯಾಸದ ಕಾರನ್ನು ಪರಿಚಯಿಸಿದ ಮಾಡಿದ ಟಾಟಾ

Kempambudi lake encroachment cleared soon says DCM DK Shivakumar
ಕರ್ನಾಟಕ2 hours ago

Assembly Session 2024: ಕೆಂಪಾಂಬುದಿ ಕೆರೆ ಒತ್ತುವರಿ ಶೀಘ್ರ ತೆರವು; ಡಿ.ಕೆ.ಶಿವಕುಮಾರ್

Viral Video
ವೈರಲ್ ನ್ಯೂಸ್2 hours ago

Viral Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 10 ಅಡಿ ಮೇಲಕ್ಕೆ ಹಾರಿ ಬಿದ್ದ ತಾಯಿ, ಮಗ

TA Sharavana questioned about the continuous variation in the service of 108 Ambulance even after 7 years there is no new tender
ಬೆಂಗಳೂರು2 hours ago

TA Sharavana: 108 ಆಂಬ್ಯುಲೆನ್ಸ್‌ಗೆ 7 ವರ್ಷ ಕಳೆದರೂ ಹೊಸ ಟೆಂಡರ್‌ ಇಲ್ಲ ಯಾಕೆ? ಟಿ. ಎ. ಶರವಣ ಪ್ರಶ್ನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌