Kannada New Movie: 'ಕೆರೆಬೇಟೆ' ಟೈಟಲ್ ಟ್ರ್ಯಾಕ್ ರಿಲೀಸ್! - Vistara News

ಸ್ಯಾಂಡಲ್ ವುಡ್

Kannada New Movie: ‘ಕೆರೆಬೇಟೆ’ ಟೈಟಲ್ ಟ್ರ್ಯಾಕ್ ರಿಲೀಸ್!

Kannada New Movie: ಇತ್ತೀಚಿಗಷ್ಟೇ ಮೊದಲ ಹಾಡನ್ನು ರಿಲೀಸ್ ಮಾಡಿದ್ದ ಚಿತ್ರತಂಡ ಇದೀಗ ಸಿನಿಮಾದ ಬಹುನಿರೀಕ್ಷಿಯ ಟೈಟಲ್ ಟ್ರ್ಯಾಕ್ ಅನ್ನು ಅದ್ದೂರಿಯಾಗಿ ಬಿಡುಗಡೆ ಮಾಡಿದೆ.

VISTARANEWS.COM


on

Kannada New Movie kerebete title track Out
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‘ಕೆರೆಬೇಟೆ’ ಸ್ಯಾಂಡಲ್‌ವುಡ್‌ನಲ್ಲಿ (Kannada New Movie) ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರದ ಟ್ರೈಲರ್, ಟೀಸರ್ ಮತ್ತು ರೊಮ್ಯಾಂಟಿಕ್ ಹಾಡು ಈಗಾಗಲೇ ರಿಲೀಸ್ ಆಗಿದ್ದು ಕುತೂಹಲ ದುಪ್ಪಟ್ಟು ಮಾಡಿದೆ. ಇದೀಗ ಸಿನಿಮಾ ತಂಡ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡುವ ಮೂಲಕ ಮತ್ತಷ್ಟು ನಿರೀಕ್ಷೆ ಹೆಚ್ಚಿಸಿದೆ. ಇತ್ತೀಚಿಗಷ್ಟೇ ಮೊದಲ ಹಾಡನ್ನು ರಿಲೀಸ್ ಮಾಡಿದ್ದ ಚಿತ್ರತಂಡ ಇದೀಗ ಸಿನಿಮಾದ ಬಹುನಿರೀಕ್ಷಿಯ ಟೈಟಲ್ ಟ್ರ್ಯಾಕ್ ಅನ್ನು ಅದ್ದೂರಿಯಾಗಿ ಬಿಡುಗಡೆ ಮಾಡಿದೆ.

ವಿಶೇಷ ಎಂದರೆ ಈ ಹಾಡನ್ನು ಶಾಸಕ ಹಾಗೂ ಮಾಜಿ ಹೋಂ ಮಿನಿಸ್ಟರ್ ಆರಗ ಜ್ಞಾನೇಂದ್ರ ಹಾಗೂ ಸಂಸದರಾದ ಬಿ ವೈ ರಾಘವೇಂದ್ರ ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದರು. ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಟೈಟಲ್ ಟ್ರ್ಯಾಕ್ ರಿಲೀಸ್ ಕಾರ್ಯಕ್ರಮದಲ್ಲಿ ಕೆರೆಬೇಟೆ ಚಿತ್ರದ ಹಾಡು ಅದ್ಧೂರಿಯಾಗಿ ಬಿಡುಗಡೆಯಾಯಿತು.

‘ಕೆರಿಬ್ಯಾಟಿ ಶುರುವಾತು…’ ಎನ್ನುವ ಈ ಟೈಟಲ್ ಟ್ರ್ಯಾಕ್ ಅನ್ನು ಪ್ರಮೋದ್ ಮರವಂತೆ ಬರೆದಿದ್ದಾರೆ, ಗಗನ್ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದು ಕರಿಬಸವ ತಡಕಲ್ ಈ ಹಾಡಿಗೆ ಧ್ವನಿ ನೀಡಿದ್ದಾರೆ. ಈ ಹಾಡನ್ನು ಕೇಳಿ ಮನಸೋತ ಶಾಸಕ ಆರಗ ಜ್ಞಾನೇಂದ್ರ ಹಾಗೂ ಸಂಸದ ಬಿ ವೈ ರಾಘವೇಂದ್ರ ಅವರು ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Kannada New Movie: ʻಧೀರ ಭಗತ್ ರಾಯ್ʼ ಸಿನಿಮಾದ ʼಏನು ಕರ್ಮʼ ಹಾಡು ಬಿಡುಗಡೆ

ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಿ ಮಾತನಾಡಿದ ಬಿ ವೈ ರಾಘವೇಂದ್ರ, ‘ಈ ಸಿನಿಮಾ ಸಂಪೂರ್ಣವಾಗಿ ಮಲೆನಾಡಿನ ಸುತ್ತಮುತ್ತವೇ ಚಿತ್ರೀಕರಣಗೊಂಡಿದೆ. ಜೊತೆಗೆ ಮಲೆನಾಡಿನವರೇ ಸೇರಿ ಈ ಸಿನಿಮಾ ಮಾಡಿದ್ದಾರೆ. ಮಲೆನಾಡಿನ ಸೌಂದರ್ಯವನ್ನು ತುಂಬಾ ಸುಂದರವಾಗಿ ತೋರಿಸಲಾಗಿದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು.

ಇನ್ನು ಆರಗ ಜ್ಞಾನೇಂದ್ರ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಮಲೆನಾಡಿನ ಸಂಸ್ಕೃತಿಗಳು ಕಣ್ಮರೆಯಾಗಿವೆ. ಅನೇಕ ಪದ್ಧತಿಗಳು ಮರೆಯಾಗಿವೆ. ಇದೀಗ ಕೆರೆಬೇಟೆ ಸಂಸ್ಕೃತಿಯ ಬಗ್ಗೆ ಸಿನಿಮಾ ಮಾಡಿರುವುದು ತುಂಬಾ ಖುಷಿ ಆಗುತ್ತೆ. ಟ್ರೈಲರ್ ಮತ್ತು ಸಾಂಗ್ ಅದ್ಭುತವಾಗಿ ಮೂಡಿ ಬಂದಿದೆ. ನಾಯಕ ನಟ, ನಿರ್ದೇಶಕ ನಿರ್ಮಾಪಕ ಸೇರಿದಂತೆ ಎಲ್ಲರೂ ಮಲೆನಾಡಿನವರೇ ಎನ್ನುವುದು ಖುಷಿಯ ವಿಚಾರ. ಸಿನಿಮಾ ಎಲ್ಲಾ ಕಡೆ ಹೌಸ್ ಫುಲ್ ಪ್ರದರ್ಶನ ಕಾಣಲಿ’ ಎಂದು ಹೇಳಿದರು.

ಸಾಂಗ್ ರಿಲೀಸ್ ಬಳಿಕ, ನಿಜವಾದ ಕೆರೆಬೇಟೆ ಆಟಗಾರರು ಕೂಣಿ ಹಿಡಿದು ಪ್ರತಿ ಜಿಲ್ಲೆಗಳಿಗೂ ಚಿತ್ರದ ಪ್ರಚಾರಕ್ಕಾಗಿ ಬೈಕ್ ರ್ಯಾಲಿ ಹೊರಡಲಿದ್ದು ರ್ಯಾಲಿಗೂ ಚಾಲನೆ ನೀಡಲಾಯಿತು.

ಸದ್ಯ ರಿಲೀಸ್ ಗೆ ಸಿದ್ಧವಾಗಿರುವ ‘ಕೆರೆಬೇಟೆ’ ಸಿನಿಮಾ ಟೈಟಲ್ ಟ್ರ್ಯಾಕ್ ಮೂಲ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಇದೇ ಮಾರ್ಚ್ 15ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ. ಜನಮನ ಸಿನಿಮಾ ಸಂಸ್ಥೆಯಲ್ಲಿ ಮೂಡಿ ಬಂದಿರುವ ಕೆರಬೇಟೆ ಸಿನಿಮಾ ಹೇಗಿರಲಿದೆ, ಮಲೆನಾಡಿನ ಮೀನು ಬೇಟೆಯ ಸಂಸ್ಕೃತಿ ಹೇಗೆ ಮೂಡಿ ಬಂದಿದೆ ಎಂದು ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ಧುಮ್ಮಿಕ್ಕಿದ ಹರೆಯದ ತೊರೆ!

Vidyarthi Vidyarthiniyare Movie: ರ‍್ಯಾಪರ್ ಚಂದನ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ʼವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಟ್ರೈಲರ್‌ ರಿಲೀಸ್‌ ಆಗಿದೆ. ಕಾಲೇಜು ಹುಡುಗ, ಹುಡುಗಿಯರ ಹದಿ ಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಇಲ್ಲಿ ತೆರೆದಿಡಲಾಗಿದೆ.

VISTARANEWS.COM


on

Vidyarthi Vidyarthiniyare Movie
Koo

ಬೆಂಗಳೂರು: ರ‍್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ʼವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare Movie) ಚಿತ್ರವು ಶೀರ್ಷಿಕೆಯಲ್ಲಿಯೇ ಟೀನೇಜ್ ಸ್ಟೋರಿಯ ಕಂಪು ಹೊಂದಿದ್ದು, ಈಗಾಗಲೇ ನಾನಾ ಕ್ರೀಯಾಶೀಲ ಚಟುವಟಿಕೆಗಳ ಮೂಲಕ ಪ್ರೇಕ್ಷಕರನ್ನು ತಲುಪಿತ್ತು. ಆ ಕಾರಣದಿಂದಲೇ ಎಲ್ಲರೂ ಟ್ರೈಲರ್‌ನತ್ತ ದೃಷ್ಟಿ ನೆಟ್ಟಿದ್ದರು. ಇದೀಗ ಚಿತ್ರತಂಡ ಯುವ ಆವೇಗದಿಂದ ತೊನೆದಾಡುತ್ತಿರುವಂತೆ ಭಾಸವಾಗುವ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದೆ. ಅದರೊಳಗೆ ಹದಿಹರೆಯದ ಮನಸುಗಳ ನಾನಾ ಮಗ್ಗುಲುಗಳು ಹರೆಯದ ತೊರೆಯೊಂದಿಗೆ ಧುಮ್ಮಿಕ್ಕಿ ಹರಿದಿವೆ. ಈ ಟ್ರೈಲರ್ ಅನ್ನು ಸೈಡ್ ಎ ಅಂತ ಹೆಸರಿಸಲಾಗಿದೆ. ಇದನ್ನು ನೋಡುತ್ತಲೇ ಒಟ್ಟಾರೆ ಸಿನಿಮಾದಲ್ಲೇನೋ ಇದೆಯೆಂಬ ಗಟ್ಟಿಯಾದ ಭರವಸೆ ತಂತಾನೇ ಮೂಡುತ್ತದೆ. ಸೈಡ್ ಬಿ ಟ್ರೈಲರ್‌ಗಾಗಿ ಕಾತರವೂ ಮೂಡಿಕೊಳ್ಳುತ್ತೆ. ಅಷ್ಟರಮಟ್ಟಿಗೆ ಈ ಟ್ರೈಲರ್ ಪರಿಣಾಮಕಾರಿಯಾಗಿ ಮೂಡಿ ಬಂದಿದೆ!

ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಟೈಟಲ್ಲೇ ಹೇಳುವಂತೆ ಯೂತ್ಸ್ ಸಬ್ಜೆಕ್ಟ್ ಸಿನಿಮಾ. ಕಾಲೇಜು ಹುಡುಗ, ಹುಡುಗಿಯರ, ಹದಿ ಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಇಲ್ಲಿ ತೆರೆದಿಡಲಾಗಿದೆ. ಹಾಗಂತ ಇದು ಮಾಮೂಲಿಯಾಗೂ ಇದು ಸಿದ್ಧಸೂತ್ರದ ಚೌಕಟ್ಟಿಗೊಳಪಟ್ಟಿಲ್ಲ ಅನ್ನೋದು ಟ್ರೈಲರ್ ಎಳೆಯಲ್ಲಿ ಸ್ಪಷ್ಟವಾಗುತ್ತದೆ. ಹೊಡೆದಾಟ, ಬಡಿದಾಟ, ರ‍್ಯಾಗಿಂಗ್, ಬಿಸಿ ರಕ್ತದ ಹುಡುಗರ ಪುಂಡಾಟಿಕೆ ಸೇರಿ ಇಲ್ಲಿ ಎಲ್ಲವೂ ಇದೆ. ಅದರ ಜೊತೆ ಜೊತೆಗೇ ಶೈಕ್ಷಣಿಕ ಪರಿಸರದ ಕ್ರೌರ್ಯದ ಮುಖವೊಂದನ್ನು ಬಯಲಾಗಿಸುವ ಪ್ರಯತ್ನವೂ ಗಮನ ಸೆಳೆಯುವಂತಿದೆ. ಮೋಜು ಮಸ್ತಿಯಲ್ಲಿ ಮೈಮರೆತ ಮನಸ್ಥಿತಿಗಳ ಕಥೆಯ ಸೂಚನೆಯಿದೆ. ಹಿಡಿತ ತಪ್ಪಿದ ಮಕ್ಕಳನ್ನು ಹಾದಿಗೆ ತರುವ ಯತ್ನವೂ ಇದೆ. ಪ್ರಸ್ತುತ ಕಾಲದ ಟೀನೇಜ್ ಹುಡುಗರ ಕಹಾನಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದೆ ಟ್ರೈಲರ್.

ಚಂದನ್ ಶೆಟ್ಟಿ ಈ ಚಿತ್ರದ ಮೂಲಕ ಡಿಫರೆಂಟಾಗಿ ಕಾಣಿಸಲಿದ್ದಾರೆಂಬ ನಿಖರ ಮಾಹಿತಿಯನ್ನು ನಿರ್ದೇಶಕ ಅರುಣ್ ಅಮುಕ್ತ ನೀಡುತ್ತಾ ಬಂದಿದ್ದಾರೆ. ಅವರ ಪಾತ್ರವನ್ನು ಅಷ್ಟೇ ಗೌಪ್ಯವಾಗಿ ಕಾಪಾಡಿಕೊಂಡು ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ ಚಿತ್ರತಂಡ. ಒಟ್ಟಾರೆಯಾಗಿ ಟ್ರೈಲರ್ ನೋಡಿದರೆ ನಿರ್ದೇಶಕರು ಹೊಸದೇನನ್ನೋ ಹೇಳುವ ಪ್ರಯತ್ನ ಮಾಡಿದ್ದಾರೆ ಅನ್ನೋದು ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಅರುಣ್ ಅಮುಕ್ತ ಅತ್ಯಂತ ಆಸ್ಥೆಯಿಂದ ಈ ಸಿನಿಮಾವನ್ನು ರೂಪಿಸಿದ್ದಾರೆಂಬುದಕ್ಕೂ ಕೂಡ ಈ ಟ್ರೈಲರಿನಲ್ಲಿ ಸಾಕ್ಷಿಗಳಿವೆ. ಕಾಲೇಜು ಕೇಂದ್ರಿತ ಕಥೆ ಅಂದಾಕ್ಷಣ ಒಂದು ಕಲ್ಪನೆ ಮೊಳೆತುಕೊಳ್ಳುತ್ತದೆ. ಅದನ್ನು ಮೀರಿದ ಆತ್ಮದೊಂದಿಗೆ ಅರುಣ್ ಅಮುಕ್ತ ಈ ಸಿನಿಮಾವನ್ನು ದೃಷ್ಯೀಕರಿಸಿರುವ ಲಕ್ಷಣಗಳಿವೆ. ಈವರೆಗೂ ಹಂತ ಹಂತವಾಗಿ ಕಾಯ್ದುಕೊಂಡಿದ್ದ ಕುತೂಹಲವನ್ನು ಈ ಸೈಡ್ ಎ ಟ್ರೈಲರ್ ಸಾರ್ಥಕಗೊಳಿಸಿದೆ.

ಇದನ್ನೂ ಓದಿ | Turbo Trailer Out: ಮಮ್ಮುಟ್ಟಿ ನಟನೆಯ ‘ಟರ್ಬೋ’ ಟ್ರೈಲರ್‌ ಔಟ್‌: ರಾಜ್‌ ಬಿ ಶೆಟ್ಟಿ ಖದರ್‌ಗೆ ಫ್ಯಾನ್ಸ್‌ ಫಿದಾ!

ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ. ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ , ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Continue Reading

ಸಿನಿಮಾ

Song Release: ‘ಇದು ನಮ್ ಶಾಲೆ’ ಚಿತ್ರದ ಹಾಡಿನ ಅನಾವರಣ

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್.ಎಂ. ಸುರೇಶ್ ಅವರು ಶ್ರೀ ಜೇನುಕಲ್ ಪ್ರೊಡಕ್ಷನ್ ಅವರ “ಇದು ನಮ್ ಶಾಲೆ” ಚಿತ್ರದ ಹಾಡನ್ನು (Song Release) ಇತ್ತೀಚೆಗೆ ಅನಾವರಣಗೊಳಿಸಿದರು.

VISTARANEWS.COM


on

By

Song Release
Koo

ಬೆಂಗಳೂರು: ಶ್ರೀ ಜೇನುಕಲ್ ಪ್ರೊಡಕ್ಷನ್ ಅವರ ಮೊದಲ “ಇದು ನಮ್ ಶಾಲೆ” ಚಿತ್ರದ ಹಾಡುಗಳ ಬಿಡುಗಡೆ (Song Release) ಸಮಾರಂಭ ಇತ್ತೀಚೆಗೆ ನಡೆಯಿತು. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಮೊದಲ ಹಾಡನ್ನು ಖ್ಯಾತ ಐಪಿಎಸ್ ಅಧಿಕಾರಿ (IPS officer) ರವಿ ಡಿ. ಚನ್ನಣ್ಣವರ್ (Ravi D. Channannavar) ಹಾಗೂ ಎರಡನೇ ಗೀತೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Board of Film Commerce) ಅಧ್ಯಕ್ಷರಾದ ಎನ್.ಎಂ. ಸುರೇಶ್ (N.M. Suresh) ಅವರು ಅನಾವರಣಗೊಳಿಸಿದರು.

ಇದೇ ಸಮಯದಲ್ಲಿ ಚಿತ್ರದ ಪೋಸ್ಟರ್ ಅನ್ನೂ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.

ಕಾರ್ಯಕ್ರಮದ ವೇಳೆ ಮಾತನಾಡಿದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್, ಇದು ಖಾಸಗಿ ಹಾಗೂ ಸರ್ಕಾರಿ ಶಾಲೆಯ ಸುತ್ತಲಿನ ಕಥೆ ಎಂದು ತಿಳಿಸಿದರು.

ನಾನು ಕೂಡ ಸರ್ಕಾರಿ ಶಾಲೆಯಲ್ಲೇ ಕಲಿತು ಐಪಿಎಸ್ ಅಧಿಕಾರಿ ಆಗಿದ್ದೇನೆ. ಸಿನಿಮಾ ಮೂಲಕ ಒಳ್ಳೆಯ ವಿಷಯಗಳನ್ನು ಹೇಳಿದಾಗ ಜನರಿಗೆ ಬೇಗ ತಲಪುತ್ತದೆ. ನನಗೆ ಡಾ| ರಾಜಕುಮಾರ್ ಎಂದರೆ ಪಂಚಪ್ರಾಣ. ಸುದೀಪ್ ಅಭಿನಯದ ಚಿತ್ರಗಳ ಗೆದ್ದೆ ಗೆಲುವೆ ಒಂದು ದಿನ, ಅರಳುವ ಹೂವುಗಳೆ ಹಾಗೂ ಶಿವರಾಜಕುಮಾರ್ ಅವರ ಓಂ ಚಿತ್ರದ ಹೇ ದಿನಕರ ಹಾಡುಗಳು ನನಗೆ ಸ್ಪೂರ್ತಿ.. ಕಾಲೇಜು ದಿನಗಳಲ್ಲಿ ಈ ಹಾಡುಗಳನ್ನು ಕೇಳಿ ಬೆಳೆದವನು ನಾನು ಎಂದು ಹೇಳಿ ಚಿತ್ರತಂಡಕ್ಕೆ ಶುಭ ಹಾರೈಸಿದರು.


ನಿರ್ದೇಶಕ ಕೃಷ್ಣ ಬೆಳ್ತಂಗಡಿ ಮಾತನಾಡಿ, ಸಿನಿಮಾ, ರಾಜಕೀಯ ಸೇರಿದಂತೆ ಅನೇಕ ವಿಭಾಗಗಳಲ್ಲಿ ಪತ್ರಕರ್ತನಾಗಿ ಕಾರ್ಯ ನಿರ್ವಹಿಸರುವ ನಾನು, “ಬಣ್ಣದಕೊಡೆ” ಚಿತ್ರದ ಮೂಲಕ ನಿರ್ದೇಶಕನಾದೆ. “ಇದು ನಮ್ ಶಾಲೆ” ನನ್ನ ನಿರ್ದೇಶನದ ಮೂರನೇ ಚಿತ್ರ. ಇದೊಂದು ಪ್ರಸ್ತುತ ಶಿಕ್ಷಣ ವ್ಯವಸ್ಥೆಯ ಕುರಿತಾದ ಚಿತ್ರ. ಖಾಸಗಿ ಶಾಲೆ ಹಾಗೂ ಸರ್ಕಾರಿ ಶಾಲೆಗಳ ಬಗ್ಗೆ ತಿಳಿಸಿ ಕೊಡುವ ಚಿತ್ರ. ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ ಸೆನ್ಸರ್ ಕೂಡಾ ಆಗಿದ್ದು, ಬಿಡುಗಡೆಯ ಹೊಸ್ತಿಲಿನಲ್ಲಿದೆ‌. ಅರಸೀಕೆರೆ, ಜೇನುಕಲ್, ಗೀಜಿಹಳ್ಳಿ ಹಾಗೂ ಬೆಂಗಳೂರು ಮುಂತಾದ ಕಡೆ ಚಿತ್ರೀಕರಣ ನಡೆದಿದೆ‌ ಎಂದು ತಿಳಿಸಿದರು.

ರವಿ ಆಚಾರ್ ಚಿತ್ರ ನಿರ್ಮಾಣ ಮಾಡಿದ್ದು, ಅರಸೀಕೆರೆ ಉಮೇಶ್ ಅವರ ಸಹಕಾರ ಚಿತ್ರಕ್ಕಿದೆ. ನಾಗರಾಜ್ ಅದವಾನಿ ಛಾಯಾಗ್ರಾಹಣ, ಹಿತನ್ ಹಾಸನ್ ಸಂಗೀತ ಈ ಸಿನಿಮಾಕ್ಕಿದೆ. ಪುಣ್ಯ ಹಾಗೂ ಪೂಜ್ಯ ಅನ್ನುವ ಇಬ್ಬರು ಹೆಣ್ಣು ಮಕ್ಕಳು ಪ್ರಧಾನ ಭೂಮಿಕೆಯಲ್ಲಿ ಇದ್ದಾರೆ ಎಂದರು.


ಇದನ್ನೂ ಓದಿ: Vijay Surya: ತಾಯಂದಿರ ದಿನ ತನ್ನ ಹೆಸರನ್ನೇ ಬದಲಿಸಿಕೊಂಡ ʻಅಗ್ನಿಸಾಕ್ಷಿ’ ನಟ! ಹೊಸ ಹೆಸರೇನು?

ಶಂಕರ್ ಭಟ್, ಪೂಜಾ ಸುಮನ್, ಈಶ್ವರ್ ದಲ, ಮಲ್ಲಿಕಾರ್ಜುನ್ ತುಮಕೂರು, ಶಿವಲಿಂಗೇಗೌಡ ಮಂಡ್ಯ, ಮುರಳಿಕೃಷ್ಣ, ಬಸವರಾಜ್, ವಾಣಿ ಗೌಡ, ರಾಜು ನಾಯಕ್, ಮಾಸ್ಟರ್ ರಾಮು, ಗಂಗಾ ರವಿ, ಕಲಾ ಉಮೇಶ್ ಮುಂತಾದವರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ ಅರಸೀಕೆರೆ ಜನಪ್ರಿಯ ಶಾಸಕರಾದ ಶಿವಲಿಂಗೇಗೌಡರು ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಪಾತ್ರದಲ್ಲಿ ನಟಿಸಿದ್ದಾರೆ ಎಂದು ಅವರು ತಿಳಿಸಿದರು.

ನಿರ್ಮಾಪಕರಾದ ರವಿ ಆಚಾರ್, ಕಾರ್ಯಕಾರಿ ನಿರ್ಮಾಪಕರಾದ ಅರಸೀಕೆರೆ ಉಮೇಶ್ ಹಾಗೂ ಸಂಗೀತ ನಿರ್ದೇಶಕ ಹಿತನ್ ಹಾಸನ್ “ಇದು ನಮ್ ಶಾಲೆ” ಚಿತ್ರದ ಕುರಿತು ಮಾತನಾಡಿದರು.

Continue Reading

ಸಿನಿಮಾ

Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

Pavithra Jayaram: ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ.

VISTARANEWS.COM


on

Pavithra Jayaram died in the accident may alive if the ambulance arrived
Koo

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿ (Trinayani serial) ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ (Pavithra Jayaram) ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೇ.12ರಂದು ಮೃತಪಟ್ಟಿದ್ದರು. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ (ಮೇ.12) ಮುಂಜಾನೆ ಅಪಘಾತವಾಗಿತ್ತು. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ಪ್ರಯಾಣಿಸುತ್ತಿದ್ದ ಕಾರು ಎದುರಿಗೆ ಬಂದ ಬಸ್‌ ಡಿಕ್ಕಿ ಹೊಡದಿತ್ತು. ಅಪಘಾತವಾದ ಕೂಡಲೇ ಆಂಬ್ಯುಲೆನ್ಸ್‌ ಸರಿಯಾದ ಸಮಯಕ್ಕೆ ಬಾರದೆ ಇದ್ದಿದ್ದಕ್ಕೆ ಅಪಘಾತ ಸಂಭವಿಸಿದೆ ಎಂದು ಸಹನಟ ಚಂದ್ರಕಾಂತ್ ಆರೋಪ ಮಾಡಿದ್ದಾರೆ.

ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಇನ್ನು ತೆಲುಗಿನ ‘ನಿನ್ನೆ ಪೆಲ್ಲಡತಾ’ ಅನ್ನೋ ಜನಪ್ರಿಯ ಧಾರಾವಾಹಿಯಲ್ಲೂ ನಟಿಸಿದ್ದರು. ಇದೀಗ ನಟಿಯ ಅಂತ್ಯಕ್ರಿಯೆ ಕೂಡ ನೆರವೇರಿದೆ. ಸಹನಟ ಚಂದ್ರಕಾಂತ್ ಮಾಧ್ಯಮದ ಜತೆ ಮಾತನಾಡಿ ʻʻಪವಿತ್ರಗೆ ಏನು ಗಾಯ ಆಗಿರಲಿಲ್ಲ ಭಯದಲ್ಲೇ ಉಸಿರು ಹೋಯ್ತು. ಅವರಿಗೆ ಏನೂ ಪೆಟ್ಟಾಗಿಲ್ಲ. ಆಂಬ್ಯುಲೆನ್ಸ್ 20 ನಿಮಿಷ ಮುಂಚೆ ಬಂದಿದ್ದರೆ, ಬಹುಶ: ಅವರು ಬದುಕುತ್ತಿದ್ದರು. ಅಪಘಾತವಾದಾಗ ಅವರು ಉಸಿರಾಡುತ್ತಿದ್ದರು” ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Pavithra Jayaram: ತೆಲುಗಿನ ‘ತ್ರಿನಯನಿ’ ಧಾರಾವಾಹಿ ನಟಿ, ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ನಿಧನ

ಅಪಘಾತವಾದ ಕಾರಿನಲ್ಲಿ ನಟಿ ಪವಿತ್ರಾ ಜೊತೆ ಅವರ ಸಂಬಂಧಿ ಅಪೇಕ್ಷಾ, ಚಾಲಕ ಶ್ರೀಕಾಂತ್, ಸಹನಟ ಚಂದ್ರಕಾಂತ್ ಪ್ರಯಾಣ ಮಾಡುತ್ತಿದ್ದರು. ಇವರೆಲ್ಲರಿಗೂ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಸಹನಟ ಚಂದ್ರಕಾಂತ್ ಚಿಕಿತ್ಸೆ ಪಡೆದು ಪವಿತ್ರ ಜಯರಾಂ ಅಂತ್ಯಕ್ರಿಯೆ ಪಾಲ್ಗೊಂಡಿದ್ದರು.

ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ. ಆದರೆ ‘ತ್ರಿನಯನಿ’ ಧಾರಾವಾಹಿ ಕನ್ನಡದಲ್ಲಿಯೂ ಡಬ್‌ ಆಗುತ್ತಿತ್ತು. ಹೀಗಾಗಿ ಕನ್ನಡದಲ್ಲಿಯೂ ತುಂಬಾ ಫ್ಯಾನ್ ಪೇಜ್‌ಗಳು ಶುರುವಾದವುʼʼ ಎಂದಿದ್ದರು.

Continue Reading

ಸ್ಯಾಂಡಲ್ ವುಡ್

Kannada New Movie: `ಕುಂಟೆಬಿಲ್ಲೆ’ ಸಿನಿಮಾದ ಮುಹೂರ್ತ: ಶುಭಕೋರಿದ ಗಣ್ಯರು

Kannada New Movie: ಪೋಷಕ ಪಾತ್ರಗಳಲ್ಲಿ ಕಿಶೋರ್, ಪವಿತ್ರಾ ಲೋಕೇಶ್, ಶಂಕರ್ ಅಶ್ವಥ್, ಚಂದ್ರಪ್ರಭ ಮೊದಲಾದವರು ನಟಿಸಲಿದ್ದಾರೆ.
ʻನಾವೆಲ್ಲಾ ಚಿಕ್ಕ ವಯಸ್ಸಿನಲ್ಲಿ ಆಡುತ್ತಿದ್ದ ಆಟ ʻಕುಂಟೆಬಿಲ್ಲೆ‌ʼ. ಅದೇ ಟೈಟಲ್ ಇಟ್ಟುಕೊಂಡು ಪ್ರೀತಿ, ನೋವು, ಕಾಮ ಎಲ್ಲವನ್ನೂ ಕಟ್ಟಿಕೊಡಲಿದ್ದೇವೆʼ ಎಂದು ನಿರ್ದೇಶಕ ಸಿದ್ದೇಗೌಡ ತಿಳಿಸಿದರು. ಹತ್ತಕ್ಕೂ ಹೆಚ್ಚು ಚಿತ್ರ ಮಾಡಿರುವ ಮೇಘ ಶ್ರೀ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Kannada New Movie meghashri starrer kuntebille goes on floor
Koo

ಬೆಂಗಳೂರು: ಈ ಮೊದಲು `ದಕ್ಷ ಯಜ್ಞ’, ತರ್ಲೆ ವಿಲೇಜ್’, ಋತುಮತಿ ಚಿತ್ರಗಳನ್ನು (Kannada New Movie) ನಿರ್ದೇಶನ ಮಾಡಿದ್ದ ಸಿದ್ದೇಗೌಡ ಜಿ.ಬಿ‌.ಎಸ್. ಅವರು `ಕುಂಟೆಬಿಲ್ಲೆ’ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಯುವ ನಟ ಯದು ಮೊದಲ ಬಾರಿಗೆ ನಾಯಕರಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ‌. ಹತ್ತಕ್ಕೂ ಹೆಚ್ಚು (kuntebille goes on floor) ಚಿತ್ರ ಮಾಡಿರುವ ಮೇಘ ಶ್ರೀ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಪೋಷಕ ಪಾತ್ರಗಳಲ್ಲಿ ಕಿಶೋರ್, ಪವಿತ್ರಾ ಲೋಕೇಶ್, ಶಂಕರ್ ಅಶ್ವಥ್, ಚಂದ್ರಪ್ರಭ ಮೊದಲಾದವರು ನಟಿಸಲಿದ್ದಾರೆ.
ʻನಾವೆಲ್ಲಾ ಚಿಕ್ಕ ವಯಸ್ಸಿನಲ್ಲಿ ಆಡುತ್ತಿದ್ದ ಆಟ ʻಕುಂಟೆಬಿಲ್ಲೆ‌ʼ. ಅದೇ ಟೈಟಲ್ ಇಟ್ಟುಕೊಂಡು ಪ್ರೀತಿ, ನೋವು, ಕಾಮ ಎಲ್ಲವನ್ನೂ ಕಟ್ಟಿಕೊಡಲಿದ್ದೇವೆʼ ಎಂದು ನಿರ್ದೇಶಕ ಸಿದ್ದೇಗೌಡ ತಿಳಿಸಿದರು. ನಿರ್ಮಾಪಕ ಎಸ್.ಬಿ. ಶಿವು ಮಾತನಾಡಿ, ʻಜೀವಿತ ಕ್ರಿಯೇಷನ್‌ನಿಂದ ಒಳ್ಳೆಯ ಸಿನಿಮಾ ಮಾಡಿದ್ದೇವೆ. ಯದು ಹೊಸ ಪ್ರತಿಭೆ ಆಗಿದ್ದು ಅವರನ್ನೇ ನಾಯಕರನ್ನಾಗಿ ಮಾಡಿಕೊಂಡಿದ್ದೇವೆʼ ಎಂದರು. ಮತ್ತೊಬ್ಬ ನಿರ್ಮಾಪಕ ಕುಮಾರ್ ಗೌಡ ಮಾತನಾಡಿ,
ʻನಿರ್ಮಾಣ ಕ್ಷೇತ್ರ ನನಗೆ ಹೊಸದು. 30 ವರ್ಷದ ಹಿಂದೆ ನಾನೊಬ್ಬ ಕಲಾವಿದ ಆಗಬೇಕು ಎಂದು ಬೆಂಗಳೂರಿಗೆ ಹೋಗಿದ್ದವನು‌. ಆದರೆ ಅದು ಸಾಧ್ಯವಾಗಿರಲಿಲ್ಲ‌. ಈಗ ಅದನ್ನು ನನ್ನ ಮಗನ ಮೂಲಕ ಈಡೇರಿಸಿಕೊಳ್ಳುತ್ತಿದ್ದೇನೆ. ನನ್ನ ಮಗನಿಗೆ ರಂಗಭೂಮಿ ಕಡೆಗೆ ಆಸಕ್ತಿ ಇತ್ತು . ಇದೀಗ ವಿದ್ಯಾಭ್ಯಾಸ ಮುಗಿಸಿ ನಟನೆ ಕಡೆಗೆ ಬರುತ್ತಿದ್ದಾನೆ. ಈಗ ನಾನೇ ಮುಂದೆ ನಿಂತು ನಿರ್ದೇಶಕ ಸಿದ್ದೇಗೌಡ ಅವರ ಗರಡಿಗೆ ಬಿಟ್ಟಿದ್ದೇವೆ. ನನ್ನ ಮಗನಿಗೆ ಹೊಂದುವಂತ ಒಳ್ಳೆಯ ಕತೆ ಇದೆ. ಸಿನಿಮಾ ಚೆನ್ನಾಗಿ ಮೂಡಿಬರಲಿದೆʼ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು‌.

ಇದನ್ನೂ ಓದಿ: Kannada New Movie: ಮನರಂಜನೆಯ ರಸದೌತಣ ಬಡಿಸಲು ಬಂದ ʻಮೂರನೇ ಕೃಷ್ಣಪ್ಪʼ: ಟ್ರೈಲರ್‌ ಔಟ್‌!

ಮೇಘಶ್ರೀ ಮಾತಿಗಿಳಿದು, ʻʻಟೈಟಲ್ ನಷ್ಟೇ ಸ್ಕ್ರಿಪ್ಟ್ ಕೂಡ ಚೆನ್ನಾಗಿದೆ. ಕನ್ನಡದಲ್ಲಿ ಈ ರೀತಿಯ ಸ್ಟೋರಿ ಕೇಳಿರಲಿಲ್ಲ. ಒಳ್ಳೆಯ ತಂಡ ಸಿಕ್ಕಿದ್ದು, ನಾನು ಹಳ್ಳಿಯೊಂದರ ಶ್ರೀಮಂತ ಕುಟುಂಬದ ಹುಡುಗಿಯ ಪಾತ್ರ ಮಾಡಲಿದ್ದೇನೆ ಎಂದರು.
ನಾಯಕ ಯದು ಮಾತನಾಡಿ, ನನ್ನ ಮೇಲೆ ನಂಬಿಕೆ ಇಟ್ಟು ಅವಕಾಶ ಕೊಟ್ಟಿದ್ದಾರೆ‌. ಆ ನಿಟ್ಟಿನಲ್ಲಿ ಪಾತ್ರ ಮಾಡುವೆʼʼ ಎಂದರು.

ಹಿರಿಯ ನಟ ಶಂಕರ್ ಅಶ್ವಥ್ ಮಾತನಾಡಿ, ʻʻಅಕ್ಷಯ ತೃತೀಯ ದಿನದಂದು ಯಾವುದೇ ಒಳ್ಳೆಯ ಕೆಲಸ ಮಾಡಿದರೂ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆ ಇದೆ‌. ಅದೇ ರೀತಿ ಈ ಚಿತ್ರಕ್ಕೂ ಒಳ್ಳೆಯದಾಗಲಿ. ನನ್ನದು ನಾಯಕಿಯ ತಂದೆ ಪಾತ್ರ‌. ಒಂದು ಗ್ರಾಮೀಣ ಆಟ ಜೀವನದಲ್ಲಿ ಎಷ್ಟು ಮುಖ್ಯ ಆಗುತ್ತದೆ ಎನ್ನುವುದನ್ನು ಚಿತ್ರದಲ್ಲಿ ಹೇಳಿದ್ದಾರೆ‌. ವಿಭಿನ್ನ ಮತ್ತು ಕುತೂಹಲಕಾರಿ ಚಿತ್ರ ಇದಾಗಿರಲಿದೆʼʼ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಸಂಭಾಷಣೆ ಬರೆದಿರುವ ಮಧು ಮಾತನಾಡಿ ʻʻನಾನು ಪ್ರತಿ ಸಿನಿಮಾಗೆ ಬರೆಯುವಾಗಲೂ ಹೊಸದಾಗಿಯೇ ಬರೆಯುತ್ತೇನೆ. ಈ ಚಿತ್ರದ ಕಥೆ ಚೆನ್ನಾಗಿದೆ. ಅದಕ್ಕೆ ತಕ್ಕಂತೆ ಸಂಭಾಷಣೆ ಬರೆದಿದ್ದೇನೆ. ಹಳ್ಳಿಯ ನೈಜ ಘಟನೆಗಳು ಇಲ್ಲಿ ಇವೆʼʼ ಎಂದು ತಿಳಿಸಿದರು. ಒಂದು ಗ್ರಾಮೀಣ ಆಟ ಜೀವನದಲ್ಲಿ ಎಷ್ಟು ಮುಖ್ಯ ಆಗುತ್ತದೆ ಎನ್ನುವುದು ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ. ವಿಭಿನ್ನ ಮತ್ತು ಕುತೂಹಲಕಾರಿ ಚಿತ್ರ ಇದಾಗಿರಲಿದೆ ಎನ್ನುವ ವಿಶ್ವಾಸ ಚಿತ್ರತಂಡದ್ದು.

Continue Reading
Advertisement
Team India Coach
ಕ್ರಿಕೆಟ್11 mins ago

Team India Coach: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನ; ಮೇ 27 ಕೊನೆಯ ದಿನ

Job Alert
ಉದ್ಯೋಗ27 mins ago

Job Alert: ಎಎಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Narendra Modi
ದೇಶ34 mins ago

Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

HD Deve gowda prajwal revanna case
ಪ್ರಮುಖ ಸುದ್ದಿ43 mins ago

‌Prajwal Revanna Case: ಜೀವನದಲ್ಲಿ ಮೊದಲ ಬಾರಿಗೆ ಗಡ್ಡ ಬಿಟ್ಟ ದೇವೇಗೌಡರು; ವೈರಿನಾಶಕ್ಕೆ ಶಪಥ!

Thailand Open
ಕ್ರೀಡೆ1 hour ago

Thailand Open 2024: ಇಂದಿನಿಂದ ಥಾಯ್ಲೆಂಡ್‌ ಓಪನ್‌ ಟೂರ್ನಿ; ಚಿರಾಗ್‌-ಸಾತ್ವಿಕ್‌ ಜೋಡಿ ಮೇಲೆ ಪದಕ ಭರವಸೆ

US Sanction
ವಿದೇಶ1 hour ago

US sanction: ಇರಾನ್‌ ಜೊತೆ ವ್ಯಾಪಾರ ಒಪ್ಪಂದ ಬೇಡ; ಭಾರತಕ್ಕೆ ನಿರ್ಬಂಧದ ಎಚ್ಚರಿಕೆ ಕೊಟ್ಟ ಅಮೆರಿಕ

Prajwal Revanna Case Devaraje Gowda
ಕ್ರೈಂ2 hours ago

Prajwal Revanna Case: ವಕೀಲ ದೇವರಾಜೇಗೌಡ ಇಂದು ಪೊಲೀಸ್‌ ಕಸ್ಟಡಿಗೆ

Federation Cup
ಕ್ರೀಡೆ2 hours ago

Federation Cup: ಫೆಡರೇಷನ್ ಕಪ್‌ ಫೈನಲ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ನೀರಜ್ ಚೋಪ್ರಾ

Israel-Hamas Conflict
ವಿದೇಶ2 hours ago

Israel-Hamas Conflict: ಗಾಜಾದಲ್ಲಿ ಭಾರತೀಯ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

IPL 2024 Points Table
ಕ್ರೀಡೆ2 hours ago

IPL 2024 Points Table: ಟೂರ್ನಿಯಿಂದ ಹೊರಬಿದ್ದ ಗುಜರಾತ್​ ಟೈಟಾನ್ಸ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ16 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ16 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ17 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ17 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ17 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ24 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 days ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌