ಬೆಂಗಳೂರು: ಬಹು ನಿರೀಕ್ಷಿತ ಹಾಸ್ಯಭರಿತ ಚಿತ್ರ “ಪೌಡರ್” ಟ್ರೈಲರ್ ಚಿತ್ರತಂಡ (Kannada New Movie) ಇಂದು ಘೋಷಣೆ ಮಾಡಿದೆ. ಇದೇ ಆಗಸ್ಟ್ 7ರಂದು ಬೆಳಗ್ಗೆ 11:11 ಗಂಟೆಗೆ ಟ್ರೇಲರ್ ಬಿಡುಗಡೆ ಮಾಡಿವುದಾಗಿ ಚಿತ್ರ ತಂಡ ಘೋಷಿಸಿದೆ. ಈ ಹಿಂದೆ “ಪೌಡರ್” ತಂಡ ಬಿಡುಗಡೆ ಮಾಡಿದ ಟೀಸರ್ ಗೆ ಬಹಳ ಮೆಚ್ಚುಗೆ ವ್ಯಕ್ತವಾಗಿದ್ದು, ಇನ್ನು ಮುಂಬರುವ ಟ್ರೇಲರ್ ಅನ್ನು ವೀಕ್ಷಿಸಲು ಸಿನಿ ಪ್ರೇಕ್ಷಕರು ಕುತೂಹಲದಿಂದ ಕಾಯುವಂತೆ ಮಾಡಿದೆ.
ಜನಾರ್ದನ್ ಚಿಕ್ಕಣ್ಣ ಅವರ ನಿರ್ದೇಶನದ “ಪೌಡರ್” ಒಂದು ಹಾಸ್ಯಭರಿತ ಚಿತ್ರವಾಗಿದ್ದು ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ, ರವಿಶಂಕರ್ ಗೌಡ,ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿರುತ್ತಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರವನ್ನು ಕಾರ್ತಿಕ್ ಗೌಡ,ಯೋಗಿ ಜಿ ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ ಕೆ.ಆರ್.ಜಿ.ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ಹಾಗೂ ಅರುನಭ್ ಕುಮಾರ್ ಟಿ.ವಿ.ಎಫ್.ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ. “ಪೌಡರ್” ಚಿತ್ರ ಇದೇ ಆಗಸ್ಟ್ 23ರಂದು ತೆರೆ ಕಾಣಲಿದೆ.
ಇಬ್ಬರು ಯುವಕರು ಒಂದು ನಿಗೂಢವಾದ “ಪೌಡರ್” ಪ್ರಭಾವದಿಂದಾಗಿ ದಿಢೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು ಇವೆಲ್ಲವನ್ನೂ ಎಳೆಯಾಗಿ ಬಿಚ್ಚಿಡುವ ಕಥೆಯೇ “ಪೌಡರ್”. ಆ ಯುವಕರು ಎಲ್ಲಾ ಸಮಸ್ಯೆಗಳನ್ನು ಮೀರಿ ನಿಲ್ಲುವರೇ? ಅವರ ಎಲ್ಲಾ ಕನಸುಗಳು ನನಸಾಹುವುದೇ? “ಪೌಡರ್” ಹಿಂದಿನ “ಪವರ್” ಅವರಿಗೆ ತಿಳಿಯುವುದೇ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಜುಲೈ 12 ಚಿತ್ರಮಂದಿರಗಳಲ್ಲಿ ಸಿಗಲಿದೆ. ಈಗಾಗಲೇ ತನ್ನ ಟೀಸರ್ ಮೂಲಕ “ಪೌಡರ್” ಎಲ್ಲೆಡೆ ನಗೆ ಚಟಾಕಿ ಹತ್ತಿಸಿದ್ದು, ಚಿತ್ರ ಬಿಡುಗಡೆಯ ನಂತರ ಈ ಹಾಸ್ಯ, ನಗು ದುಪ್ಪಟ್ಟುಗೊಳ್ಳಲಿದೆ ಎಂದರೆ ಉತ್ಪ್ರೇಕ್ಷೆಯಲ್ಲ.
ಇದನ್ನೂ ಓದಿ: Raayan Movie: ಎಂಟೇ ದಿನಕ್ಕೆ ‘100 ಕೋಟಿ ಕ್ಲಬ್’ ಸೇರಿದ ಧನುಷ್ ನಟನೆಯ’ರಾಯನ್’ ಸಿನಿಮಾ!
“ಪೌಡರ್” ಚಿತ್ರವನ್ನು ಕೆ.ಆರ್.ಜಿ ಸ್ಟೂಡಿಯೋಸ್ ಮತ್ತು ಟಿ.ವಿ.ಎಫ್ ಮೋಷನ್ ಪಿಕ್ಚರ್ಸ್‌ನ ಸಹಯೋಗದಲ್ಲಿ ಮೂಡಿ ಬಂದಿರುವ ಮೊದಲ ಚಿತ್ರವಾಗಿದೆ. ಚಿರಪರಿಚಿತ ಚಿತ್ರ ನಿರ್ಮಾಣ ಹಾಗೂ ವಿತರಣಾ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್ ವಿಭನ್ನ ಕಥಾವಸ್ತುವನ್ನು ಸಿನಿ ಪ್ರೇಕ್ಷಕರ ಮುಂದಿಡುವ ಗುರಿಯೊಂದಿಗೆ ಈಗಾಗಲೇ ಹಲವಾರು ಪ್ರಖ್ಯಾತ ಚಿತ್ರಗಳನ್ನು ನಿರ್ಮಿಸಿವೆ. ಇನ್ನು ಟಿ.ವಿ.ಎಫ್ ಮೋಷನ್ ಪಿಕ್ಚರ್ಸ್ ಹಲವಾರು ವೆಬ್ ಸೀರೀಸ್ ಗಳ ಮೂಲಕ ತನ್ನದೇ ಛಾಪನ್ನು ಮೂಡಿಸಿರುವ ಸಂಸ್ಥೆಯಾಗಿದ್ದು, ಇವರಿಬ್ಬರ ಸಹಯೋಗದಲ್ಲಿ ಮೂಡಿ ಬಂದಿರುವ “ಪೌಡರ್” ಬಹುನಿರೀಕ್ಷಿತ ಚಿತ್ರವಾಗಿದೆ.
ಟಿ.ವಿ.ಎಫ್ ಮೋಷನ್ ಪಿಕ್ಚರ್ಸ್ ಕುರಿತು
ಸಂಸ್ಥೆಯ ಸಂಸ್ಥಾಪಕ ಅರುನಭ್ ಕುಮಾರ್ ಸಾರಥ್ಯದಲ್ಲಿ, ಆರಂಭದ ದಿನದಿಂದಲೂ, ಉತ್ತಮ ಗುಣ ಮಟ್ಟದ ಕಥೆಗಳ ಮೂಲಕ ಟಿ.ವಿ.ಎಫ್ ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿದೆ. ತನ್ನ 1೦ ವರ್ಷಗಳ ಪಯಣದಲ್ಲಿ, ಹಲವಾರು “ಸ್ಟೀರಿಯೋ ಟೈಪ್”ಗಳನ್ನು ಭೇದಿಸಿದೆ. “ದಿ ವೈರಲ್ ಫೀವರ್” ಎಂಬ ಶೀರ್ಷಿಕೆಯೊಂದಿಗೆ ಸಾವಿರಾರು ಪ್ರೇಕ್ಷಕರ ಮನಮುಟ್ಟಿದೆ. ಈ ನಡುವೆ ಹಲವಾರು ನಿರ್ಮಾಣ ಸಂಸ್ಥೆಗಳು ಉಗಮವಾಗಿದ್ದರೂ, ಟಿ.ವಿ.ಎಫ್ ವೆಬ್ ಕಂಟೆಂಟ್ ಮೂಲಕ ತನ್ನದೇ ಆದ ಛಾಪನ್ನು ಮೂಡಿಸಿದೆ.