Site icon Vistara News

Kannada New Movie: ಕುತೂಹಲ ಮೂಡಿಸಿದೆ ರವಿಚಂದ್ರನ್ ಅಭಿನಯದ ‘ದ ಜಡ್ಜ್ ಮೆಂಟ್’ ಟ್ರೈಲರ್‌!

Kannada New Movie The judgement Trailer Out Kannada

ಬೆಂಗಳೂರು: ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ (Kannada New Movie) ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ.  “ದ ಜಡ್ಜ್ ಮೆಂಟ್” ಚಿತ್ರದ ಟ್ರೈಲರ್‌ ಇತ್ತೀಚಿಗೆ ಬಿಡುಗಡೆಯಾಯಿತು. ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೈಲರ್‌ ಬಿಡುಗಡೆ ಮಾಡಿ ಶುಭ ಕೋರಿದರು.

ನಿರ್ದೇಶಕ ಗುರುರಾಜ ಕುಲಕರ್ಣಿ ಮಾತನಾಡಿ ʻ ಇದು ರವಿಚಂದ್ರನ್ ಅವರಿಗಾಗಿಯೇ ಮಾಡಿರುವ ಕಥೆ. ಲೀಗಲ್ ಥ್ರಿಲ್ಲರ್ ಜಾನರ್ ಚಿತ್ರ. “ಯದ್ದಕಾಂಡ” ಚಿತ್ರದಲ್ಲಿ ವಕೀಲರಾಗಿ ರವಿಚಂದ್ರನ್ ಅವರ ಅಭಿನಯ ಇಂದಿಗೂ ಜನಪ್ರಿಯ. ಬಹಳ ವರ್ಷಗಳ ನಂತರ ಈ‌ ಚಿತ್ರದಲ್ಲಿ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್, ಧನ್ಯ, ಮೇಘನಾ ಗಾಂವ್ಕರ್, ರಂಗಾಯಣ ರಘು, ಪ್ರಕಾಶ್ ಬೆಳವಾಡಿ ಅವರನ್ನು ಒಳಗೊಂಡ ಬಹು ದೊಡ್ಡ ತಾರಾಗಣ ಈ ಚಿತ್ರದಲ್ಲಿದೆ. ಚಿತ್ರತಂಡದ ಸದಸ್ಯರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಮೇ 24 ಚಿತ್ರರಂದು ಕರ್ನಾಟಕ ಮಾತ್ರವಲ್ಲದೆ, ಡೆಲ್ಲಿ, ಮುಂಬೈ, ಲಕ್ನೋ, ಗೋವಾ, ಆಂದ್ರಪ್ರದೇಶ ಸೇರಿದಂತೆ ದೇಶದ ವಿವಿಧ ಕಡೆ ಪ್ರತಿಷ್ಠಿತ ರಿಲಯನ್ಸ್ ಎಂಟರ್ ಟೈನ್ಮೆಂಟ್ ಸಂಸ್ಥೆ ಮೂಲಕ ಬಿಡುಗಡೆಯಾಗಲಿದೆʼʼ ಎಂದರು.

ಇದನ್ನೂ ಓದಿ: Kannada New Movie: ಒಟಿಟಿಗೆ ಲಗ್ಗೆ ಇಟ್ಟ ತನುಷ್ ಶಿವಣ್ಣ ಅಭಿನಯದ ಕ್ರೈಮ್-ಆ್ಯಕ್ಷನ್ ಸಿನಿಮಾ ʻMr ನಟ್ವರ್ ಲಾಲ್ʼ!

ʻʻನಿರ್ದೇಶಕರು ಬಂದು ಕಥೆ ಹೇಳಿದಾಗ ಇಷ್ಟವಾಯಿತು. ಅಭಿನಯಿಸಲು ಒಪ್ಪಿಕೊಂಡೆ. ಈ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ‌. ಸಾಮಾನ್ಯವಾಗಿ ನನ್ನ ಸಿನಿಮಾ‌ ಹಾಡುಗಳ ಮೂಲಕ ಜನಪ್ರಿಯ.‌ ಆದರೆ ನನಗೆ ಈ ಚಿತ್ರದಲ್ಲಿ ಒಂದು ಹಾಡೂ ಇಲ್ಲ. ಈ ಚಿತ್ರದ ಹೆಸರು “ಜಡ್ಜ್ ಮೆಂಟ್”. ಆದರೆ ನಮ್ಮ ಸಿನಮಾ ನೋಡಿ ಪ್ರೇಕ್ಷಕ ನೀಡುವ ” ಜಡ್ಜ್ ಮೆಂಟ್ ” ಅಂತಿಮʼʼ ಎನ್ನುತ್ತಾರೆ ನಟ ರವಿಚಂದ್ರನ್.

ಚಿತ್ರದಲ್ಲಿ ಅಭಿನಯಿಸಿರುವ ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್, ಧನ್ಯ ರಾಮಕುಮಾರ್, ಮೇಘನಾ ಗಾಂವ್ಕರ್, ರವಿಶಂಕರ್ ಗೌಡ, ರಾಜೇಂದ್ರ ಕಾರಂತ್, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಗಿ, ನವಿಲ ಮುಂತಾದ ಕಲಾವಿದರು ಹಾಗೂ ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್, ಸಂಕಲನಕಾರ ಕೆಂಪರಾಜ್, ಚಿತ್ರಕಥೆ ಬರೆದಿರುವ ವಾಸುದೇವ ಮೂರ್ತಿ ಸೇರಿದಂತೆ ಅನೇಕ ತಂತ್ರಜ್ಞರು “ದ ಜಡ್ಜ್ ಮೆಂಟ್” ಚಿತ್ರದ ಕುರಿತು ಮಾತನಾಡಿದರು.

ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ‌, ಪ್ರಮೋದ್ ಮರವಂತೆ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಡಾ. ರವಿ ವರ್ಮ ಸಾಹಸ ನಿರ್ದೇಶನ, ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನ ‘ದ ಜಡ್ಜ್ ಮೆಂಟ್’ ಚಿತ್ರಕ್ಕಿದೆ.

Exit mobile version