Site icon Vistara News

Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ʻವಿಕಾಸ ಪರ್ವʼ ಸಿನಿಮಾ ಆಡಿಯೊ ರೈಟ್ಸ್

Kannada New Movie vikasa parva cinema audio

ಬೆಂಗಳೂರು: ಸಾಮಾಜಿಕ ಕಳಕಳಿಯುಳ್ಳ “ವಿಕಾಸ ಪರ್ವ” (Kannada New Movie) ಚಿತ್ರದ ಆಡಿಯೊ ರೈಟ್ಸ್ ಹೆಸರಾಂತ ಲಹರಿ ಮ್ಯೂಸಿಕ್ ಸಂಸ್ಥೆಗೆ ಅಧಿಕ ಮೊತ್ತಕ್ಕೆ ಮಾರಾಟವಾಗಿದೆ. ಎ ಪಿ ಓ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಲಹರಿ ಮ್ಯೂಸಿಕ್ ನಲ್ಲಿ ಕೇಳಿ ಆನಂದಿಸಬಹುದು.

ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಿದ್ದವಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ರೋಹಿತ್ ನಾಗೇಶ್ ಅಭಿನಯಿಸಿದ್ದಾರೆ. ಸ್ವಾತಿ, ನಿಶಿತಾ ಗೌಡ, ಅಶ್ವಿನ್ ಹಾಸನ್, ಬಾಲ ರಾಜವಾಡಿ, ಕುರಿ ರಂಗ, ಸಮೀರ್ ನಗರದ್, ವಿಘ್ನೇಶ್, ಬೇಬಿ ಬಿಲ್ವ, ಮಾಸ್ಟರ್ ಅಭಯ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಮೈಂಡ್ ಥಾಟ್ಸ್ ಮೀಡಿಯಾ ಲಾಂಛನದಲ್ಲಿ ಸಮೀರ್ ಅವರು ನಿರ್ಮಿಸಿರುವ ಈ ಚಿತ್ರವನ್ನು ಅನ್ಬು ಅರಸ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ರಾಜ್ಯ ಪ್ರಶಸ್ತಿ ವಿಜೇತ ವಿಶೃತ್ ನಾಯಕ್ ಬರೆದಿದ್ದಾರೆ ಜೊತೆಗೆ ಕಾರ್ಯಕಾರಿ ನಿರ್ಮಾಪಕರಾಗೂ ಕಾರ್ಯ ನಿರ್ವಹಿಸಿದ್ದಾರೆ. ನವೀನ್ ಸುವರ್ಣ ಛಾಯಾಗ್ರಹಣ, ಶ್ರೀನಿವಾಸ್ ಕಲಾಲ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಧನುಕುಮಾರ್, ಜೈ ಮಾಸ್ಟರ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ: Kannada New Movie: ಟ್ರೈಲರ್‌ನಲ್ಲೇ ಕುತೂಹಲ ಮೂಡಿಸಿರುವ “ಜಿಗರ್”; ಜುಲೈ 5 ರಂದು ತೆರೆಗೆ!

ಚಿತ್ರರಂಗದಲ್ಲಿ ಕಂಟೆಂಟ್ ಆಧಾರಿತ ಚಿತ್ರಗಳು ಪ್ರೇಕ್ಷಕರನ್ನು ತಲುಪುವಲ್ಲಿ ಯಶ ಕಾಣುತ್ತಿವೆ. ಅಂತಹ ಉತ್ತಮ ಕಂಟೆಂಟ್​​​ನೊದಿಗೆ ಬರುತ್ತಿರುವ ಚಿತ್ರ ‘ವಿಕಾಸ ಪರ್ವ’. ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ರೋಹಿತ್ ನಾಗೇಶ್ ಹಾಗೂ ಸ್ವಾತಿ ಅಭಿನಯಿಸಿರುವ ‘ವಿಕಾಸ ಪರ್ವ’ ಈಗಾಗಲೇ ಹಾಡುಗಳಿಂದ ಗಮನ ಸೆಳೆದಿದೆ. ಶೂಟಿಂಗ್ ಪೂರ್ಣಗೊಳಿಸಿ ಬಿಡುಗಡೆಗೆ ಸಜ್ಜಾಗುತ್ತಿರುವ ಚಿತ್ರಕ್ಕೀಗ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ.

Exit mobile version