Site icon Vistara News

Kannada New Movie: ಡಿ.ಸತ್ಯಪ್ರಕಾಶ್ ನಿರ್ದೇಶನದ “X&Y” ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ

Kannada New Movie X&Y-The Most Wanted

ಬೆಂಗಳೂರು: ಸತ್ಯ ಪಿಕ್ಚರ್ಸ್ ಗೂಡಿನಿಂದ (Kannada New Movie) ಮತ್ತೊಂದು ಹೊಸ ಸಿನಿಮಾವೊಂದು ಸಿನಿಪ್ರೇಕ್ಷಕರ ಮುಂದೆ ಬರುತ್ತಿದೆ. ಡಿ.ಸತ್ಯಪ್ರಕಾಶ್ ನಿರ್ದೇಶಿಸಿ, ಒಂದು ಮುಖ್ಯ ಪಾತ್ರದಲ್ಲೂ ಕಾಣಿಸಿಕೊಂಡಿರುವ ಈ ಚಿತ್ರದ ಹೆಸರು X&Y (X ಆ್ಯಂಡ್‌ Y).

ಇದು ಇವತ್ತಿನ ಜನರೇಷನ್ ಕಥೆ. ಅಪ್ಪ-ಅಮ್ಮ ಆದವರ, ಅಪ್ಪ-ಅಮ್ಮ ಆಗುತ್ತಿರುವವರ, ಅಪ್ಪ –ಅಮ್ಮ ಆಗಬೇಕು ಎಂದುಕೊಂಡವರ ಕಥೆ. ಹಾಗೆಯೇ ಇವತ್ತಿನ ಹುಡುಗ-ಹುಡುಗಿಯರ ಕಥೆ, ಇವತ್ತಿನ ಮಕ್ಕಳ ಕಥೆ. ಇದೊಂದು ಕಾಮಿಡಿ ಜಾನರ್ ಸಿನಿಮಾ ಆಗಿದ್ದು ಅತಿ ಸೂಕ್ಷ್ಮ ವಿಚಾರಗಳನ್ನು ಅಷ್ಟೇ ಸರಳವಾಗಿ ಅದರಲ್ಲೂ ನಗುನಗುತ್ತಾ ನೋಡುವಂತಹ ಕಥೆಯಾಗಿ ನಿಮ್ಮ ಮುಂದೆ ತರುತ್ತಿದ್ದೇವೆ ಎಂದು ಹೇಳಿಕೊಂಡಿದೆ ಚಿತ್ರತಂಡ.

ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಎರಡನೇ ಹಂತದ ಚಿತ್ರೀಕರಣಕ್ಕೆ ತಯಾರಿ ನಡೆಯುತ್ತಿದೆ. ವಾಸುಕಿ-ವೈಭವ್ ಸಂಗೀತ, ಲವಿತ್ ಛಾಯಾಗ್ರಹಣ, ಬಿ.ಎಸ್ ಕೆಂಪರಾಜು ಸಂಕಲನ, ವರದರಾಜ್ ಕಾಮತ್ ಕಲಾ ನಿರ್ದೇಶನ ಚಿತ್ರಕ್ಕಿದೆ. ಅಥರ್ವ ಪ್ರಕಾಶ, ಬೃಂದಾ ಆಚಾರ್ಯ, ಅಯನ, ಸುಂದರ್ ವೀಣಾ, ವೀಣಾ ಸುಂದರ್, ದೊಡ್ಡಣ್ಣ ಹೀಗೆ ಹಿರಿಯ ಮತ್ತು ಹೊಸ ಕಲಾವಿದರ ಸಂಗಮ ಚಿತ್ರದಲ್ಲಿದೆ.
ಇದು ಸತ್ಯ ಪಿಕ್ಚರ್ಸ್ ಸಂಸ್ಥೆಯ ನಾಲ್ಕನೇ ಸಿನಿಮಾ.

ಇದನ್ನೂ ಓದಿ: Kannada New Movie: ಪ್ರೇಮಿಗಳ ದಿನ ಮುಗಿದ್ಮೇಲೆ ಕೆಟಿಎಂ ಸವಾರಿ; `ದಿಯಾ’ ದೀಕ್ಷಿತ್ ಹೊಸ ಚಿತ್ರ!`

ಈ ಹಿಂದಿನ ಮೂರು ಚಿತ್ರಗಳಿಗೆ ಪಾಸಿಟಿವ್‌ ವಿಮರ್ಶೆಗಳು ವ್ಯಕ್ತವಾಗಿದ್ದವು. ಈಗಾಗಲೇ ಸಿನಿಮಾ ಮೊದಲ ಪೋಸ್ಟರನ್ನು ಶೇರ್‌ ಮಾಡಿಕೊಂಡಿದೆ. ಪ್ರೇಕ್ಷಕರ ಅನಿಸಿಕೆಗಾಗಿ ಎದುರು ನೋಡುತ್ತಿದೆ ಸತ್ಯಪಿಕ್ಚರ್ಸ್‌ನ ಸತ್ಯಪ್ರಕಾಶ್ ಹಾಗೂ ತಂಡ.

Exit mobile version