Site icon Vistara News

Kantara Movie: ʻಕಾಂತಾರಾʼ ಪ್ರೀಕ್ವೆಲ್​ನಲ್ಲಿ ಸಪ್ತಮಿ ಗೌಡ ಇಲ್ಲ! ಆ ಪಾತ್ರಕ್ಕೆ ಬಂದವರು ಯಾರು?

Kantara Movie chapter 1 Sapthami Gowda not acting

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್‌ (Yuva Rajkumar) ಅಭಿನಯದ ಯುವ ‘ಯುವ’ ಸಿನಿಮಾದಲ್ಲಿ ಸಪ್ತಮಿ ಗೌಡ (Sapthami Gowda) ಅವರು ನಾಯಕಿಯಾಗಿ ನಟಿಸಿದ್ದಾರೆ. ಯುವ ರಾಜ್‌ಕುಮಾರ್‌ ನಟನೆಯ ಯುವ ಸಿನಿಮಾ ತೆರೆ ಕಂಡು ಯಶಸ್ಸು ಕಂಡಿದೆ. ಈ ಸಕ್ಸೆಸ್‌ ಮೀಟ್‌ನಲ್ಲಿ ರಾಘಣ್ಣ, ಯುವ, ಸಪ್ತಮಿ ಗೌಡ, ಸುಧಾರಾಣಿ ಸೇರಿದಂತೆ ಇಡೀ ಚಿತ್ರತಂಡ ಭಾಗಿಯಾಗಿತ್ತು. ಈ ವೇಳೆ ಸಪ್ತಮಿ ಗೌಡ ‘ಕಾಂತಾರ: ಚಾಪ್ಟರ್ 1’ನಲ್ಲಿ ನಟಿಸುತ್ತಿದ್ದಾರೆಯೇ ಎನ್ನುವ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. ಮಾಧ್ಯಮವೊಂದರಲ್ಲಿ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಮೊದಲ ಭಾಗದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ಮಿಂಚಿದ್ದರು. ರಿಷಬ್‌ ಜತೆಗೆ ಅವರ ಪಾತ್ರಕ್ಕೂ ಮೆಚ್ಚುಗೆ ಲಭ್ಯವಾಗಿತ್ತು. ಇದೀಗ ಚಾಪ್ಟರ್‌ 1ರಲ್ಲಿ ಅವರು ಅಭಿನಯಿಸಲಿದ್ದಾರಾ ಎನ್ನುವ ಪ್ರಶ್ನೆಗೆ ಮಾಧ್ಯಮವೊಂದರಲ್ಲಿ ಉತ್ತರ ಕೊಟ್ಟಿದ್ದಾರೆ. ‘ಕಾಂತಾರ: ಚಾಪ್ಟರ್ 1’ನಲ್ಲಿ ನಾನು ನಟಿಸುತ್ತಿಲ್ಲ. ಈಗ ಆಗುತ್ತಿರುವುದು ಪ್ರೀಕ್ವೆಲ್‌. ಪಾತ್ರವೇ ಇಲ್ಲ ಎಂದಾಗ ನಟಿಸುವುದು ಹೇಗೆ? ಆ ಪಾತ್ರಕ್ಕೆ ಬೇರೆಯವರು ಬಂದಿದ್ದಾರೆ. ʻಕಾಂತಾರʼ ಸಿನಿಮಾ ರಿಲೀಸ್ ಆಗಿ ಎರಡು ವರ್ಷ ಕಳೆದರೂ ಈಗಲೂ ಅದರ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಪ್ರೀಕ್ವೆಲ್‌ ಕೂಡ ಚೆನ್ನಾಗಿ ಮೂಡಿ ಬರಲಿದೆʼʼಎಂದು ಹೇಳಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ; Kantara Movie: ʼಕಾಂತಾರ ಚಾಪ್ಟರ್‌ 1ʼ ಶೂಟಿಂಗ್‌ ಆರಂಭಕ್ಕೂ ಮುನ್ನ ಒಟಿಟಿ ಹಕ್ಕು ಭಾರೀ ಮೊತ್ತಕ್ಕೆ ಸೇಲ್‌; ಖರೀದಿಸಿದ್ದು ಯಾರು?

ಕಾಂತಾರ ಒಂದು ದಂತಕಥೆ ಎಂದರೆ ಮೊದಲ ಭಾಗ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗಿತ್ತು. ಪ್ರೀಕ್ವೆಲ್ ರೈಟ್ಸ್ ಕೂಡ ಅಮೇಜಾನ್ ಪ್ರೈಂ ವಿಡಿಯೊ ಪಾಲಾಗಿದೆ.

“ಕಾಂತಾರ’ ಪ್ರೀಕ್ವೆಲ್ ಸಿನಿಮಾ ತೆರೆಕಂಡು ಒಂದೂವರೆ ತಿಂಗಳ ಬಳಿಕ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ʼಕಾಂತಾರʼ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿತ್ತು. ಹೀಗಾಗಿ ಪ್ರೀಕ್ವೆಲ್ ಕೂಡ ಕನ್ನಡದ ಜತೆಗೆ ವಿವಿಧ ಭಾಷೆಗಳಲ್ಲಿ ತೆರೆಗೆ ಬರಲಿದೆ. ಕೆಲವು ದಿನಗಳ ಹಿಂದೆ ಹೊರ ಬಿದ್ದ ಫಸ್ಟ್‌ ಲುಕ್‌ ಪೋಸ್ಟರ್‌ ದೇಶದ ಗಮನ ಸೆಳೆದಿತ್ತು. ಇದನ್ನೂ ಹೊಂಬಾಳೆ ಫಿಲ್ಮ್ಸ್‌ ನಿರ್ಮಿಸಲಿದ್ದು, ಅಂದಾಜು 125 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗುತ್ತಿದೆ ಎನ್ನಲಾಗಿದೆ.

ಕಾಂತಾರʼ ಕಥೆ ನಡೆಯುವುದಕ್ಕೆ ಮುನ್ನ ಏನಾಗಿತ್ತು ಎನ್ನುವುದನ್ನು ರಿಷಬ್‌ ಶೆಟ್ಟಿ ಈ ಭಾಗದಲ್ಲಿ ವಿವರಿಸಲಿದ್ದಾರೆ. ಕ್ರಿ.ಶ. 301-400ರ ಕಾಲಘಟ್ಟದ ಕಥೆ ತೆರೆ ಮೇಲೆ ಅನಾವರಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಿನಿಮಾ ಪಂಜುರ್ಲಿ ದೈವ ಮತ್ತು ಗುಳಿಗ ದೈವಗಳ ಮೂಲದ ಕಥೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ.

Exit mobile version