Site icon Vistara News

Kiccha Sudeep: ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಭೇಟಿ; ಇವರನ್ನು ನೋಡಲು ಜನವೋ ಜನ!

Kiccha Sudeep visit chamundeshwari temple

ಮೈಸೂರು: ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ (Kiccha Sudeep) ಇಂದು (ಮೇ 27) ಬೆಳಗ್ಗೆ ಭೇಟಿ ನೀಡಿದ್ದಾರೆ. ನಾಡ ಅದಿದೇವತೆ ದರ್ಶನ ಪಡೆದಿದ್ದಾರೆ ಕಿಚ್ಚ ಸುದೀಪ್. ಕಿಚ್ಚ ಸುದೀಪ್ ನೋಡಲು ಅಭಿಮಾನಿಗಳು ಸಾಗರವೇ ನೆರೆದಿತ್ತು. ಕಿಚ್ಚ ಸುದೀಪ್‌ ಕಂಡೊಡನೆ (Kiccha Sudeep visit chamundeshwari temple) ಫ್ಯಾನ್ಸ್‌ ಜೈಕಾರ ಹಾಕಿದ್ದಾರೆ. ಕೆಲವು ದಿನಗಳ ಹಿಂದೆ ಸುದೀಪ್‌ ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಕಂಪ್ಲೀಟ್‌ ಆಗಿದೆ ಎಂದು ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಕೆಲವೇ ದಿನಗಳಲ್ಲಿ ಮ್ಯಾಕ್ಸ್‌ ಟ್ರೈಲರ್‌ ರಿಲೀಸ್‌ ಮಾಡಲಿದ್ದಾರೆ ಎನ್ನಲಾಗಿದೆ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರೆಸ್ಟ್ ಆಯೋಜಿಸಿದ್ದ, ಯಕ್ಷ ಧ್ರುವ ಪಟ್ಲ ಸಂಭ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಮಾತಾಡುತ್ತಿದ್ದ ಕಿಚ್ಚ ಸುದೀಪ್ ತಮಗಿರುವ ತುಳುನಾಡಿನ ಕನೆಕ್ಷನ್ ಬಗ್ಗೆ ಮಾತಾಡಿದ್ದರು. ಅವರ ತಾಯಿ ತುಳುನಾಡಿನವರಾಗಿದ್ದು, ಅವರು ತುಂಬಾ ಚೆನ್ನಾಗಿ ತುಳು ಮಾತಾಡುತ್ತಾರೆ. ಆದರೆ, ತಮಗೆ ಮಾತ್ರ ಎರಡೇ ಎರಡು ತುಳು ಪದಗಳನ್ನು ಹೇಳಿಕೊಟ್ಟಿದ್ದಾರಷ್ಟೇ ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ: Kiccha Sudeep: ʻಮ್ಯಾಕ್ಸ್ʼ ಪ್ರಿ- ಕ್ಲೈಮ್ಯಾಕ್ಸ್ ಫೋಟೊ ಲೀಕ್‌? ಬೆಂಕಿ ಬಿರುಗಾಳಿ ಅಂದ್ರು ಫ್ಯಾನ್ಸ್‌!

‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ಮ್ಯಾಕ್ಸ್ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ಕಿಚ್ಚ ಸುದೀಪ್‌ ಎಕ್ಸ್‌ನಲ್ಲಿ ʻʻಮಹಾಬಲಿಪುರಂನಲ್ಲಿ ʻಮ್ಯಾಕ್ಸ್‌ʼಗಾಗಿ ಒಂದು ಸುತ್ತು. ಸುದೀರ್ಘ 10 ತಿಂಗಳ ಪ್ರಯಾಣ. ನಾನು‌ ಪ್ರತಿ ಘಳಿಗೆಯನ್ನು ಆನಂದಿಸಿದೆ. ಸೆಟ್‌ನಲ್ಲಿ ಅದ್ಭುತ ತಂಡ ಮತ್ತು ಸುಂದರ ತಾರೆಯನ್ನು ಒಳಗೊಂಡಿತ್ತು. ಧನ್ಯವಾದಗಳು ಧನು ಸರ್. ನನ್ನನ್ನು ಚೆನ್ನಾಗಿ ಹೋಸ್ಟ್ ಮಾಡಿದ್ದಕ್ಕಾಗಿ ಧನ್ಯವಾದಗಳು, ವಿಜಯ್ ಮತ್ತು ಇಡೀ ತಂಡಕ್ಕೆ ಧನ್ಯವಾದʼʼಎಂದು ಬರೆದುಕೊಂಡಿದ್ದರು.

ಇದಕ್ಕೂ ಕೆಲವು ದಿನಗಳ ಹಿಂದೆ ಟ್ರೈಲರ್ ರಫ್ ಕಟ್ ಆಗಿರುವ ಬಗ್ಗೆ ಸುದೀಪ್ ಮಾಹಿತಿ ಹಂಚಿಕೊಂಡಿದ್ದರು. ಸುದೀಪ್‌ ಎಕ್ಸ್‌ನಲ್ಲಿ ʻʻಮ್ಯಾಕ್ಸ್ (Max) ಕ್ಲೈಮ್ಯಾಕ್ಸ್‌ನ ಪ್ರಮುಖ ಭಾಗ ಪೂರ್ಣಗೊಳಿಸಲಾಗಿದೆ. ಇಲ್ಲಿಯವರೆಗೆ ಚಿತ್ರೀಕರಿಸಿದ ಅಷ್ಟೂ ಶಾಟ್‌ಗಳನ್ನು ನೋಡಿದೆ. ಚಿತ್ರದ ಪ್ರತಿ ಬಿಟ್ ನೋಡಿ, ತಂಡದ ಎಫರ್ಟ್‌ ಕಂಡು ಸಂತೋಷವಾಗಿದೆ. ಸ್ವಲ್ಪ ಭಾಗ ಚಿತ್ರೀಕರಣ ಬಾಕಿ ಇದೆ. ಟ್ರೈಲರ್ ವೇಳೆ ರಫ್ ಕಟ್ ಸಹ ನೋಡಿದೆ ಮತ್ತು ಅದು ನನ್ನನ್ನು ರೋಮಾಂಚನಗೊಳಿಸಿತುʼʼ ಎಂದು ಬರೆದುಕೊಂಡಿದ್ದರು.

ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ವರದಿಯಾಗಿದೆ. ʻಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ ಎನ್ನಲಾಗಿದೆ.

ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷಿಯನ್‌ಗಳೂ ಇದ್ದಾರೆ. ಹಾಗೆಯೇ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್‌ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Exit mobile version