Manvita Kamath: ‘ಟಗರು ಪುಟ್ಟಿʼ ಮಾನ್ವಿತಾದ್ದು ಲವ್ ಮ್ಯಾರೇಜ್? ಕೊನೆಗೂ ಸ್ಪಷ್ಟನೆ ಕೊಟ್ಟ ನಟಿ! - Vistara News

ಸ್ಯಾಂಡಲ್ ವುಡ್

Manvita Kamath: ‘ಟಗರು ಪುಟ್ಟಿʼ ಮಾನ್ವಿತಾದ್ದು ಲವ್ ಮ್ಯಾರೇಜ್? ಕೊನೆಗೂ ಸ್ಪಷ್ಟನೆ ಕೊಟ್ಟ ನಟಿ!

Manvita Kamath: ಮಾನ್ವಿತಾ ಕಾಮತ್‌ ಅವರ ಹಳದಿ ಶಾಸ್ತ್ರ ಏಪ್ರಿಲ್ 29ರಂದು ನಡೆಯಲಿದೆ. ಸಂಗೀತ ಕಾರ್ಯಕ್ರಮ ಮತ್ತು ಎಂಗೇಜ್‌ಮೆಂಟ್ ಏಪ್ರಿಲ್ 30ರಂದು ನಡೆಯಲಿದೆ ಎಂದು ಮಾನ್ವಿತಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ.ಕನ್ನಡ ಚಿತ್ರರಂಗದ ಕಲಾವಿದರಿಗಾಗಿ ಗೆಟ್​​ ಟುಗೆದರ್ ಮಾಡುವ ಯೋಜನೆ ಇದೆ’ ಎಂದು ಮಾನ್ವಿತಾ ಹೇಳಿದ್ದಾರೆ.

VISTARANEWS.COM


on

Manvita Kamath Marriage Details Future Husband Arun
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್‌ (Manvita Kamath) ಅವರು ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಅವರನ್ನು ಕೈಹಿಡಿಯುತ್ತಿದ್ದಾರೆ. ಮೇ 1ರಂದು ಚಿಕ್ಕಮಗಳೂರು ಜಿಲ್ಲೆಯ ಕಳಸದ ವೆಂಕಟರಮಣ ದೇವಸ್ಥಾನದಲ್ಲಿ ಈ ಜೋಡಿ ಶಾಸ್ತ್ರೋಕ್ತವಾಗಿ ಮದುವೆಯಾಗುತ್ತಿದೆ. ಅರುಣ್ ಒಬ್ಬ ಐಟಿ ಪ್ರೊಫೆಶನಲ್ ಮತ್ತು ಮ್ಯೂಸಿಕ್ ಪ್ರೊಡ್ಯೂಸರ್. ಏಪ್ರಿಲ್ 29ರಂದು ಹಳದಿ ಶಾಸ್ತ್ರ ನಡೆಯಲಿದೆ. ಸಂಗೀತ ಕಾರ್ಯಕ್ರಮ ಮತ್ತು ಎಂಗೇಜ್‌ಮೆಂಟ್ ಏಪ್ರಿಲ್ 30ರಂದು ನಡೆಯಲಿದೆ ಎಂದು ಮಾನ್ವಿತಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಮದುವೆ ಬಗ್ಗೆ ನಟಿ ಮಾಧ್ಯಮದ ಮುಂದೆ ಹಲವು ವಿಚಾರಗಳನ್ನು ಹೇಳಿದರು. ʻʻಇದೊಂದು ಪಕ್ಕಾ ಅರೇಂಜ್ಡ್ ಮ್ಯಾರೇಜ್ʼʼ ಎಂದರು. ಇದು ಲವ್ ಮ್ಯಾರೇಜ್ ಅಲ್ಲ ಎಂದು ನಟಿ ಮಾನ್ವಿತಾ ಕಾಮತ್ ಸ್ಪಷ್ಟನೆ ಕೊಟ್ಟಿದ್ದಾರೆ. ‘ನಮ್ಮದು ಅರೇಂಜ್ಡ್ ಮ್ಯಾರೇಜ್. ಮುಂದಿನ 3 ತಿಂಗಳು ಶುಭ ಮುಹೂರ್ತ ಇರಲಿಲ್ಲ. ಹೀಗಾಗಿ, ಮೇ 1ಕ್ಕೆ ಮದುವೆ ಆಗುತ್ತಿದ್ದೇವೆ. ಕನ್ನಡ ಚಿತ್ರರಂಗದ ಕಲಾವಿದರಿಗಾಗಿ ಗೆಟ್​​ ಟುಗೆದರ್ ಮಾಡುವ ಯೋಜನೆ ಇದೆ’ ಎಂದು ಮಾನ್ವಿತಾ ಹೇಳಿದ್ದಾರೆ. ಮಾತ್ರವಲ್ಲ ʻಮದುವೆ ಬಳಿಕವೂ ಸಿನಿಮಾ ಮಾಡುತ್ತೇನೆ. ವೈಯಕ್ತಿಕ ಬೇರೆ, ಪ್ರೊಫೆಷನಲ್ ಬೇರೆ. ಅದನ್ನು ಮಿಕ್ಸ್ ಅಪ್ ಮಾಡಲ್ಲʼʼಎಂದರು ಮಾನ್ವಿತಾ.

ಇದನ್ನೂ ಓದಿ: Manvita Kamath: ‘ಟಗರು ಪುಟ್ಟಿʼಗೆ ಗಂಡು ಹುಡುಕಿದ್ದು ಯಾರು? ಮದುವೆ ಸ್ಥಳದ ಮಾಹಿತಿ ಇಲ್ಲಿದೆ ನೋಡಿ!

ಇನ್ನು ಅರುಣ್‌ ಕೂಡ ಮಾನ್ವಿತಾ ಅವರು ಮದುವೆ ಬಳಿಕ ಸಿನಿಮಾ ಮಾಡಿದರೂ ಯಾವುದೇ ಅಭ್ಯಂತರ ಇಲ್ಲ ಎಂದಿದ್ದಾರೆ. ಮೈಸೂರಿನಲ್ಲಿ ಅರುಣ್ ಎಂಜಿನಿಯರಿಂಗ್ ಮಾಡಿದ್ದಾರೆ. ಅವರಿಗೆ ಸಿನಿಮಾ ರಂಗದಲ್ಲಿ ಹೆಚ್ಚು ಆಸಕ್ತಿ ಇಲ್ಲವಂತೆ.

ಮಾನ್ವಿತಾ ಮದುವೆಯಾಗುತ್ತಿರುವ ಅರುಣ್ ಕುಮಾರ್ ಮೈಸೂರಿನವರು. ಕಳಸದಲ್ಲಿಯೇ ಯಾಕೆ ಮದುವೆಯಾಗುತ್ತಿದ್ದೀರಾ ಎಂಬ ಪ್ರಶ್ನೆಗೆ ಮಾನ್ವಿತಾ ಮಾತನಾಡಿ ʻʻನಾನು ಹತ್ತನೇ ತರಗತಿವರಗೆ ಕಳಸದಲ್ಲೇ ಕಲಿತದ್ದು. ಈ ಊರಿನೊಂದಿಗೆ ನನಗೆ ನಂಟಿದೆ, ಅಪ್ಪ- ಅಮ್ಮನ ಜೊತೆ ಇಲ್ಲೇ ವಾಸವಿದ್ದೆ. ಹಾಗಾಗಿ ಮದುವೆ ಇಲ್ಲೇ ಆಗುವುದರ ಬಗ್ಗೆ ಅರುಣ್ ಮತ್ತು ಅವರ ಪೋಷಕರಿಗೆ ತಿಳಿಸಿದಾಗ ಅವರು ಖುಷಿಯಿಂದಲೇ ಒಪ್ಪಿದರು.ʼʼಎಂದರು.

ಇದನ್ನೂ ಓದಿ: Manvita Kamath: ʻಟಗರು ಪುಟ್ಟಿʼಗೆ ಕಂಕಣ ಭಾಗ್ಯ ಕೂಡಿ ಬಂತು! ವರ ಯಾರು?

`ಕೆಂಡಸಂಪಿಗೆ‘ (kendasampige Cinema Kannada) ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಹೆಜ್ಜೆ ಇಟ್ಟು ಸಕ್ಸೆಸ್‌ ಫುಲ್ ನಟಿಯಾಗಿ ಹೊರಹೊಮ್ಮಿರುವವರು ಮಾನ್ವಿತಾ ಕಾಮತ್ (Manvita Kamath). ಆರ್ ಜೆಯಾಗಿದ್ದ ಮಾನ್ವಿತಾ ಅವರು ದುನಿಯಾ ಸೂರಿ ನಿರ್ದೇಶನದ ʻಕೆಂಡಸಂಪಿಗೆʼ ಚಿತ್ರದಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಬಲಗಾಲಿಟ್ಟರು. ಬಳಿಕ ಶಿವಣ್ಣನ ʻಟಗರುʼ ಸಿನಿಮಾದಲ್ಲಿ ಬಣ್ಣ ಹಚ್ಚಿ ʻಟಗರು ಪುಟ್ಟಿʼಯಾಗಿ ಕರುನಾಡ ಪ್ರೇಕ್ಷಕರ ಮನ ಗೆದ್ದರು. ಚೌಕ’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು ಮಾನ್ವಿತಾ. ಸದ್ಯ ಕನ್ನಡ ಮತ್ತು ಮರಾಠಿಯಲ್ಲಿ ನಿರ್ಮಾಣವಾಗಿರುವ ʻರಾಜಸ್ತಾನ ಡೈರೀಸ್‌ʼ ಮತ್ತು ʻಹ್ಯಾಪಿಲಿ ಮ್ಯಾರೀಡ್‌ʼ ಸಿನಿಮಾಗಳಲ್ಲಿಯೂ ನಟಿಸಿದ್ದು, ತೆರೆಗೆ ಬರಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Actor Upendra: ಉಪೇಂದ್ರ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ರಿ-ರಿಲೀಸ್‌ ಆಗಲಿದೆ ಈ ಕ್ಲಾಸಿಕ್‌ ಸಿನಿಮಾ

Actor Upendra: 1998ರಲ್ಲಿ ತೆರೆಕಂಡ ಉಪೇಂದ್ರ ಅಭಿನಯದ, ನಿರ್ದೇಶನದ ʼಎʼ ಚಿತ್ರವನ್ನು ಅಭಿಮಾನಿಗಳು ಮರೆಯಲು ಸಾಧ್ಯವೇ ಇಲ್ಲ. ಸ್ಯಾಂಡಲ್‌ವುಡ್‌ನಲ್ಲಿ ಸಂಚಲನ ಮೂಡಿಸಿದ್ದ ಈ ಸಿನಿಮಾ ಸಾಂಪ್ರದಾಯಿಕ ಚೌಕಟ್ಟು ಮೀರಿ ಪ್ರಯೋಗಾತ್ಮಕ ಚಿತ್ರ ಎನಿಸಿಕೊಂಡಿತ್ತು. ಇದೀಗ ಈ ಚಿತ್ರವನ್ನು ರಿ-ರಿಲೀಸ್‌ ಮಾಡಲು ಸಿನಿಮಾತಂಡ ಯೋಜನೆ ಹಾಕಿಕೊಂಡಿದೆ.

VISTARANEWS.COM


on

Actor Upendra
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ರಿಯಲ್‌ ಸ್ಟಾರ್‌ ಉಪೇಂದ್ರ (Actor Upendra) ತಮ್ಮ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ನೀಡಿದ್ದಾರೆ. ಉಪೇಂದ್ರ ನಟಿಸಿ, ನಿರ್ದೇಶನ ಮಾಡಿದ್ದ ಕ್ಲಾಸಿಕ್ ಸಿನಿಮಾ ʼಎʼ (A) ರಿ-ರಿಲೀಸ್‌ ಆಗಲಿದೆ. 1998ರ ಫೆಬ್ರವರಿ 12ರಂದು ತೆರೆಗೆ ಬಂದಿದ್ದ ಈ ಚಿತ್ರ ಇದೀಗ 26 ವರ್ಷಗಳ ಬಳಿಕ ಮತ್ತೊಮ್ಮೆ ಬಿಡುಗಡೆಯಾಗಲಿದೆ. ಸ್ವತಃ ಉಪೇಂದ್ರ ಅವರೇ ಸೋಷಿಯಲ್‌ ಮೀಡಿಯಾದಲ್ಲಿ ಈ ಸಿನಿಮಾದ ಪ್ರೋಮೊ ರಿಲೀಸ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ತನ್ನ ವಿಭಿನ್ನ ಶೀರ್ಷಿಕೆಯಿಂದಲೇ ಆ ಕಾಲದಲ್ಲಿ ಸಿನಿ ಪ್ರೇಕ್ಷಕರ ಗಮನ ಸೆಳೆದಿದ್ದ ಚಿತ್ರ ʼಎʼ. ಅದುವರೆಗೆ ನಿರ್ದೇಶಕನಾಗಿ ಹಾಗೂ ಸಿನಿಮಾಗಳಲ್ಲಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಉಪೇಂದ್ರ ಈ ಚಿತ್ರದ ಮೂಲಕ ನಾಯಕನಾಗಿಯೂ ಪರಿಚಿತರಾದರು. ವಿಭಿನ್ನ ಕಥಾ ಹಂದರ, ಮೇಕಿಂಗ್‌ ಶೈಲಿಯಿಂದ ಈ ಚಿತ್ರ ನೋಡುಗರನ್ನು ಆಕರ್ಷಿಸಿತ್ತು. ನಾಯಕಿಯಾಗಿ ಚಾಂದಿನಿ ಕಾಣಿಸಿಕೊಂಡ ಈ ಸಿನಿಮಾ ಸಾಂಪ್ರದಾಯಿಕ ಕಟ್ಟು-ಕಟ್ಟಳೆಗಳನ್ನು ಮುರಿದು ಪ್ರಯೋಗಾತ್ಮಕ ಚಿತ್ರ ಎನಿಸಿಕೊಂಡಿತ್ತು.

ಹಿಟ್‌ ಚಿತ್ರ

ಒಬ್ಬ ನಿರ್ದೇಶಕ ಹಾಗೂ ನಾಯಕಿಯ ನಡುವಿನ ಪ್ರೇಮಕಥೆಯನ್ನೆ ಈ ಚಿತ್ರ ಆಧರಿಸಿತ್ತು. ಆದರೆ ಅದನ್ನೇ ಉಪೇಂದ್ರ ವಿಭಿನ್ನವಾಗಿ ತೆರೆ ಮೇಲೆ ತಂದಿದ್ದರು. ಎಲ್ಲವನ್ನೂ ರಿವರ್ಸ್ ಸ್ಕ್ರೀನ್ ಪ್ಲೇಯಲ್ಲಿ ಉಪೇಂದ್ರ ಹೇಳಿದ್ದರು. ಈ ಪ್ರಯೋಗವನ್ನು ವೀಕ್ಷಕರೂ ಮೆಚ್ಚಿಕೊಂಡಿದ್ದರು. ಆ ಮೂಲಕ ಉಪೇಂದ್ರ ಎಂಬ ನಿರ್ದೇಶಕ ಮತ್ತು ನಟ ಗೆಲುವು ಸಾಧಿಸಿದ್ದರು. ಪರಿಣಾಮ ಸೂಪರ್‌ ಚಿತ್ರ ಹಿಟ್‌ ಆಗಿತ್ತು. ಜತೆಗೆ ಸಂಭಾಷಣೆಯೂ ಮೆಚ್ಚುಗೆ ಗಳಿಸಿತ್ತು.

ಮೋಡಿ ಮಾಡಿದ ಸಂಗೀತ

ಚಿತ್ರದ ಯಶಸ್ಸಿನಲ್ಲಿ ಸಂಗೀತದ ಪಾತ್ರವೂ ಮುಖ್ಯವಾಗಿತ್ತು. ಸಿನಿಮಾದ ಹಾಡುಗಳು ಇಂದಿಗೂ ಜನಪ್ರಿಯ. ವಿಶೇಷ ಎಂದರೆ ಗುರು ಕಿರಣ್‌ ʼಎʼ ಸಿನಿಮಾದ ಮೂಲಕ ಮೊದಲ ಬಾರಿ ಸಂಗೀತ ಸಂಯೋಜನೆ ಮಾಡಿದ್ದರು. ಮೊದಲ ಸಿನಿಮಾದಲ್ಲೇ ಸಿಕ್ಸರ್‌ ಭಾರಿಸಿದ್ದರು. ʼಸುಮ್‌ ಸುಮ್ನೆʼ, ʼಚಾಂದಿನಿʼ, ʼಹೇಳ್‌ಕೊಳ್ಳೊಕೆ ಒಂದೂರುʼ, ʼಇದು ಒನ್‌ ಡೇ ಮ್ಯಾಚ್‌ʼ, ʼಮಾರಿ ಕಣ್ಣುʼ ಹೀಗೆ ಸಿನಿಮಾದ ಎಲ್ಲ ಹಾಡುಗಳೂ ಹಿಟ್‌ ಆಗಿದ್ದವು. ಇಂದಿಗೂ ಈ ಹಾಡುಗಳನ್ನು ಸಿನಿ ಪ್ರೇಮಿಗಳು ಗುನುಗುತ್ತಿರುತ್ತಾರೆ. ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ತಯಾರಾದ ಸಿನಿಮಾ ಸುಮಾರು 20 ಕೋಟಿ ರೂ. ಗಳಿಸಿತ್ತು ಎನ್ನಲಾಗಿದೆ.

ಮರು ಬಿಡುಗಡೆ ಯಾಕೆ?

ಚುನಾವಣೆ, ಐಪಿಎಲ್‌ ಮುಂತಾದ ಕಾರಣಕ್ಕೆ ದೊಡ್ಡ ಸಿನಿಮಾಗಳು ಈಗ ರಿಲೀಸ್‌ ಆಗುತ್ತಿಲ್ಲ. ಅಲ್ಲದೆ ಈಗಲೂ ಈ ಚಿತ್ರಕ್ಕೆ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಲ್ಲದೆ ಇತ್ತೀಚೆಗೆ ರಿ-ರಿಲೀಸ್‌ ಆಗಿದ್ದ ಪುನೀತ್‌ ರಾಜ್‌ ಕುಮಾರ್‌ ಅವರ ʼಜಾಕಿʼ, ʼಅಂಜನಿಪುತ್ರʼ ಮತ್ತು ʼಪವರ್‌ʼ ಸಿನಿಮಾಗಳು ಹಿಟ್‌ ಆಗಿದ್ದವು. ಈ ಎಲ್ಲ ಕಾರಣಗಳಿಂದ ʼಎʼ ಚಿತ್ರವನ್ನು ಮತ್ತೆ ತೆರೆಗೆ ತರಲು ಉಪೇಂದ್ರ ಸಜ್ಜಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಯಾವಾಗ ರಿ-ರಿಲೀಸ್‌ ಎನ್ನುವುದನ್ನು ಇನ್ನೂ ಘೋಷಿಸಿಲ್ಲ.

ಈ ಮಧ್ಯೆ ಹಲವು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶನಕ್ಕೆ ಇಳಿದಿರುವ ʼಯುಐʼ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಚಿತ್ರದ ʼಟ್ರೋಲ್‌ ಆಗುತ್ತೆʼ ಹಾಡು ಸೂಪರ್‌ ಹಿಟ್‌ ಆಗಿದ್ದು, ಸಿನಿಮಾ ರಿಲೀಸ್‌ಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಕನ್ನಡದ ಜತೆಗೆ ವಿವಿಧ ಭಾಷೆಗಳಲ್ಲಿಯೂ ʼಯುಐʼ ತೆರೆಗೆ ಬರಲಿದೆ.

ಇದನ್ನೂ ಓದಿ: UI Cinema: ʼಯುಐʼ ಚಿತ್ರದ ಹಾಡಿನ ಪ್ರೋಮೊ ಔಟ್‌; ಮತ್ತೊಮ್ಮೆ ಪ್ರೇಕ್ಷಕರ ಮೆದುಳಿಗೆ ಕೆಲಸ ಕೊಟ್ಟ ಉಪೇಂದ್ರ

Continue Reading

ಸಿನಿಮಾ

Kannada New Movie: ‘ಗಾಡ್ ಪ್ರಾಮಿಸ್’ ಚಿತ್ರಕ್ಕೆ ಮುನ್ನುಡಿ; ಆನೆಗುಡ್ಡೆ ಗಣಪತಿ ದೇಗುಲದಲ್ಲಿ ಮುಹೂರ್ತ

Kannada New Movie: ಯುವ ಪ್ರತಿಭೆ ಸೂಚನ್ ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಪ್ರಯತ್ನ ʼಗಾಡ್ ಪ್ರಾಮಿಸ್ʼ ಸಿನಿಮಾಕ್ಕೆ ಉಡುಪಿ ಜಿಲ್ಲೆಯ ಕುಂದಾಪುರದ ಆನೆಗುಡ್ಡೆ ಗಣಪತಿ ದೇಗುಲದಲ್ಲಿ ಮುಹೂರ್ತ ನೆರವೇರಿದೆ. ʼಕಾಂತಾರʼ ಸರಣಿ ಸಿನಿಮಾಗಳ ಮುಹೂರ್ತ ಕೂಡ ಇದೇ ದೇಗುಲದಲ್ಲಿ ನಡೆದಿರುವುದು ವಿಶೇಷ.

VISTARANEWS.COM


on

Kannada New Movie
Koo

ಬೆಂಗಳೂರು: ಯುವ ಪ್ರತಿಭೆ ಸೂಚನ್ ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಪ್ರಯತ್ನ ʼಗಾಡ್ ಪ್ರಾಮಿಸ್ʼ (God Promise) ಸಿನಿಮಾಕ್ಕೆ ಮುನ್ನುಡಿ ಸಿಕ್ಕಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಆನೆಗುಡ್ಡೆಯ ಗಣಪತಿ ದೇಗುಲದಲ್ಲಿ ಮುಹೂರ್ತ ನೆರವೇರಿದದ್ದು, ನಟ ಪ್ರಮೋದ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ರವಿ ಬಸ್ರೂರು ಸೂಚನ್ ಕನಸಿಗೆ ಸಾಥ್ ಕೊಟ್ಟಿದ್ದಾರೆ. ‘ಗಾಡ್ ಪ್ರಾಮಿಸ್’ ಸಿನಿಮಾಗೆ ರವಿ ಬಸ್ರೂರ್ ಕ್ಲ್ಯಾಪ್ ಮಾಡಿದ್ದು, ಪ್ರಮೋದ್ ಶೆಟ್ಟಿ ಕ್ಯಾಮರಾಕ್ಕೆ ಚಾಲನೆ ನೀಡಿದರು. ʼಕಾಂತಾರʼ ಸರಣಿ ಸಿನಿಮಾಗಳ ಮುಹೂರ್ತ ಕೂಡ ಇದೇ ದೇಗುಲದಲ್ಲಿ ನಡೆದಿರುವುದು ವಿಶೇಷ.

ಸೂಚನ್ ಶೆಟ್ಟಿ ಮಾತನಾಡಿ, ʼʼಗಾಡ್ ಪ್ರಾಮಿಸ್ʼ ಚಿತ್ರದ ಮುಹೂರ್ತ ಇಂದು ನೆರವೇರಿದೆ. ಕಳೆದ ಆರೇಳು ತಿಂಗಳಿನಿಂದ ಈ ಚಿತ್ರಕ್ಕೆ ಪ್ರೀ ಪ್ರೊಡಕ್ಷನ್ ಕೆಲಸ ಶುರು ಮಾಡಿದ್ದೇವೆ. 2015ರಿಂದ ರವಿ ಬಸ್ರೂರು ಜತೆ ಕೆಲಸ ಮಾಡುತ್ತಿದ್ದೇನೆ. ಈಗ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದೇನೆ. ಸಿನಿಮಾ ಕುಂದಾಪುರ ಸುತ್ತಮುತ್ತ ನಡೆಯುತ್ತಿದೆ. ಫ್ಯಾಮಿಲಿ ಡ್ರಾಮಾ ಕಥೆಯನ್ನು ಒಳಗೊಂಡಿದೆ. ಆಡಿಷನ್ ನಡೆಸಿದ್ದೇವೆ. ಯಾರು ಆಯ್ಕೆಯಾಗಿದ್ದಾರೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ. ರವಿ ಸರ್‌ಗೆ ನನಗೆ ಗುರುಗಳು. ಡೈರೆಕ್ಟನ್ ತಂಡದ ಜತೆಗೆ ʼಕಟಕʼ, ʼಗಿರ್ಮಿಟ್ʼ ಸಿನಿಮಾಗಳ ಬರವಣಿಗೆಯಲ್ಲಿಯೂ ತೊಡಗಿಸಿಕೊಂಡಿದ್ದೆ. ಹೀಗಾಗಿ ಆ ಅನುಭವದ ಇಟ್ಟುಕೊಂಡು ನಿರ್ದೇಶನಕ್ಕೆ ಇಳಿದಿದ್ದೇನೆʼʼ ಎಂದರು.

ರವಿ ಬಸ್ರೂರ್ ಮಾತನಾಡಿ, ʼʼಒಂದು ಸಿನಿಮಾ ಮಾಡುವುದರಿಂದ ಎಷ್ಟೋ ಜನ ಕಲಾವಿದರ ಭವಿಷ್ಯ ನಿರ್ಧಾರವಾಗುತ್ತದೆ. ನಮ್ಮ ಕರಾವಳಿಯವರಿಗೆ ಒಳ್ಳೆ ಫ್ಲಾಟ್ ಫಾರಂ ಸಿಗುತ್ತಿಲ್ಲ. ಆ ನಿಟ್ಟಿನಲ್ಲಿ ನಮ್ಮ ಜತೆ ಬಂದವರಿಗೆ ಎಲ್ಲ ಕೆಲಸ ಕಲಿಯಿರಿ ಎಂದು ಹೇಳುತ್ತೇನೆ. ಒಂದು ಸಿನಿಮಾದಿಂದ ಎಷ್ಟೋ ಜನರ ಬದುಕು ಹಸನಾಗಲಿ. ಇವರ ರೀತಿ ನಮ್ಮ ಭಾಗದಲ್ಲಿ ನೂರಾರು ಸಿನಿಮಾಗಳು ಆಗಲಿ. ಇಡೀ ತಂಡಕ್ಕೆ ಒಳ್ಳೆದಾಗಲಿʼʼ ಎಂದು ಹಾರೈಸಿದರು.

ನಟ ಪ್ರಮೋದ್ ಶೆಟ್ಟಿ ಮಾತನಾಡಿ, ʼʼಸೂಚನ್ ಯಾವುದೇ ಕೆಲಸ ಮಾಡಿದ್ರೂ ಅಚ್ಚುಕಟ್ಟಾಗಿ ಮಾಡಿ ಮುಗಿಸ್ತಾರೆ. ನಟನೆ, ನಿರ್ದೇಶನ ಎರಡು ಒಟ್ಟಿಗೆ ಮಾಡುತ್ತಿರುವುದರಿಂದ ಎಲ್ಲರೂ ಒಟ್ಟಿಗೆ ಸೇರಿ ಮುಂದುವರಿಯಲಿ. ಒಂದೊಳ್ಳೆ ತಂಡವಾಗಿ ಹೊರ ಹೊಮ್ಮಲಿ. ನನ್ನ ಪ್ರಕಾರ ಈ ಸಿನಿಮಾ ತುಂಬಾ ಚೆನ್ನಾಗಿ ಬರಲಿದೆ ಎಂಬ ಭರವಸೆ ಇದೆ. ಒಳ್ಳೆ ಬಜೆಟ್ ಕೂಡ ಇದೆ. ಸೂಚನ್ ನಮ್ಮ ಸಿನಿಮಾದಲ್ಲಿ ಅದ್ಭುತವಾಗಿ ನಟಿಸಿದ್ದಾನೆ. ಇಡೀ ತಂಡದ ಮೇಲೆ ನಿಮ್ಮ ಬೆಂಬಲ ಇರಲಿದೆʼʼ ಎಂದು ಹೇಳಿದರು.

ನಿರ್ಮಾಪಕ ಮೈತ್ರಿ ಮಂಜುನಾಥ್ ಮಾತನಾಡಿ, ʼʼನಾವು ಈ ಹಿಂದೆ ʼಹಫ್ತಾʼ ಸಿನಿಮಾ ಮಾಡಿದ್ದೇವೆ. ಇದು ನನ್ನ ಎರಡನೇ ಸಿನಿಮಾ. ಗಾಡ್ ಪ್ರಾಮಿಸ್ ಸಿನಿಮಾದ ಸ್ಕ್ರೀಪ್ಟ್ ತುಂಬಾ ಚೆನ್ನಾಗಿದೆ. ಒಳ್ಳೆ ಅನುಭವ ತಂಡದೊಂದಿಗೆ ಕೈ ಜೋಡಿಸಿದೆʼʼ ಎಂದರು.

ʼಗಾಡ್ ಪ್ರಾಮಿಸ್ʼ ಸಿನಿಮಾ ಮೂಲಕ ಸೂಚನ್ ಶೆಟ್ಟಿ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದು, ಅವರ ಹೊಸ ಪಯಣಕ್ಕೆ ಮೈತ್ರಿ ಮಂಜುನಾಥ್ ಬಲ ತುಂಬಿದ್ದಾರೆ. ಚಿತ್ರವನ್ನು ಮೈತ್ರಿ ಪ್ರೊಡಕ್ಷನ್‌ನಡಿ ಮಂಜುನಾಥ್ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಕರಾವಳಿಯ ಭೂಗತ ಕಥೆ ʼಹಫ್ತಾʼ ಸಿನಿಮಾವನ್ನು ಇದೇ ಸಂಸ್ಥೆ ನಿರ್ಮಾಣ ಮಾಡಿತ್ತು. ನೈಜ ಘಟನೆಯ ಸ್ಫೂರ್ತಿ ಪಡೆದ ಫ್ಯಾಮಿಲಿ ಹಾಗೂ ಕಾಮಿಡಿ ಕಥಾಹಂದರ ಸಿನಿಮಾಗೆ ಗುರುಪ್ರಸಾದ್ ನರ್ನಾಡ್ ಛಾಯಾಗ್ರಹಣ, ಭರತ್ ಮಧುಸೂದನನ್ ಸಂಗೀತ ನಿರ್ದೇಶನ, ನವೀನ್ ಶೆಟ್ಟಿ ಸಂಕಲನ ಚಿತ್ರಕ್ಕಿದೆ. ಸದ್ಯ ಮುಹೂರ್ತ ಮುಗಿಸಿಕೊಂಡಿರುವ ಚಿತ್ರತಂಡ ಶೀಘ್ರದಲ್ಲೇ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ರೂಪೇಶ್ ಶೆಟ್ಟಿ-ಜಾಹ್ನವಿ ಸಿನಿಮಾ ಆಡಿಯೊ ರೈಟ್ಸ್!

Continue Reading

ಕ್ರೈಂ

Roopa Iyer: ನಿರ್ದೇಶಕಿ ರೂಪಾ ಅಯ್ಯರ್‌ಗೂ ಆನ್‌ಲೈನ್‌ ಕಳ್ಳರ ಕಾಟ; ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ 30 ಲಕ್ಷ ರೂ.ಗೆ ಬೇಡಿಕೆ

Roopa Iyer: ಸ್ಯಾಂಡಲ್‌ವುಟ್‌ ನಿರ್ದೇಶಕಿ, ನಟಿ ಅವರಿಗೂ ಆನ್‌ಲೈನ್‌ ಕಳ್ಳರು ಕಾಟ ಕೊಟ್ಟಿದ್ದಾರೆ. ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ 30 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ವಂಚನೆಯ ವಾಸಗೆ ಬರುತ್ತಿದ್ದಂತೆ ಎಚ್ಚೆತ್ತ ಅವರು ಇದೀಗ ಸೈಬರ್‌ ಕ್ರೈಂಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

VISTARANEWS.COM


on

Roopa Iyer
Koo

ಬೆಂಗಳೂರು: ಸೈಬರ್‌ ಕ್ರೈಮ್‌ (Cyber Crime)ಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬ್ಲ್ಯಾಕ್‌ ಮೇಲ್‌, ವಿಶೇಷ ಕೊಡುಗೆ, ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡುವ ಅಪರಾಧಿಗಳು ಹಣ ದೋಚುವ ಅದೆಷ್ಟೋ ಪ್ರಸಂಗಗಳು ವರದಿಯಾಗುತ್ತಿವೆ. ಪೊಲೀಸರು ಎಷ್ಟು ಕ್ರಮ ಕೈಗೊಂಡರೂ ಇದಕ್ಕೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ಇದೀಗ ಸ್ಯಾಂಡಲ್‌ವುಡ್‌ ನಿರ್ದೇಶಕಿ, ನಟಿ ರೂಪಾ ಅಯ್ಯರ್ (Roopa Iyer) ಅವರಿಗೂ ಇಂತಹದ್ದೇ ಅನುಭವವಾಗಿದೆ. ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿದ ಅಪರಾಧಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಕೂಡಲೇ ಎಚ್ಚೆತ್ತ ರೂಪಾ ಅಯ್ಯರ್ ಪೊಲೀಸರಿಗೆ ದೂರು ನೀಡಿದ್ದಾರೆ. ಬುಧವಾರ (ಮೇ 8) ಮಧ್ಯಾಹ್ನದಿಂದ ಗುರುವಾರ ಬೆಳಗ್ಗೆ ತನಕವೂ ತಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಪ್ರಕರಣದ ವಿವರ

ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯರ್ ಮನಿ ಲ್ಯಾಂಡ್ರಿಂಗ್ ಪ್ರಕರಣದ ವಿಚಾರಣೆ ನೆಪದಲ್ಲಿ ಕರೆ ಮಾಡಿದ್ದ ವಂಚಕರು 30 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು ಎಂದು ರೂಪಾ ಅಯ್ಯರ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ʼʼಬುಧವಾರ ಮಧ್ಯಾಹ್ನ ಅಪರಿಚಿತ ನಂಬರ್‌ನಿಂದ ಕರೆ ಬಂತು. ತಾವು ಸಿಸಿಬಿ ಅಧಿಕಾರಿಗಳೆಂದು ಕರೆ ಮಾಡಿದ್ದವರು ತಿಳಿಸಿದರು. ಗಾಬರಿಯಿಂದ ಯಾಕೆಂದು ಪ್ರಶ್ನಿಸಿದೆ. ನರೇಶ್ ಗೋಯಲ್ ಮನಿ ಲ್ಯಾಂಡ್ರಿಂಗ್ ಕೇಸ್‌ನಲ್ಲಿ ನಿಮ್ಮ ಹೆಸರಿದೆ. ಹೀಗಾಗಿ ವಿಚಾರಣೆ ನಡೆಸಬೇಕಿದೆ ಎಂದು ಹೇಳಿದ್ದರುʼʼ ಎಂದು ರೂಪಾ ತಿಳಿಸಿದ್ದಾರೆ.

ʼʼಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೇಶದಲ್ಲಿ 247 ಮಂದಿಯನ್ನು ಗುರುತಿಸಲಾಗಿದೆ. ಈ ಪೈಕಿ ನೀವು ಕೂಡ ಒಬ್ಬರು. ನಿಮ್ಮ ಆಧಾರ್‌ ಕಾರ್ಡ್ ಬಳಸಿಕೊಂಡು ಸಿಮ್ ಖರೀದಿಸಲಾಗಿದೆ. ಅದರ ಮೂಲಕ ದೇಶದ್ರೋಹದ ಚಟುವಟಿಕೆ ನಡೆಸಲಾಗಿದೆ. ಈಗಾಗಲೇ ಈ ಕುರಿತು ಮುಂಬೈಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಕರೆ ಮಾಡಿದ್ದವರು ಹೆದರಿಸಿದ್ದರು. ಇದರಿಂದ ಗಾಬರಿಯಾಯಿತುʼʼ ಎಂದು ರೂಪಾ ಘಟನೆಯ ವಿವರ ನೀಡಿದ್ದಾರೆ.

ʼʼನೀವು ಸೆಲೆಬ್ರಿಟಿ ಆಗಿರುವುದರಿಂದ ನಾವು ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡುತ್ತಿಲ್ಲ. ಒಂದು ವೇಳೆ ಈ ಪ್ರಕರಣದಿಂದ ನೀವು ತಪ್ಪಿಸಿಕೊಳ್ಳಬೇಕು ಎಂದಾದರೆ 30 ಲಕ್ಷ ರೂ. ನೀಡಿ ಎಂದು ಕರೆ ಮಾಡಿದ್ದವರು ಹೇಳಿದರು. ಯಾವಾಗ ಅವರು ಹಣದ ಬೇಡಿಕೆ ಇಟ್ಟರೋ ಆಗ ಅನುಮಾನ ಶುರುವಾಯ್ತು. ಕೂಡಲೇ ಎಚ್ಚೆತ್ತು ಸೈಬರ್ ಕ್ರೈಂಗೆ ದೂರು ನೀಡಿದೆʼʼ ಎಂದು ಅವರು ಹೇಳಿದ್ದಾರೆ.

ʼʼಆನ್‌ಲೈನ್ ವಂಚಕರು ಪ್ರಭಾವಿಗಳನ್ನು ಯಾಮಾರಿಸಿ ಹಣ ದೋಚಲು ಮುಂದಾಗಿದ್ದಾರೆ. ವಂಚಕರು ನನ್ನನ್ನು ನಂಬಿಸಲು ಸಿಬಿಐ ಹೆಸರಿನಲ್ಲಿ ನಕಲಿ ನೋಟಿಸ್ ಕೂಡ ಕಳುಹಿಸಿದ್ದಾರೆ. ಒಂದು ವೇಳೆ ಅವರ ಮಾತನ್ನು ನಂಬಿದ್ದರೆ ಲಕ್ಷಾಂತರ ರೂ. ಕಳೆದುಕೊಳ್ಳಬೇಕಾಗಿತ್ತುʼʼ ಎಂದು ರೂಪಾ ತಮ್ಮ ಕರಾಳ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ನಿಮಗೂ ಇಂತಹ ಕರೆ ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ಅಧಿಕಾರಿಗಳು ಸಾವರ್ಜನಿಕರು, ಸೆಲೆಬ್ರಿಟಿಗಳಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Cyber Crime : ಸೈಬರ್‌ ಕ್ರೈಂನಡಿ ಬಂಧನದಿಂದ ಮಾಳವಿಕಾ ಅವಿನಾಶ್ ಪಾರು; ಕೆಜಿಎಫ್‌ನಲ್ಲಿ ನಟಿಸಿದ್ದೇ ವರವಾಯ್ತು!

Continue Reading

ಸ್ಯಾಂಡಲ್ ವುಡ್

Actor Ravichandran: ಕನಸುಗಾರನ ʻಪ್ರೇಮಲೋಕ 2’ ಚಿತ್ರಕ್ಕೆ ನಾಯಕಿ ಫಿಕ್ಸ್‌!

Actor Ravichandran: 1987ರಲ್ಲಿ ರಿಲೀಸ್ ಆದ ‘ಪ್ರೇಮಲೋಕ’ ಸಿನಿಮಾ ರವಿಚಂದ್ರನ್ ಅವರೇ ನಿರ್ಮಾಣ ಮಾಡಿ, ನಟಿಸಿ, ನಿರ್ದೇಶನ ಮಾಡಿದ್ದರು. ಅಂದಿನ ಕಾಲಕ್ಕೆ ಈ ಸಿನಿಮಾ ಬರೋಬ್ಬರಿ 11 ಹಾಡುಗಳನ್ನು ಹೊಂದಿತ್ತು. ಈ ಕಾರಣಗಳಿಂದಾಗಿ ಯಾರೋಬ್ಬ ನಿರ್ಮಾಪಕರು ಮುಂದೆ ಬರಲೇ ಇಲ್ಲ. ಹೀಗಾಗಿ ರವಿಚಂದ್ರನ್‌ ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಈ ವೇಳೆ ಬೆಂಬಲಕ್ಕೆ ನಿಂತಿದ್ದು ರವಿಚಂದ್ರನ್ ತಂದೆ ವೀರಸ್ವಾಮಿ. ಇದಾದ ಬಳಿಕ ಸಿನಿಮಾ ಗೆಲುವು ಕಂಡಿತ್ತು.

VISTARANEWS.COM


on

Actor Ravichandran female lead in ravichandrans premaloka 2
Koo

ಬೆಂಗಳೂರು: ಹಂಪಿ ಉತ್ಸವದ ಸಮಯದಲ್ಲಿ ಕ್ರೇಜಿ ಸ್ಟಾರ್‌ ರವಿಚಂದ್ರನ್‌ (Actor Ravichandran) ಅವರು ಒಂದು ವರ್ಷದಿಂದ ಪ್ರೇಮಲೋಕ ಸಿನಿಮಾಗೆ ತಯಾರಿ ನಡೆಸುತ್ತಿರುವುದಾಗಿ ಹೇಳಿಕೊಂಡಿದ್ದರು. ಈ ಮೂಲಕ ‘ಪ್ರೇಮಲೋಕ 2’ ಶೀಘ್ರದಲ್ಲಿಯೇ ಅನೌನ್ಸ್ ಆಗಲಿದೆ ಎಂಬ ಸುಳಿವು ನೀಡಿದ್ದರು. ಶೀಘ್ರದಲ್ಲೇ ಆ ಸಿನಿಮಾ ಸೆಟ್ಟೇರಲಿದೆ. ಪುತ್ರ ಮನೋರಂಜನ್ ಹೀರೊ ಆಗಿ ನಟಿಸಲಿದ್ದಾರೆ. ಸದ್ಯ ರವಿಚಂದ್ರನ್ ‘ಪ್ರೇಮಲೋಕ’-2 ಚಿತ್ರದ ಕಥೆ, ಚಿತ್ರಕಥೆ ಸಿದ್ಧಪಡಿಸುತ್ತಿದ್ದಾರೆ.

‘ಪ್ರೇಮಲೋಕ’ ಚಿತ್ರಕ್ಕಾಗಿ ಜ್ಯೂಹಿ ಚಾವ್ಲಾ ಕನ್ನಡಕ್ಕೆ ಬಂದಿದ್ದರು. ಆದರೆ ಈ ಬಾರಿ ಮನೋರಂಜನ್ ಜತೆ ಚೆನ್ನೈ ಚೆಲುವೆ ತೇಜು ಅಶ್ವಿನಿ ರೊಮ್ಯಾನ್ಸ್ ಮಾಡುತ್ತಾರೆ ಎನ್ನುವ ಗುಸುಗುಸು ಶುರುವಾಗಿದೆ. ಮೇ 30 ರವಿಚಂದ್ರನ್ ಅವರ ಬರ್ತ್​ಡೇ. ಅಂದು ‘ಪ್ರೇಮಲೋಕ 2’ ಚಿತ್ರ ಲಾಂಚ್ ಆಗಲಿದೆ. ರವಿಚಂದ್ರನ್ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಅನ್ನೋ ಕುತೂಹಲ ಮೂಡಿದೆ. ಈ ಚಿತ್ರದಲ್ಲಿ 20-25 ಸಾಂಗ್​ಗಳು ಇರಲಿವೆ ಎಂದು ತಂಡ ಹೇಳಿಕೊಂಡಿದೆ.

1987ರಲ್ಲಿ ರಿಲೀಸ್ ಆದ ‘ಪ್ರೇಮಲೋಕ’ ಸಿನಿಮಾ ರವಿಚಂದ್ರನ್ ಅವರೇ ನಿರ್ಮಾಣ ಮಾಡಿ, ನಟಿಸಿ, ನಿರ್ದೇಶನ ಮಾಡಿದ್ದರು. ಅಂದಿನ ಕಾಲಕ್ಕೆ ಈ ಸಿನಿಮಾ ಬರೋಬ್ಬರಿ 11 ಹಾಡುಗಳನ್ನು ಹೊಂದಿತ್ತು. ಈ ಕಾರಣಗಳಿಂದಾಗಿ ಯಾರೋಬ್ಬ ನಿರ್ಮಾಪಕರು ಮುಂದೆ ಬರಲೇ ಇಲ್ಲ. ಹೀಗಾಗಿ ರವಿಚಂದ್ರನ್‌ ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಈ ವೇಳೆ ಬೆಂಬಲಕ್ಕೆ ನಿಂತಿದ್ದು ರವಿಚಂದ್ರನ್ ತಂದೆ ವೀರಸ್ವಾಮಿ. ಇದಾದ ಬಳಿಕ ಸಿನಿಮಾ ಗೆಲುವು ಕಂಡಿತ್ತು.

ಇದನ್ನೂ ಓದಿ: Pepper Spray: ಪೆಪ್ಪರ್‌ ಸ್ಪ್ರೇ ಬಹಳ ಡೇಂಜರ್‌..ಅದನ್ನು ರಕ್ಷಣೆಗೆ ಬಳಸುವಂತಿಲ್ಲ- ಹೈಕೋರ್ಟ್‌

ಈ ಮುಂಚೆ ರವಿಚಂದ್ರನ್‌ ಅವರು ʻʻದೊಡ್ಡ ಮಗ ಮನೋರಂಜನ್ ನಟಿಸುತ್ತಾನೆ. ಚಿಕ್ಕ ಮಗ ಚಿಕ್ಕ ಪಾತ್ರ ಮಾಡುತ್ತಾನೆ. ನಾನು ತಂದೆಯ ಪಾತ್ರ ಮಾಡುತ್ತೇನೆ. 20-25 ಹಾಡುಗಳು ಇರುತ್ತವೆ. ಎಲ್ಲಾ ವಯಸ್ಸಿನವರಿಗೂ ಸಿನಿಮಾ ಇಷ್ಟ ಆಗುತ್ತದೆ. ಇಲ್ಲಿ ಜಾತಿ, ರಾಜಕೀಯದ ವಿಚಾರ ಇರಲ್ಲ. ಕೇವಲ ಪ್ರೀತಿ ವಿಚಾರ ಇರಲಿದೆ. ಪ್ರತಿಯೊಬ್ಬರಿಗೂ ಸಿನಿಮಾದಲ್ಲಿ ನಟಿಸುವ ಅವಕಾಶ ಇದೆ. ಸಿನಿಮಾದಲ್ಲಿ ಯಾರೆಲ್ಲ ನಟಿಸಬೇಕು ಎಂದಿದ್ದೀರೋ ಇನ್​ಸ್ಟಾಗ್ರಾಮ್‌ ಅಕೌಂಟ್​ಗೆ ಫ್ಯಾಮಿಲಿ ಫೋಟೊ ಹಾಕ್ಕೊಂಡು ಬನ್ನಿʼಎಂದಿದ್ದರು.

Continue Reading
Advertisement
Devarajegowda
ಕರ್ನಾಟಕ33 mins ago

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

Murder Case
ಕರ್ನಾಟಕ34 mins ago

Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Richard Hansen
ಕರ್ನಾಟಕ1 hour ago

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Legislative Council Election
ಕರ್ನಾಟಕ1 hour ago

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

Rain News
ಮಳೆ1 hour ago

Rain News: ಮಳೆ ಆರ್ಭಟ: ಸಿಡಿಲು ಬಡಿದು ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ; ನೆಲಕಚ್ಚಿದ ಬಾಳೆ ತೋಟ

ICMR Dietary Guidelines
ಆರೋಗ್ಯ2 hours ago

ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

Dwarka Tour
ಪ್ರವಾಸ2 hours ago

Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

Narendra Modi
ದೇಶ2 hours ago

Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

IPL 2024
ಪ್ರಮುಖ ಸುದ್ದಿ2 hours ago

IPL 2024 : ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ತಂಡದ ನಾಯಕ ಬದಲು; ಮಾಹಿತಿ ಬಹಿರಂಗ

7th Pay Commission
ನೌಕರರ ಕಾರ್ನರ್3 hours ago

7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು6 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ16 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌