ಸ್ಯಾಂಡಲ್‌ವುಡ್ ನಟಿ ಮಾನ್ವಿತಾ ಕಾಮತ್ (Manvita Kamath) ಅವರು ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇಂದು (ಮೇ 1) ಚಿಕ್ಕಮಗಳೂರು ಜಿಲ್ಲೆಯ ಕಳಸದ ವೆಂಕಟರಮಣ ದೇವಸ್ಥಾನದಲ್ಲಿ ಈ ಜೋಡಿ ಶಾಸ್ತ್ರೋಕ್ತವಾಗಿ ಮದುವೆಯಾಗಿದೆ.
ಇದನ್ನೂ ಓದಿ: Manvita Kamath: ‘ಟಗರು ಪುಟ್ಟಿʼ ಮಾನ್ವಿತಾದ್ದು ಲವ್ ಮ್ಯಾರೇಜ್? ಕೊನೆಗೂ ಸ್ಪಷ್ಟನೆ ಕೊಟ್ಟ ನಟಿ!
ಮಾನ್ವಿತಾ ಅವರದ್ದು ಅರೇಂಜ್ಡ್ ಮ್ಯಾರೇಜ್. ಮುಂದಿನ 3 ತಿಂಗಳು ಶುಭ ಮುಹೂರ್ತ ಇರಲಿಲ್ಲ. ಹೀಗಾಗಿ, ಮೇ 1ಕ್ಕೆ ಜೋಡಿ ಹಸೆಮಣೆ ಏರಿದೆ.
ಸ್ನೇಹಿತರು, ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆಯಾಗಿದೆ ಜೋಡಿ.
ಮಾನ್ವಿತಾ ಅವರು ಮದುವೆ ಬಳಿಕ ಸಿನಿಮಾದಲ್ಲಿ ನಟಿಸಿದರೂ ಯಾವುದೇ ಅಭ್ಯಂತರ ಇಲ್ಲ ಎಂದಿದ್ದಾರೆ ಅರುಣ್. ಮೈಸೂರಿನಲ್ಲಿ ಅರುಣ್ ಎಂಜಿನಿಯರಿಂಗ್ ಮಾಡಿದ್ದಾರೆ. ಅವರಿಗೆ ಸಿನಿಮಾ ರಂಗದಲ್ಲಿ ಹೆಚ್ಚು ಆಸಕ್ತಿ ಇಲ್ಲವಂತೆ.
ʼಕೆಂಡಸಂಪಿಗೆ‘ (kendasampige Cinema Kannada) ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಹೆಜ್ಜೆ ಇಟ್ಟು ಸಕ್ಸೆಸ್ ಫುಲ್ ನಟಿಯಾಗಿ ಹೊರಹೊಮ್ಮಿರುವವರು ಮಾನ್ವಿತಾ ಕಾಮತ್ (Manvita Kamath). ಆರ್ ಜೆಯಾಗಿದ್ದ ಮಾನ್ವಿತಾ ಅವರು ದುನಿಯಾ ಸೂರಿ ನಿರ್ದೇಶನದ ʻಕೆಂಡಸಂಪಿಗೆʼ ಚಿತ್ರದಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಶಿವಣ್ಣನ ʻಟಗರುʼ ಸಿನಿಮಾದಲ್ಲಿ ಬಣ್ಣ ಹಚ್ಚಿ ʻಟಗರು ಪುಟ್ಟಿʼಯಾಗಿ ಕರುನಾಡ ಪ್ರೇಕ್ಷಕರ ಮನ ಗೆದ್ದರು.