ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darshan) ಹಾಗೂ ಉಮಾಪತಿ ಶ್ರೀನಿವಾಸ್ ಅವರ ನಡುವಿನ ಜಿದ್ದಾಜಿದ್ದಿ ಇನ್ನೂ ಮುಗಿದಿಲ್ಲ. ಈಗಾಗಲೇ ದರ್ಶನ್ ವಿರುದ್ಧ ಹಲವು ಕೇಸ್‌ಗಳು ದಾಖಲಾಗಿವೆ. ‘ಕಾಟೇರ’ ಸಿನಿಮಾದ 50 ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ದರ್ಶನ್, ‘ತಗಡು’ ಎಂದು ಪದ ಬಳಕೆ ಮಾಡಿ ಉಮಾಪತಿಯನ್ನು ನಿಂದಿಸಿದ್ದರು. ಇದರ ಬೆನ್ನಲ್ಲೆ ಇದೀಗ ನಟ ದರ್ಶನ್ ಇಂದು (ಫೆ. 26) ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಬೈಕ್ ರ್‍ಯಾಲಿ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಉಮಾಪತಿ ಶ್ರೀನಿವಾಸ್ ಬೆಂಬಲಿಗರು ಹಾಗೂ ದರ್ಶನ್ ಅಭಿಮಾನಿಗಳ ನಡುವೆ ಗಲಾಟೆ ನಡೆದರೂ ನಡೆಯಬಹುದು. ಈ ಸಾಧ್ಯತೆಯೂ ಇದೆ. ಆದರೇ ಇದೀಗ ಈ ದರ್ಶನ್ ರ್‍ಯಾಲಿಗೆ ಪೊಲೀಸರು ಅನುಮತಿ ನೀಡಿಲ್ಲ ಎನ್ನಲಾಗಿದೆ.
ಮೂಲಗಳ ಪ್ರಕಾರದ ನಗರದಲ್ಲಿ ರ್‍ಯಾಲಿಗೆ ಅವಕಾಶ ಇಲ್ಲ. ಫ್ರೀಡಂ ಪಾರ್ಕ್ ಬಳಿ ಬೇಕಾದ್ರೆ ರ್‍ಯಾಲಿ ಮಾಡಬಹುದು ಎಂದು ಪೊಲೀಸರು ಉತ್ತರ ಕೊಟ್ಟಿದ್ದಾರೆ ಎನ್ನಲಾಗಿದೆ. ಉಮಾಪತಿ ಶ್ರೀನಿವಾಸ್ ವಿರುದ್ಧ ಶಕ್ತಿ ಪ್ರದರ್ಶನ ಮಾಡಲೆಂದೇ ದರ್ಶನ್ ಈ ಬೈಕ್ ರ್‍ಯಾಲಿ ಮಾಡುತ್ತಿದ್ದಾರೆ, ಇದು ಬೇಕು ಬೇಕು ಎಂದೇ ದರ್ಶನ್ ಹೀಗೆ ಮಾಡುತ್ತಿದ್ದಾರೆ ಎನ್ನಲಾಗಿದೆ. ʻಒಂಟಿ ಸಲಗ’ ಹೆಸರಲ್ಲಿ ಬೃಹತ್ ರ‍್ಯಾಲಿ ನಡೆಸಲು ದರ್ಶನ್ ಫ್ಯಾನ್ಸ್ ತಯಾರಿ ನಡೆಸುತ್ತಿದ್ದಾರೆ.
ಉಮಾಪತಿ ಶ್ರೀನಿವಾಸ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೊಮ್ಮನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಪರವಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಚುನಾವಣೆ ಸಂದರ್ಭದಲ್ಲಿ ನಟ ದರ್ಶನ್, ಉಮಾಪತಿ ಶ್ರೀನಿವಾಸ್ ವಿರುದ್ಧವಾಗಿ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪರವಾಗಿ ಚುನಾವಣೆ ಪ್ರಚಾರ ಮಾಡಿದ್ದರು. ಆದರೆ ಉಮಾಪತಿ ಶ್ರೀನಿವಾಸ್ ಆ ಚುನಾವಣೆಯಲ್ಲಿ ಸೋತಿದ್ದರು.
ಈಗ ಮುಂದಿನ ವಿಧಾನಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ. ಹೀಗಾಗಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಬೈಕ್ ರ್‍ಯಾಲಿ ನಡೆಸಲಿದ್ದಾರೆ. ಉಮಾಪತಿ ಶ್ರೀನಿವಾಸ್ ವಿರುದ್ಧ ಶಕ್ತಿ ಪ್ರದರ್ಶನ ಮಾಡಲೆಂದೇ ಈ ಬೈಕ್ ರ್‍ಯಾಲಿ ಮಾಡುತ್ತಿದ್ದಾರೆ ದರ್ಶನ್ ಎನ್ನಲಾಗುತ್ತಿದೆ.
ದರ್ಶನ್ ಉಮಾಪತಿಗೆ ವಾರ್ನಿಂಗ್ ನೀಡಿದ್ದೇನು?
ಈ ಹಿಂದೆ ಉಮಾಪತಿ ಅವರು ಕಾಟೇರ ಟೈಟಲ್ ನಾನೇ ಕೊಟ್ಟಿದ್ದು ಎಂದು ಹಲವಾರು ಸಂದರ್ಶನಗಳಲ್ಲಿ ಹೇಳಿದ್ದರು. ದರ್ಶನ್ ಈ ಬಗ್ಗೆ ಮಾತನಾಡಿ ʻʻತಗಡೇ, ರಾಬರ್ಟ್ ಕಥೆ ನಿನಗೆ ಕೊಟ್ಟಿದ್ದು ನಾವು. ಇಂಥ ಒಳ್ಳೆ ಕಥೆ ಮತ್ತೆ ಯಾಕ್ ಬಿಟ್ಟೆ ನೀನು?ʼʼ ಎಂದು ವೇದಿಕೆ ಮೇಲೆಯೇ ಉಮಾಪತಿಗೆ ಪ್ರಶ್ನೆ ಮಾಡಿದ್ದರು. ʻಈ ಕಥೆ ನಾನು ಮಾಡಿಸಿದೆ, ಕಥೆ ನಾನು ಕೊಟ್ಟೆ ಎಂದು ಎಂದು ಹೇಳಿಕೊಂಡು ಬಂದಿದ್ದೆಯಲ್ವಾ? ಇಂಥ ಒಳ್ಳೆ ಕಥೆ ಯಾಕೆ ಬಿಟ್ಟೆ ನೀನು. ಅಯ್ಯೋ ತಗಡೇ… ಎಲ್ಲ ಆಧಾರ ಇಟ್ಟುಕೊಂಡೇ ಮಾತನಾಡಬೇಕುʼʼ ಎಂದು ಉಮಾಪತಿಗೆ ನೇರವಾಗಿ ದರ್ಶನ್ ಖಡಕ್ ವಾರ್ನಿಂಗ್ ಕೊಟ್ಟಿದ್ದರು.