ಬೆಂಗಳೂರು: ‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ʻಮ್ಯಾಕ್ಸ್ʼ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್ ಪಾತ್ರದಲ್ಲಿ ಮಿಂಚಲಿದ್ದಾರೆ. ಚಿತ್ರದ ಬಗ್ಗೆ ಸುದೀಪ್ ಅವರು ಹೊಸ ಅಪ್ಡೇಟ್ ನೀಡಿದ್ದಾರೆ. ಹೊಸ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು (Max Film) ಅವರು ಡಬಲ್ ಮಾಡಿದ್ದಾರೆ. ಜುಲೈ 16ರಂದು ಮಧ್ಯಾಹ್ನ 12.34ಕ್ಕೆ ‘ಮ್ಯಾಕ್ಸ್’ ಹೊಸ ಟೀಸರ್ ಬಿಡುಗಡೆ ಆಗಲಿದೆ.
ಈಗಾಗಲೇ ಸಿನಿಮಾ ಚಿತ್ರೀಕರಣ ಮುಗಿಸಿದ್ದು, ಮುಂದಿನ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಬಿಲ್ಲಾ ರಂಗ ಭಾಷಾ’ಗಾಗಿ ರೆಡಿಯಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ಮೂರು ಪಾತ್ರಗಳಲ್ಲಿ ಸುದೀಪ್ ನಟಿಸಲಿದ್ದಾರೆ ಎನ್ನಲಾಗುತ್ತಿದ್ದು, ಒಂದೊಂದು ಪಾತ್ರಕ್ಕೆ ಒಂದೊಂದು ರೀತಿ ಮ್ಯಾನರಿಸಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇದು ಸುದೀಪ್ ನಟನೆಯ 46ನೇ ಸಿನಿಮಾ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ನೀಡಿದ್ದಾರೆ. ಇತ್ತೀಚೆಗೆ ಮಾಧ್ಯಮಗಳ ಜೊತೆ ಮಾತನಾಡುವಾಗ ‘ಮ್ಯಾಕ್ಸ್’ ರಿಲೀಸ್ ಬಗ್ಗೆ ಸುದೀಪ್ ಅವರು ಸೂಚನೆ ನೀಡಿದ್ದರು. ಆಗಸ್ಟ್ ವೇಳೆಗೆ ಈ ಸಿನಿಮಾ ರಿಲೀಸ್ ಆಗಬಹುದು ಎಂದು ಅವರು ಹೇಳಿದ್ದರು.
ಮ್ಯಾಕ್ಸ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗುವ ಮುನ್ನವೇ ‘ಬಿಲ್ಲಾ ರಂಗ ಭಾಷಾ’ ಸಿನಿಮಾಕ್ಕೆ ತಯಾರಾಗುತ್ತಿದ್ದಾರೆ. ಈ ಸಿನಿಮಾವನ್ನು ಅನುಪ್ ಭಂಡಾರಿ ನಿರ್ದೇಶನ ಮಾಡಲಿದ್ದಾರೆ. ‘ದ್ರೋಣಾಚಾರ್ಯ’ ಸಿನಿಮಾವನ್ನು ಅನುಪ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು, ಆದರೆ ಅದರ ಬದಲಿಗೆ ‘ಬಿಲ್ಲಾ ರಂಗ ಭಾಷಾ’ ಸಿನಿಮಾ ಪ್ರಾರಂಭ ಮಾಡಿದ್ದಾರೆ.
ಇದನ್ನೂ ಓದಿ: Darling Krishna: 100 ವರ್ಷಗಳ ಹಳೆಯ ಮನೆಯಲ್ಲಿ ‘ಫಾದರ್’ ಸಿನಿಮಾದ ಚಿತ್ರೀಕರಣ : ನಟ ಪ್ರಕಾಶ್ ರಾಜ್ ಏನಂದ್ರು?
ಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.
ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.