ಕಿಚ್ಚ ಸುದೀಪ್- ಕುಮಾರ್ ಜಟಾಪಟಿ; ರವಿಚಂದ್ರನ್ ಮನೆಯ ಸಂಧಾನ ಸಭೆಯಲ್ಲಿ ಏನೇನು ನಡೀತು? - Vistara News

ಪ್ರಮುಖ ಸುದ್ದಿ

ಕಿಚ್ಚ ಸುದೀಪ್- ಕುಮಾರ್ ಜಟಾಪಟಿ; ರವಿಚಂದ್ರನ್ ಮನೆಯ ಸಂಧಾನ ಸಭೆಯಲ್ಲಿ ಏನೇನು ನಡೀತು?

ನಟ ಸುದೀಪ್ ಮತ್ತು ನಿರ್ಮಾಪಕ ಎಂ ಎನ್ ಕುಮಾರ್ ನಡುವೆ ಉದ್ಭವಿಸಿರುವ ಸಮಸ್ಯೆಯನ್ನು ಬಗೆಹರಿಸಲು ಹಿರಿಯ ನಟ ರವಿಚಂದ್ರನ್ ಅವರ ಮನೆಯಲ್ಲಿ ಸಂಧಾನ ಸಭೆ ನಡೆಸಲಾಯಿತು.

VISTARANEWS.COM


on

kichcha sudeep Ravichandran MN Kumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ಕಿಚ್ಚ ಸುದೀಪ್ (Kiccha Sudeep) ಹಾಗೂ ನಿರ್ಮಾಕ ಎಂ ಎನ್ ಕುಮಾರ್ (N Kumar)ನಡುವೆ ಕಾಲ್‌ಶೀಟ್‌ಗೆ (Call Sheet Issue) ಸಂಬಂಧಿಸಿದಂತೆ ಉಂಟಾದ ವಿವಾದ ಕುರಿತು ಶುಕ್ರವಾರ ಹಿರಿಯ ನಟ ರವಿಚಂದ್ರನ್ (Ravichandran) ಅವರ ಮನೆಯಲ್ಲಿ ಚರ್ಚಿಸಲಾಯಿತು. ಶುಕ್ರವಾರ ಮಧ್ಯಾಹ್ನ ಮೂರು ಗಂಟೆಗೆ ಆರಂಭವಾದ ಸಂಧಾನ ಸಭೆ ರಾತ್ರಿ 10 ಗಂಟೆವರೆಗೆ ನಡೆಯಿತು. ನಾಳೆ, ಶನಿವಾರ ಇನ್ನೊಂದು ಸುತ್ತಿನ ಮಾತುಕತೆ ನಡೆಯಲಿದ್ದು, ಬಳಿಕ ನಿರ್ಧಾರ ಘೋಷಿಸುವ ಸಾಧ್ಯತೆ ಇದೆ.

ರವಿಚಂದ್ರನ್ ಮನೆಯಲ್ಲಿ ನಡೆದ ಸಭೆಯಲ್ಲಿ ಕಿಚ್ಚ ಸುದೀಪ್, ನಿರ್ಮಾಪಕ ಎಂ ಎನ್ ಕುಮಾರ್, ರವಿಚಂದ್ರನ್, ನಿರ್ಮಾಪಕ ರಾಕ್‍‌ಲೈನ್ ವೆಂಕಟೇಶ್, ಭಾಮ ಹರೀಶ್ ಸೇರಿ 6 ಜನರು ಹಲವರು ಪಾಲ್ಗೊಂಡಿದ್ದರು. ಸಭೆಯಲ್ಲಿ ಸುದೀಪ್ ಮತ್ತು ಕುಮಾರ್ ಅವರನ್ನು ಪರಸ್ಪರ ಮುಖಾಮುಖಿಯಾಗಿ ಮಾಡಲಾಗಿದೆ.

ನಾಳೆ ಮತ್ತೊಂದ ಸುತ್ತಿನ ಸಭೆ

ಶುಕ್ರವಾರ ಒಂದು ಸುತ್ತಿನ ಸಂಧಾನ ಸಭೆ ನಡೆದಿದೆ. ಶನಿವಾರ ಕೂಡ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ. ಅದಾದ ನಂತ್ರ ರವಿಚಂದ್ರನ್ ಅವರೇ ಖುದ್ದಾಗಿ ನಿರ್ಧಾರದ ಬಗ್ಗೆ ಮಾತನಾಡಲಿದ್ದಾರೆ. ಶುಕ್ರವಾರ ಮೂರು ಗಂಟೆಗೆ ಶುರುವಾದ ಸಂಧಾನ ಸಭೆ ರಾತ್ರಿ ಹತ್ತರವರೆಗೂ ನಡೀದಿದೆ. ನಟ ಶಿವರಾಜಕುಮಾರ್ ಅವರು ಹೈದ್ರಾಬಾದ್‌ನಲ್ಲಿರುವ ಕಾರಣ ಸಭೆಯಲ್ಲಿ ಭಾಗಿಯಾಗಿಲ್ಲ.

ಈ ಸುದ್ದಿಯನ್ನೂ ಓದಿ: Kichcha Sudeep: ಎಂ ಎನ್​ ಕುಮಾರ್​ ಹೊರಿಸಿದ ಆರೋಪಕ್ಕೆ ಸುದೀರ್ಘ ಪತ್ರ ಬರೆದ ಕಿಚ್ಚ ಸುದೀಪ್‌

ಸತತ ಎಳು ಗಂಟೆಗಳ ಕಾಲ ನಡೆದ ಸಂಧಾನ ಸಭೆ ನಡೆದಿದ್ದು, ಸುದೀಪ್ ಹಾಗು ಎನ್ .ಕುಮಾರ್ ಪರಸ್ಪರ ಕೂತು ಮಾತನಾಡಿದ್ದಾರೆ. ಸಂಧಾನ ಒಂದು ಹಂತಕ್ಕೆ ಬಂದು ತಲುಪಿದೆ. ನಾಳೆ ರವಿಚಂದ್ರನ್, ರಾಕ್ ಲೈನ್, ಭಾ.ಮ.ಹರೀಶ್, ಉಮೇಶ್ ಬಣಕರ್ ಕೂತು ಮತ್ತೊಂದು ರೌಂಡ್ ಚರ್ಚೆ ಮಾಡಲಿದ್ದಾರೆ. ಇದಾದ ನಂತ್ರ ತಮ್ಮ ನಿರ್ಧಾರ ಹೇಳಲಿದ್ದಾರೆ ಎಂದು ತಿಳಿದು ಬಂದಿದೆ.

ಸಿನಿಮಾದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Wayanad Landslide: ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 150ಕ್ಕೆ ಏರಿಕೆ; ಇಂದೂ ಭಾರಿ ಮಳೆಯ ಮುನ್ಸೂಚನೆ, ಮುಂದುವರಿದ ಕಾರ್ಯಾಚರಣೆ

Wayanad Landslide: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 150ರ ಗಡಿ ದಾಟಿದೆ. 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈ ಮಧ್ಯೆ ಇಂದೂ (ಜುಲೈ 31) ವಯನಾಡು ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಆತಂಕ ಮೂಡಿಸಿದೆ. ಇಂದು ಕೇರಳದಲ್ಲಿ ಗಂಟೆಗೆ 30-40ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

Wayanad Landslide
Koo

ತಿರುವನಂತಪುರಂ: ಮಳೆಯ ರುದ್ರ ನರ್ತನಕ್ಕೆ ದೇವರನಾಡು ಕೇರಳ ಅಕ್ಷರಶಃ ಕಂಗಾಲಾಗಿ ಹೋಗಿದೆ. ರಾಜ್ಯ ಕಂಡು ಕೇಳರಿಯದ ದುರಂತ ವಯನಾಡಿನಲ್ಲಿ ಸಂಭವಿಸಿದ್ದು, ಭೀಕರ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 150ರ ಗಡಿ ದಾಟಿದೆ (Wayanad Landslide). 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈ ಮಧ್ಯೆ ಇಂದೂ (ಜುಲೈ 31) ವಯನಾಡು ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಆತಂಕ ಮೂಡಿಸಿದೆ.

ಭಾರತ ಹವಾಮಾನ ಇಲಾಖೆ (India Meteorological Department) ಬುಧವಾರವೂ ವಯನಾಡು ಸೇರಿದಂತೆ ಉತ್ತರ ಕೇರಳದ ವಿವಿಧೆಡೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಿದೆ. ʼʼಜುಲೈ 31 ಮತ್ತು ಆಗಸ್ಟ್ 1ರಂದು ವಯನಾಡು ಮತ್ತು ನೆರೆಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಆಗಸ್ಟ್ 2ರಂದುಈ ಭಾಗಗಳಲ್ಲಿ ಮಳೆಯ ಪ್ರಮಾನ ಇನ್ನೂ ಹೆಚ್ಚಾಗಲಿದೆ. ಇಂದು ಕೇರಳದಲ್ಲಿ ಗಂಟೆಗೆ 30-40ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆʼʼ ಎಂದು ಐಎಂಡಿ ತಿಳಿಸಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಕಾಸರಗೋಡು, ಕಣ್ಣೂರು, ಕೋಝಿಕೋಡ್, ವಯನಾಡು, ಮಲಪ್ಪುರಂ, ಪಾಲಕ್ಕಾಡ್, ತ್ರಿಶೂರ್, ಇಡುಕ್ಕಿ, ಎರ್ನಾಕುಲಂ, ಅಲಪ್ಪುಳ ಮತ್ತು ಪತ್ತನಂತೊಟ್ಟ ಜಿಲ್ಲೆಗಳ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಜತೆಗೆ ನಡೆಯಲಿರುವ ಪರೀಕ್ಷೆಗಳನ್ನೂ ಮುಂದೂಡಲಾಗಿದೆ.

ಭಾರಿ ದುರಂತ

ಭಾರೀ ಮಳೆಯ ನಡುವೆ ಮಂಗಳವಾರ ಬೆಳಗ್ಗೆ ವಯನಾಡು ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಜತೆಗೆ ನಾಲ್ಕು ಗಂಟೆ ಅವಧಿಯಲ್ಲಿ ಸಂಭವಿಸಿದೆ ಮೂರು ದೊಡ್ಡ ಭೂಕುಸಿತ ವಯನಾಡು ಜಿಲ್ಲೆಯನ್ನೇ ಅಲ್ಲೋಲ ಕಲ್ಲೋಲ ಮಾಡಿದೆ. ಮುಂಡಕೈ, ಚೂರಲ್‌ಮಲ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಹೆಚ್ಚು ಹಾನಿಗೊಳಗಾಗಿದ್ದು, ಇಲ್ಲಿ ಎಲ್ಲೆಂದರಲ್ಲಿ ಮಣ್ಣು, ಕಲ್ಲು ಬಂಡೆ, ಕೆಸರಿನ ರಾಶಿಯೇ ಕಂಡು ಬರುತ್ತಿದೆ. ಮನೆ, ಶಾಲೆ ಮುಳುಗಡೆಯಾಗಿದ್ದು, ರಸ್ತೆ, ಸೇತುವೆ ಕೊಚ್ಚಿ ಹೋಗಿ ಸಂಪರ್ಕವೇ ಕಡಿತಗೊಂಡಿದೆ. ಇದು ಕಾರ್ಯಾಚರಣೆಯ ಮೇಲೂ ಪರಿಣಾಮ ಬೀರಿದ್ದು, ಸೇನಾ ಸಿಬ್ಬಂದಿ ತಾತ್ಕಾಲಿಕ ಸೇತುವೆ ನಿರ್ಮಿಸಿ ಸಂತ್ರಸ್ತರನ್ನು ಪಾರು ಮಾಡುತ್ತಿದ್ದಾರೆ.

ಈ ದುರಂತ ಎಷ್ಟು ಭೀಕರವಾಗಿದೆ ಎಂದರೆ ನದಿಯಲ್ಲಿ ಕೊಚ್ಚಿಕೊಂಡು ಹೋದ ಸ್ಥಳೀಯರ ಶವ ಪಕ್ಕದ ಜಿಲ್ಲೆ ಮಲ್ಲಪ್ಪುರಂನಲ್ಲಿ ಸಿಕ್ಕಿದೆ. ಇನ್ನು ಮಣ್ಣು, ಕಲ್ಲುಬಂಡೆಗಳ ರಾಶಿಯಲ್ಲಿ ಮೃತದೇಹಗಳು ಕಂಡು ಬಂದಿದ್ದು, ಗುರುತೇ ಸಿಗದಷ್ಟು ನಜ್ಜುಗುಜ್ಜಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗಾಯಗೊಂಡವರಿಗೆ ಮೆಪ್ಪಾಡಿ ಆರೋಗ್ಯ ಕೇಂದ್ರ, ವಿಮ್ಸ್ ಆಸ್ಪತ್ರೆ, ಬತ್ತೇರಿ ತಾಲೂಕು ಆಸ್ಪತ್ರೆ, ನಿಲಂಬೂರ್ ಜಿಲ್ಲಾಸ್ಪತ್ರೆ ಮುಂತಾದೆಡೆ ಚಿಕಿತ್ಸೆ ನೀಡಲಾಗುತ್ತಿದೆ.

ರಕ್ಷಣಾ ಕಾರ್ಯಾಚರಣೆ

ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA), ಅಗ್ನಿಶಾಮಕ ದಳ, ನಾಗರಿಕ ರಕ್ಷಣೆ, ಎನ್‌ಡಿಆರ್‌ಎಫ್‌ ಮತ್ತು ಸ್ಥಳೀಯ ತುರ್ತು ಪ್ರತಿಕ್ರಿಯೆ ತಂಡಗಳ ಸದಸ್ಯರುರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಜತೆಗೆ ಕಣ್ಣೂರಿನ ಡಿಎಸ್‌ಸಿ ಕೇಂದ್ರದ ಸುಮಾರು 200 ಭಾರತೀಯ ಸೇನಾ ಸಿಬ್ಬಂದಿ ಮತ್ತು ಕೋಝಿಕೋಡ್‌ನ 122 ಟಿಎ ಬೆಟಾಲಿಯನ್ ಸದಸ್ಯರು ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಇವರೊಂದಿಗೆ ಎರಡು ವಾಯುಪಡೆಯ ಹೆಲಿಕಾಪ್ಟರ್‌ಗಳು, ಒಂದು ಎಂಐ -17 ಮತ್ತು ಎಎಲ್ಎಚ್ ಕೂಡ ಕೈಜೋಡಿಸಿದೆ.

ಇದನ್ನೂ ಓದಿ: Wayanad Landslide Explainer: ಪ್ರಕೃತಿ ಮೇಲೆ ಮಾನವನ ವಿಕೃತಿ; ವಯನಾಡು ಭೂಕುಸಿತಕ್ಕೆ ಇಲ್ಲಿದೆ ಕಾರಣಗಳ ಪಟ್ಟಿ

Continue Reading

ಪ್ರಮುಖ ಸುದ್ದಿ

Wayanad Landslide: ವೈನಾಡ್‌ ಭೂಕುಸಿತದಲ್ಲಿ 13 ಕನ್ನಡಿಗರು ನಾಪತ್ತೆ; ನಾಲ್ವರ ಶವ ಪತ್ತೆ, ಇನ್ನುಳಿದವರಿಗಾಗಿ ಶೋಧ

Wayanad Landslide: ವೈನಾಡಿನಲ್ಲಿ ಕರ್ನಾಟಕ‌ ಮೂಲದ ನಾಪತ್ತೆಯಾದವರಿಗಾಗಿ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ನಾಪತ್ತೆಯಾದವರ ಪತ್ತೆಗಾಗಿ ಶೋಧ ನಡೆದಿದೆ.

VISTARANEWS.COM


on

wayanad lanslide
Koo

ಚಾಮರಾಜನಗರ: ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತ (wayanad landslide, kerala landslide) ಪ್ರಕರಣದಲ್ಲಿ ಕರ್ನಾಟಕದ (Karnataka) ಹತ್ತಾರು ಮಂದಿ ಕಣ್ಮರೆ (missing) ಆಗಿದ್ದಾರೆ. ಒಟ್ಟು 13 ಮಂದಿ ನಾಪತ್ತೆಯಾಗಿದ್ದಾರೆ ಎಂಬ ಅಂದಾಜು ಲೆಕ್ಕ ಇದುವರೆಗೆ ಸಿಕ್ಕಿದೆ. ಇವರಲ್ಲಿ ನಾಲ್ಕು ಮಂದಿಯ ಶವ ಸಿಕ್ಕಿದ್ದು, ಇನ್ನುಳಿದವರಿಗಾಗಿ ತೀವ್ರ ಶೋಧ (Rescue operation) ನಡೆಯುತ್ತಿದೆ.

ವೈನಾಡಿನಲ್ಲಿ ಕರ್ನಾಟಕ‌ ಮೂಲದ ನಾಪತ್ತೆಯಾದವರಿಗಾಗಿ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ನಾಪತ್ತೆಯಾದವರ ಪತ್ತೆಗಾಗಿ ಶೋಧ ನಡೆದಿದೆ. ಈವರೆಗೆ ಗೊತ್ತಾಗಿರುವ, ನಾಪತ್ತೆಯಾಗಿರುವ ರಾಜ್ಯದ 10 ಮಂದಿಯ ಹೆಸರುಗಳು ಹೀಗಿವೆ:

ಗುರುಮಲ್ಲನ್(10)
ಸಾವಿತ್ರಿ (54)
ಸಬಿತಾ (43)
ಶಿವಣ್ಣನ್ (50)
ಅಪ್ಪಣ್ಣನ್(39)
ಅಶ್ವಿನ್ (13)
ಜೀತು (11)
ದಿವ್ಯಾ (35)
ರತ್ನಾ(48)

ಈವರೆಗೆ ರಾಜೇಂದ್ರ (50), ರತ್ನಮ್ಮ(45), ಪುಟ್ಟಸಿದ್ದಶೆಟ್ಟಿ (62), ರಾಣಿ (50) ಎಂಬವರ ಶವರಗಳನ್ನು ರಕ್ಷಣಾ ಪಡೆಗಳು ಹೊರತೆಗೆದಿವೆ.

ಚಾಮರಾಜನಗರ ಮೂಲದ ಇಬ್ಬರ ಸಾವು ಧೃಡ

ಮೆಪ್ಪಾಡಿಯಲ್ಲಿ ವಾಸವಿದ್ದ ಚಾಮರಾಜನಗರದ ಪುಟ್ಟ ಸಿದ್ದಿ(62) ಹಾಗು ರಾಣಿ ಎಂಬವರ ತಾಯಿ ಸಾವಿಗೀಡಾಗಿದ್ದಾರೆ. ಚಾಮರಾಜನಗರ ತಾಲೋಕು ಇರಸವಾಡಿ ಮೂಲದ ರಾಜನ್ ಹಾಗು ರಜನಿ ನಾಪತ್ತೆಯಾಗಿದ್ದಾರೆ. ಕಳೆದ ಮೂವತ್ತು ವರ್ಷಗಳಿಂದ ಕೇರಳದ ಚೂರಲ್ಲಾದಲ್ಲಿ ವಾಸವಿದ್ದ ರಾಜನ್ ಹಾಗು ರಜನಿ(55) ವಾಸವಿದ್ದರು. ರಾಜನ್, ರಜನಿಗಾಗಿ ಶೋಧಕಾರ್ಯ ನಡೆದಿದೆ.

ಚಾಮರಾಜನಗರ ಜಿಲ್ಲೆಯ ರಾಜೇಂದ್ರ(50), ರತ್ನಮ್ಮ(45), ಪುಟ್ಟಸಿದ್ದಶೆಟ್ಟಿ(62), ರಾಣಿ(50) ಇವರ ಶವಗಳು ದೊರೆತಿವೆ. ತ್ರಯಂಬಕಪುರದ ಸ್ವಾಮಿಶೆಟ್ಟಿ ಎಂಬವರಿಗೆ ಗಾಯಗಳಾಗಿವೆ. ರಾಜೇಂದ್ರ, ರತ್ನಮ್ಮ ಚಾಮರಾಜನಗರ ತಾಲೂಕಿನ ಇರಸವಾಡಿ ಗ್ರಾಮದವರು. ಇಬ್ಬರ ಶವ ಇನ್ನೂ ಪತ್ತೆಯಾಗಿಲ್ಲ. ವೈನಾಡು ಜಿಲ್ಲೆಯ ಮೆಪ್ಪಾಡಿಯ ವೈತ್ರಿ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್‌ ಬಾಬು ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು, ತಹಸೀಲ್ದಾರ್ ನೇತೃತ್ವದ ತಂಡ ಮೃತರ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದೆ.

ಮಂಡ್ಯದ ಕುಟುಂಬಕ್ಕೆ ಸಂಕಷ್ಟ

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿ, ಝಾನ್ಸಿ ಪುತ್ರ ನಿಹಾಲ್, ಅತ್ತೆ ಲೀಲಾವತಿ ನಾಪತ್ತೆಯಾಗಿದ್ದಾರೆ. ಮೈಸೂರಿನ ಸರಗೂರಿನ ಅನಿಲ್ ಕುಮಾರ್ ಎಂಬುವವರಿಗೆ ಝಾನ್ಸಿರಾಣಿಯನ್ನು ಕುಟುಂಬ ಮದುವೆ ಮಾಡಿಕೊಟ್ಟಿತ್ತು. ಕೇರಳದ ಮುಂಡಕೈಯಲ್ಲಿ ಅನಿಲ್, ಪತ್ನಿ ಝಾನ್ಸಿ, ಪುತ್ರ ನಿಹಾಲ್ ಹಾಗೂ ತಂದೆ-ತಾಯಿ ನೆಲೆಸಿದ್ದರು. ಮುಂಡಕೈ ಗುಡ್ಡ ಕುಸಿತದಲ್ಲಿ ಅನಿಲ್ ತಾಯಿ ಲೀಲಾವತಿ(55), ಪುತ್ರ ನಿಹಾಲ್(2.5). ನಾಪತ್ತೆಯಾಗಿದ್ದು, ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅನಿಲ್ ಹಾಗೂ ಅವರ ಪತ್ನಿ ಝಾನ್ಸಿ, ತಂದೆ ದೇವರಾಜು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರೂ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮೂವರಿಗೆ ಕೇರಳದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕುಟುಂಬಸ್ಥರನ್ನು ಕಾಣಲು ಝಾನ್ಸಿರಾಣಿ ಕುಟುಂಬಸ್ಥರು ಕೇರಳಕ್ಕೆ ತೆರಳಿದ್ದಾರೆ.

ಹನಿಮೂನ್‌ಗೆ ಬಂದವರು ಹೆಣವಾದರು

ಬೆಂಗಳೂರಿನಿಂದ ಹನಿಮೂನ್‌ಗೆ ಬಂದಿದ್ದ 4 ಪೈಕಿ ಇಬ್ಬರು ನಾಪತ್ತೆಯಾಗಿದ್ದಾರೆ. ಒರಿಸ್ಸಾ ಮೂಲದ ಎರಡು ನವ ಜೋಡಿಗಳು ಬಂದು ತಂಗಿದ್ದ ರೆಸಾರ್ಟ್‌ ಇವರು ಮಲಗಿದ್ದಲ್ಲೇ ಕೊಚ್ಚಿ ಹೋಗಿದೆ. ರೆಸಾರ್ಟ್‌ನಿಂದ 300 ಮೀಟರ್ ದೂರದಲ್ಲಿ ಕಾರಿನಲ್ಲಿ ಮಲಗಿದ್ದ ಹಾವೇರಿ ಮೂಲದ ಡ್ರೈವರ್ ಮಂಜುನಾಥ್ ಪಾರಾಗಿದ್ದಾರೆ. ಇವರು ದುರಂತದಲ್ಲಿ ಬದುಕುಳಿದಿದ್ದೇ ಅಚ್ಚರಿ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಂಜುನಾಥ್ ಮಾಹಿತಿ ನೀಡಿದ್ದಾರೆ.

ಕಾರಿನಲ್ಲಿ ಮಲಗಿದ್ದಕ್ಕೆ ಪ್ರಾಣ ಉಳಿಯಿತು. ರೆಸಾರ್ಟ್‌ನಲ್ಲಿ ಮಲಗಿದ್ರೆ ನಾನು ಬದುಕುತ್ತಿರಲಿಲ್ಲ. ಎತ್ತರದ ಪ್ರದೇಶದಲ್ಲಿ ಕಾರ್ ನಿಲ್ಲಿಸಿದ್ದರಿಂದ ಬಚಾವ್ ಆಗಿದ್ದೇನೆ. ನನ್ನ ಕಾರು ಕೂಡ ಅಲ್ಲೇ ಇದೆ ಎಂದು ಕೇರಳದ ವಯನಾಡಿನಲ್ಲಿ ಕ್ಯಾಬ್ ಡ್ರೈವರ್ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ಜಿಲ್ಲಾಡಳಿತ ಸಹಾಯವಾಣಿ

ಸಂತ್ರಸ್ತರಿಗಾಗಿ ಮೈಸೂರು ಜಿಲ್ಲಾಡಳಿತ ಸಹಾಯವಾಣಿ ತೆರೆದಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಕೊಠಡಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. 0821-2423800 ಅಥವಾ 1077 ದೂರವಾಣಿಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Wayanad Landslide Explainer: ಪ್ರಕೃತಿ ಮೇಲೆ ಮಾನವನ ವಿಕೃತಿ; ವಯನಾಡು ಭೂಕುಸಿತಕ್ಕೆ ಇಲ್ಲಿದೆ ಕಾರಣಗಳ ಪಟ್ಟಿ

Continue Reading

ಪ್ರಮುಖ ಸುದ್ದಿ

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​; ಇಂದು ಭಾರತೀಯ ಸ್ಪರ್ಧಿಗಳ ವೇಳಾಪಟ್ಟಿ ಹೀಗಿದೆ

Paris Olympics 2024 : ಬುಧವಾರ ಯಾವುದೇ ಪದಕ ಸ್ಪರ್ಧೆ ಇಲ್ಲ. ಆದರೆ ಭಾರತೀಯ ಕ್ರೀಡಾಪಟುಗಳು ಸಾಕಷ್ಟು ಸ್ಪರ್ಧೆಗಳಲ್ಲಿ ಭಾಗಿಯಾಗಲಿದ್ದಾರೆ. ಎರಡು ಬಾರಿಯ ಪದಕ ವಿಜೇತೆ ಪಿ.ವಿ.ಸಿಂಧು ಅವರು ಎಸ್ಟೋನಿಯಾದ ಕ್ರಿಸ್ಟಿನ್ ಕುಬಾ ವಿರುದ್ಧ ಗ್ರೂಪ್ ಹಂತದ ಪಂದ್ಯವನ್ನು ಗೆದ್ದರೆ 16 ನೇ ಸುತ್ತಿಗೆ ಪ್ರವೇಶ ಪಡೆಯಲಿದ್ದಾರೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್ 2024ರ ಒಲಿಂಪಿಕ್ಸ್​ನ (Paris Olympics 2024) ನಾಲ್ಕನೇ ದಿನವಾದ ಮಂಗಳವಾರ ಭಾರತಕ್ಕೆ ಒಂದು ಪದಕ ಲಭಿಸಿದೆ. 10 ಮೀಟರ್​ ಏರ್​ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್​ ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಭಾರತದ ಪದಕಗಳ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಭಾರತದ ಪಾಲಿಗೆ ಇದು ವಿಶೇಷ ಸಾಧನೆಯೂ ಹೌದು. ಯಾಕೆಂದರೆ ಮನು ಭಾಕರ್​​ 125 ವರ್ಷಗಳ ಬಳಿಕ ಭಾರತ ಪರ ಒಂದೇ ಒಲಿಂಪಿಕ್ಸ್​ನಲ್ಲಿ ಎರಡು ಪದಕ ಗೆದ್ದ ದಾಖಲೆಯನ್ನು ಮಾಡಿದ್ದಾರೆ. ಇದೇ ವೇಳೆ ಚೊಚ್ಚಲ ಪ್ರವೇಶದಲ್ಲಿ ಸರಬ್ಜಿತ್ ಪದಕವೊಂದಕ್ಕೆ ಕೊರಳೊಡ್ಡಿದ್ದಾರೆ. ಇದೇ ಹುಮ್ಮಸ್ಸಿನಲ್ಲಿ ಸಾಗಲಿರುವ ಭಾರತ ಅಥ್ಲಿಟ್​ಗಳ ನಿಯೋಗ ಐದನೇ ದಿನವಾದ ಬುಧವಾರ (ಜುಲೈ 31) ಹಲವಾರು ಸ್ಪರ್ಧೆಗಳಲ್ಲಿ ಕಣಕ್ಕೆ ಇಳಿಯಲಿದ್ದಾರೆ. ಪ್ರಮುಖವಾಗಿ ಶೂಟಿಂಗ್, ಬಾಕ್ಸಿಂಗ್, ಬ್ಯಾಡ್ಮಿಂಟನ್, ಟೇಬಲ್ ಟೆನಿಸ್ ತಂಡಗಳು ಪದಕ ಸನಿಹ ಹೋಗುವ ಪ್ರಯತ್ನ ಮಾಡಲಿವೆ.

ಬುಧವಾರ ಯಾವುದೇ ಪದಕ ಸ್ಪರ್ಧೆ ಇಲ್ಲ. ಆದರೆ ಭಾರತೀಯ ಕ್ರೀಡಾಪಟುಗಳು ಸಾಕಷ್ಟು ಸ್ಪರ್ಧೆಗಳಲ್ಲಿ ಭಾಗಿಯಾಗಲಿದ್ದಾರೆ. ಎರಡು ಬಾರಿಯ ಪದಕ ವಿಜೇತೆ ಪಿ.ವಿ.ಸಿಂಧು ಅವರು ಎಸ್ಟೋನಿಯಾದ ಕ್ರಿಸ್ಟಿನ್ ಕುಬಾ ವಿರುದ್ಧ ಗ್ರೂಪ್ ಹಂತದ ಪಂದ್ಯವನ್ನು ಗೆದ್ದರೆ 16 ನೇ ಸುತ್ತಿಗೆ ಪ್ರವೇಶ ಪಡೆಯಲಿದ್ದಾರೆ.

ಬ್ಯಾಡ್ಮಿಂಟನ್​ನಲ್ಲಿ ದೊಡ್ಡ ಪಂದ್ಯವೊಂದು ನಡೆಯಲಿದ್ದು ಲಕ್ಷ್ಯ ಸೇನ್ ಮತ್ತು ಜೊನಾಟನ್ ಕ್ರಿಸ್ಟಿ ನಾಕೌಟ್ ಸುತ್ತಿನಲ್ಲಿ ಸ್ಥಾನ ಪಡೆಯಲು ಪ್ರಯತ್ನಿಸಲಿದೆ. ಪ್ರಣಯ್ ಕೂಡ ತಮ್ಮ ಗೆಲುವಿನ ಓಟ ಮುಂದುವರಿಸಲು ಮತ್ತು ಮುಂದಿನ ಸುತ್ತಿಗೆ ಮುನ್ನಡೆಯಲು ಬಯಸುತ್ತಿದ್ದಾರೆ. 50 ಮೀಟರ್ ರೈಫಲ್ 3 ಸ್ಥಾನಗಳ ಪುರುಷರ ಶೂಟರ್​ಗಳಾದ ಐಶ್ವರಿ ಪ್ರತಾಪ್ ಸಿಂಗ್ ತೋಮರ್ ಮತ್ತು ಸ್ವಪ್ನಿಲ್ ಕುಸಾಲೆ ಅರ್ಹತಾ ಸುತ್ತಿನಲ್ಲಿ ಸ್ಪರ್ಧಿಸಲಿದ್ದಾರೆ. ಮಹಿಳಾ ಟ್ರ್ಯಾಪ್ ಶೂಟರ್​ಗಳಾದ ರಾಜೇಶ್ವರಿ ಕುಮಾರಿ ಮತ್ತು ಶ್ರೇಯಸಿ ಸಿಂಗ್ ವೈಯಕ್ತಿಕ ಅಂತಿಮ ಸ್ಪರ್ಧೆಗೆ ಅರ್ಹತೆ ಪಡೆಯಲಿದ್ದಾರೆ.

ಆರ್ಚರಿ ಪುರುಷರ ವೈಯಕ್ತಿಕ ವಿಭಾಗದಲ್ಲಿ ತರುಣ್ ದೀಪ್ ರಾಯ್ ಸ್ಪರ್ಧಿಸಿದರೆ, ಮಹಿಳಾ ವಿಭಾಗದಲ್ಲಿ ದೀಪಿಕಾ ಕುಮಾರಿ ಸ್ಪರ್ಧಿಸಲಿದ್ದಾರೆ.

ಜುಲೈ 31, ಬುಧವಾರದ ಭಾರತದ ವೇಳಾಪಟ್ಟಿ ಇಲ್ಲಿದೆ

ಮಧ್ಯಾಹ್ನ 12:30: ಪುರುಷರ 50 ಮೀಟರ್ ರೈಫಲ್ 3 ಪೊಸಿಷನ್​ ಅರ್ಹತಾ ಸುತ್ತಿನಲ್ಲಿ ಐಶ್ವರಿ ಪ್ರತಾಪ್ ಸಿಂಗ್ ತೋಮರ್ ಮತ್ತು ಸ್ವಪ್ನಿಲ್ ಕುಸಾಲೆ ಕಣಕ್ಕಿಳಿಯಲಿದ್ದಾರೆ.

ಇದನ್ನೂ ಓದಿ: IND vs SL : ಭಾರತ ವಿರುದ್ಧದ ಏಕ ದಿನ ಸರಣಿಗೆ ಶ್ರೀಲಂಕಾ ತಂಡ ಪ್ರಕಟ; ಹೊಸ ನಾಯಕನ ಘೋಷಣೆ

ಮಧ್ಯಾಹ್ನ 12.30: ಮಹಿಳೆಯರ ಟ್ರ್ಯಾಪ್ ಅರ್ಹತಾ ಸುತ್ತಿನ ಎರಡನೇ ದಿನ ಶ್ರೇಯಸಿ ಸಿಂಗ್ ಮತ್ತು ರಾಜೇಶ್ವರಿ ಕುಮಾರಿ ಕಣಕ್ಕಿಳಿಯಲಿದ್ದಾರೆ.

ಮಧ್ಯಾಹ್ನ 12:50: ಬ್ಯಾಡ್ಮಿಂಟನ್, ಮಹಿಳಾ ಸಿಂಗಲ್ಸ್ ಗ್ರೂಪ್ ಹಂತದ ಹೋರಾಟದಲ್ಲಿ ಪಿ.ವಿ.ಸಿಂಧು ಮತ್ತು ಕ್ರಿಸ್ಟಿನ್ ಕುಬಾ. ಈ ಪಂದ್ಯದಲ್ಲಿ ಗೆದ್ದರೆ ಸಿಂಧು ನಾಕೌಟ್ ಸುತ್ತಿಗೆ ಪ್ರವೇಶಿಸಲಿದ್ದಾರೆ.

ಮಧ್ಯಾಹ್ನ 1:30: ಈಕ್ವೆಸ್ಟ್ರಿಯನ್ ಇಂಡಿವಿಜುವಲ್​ ಡ್ರೆಸೇಜ್​: ಅನುಷ್ ಅಗರ್ವಾಲ್ಲಾ ಮತ್ತು ಕ್ಯಾರಾಮೆಲ್ಲೊ 2 ದಿನದಂದು ಕಣಕ್ಕಿಳಿಯಲಿದ್ದಾರೆ.

ಮಧ್ಯಾಹ್ನ 1:40: ಬ್ಯಾಡ್ಮಿಂಟನ್ – ಪುರುಷರ ಸಿಂಗಲ್ಸ್ ಗ್ರೂಪ್ ಹಂತದಲ್ಲಿ ಲಕ್ಷ್ಯ ಸೇನ್ ಮತ್ತು ಜೊನಾಥನ್ ಕ್ರಿಸ್ಟಿ. ಈ ಗುಂಪಿನಿಂದ ರೌಂಡ್-ಆಫ್-16 ಸ್ಥಾನ ಯಾರು ಪಡೆಯುತ್ತಾರೆ ಎಂಬುದು ಇಲ್ಲಿ ನಿರ್ಧಾರವಾಗಲಿದೆ. ಕ್ರಿಸ್ಟಿ ವಿರುದ್ಧ ಲಕ್ಷ್ಯತಮ್ಮ ವೃತ್ತಿಜೀವನದಲ್ಲಿ 1-4 ರಿಂದ ಹಿನ್ನಡೆ ಹೊಂದಿದ್ದಾರೆ.

ಮಧ್ಯಾಹ್ನ 2:30: ಟೇಬಲ್ ಟೆನಿಸ್: ಮಹಿಳಾ ಸಿಂಗಲ್ಸ್ ರೌಂಡ್ ಆಫ್ 32ರಲ್ಲಿ ಶ್ರೀಜಾ ಅಕುಲಾ ಮತ್ತು ಜೆಂಗ್ ಜಿಯಾನ್ ಸ್ಪರ್ಧಿಸಲಿದ್ದಾರೆ. ಒಲಿಂಪಿಕ್ಸ್​ನಲ್ಲಿ 16ನೇ ಸುತ್ತಿಗೆ ಪ್ರವೇಶಿಸಿದ ಭಾರತದ ಮೊದಲ ಟೇಬಲ್ ಟೆನಿಸ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಮಣಿಕಾ ಬಾತ್ರಾ ಪಾತ್ರರಾಗಿದ್ದು ಶ್ರೀಜಾ ಅದೇ ದಾರಿಯನ್ನು ಅನುಸರಿಸಲಿದ್ದಾರೆ.

ಮಧ್ಯಾಹ್ನ 3:34: ಮಹಿಳೆಯರ 75 ಕೆಜಿ ವಿಭಾಗದ ವಿಭಾಗದ 16ನೇ ಸುತ್ತಿನ ಸ್ಪರ್ಧೆಯಲ್ಲಿ ಲೊವ್ಲಿನಾ ಬೊರ್ಗೊಹೈನ್ ಮತ್ತು ನಾರ್ವೆಯ ಸುನ್ನಿವಾ ಹಾಫ್ಸಡ್​ ಜೋಡಿ ಸ್ಪರ್ಧಿಸಲಿದೆ. ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆಯಾಗಿದ್ದಾರೆ.

ಮಧ್ಯಾಹ್ನ 3:56: ಆರ್ಚರಿ – ಮಹಿಳೆಯರ ವೈಯಕ್ತಿಕ 64ನೇ ಸುತ್ತಿನಲ್ಲಿ ದೀಪಿಕಾ ಕುಮಾರಿ ಮತ್ತು ರೀನಾ ಪರ್ನತ್.

ಸಂಜೆ 7: ಶೂಟಿಂಗ್- ಮಹಿಳಾ ಟ್ರ್ಯಾಪ್ ಫೈನಲ್; ಶ್ರೇಯಸಿ ಅಥವಾ ರಾಜೇಶ್ವರಿ ಅರ್ಹತೆ ಪಡೆದರೆ ಪದಕದ ಸನಿಹ ಹೋಗಲಿದ್ದಾರೆ.

ರಾತ್ರಿ 9:15: ಆರ್ಚರಿ- ಪುರುಷರ ವೈಯಕ್ತಿಕ ರೌಂಡ್-64 ರಲ್ಲಿ ತರುಣ್​ದೀಪ್​ ರಾಯ್ ಮತ್ತು ಟಾಮ್ ಹಾಲ್ ಸ್ಪರ್ಧಿಸಲಿದ್ದಾರೆ.

ರಾತ್ರಿ 11: ಬ್ಯಾಡ್ಮಿಂಟನ್- ಪುರುಷರ ಸಿಂಗಲ್ಸ್ ಗ್ರೂಪ್ ಹಂತದಲ್ಲಿ ಎಚ್.ಎಸ್.ಪ್ರಣಯ್ ವಿರುದ್ಧ ಡುಕ್ ಫಾಟ್ ಲೆ.

12:18 ರಾತ್ರಿ : ಪುರುಷರ 71 ಕೆಜಿ ವಿಭಾಗದ 16 ಕೆಜಿ ವಿಭಾಗದಲ್ಲಿ ನಿಶಾಂತ್ ದೇವ್ ಮತ್ತು ಜೋಸ್ ಗೇಬ್ರಿಯಲ್ ರೊಡ್ರಿಗಸ್ ಟೆನೊರಿಯೊ.

ಇದನ್ನೂ ಓದಿ: Neeraj Chopra : ನಮಸ್ಕಾರ ಪ್ಯಾರಿಸ್​​; ಒಲಿಂಪಿಕ್ಸ್​ ಕ್ರೀಡಾಗ್ರಾಮ ತಲುಪಿದ ಚಿನ್ನದ ಹುಡುಗ ನೀರಜ್ ಚೋಪ್ರಾ

Continue Reading

ಭವಿಷ್ಯ

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಸಿಗಲಿದೆ ಶುಭ ಸೂಚನೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಿಥುನ ರಾಶಿಯಿಂದ ಬುಧವಾರ ರಾತ್ರಿ 11:19 ಗಂಟೆಗೆ ಕರ್ಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಾಗಲಿದೆ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ. ಕಲೆ ಮತ್ತು ರಂಗಭೂಮಿಯ ಜತೆ ಸಂಪರ್ಕ ಹೊಂದಿರುವವರು ಸೃಜನಶೀಲರು ಹೊಸ ಅವಕಾಶಗಳನ್ನು ಪಡೆಯುತ್ತಾರೆ. ವೃಷಭ ರಾಶಿಯವರು ದೀರ್ಘಕಾಲೀನ ಅನಾರೋಗ್ಯದಿಂದ ಬಳಲುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟು ಮಾಡುತ್ತದೆ. ಅನಗತ್ಯ ವಿಷಯಗಳ ಬಗ್ಗೆ ಸಮಯ ಕೊಡಬೇಡಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (31-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ.
ತಿಥಿ: ಏಕಾದಶಿ 15:54 ವಾರ: ಬುಧವಾರ
ನಕ್ಷತ್ರ: ರೋಹಿಣಿ 10:11 ಯೋಗ: ಧ್ರುವ 14:12
ಕರಣ: ಬಾಲವ 15:54 ಅಮೃತಕಾಲ: ಬೆಳಗ್ಗೆ 07:02 ರಿಂದ 08:37
ದಿನದ ವಿಶೇಷ: ಸರ‍್ವೇಷಾಮೇಕಾದಶಿ

ಸೂರ್ಯೋದಯ : 06:05   ಸೂರ್ಯಾಸ್ತ : 06:47

ರಾಹುಕಾಲ: ಮಧ್ಯಾಹ್ನ 12:26 ರಿಂದ 02:01
ಗುಳಿಕಕಾಲ: ಬೆಳಗ್ಗೆ 10:51
ರಿಂದ 12:26
ಯಮಗಂಡಕಾಲ: ಬೆಳಗ್ಗೆ 07:40
ರಿಂದ 09:16

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಾಗಲಿದೆ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ. ಕಲೆ ಮತ್ತು ರಂಗಭೂಮಿಯ ಜತೆ ಸಂಪರ್ಕ ಹೊಂದಿರುವವರು ಸೃಜನಶೀಲರು ಹೊಸ ಅವಕಾಶಗಳನ್ನು ಪಡೆಯುತ್ತಾರೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಕುಟುಂಬದಲ್ಲಿ ಮಧುರತೆ ಇರಲಿದೆ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದೀರ್ಘಕಾಲೀನ ಅನಾರೋಗ್ಯದಿಂದ ಬಳಲುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟು ಮಾಡುತ್ತದೆ. ಅನಗತ್ಯ ವಿಷಯಗಳ ಬಗ್ಗೆ ಸಮಯ ಕೊಡಬೇಡಿ. ಸಂಗಾತಿಯ ಸಲಹೆ ಹಿತಕರವೆನಿಸಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಭೂ ಸಂಬಂಧಿ ವ್ಯವಹಾರಗಳಲ್ಲಿ ಲಾಭವಾಗಲಿದೆ. ಉತ್ಸಾಹದ ಜತೆಗೆ ನಿಮ್ಮ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ವ್ಯಾಪಾರದಲ್ಲಿ ಅಧಿಕ ಲಾಭ ಸಿಗಲಿದೆ. ಜೀವನ ಸಂಗಾತಿಯ ಮಹತ್ವ ಮನವರಿಕೆ ಆಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಮಟ್ಟಿನ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕಟಕ: ದೈಹಿಕ ಆಯಾಸ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ದೇಹದ ಮೇಲೆ ಹೆಚ್ಚು ಒತ್ತಡ ಹಾಕುವ ಯಾವುದೇ ದೈಹಿಕ ಪರಿಶ್ರಮವನ್ನು ತಪ್ಪಿಸಲು ಪ್ರಯತ್ನಿಸಿ. ವಿಶ್ರಾಂತಿ ತೆಗೆದುಕೊಳ್ಳಿ. ಹಳೆಯ ನೆನಪುಗಳು ತಮಗೆ ಸಂತಸ ತರಲಿದೆ. ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ ಆದಷ್ಟು ಸಂಯಮ ಕಳೆದುಕೊಳ್ಳುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರ್ಥಿಕ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ:ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟು ಮಾಡುತ್ತದೆ. ಆರೋಗ್ಯದ ಕಡೆ ವಿಶೇಷ ಗಮನ ಹರಿಸಿ. ಅಧಿಕ ರಕ್ತ ಒತ್ತಡದ ರೋಗಿಗಳು ಆಲಸ್ಯವನ್ನು ಮಾಡಲೇಬೇಡಿ. ಉದ್ಯೋಗಿಗಳಿಗೆ ಪ್ರಶಂಸೆ, ಪ್ರೋತ್ಸಾಹ ಸಿಗಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಯಾವುದೇ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ಹೂಡಿಕೆ ಮಾಡುವುದು ಬೇಡ, ನಷ್ಟ ಸಾಧ್ಯತೆ, ಎಚ್ಚರಿಕೆ ಇರಲಿ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸ ವಾತಾವರಣ ಇರಲಿದೆ. ಸೃಜನಶೀಲತೆಯಿಂದ ಕೆಲಸ ಮಾಡುವವರಿಗೆ ಪ್ರೋತ್ಸಾಹ ಸಿಗಲಿದೆ. ಅನಿರೀಕ್ಷಿತ ಪ್ರತಿಫಲಗಳನ್ನು ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಚೆನ್ನಾಗಿರುತ್ತದೆ. ಒಡಹುಟ್ಟಿದವರು ನಿಮ್ಮ ಸಹಾಯ ಯಾಚಿಸಬಹುದು. ಆರ್ಥಿಕವಾಗಿ ನಿಮಗೆ ಮಧ್ಯಮ ಫಲ ಇರಲಿದೆ. ಸ್ನೇಹಿತರ ವರ್ಗದಿಂದ ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಉದ್ಯೋಗಿಗಳಿಗೆ ಕೆಲಸದ ಒತ್ತಡ ಇದ್ದರೂ ದೈಹಿಕವಾಗಿ ನೀವು ಸದೃಢವಾಗಿ ಕೆಲಸ ನಿಭಾಯಿಸುವಲ್ಲಿ ಯಶಸ್ಸು ಪಡೆಯುವಿರಿ. ಕೌಟುಂಬಿಕವಾಗಿ ಶುಭ ಫಲವಿದೆ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ದೈಹಿಕವಾಗಿ ಮಾನಸಿಕವಾಗಿ ಬಳಲುವ ಸಾಧ್ಯತೆ, ಆದಷ್ಟು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಆಧ್ಯಾತ್ಮ ಮತ್ತು ಯೋಗ ಹೆಚ್ಚಿನ ನೆಮ್ಮದಿ ತರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ. ಸಹದ್ಯೋಗಿಗಳು ನಿಮ್ಮ ಹಿಂದೆ ಪಿತೂರಿ ನಡೆಸುವ ಸಾಧ್ಯತೆ ಇದೆ, ಆದಷ್ಟು ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಆರ್ಥಿಕವಾಗಿ ಸುಧಾರಣೆ ಆಗುವುದರಿಂದ, ಇಂದು ಕೊಂಚ ನೆಮ್ಮದಿಯಿಂದ ಇರುವಿರಿ. ದೀರ್ಘಕಾಲದ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಅದೃಷ್ಟದ ಬಾಗಿಲು ತೆರೆದು ಹೊಸ ಅವಕಾಶಗಳು ಸಿಗಲಿವೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಕರ: ಸಾಲದ ಮರುಪಾವತಿ ಆಗಲಿದೆ. ಹೀಗಾಗಿ ಆರ್ಥಿಕವಾಗಿ ಸದೃಢ ಇರಲಿದೆ. ದೈಹಿಕ ಆರೋಗ್ಯದ ಕಡೆ ಕೊಂಚ ಗಮನ ಹರಿಸಿ. ಅನಗತ್ಯ ಅನುಮಾನ ದಿನದ ಕೊನೆಯಲ್ಲಿ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ, ಅದರ ಕಡೆಗೆ ಗಮನ ಹರಿಸದಿರಿ. ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ಪಟ್ಟರೆ ಭರವಸೆಯ ಹೊಸ ಅವಕಾಶಗಳು ಸಿಕ್ಕಾವು ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ತೊಡಗಿ. ಉದ್ಯೋಗಿಗಳಿಗೆ ಒತ್ತಡ ಇದ್ದರೂ ಯಾವುದೇ ತೊಂದರೆ ಇಲ್ಲ. ಯಶಸ್ವಿಯಾಗಿ ಕಾರ್ಯ ನಿರ್ವಹಿಸುವಿರಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕುಂಭ:

ಸರಿಯಾದ ಆಲೋಚನೆಗಳು ಹಾಗೂ ಕಾರ್ಯಗಳು ನಿಮಗೆ ಅಗತ್ಯವಿರುವ ಸಮಾಧಾನವನ್ನು ತರುತ್ತವೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ, ತಾತ್ಸಾರ ಮನೋಭಾವ ಬೇಡ.ಸಂಗಾತಿಯೊಂದಿಗೆ ವಿನಾಕಾರಣ ವಾದಕ್ಕೆ ಇಳಿದೆ ಮನೆಯಲ್ಲಿ ನೆಮ್ಮದಿ ವಾತಾವರಣ ಹಾಳು ಮಾಡುವುದು ಬೇಡ. ಉದ್ಯೋಗಿಗಳಿಗೆ ಭಯದ ವಾತಾವರಣ ನಿರ್ಮಾಣವಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ಉದ್ಯೋಗದ ಸ್ಥಳದಲ್ಲಿ ನೀವು ಯಾವುದೇ ದೊಡ್ಡ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅದರಿಂದ ಹೊರಬರಬಹುದು. ಕುಟುಂಬದಲ್ಲಿ ಸ್ತ್ರೀ ಸದಸ್ಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು. ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಬಲ ಹೆಚ್ಚಲಿದೆ. ಉದ್ಯೋಗಿಗಳಿಗೆ ಶುಭ ಫಲ. ದಾಂಪತ್ಯದಲ್ಲಿ ಮಧುರತೆ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Wayanad Landslide
ದೇಶ5 mins ago

Wayanad Landslide: ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 150ಕ್ಕೆ ಏರಿಕೆ; ಇಂದೂ ಭಾರಿ ಮಳೆಯ ಮುನ್ಸೂಚನೆ, ಮುಂದುವರಿದ ಕಾರ್ಯಾಚರಣೆ

wayanad landslide
ದೇಶ5 mins ago

Wayanad Landslide: ವಯನಾಡ್‌ ಅಕ್ಷರಶಃ ಸ್ಮಶಾನ; ಭೂಕುಸಿತ ಸ್ಥಳಕ್ಕೆ ರಾಹುಲ್‌, ಪ್ರಿಯಾಂಕಾ ಭೇಟಿ ಸ್ಥಗಿತ

anekal JK police firing
ಕ್ರೈಂ21 mins ago

Police Firing: ಪುರಸಭೆ ಸದಸ್ಯನ ಕೊಲೆ ಮಾಡಿದ್ದ ರೌಡಿ ಕಾಲಿಗೆ ಗುಂಡು ನುಗ್ಗಿಸಿ ಬಂಧಿಸಿದ ಪೊಲೀಸರು

wayanad lanslide
ಪ್ರಮುಖ ಸುದ್ದಿ48 mins ago

Wayanad Landslide: ವೈನಾಡ್‌ ಭೂಕುಸಿತದಲ್ಲಿ 13 ಕನ್ನಡಿಗರು ನಾಪತ್ತೆ; ನಾಲ್ವರ ಶವ ಪತ್ತೆ, ಇನ್ನುಳಿದವರಿಗಾಗಿ ಶೋಧ

Tips for Monsoon
ಲೈಫ್‌ಸ್ಟೈಲ್57 mins ago

Tips for Monsoon: ಮಳೆಗಾಲದಲ್ಲಿ ಬಟ್ಟೆಗಳನ್ನು ಗರಿಗರಿಯಾಗಿ ಇರಿಸುವುದು ಹೇಗೆ?

Ear Infections during Monsoon
ಆರೋಗ್ಯ2 hours ago

Ear Infections During Monsoon: ಮಳೆಗಾಲದಲ್ಲಿ ಕಾಡುವ ಕಿವಿನೋವಿನಿಂದ ಮುಕ್ತರಾಗಲು ಸರಳ ಉಪಾಯ ಇಲ್ಲಿದೆ

karnataka weather Forecast
ಮಳೆ2 hours ago

Karnataka Weather : ಭಯಂಕರ ಮಳೆ ಮುನ್ಸೂಚನೆ; ಕರಾವಳಿ, ಮಲೆನಾಡು ಭಾಗಕ್ಕೆ ರೆಡ್‌ ಅಲರ್ಟ್‌

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​; ಇಂದು ಭಾರತೀಯ ಸ್ಪರ್ಧಿಗಳ ವೇಳಾಪಟ್ಟಿ ಹೀಗಿದೆ

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಸಿಗಲಿದೆ ಶುಭ ಸೂಚನೆ

IND vs SL
ಪ್ರಮುಖ ಸುದ್ದಿ8 hours ago

IND vs SL : ಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲೂ ಭಾರತಕ್ಕೆ ಜಯ, ಸರಣಿ ಕ್ಲೀನ್ ಸ್ವೀಪ್ ಮಾಡಿದ ಸೂರ್ಯಕುಮಾರ್ ಪಡೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ14 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ18 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ19 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌