Site icon Vistara News

Megha Shetty: ಮೇಘಾ ಶೆಟ್ಟಿ ಬರ್ತ್‌ಡೇಗೆ ಸರ್‌ಪ್ರೈಸ್‌ ಕೊಟ್ಟ `ಆಪರೇಷನ್ ಲಂಡನ್ ಕೆಫೆ’ ತಂಡ!

Megha Shetty operation london cafe bigg surprise

ಬೆಂಗಳೂರು: ಇನ್ನೇನಿದ್ರೂ ಟೀಸರ್ ಟೈಮ್! ಎನ್ನುತ್ತ ಸಣ್ಣದೊಂದು ಮಂದಹಾಸ ಬೀರುವ `ಆಪರೇಷನ್ ಲಂಡನ್ ಕೆಫೆ’ ನಿರ್ದೇಶಕ ಸಡಗರ ರಾಘವೇಂದ್ರ. ಈ ಮೂಲಕ ನಾಯಕಿ ಮೇಘಾ ಶೆಟ್ಟಿ ಹುಟ್ಟು ಹಬ್ಬದ ದಿನ ಈಗಾಗಲೇ ತನ್ನ ಮಾಸ್ ಪೋಸ್ಟರ್ಗಳ ಮೂಲಕ ಪ್ರೇಕ್ಷಕರ ಕುತೂಹಲ ಕೆರಳಿಸಿರುವ ಲಂಡನ್ ಕೆಫೆ ಚಿತ್ರದ ಟೀಸರ್ ರಿಲೀಸ್‌ಗೆ ಕೌಂಟ್ಡೌನ್ ಶುರುವಾಗಿದೆ ಎನ್ನುವ ಸಿಹಿ ಸುದ್ಧಿಯನ್ನು ಹಂಚಿಕೊಂಡಿದ್ದಾರೆ.

ಮೇಘಾ ಶೆಟ್ಟಿಯ ಹುಟ್ಟು ಹಬ್ಬಕ್ಕೆ ಶುಭ ಕೋರುವ ಸಲುವಾಗಿ ಚಿತ್ರ ತಂಡ ಬಿಡುಗಡೆಗೊಳಿಸಿರುವ ಹಳ್ಳಿ ಹುಡುಗಿಯ ಗೆಟಪ್ಪಿನಲ್ಲಿ ಲಂಗ ದಾವಣಿಯಲ್ಲಿ ಮಿರಮಿರ ಮಿಂಚುತ್ತಿರುವ ಮೇಘಾ ಶೆಟ್ಟಿಯ ಆಪರೇಷನ್ ಲಂಡನ್ ಕೆಫೆ ಪೋಸ್ಟರ್ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ ಮರಾಠಿ ಮತ್ತು ಇತರ ಭಾಷೆಗಳಲ್ಲಿ ಬಿಡುಗಡೆಗೊಳ್ಳುವ ಈ ಚಿತ್ರವನ್ನು ವಿಜಯ್ ಕುಮಾರ್ ಶೆಟ್ಟಿ ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ಜಂಟಿಯಾಗಿ ನಿರ್ಮಿಸುತ್ತಿದ್ದು ಈಗಾಗಲೇ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಚಾಲ್ತಿಯಲ್ಲಿದೆ. ಅತೀ ಶೀಘ್ರದಲ್ಲಿಯೇ ಚಿತ್ರದ ಟೀಸರ್ ಬಿಡುಗಡೆಗೊಳಿಸುವುದಾಗಿ ನಿರ್ದೇಶಕ ಸಡಗರ ರಾಘವೇಂದ್ರ ಹೇಳಿಕೊಂಡಿದ್ದಾರೆ.

ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್‌ನ ಬಹು ನಿರೀಕ್ಷೆಯ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಅದ್ಧೂರಿಯಾಗಿ ತಯಾರಾಗುತ್ತಿರುವ ಮಾಸ್ ಆಕ್ಷನ್ ‘ಆಪರೇಷನ್ ಲಂಡನ್ ಕೆಫೆ’ ಚಿತ್ರ ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಆದಷ್ಟು ಬೇಗ ಚಿತ್ರವನ್ನು (Kannada New Movie) ಪ್ರೇಕ್ಷಕರ ಮುಂದೆ ತರುವುದಾಗಿ ನಿರ್ದೇಶಕ ಸಡಗರ ರಾಘವೇಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: Raayan Movie: ಎಂಟೇ ದಿನಕ್ಕೆ ‘100 ಕೋಟಿ ಕ್ಲಬ್‌’ ಸೇರಿದ ಧನುಷ್ ನಟನೆಯ’ರಾಯನ್‌’ ಸಿನಿಮಾ!

ಕವೀಶ್ ಮತ್ತು ಮೇಘಾ ಶೆಟ್ಟಿ ಜತೆಯಲ್ಲಿ ಮರಾಠಿಯ ಶಿವಾನಿ ಸುರ್ವೆ. ವಿರಾಟ್ ಮಡಕೆ ಪ್ರಸಾದ್ ಕಾಂಡೇಕರ್ ಹಾಗೂ ಕನ್ನಡದ ಅರ್ಜುನ್ ಕಾಪಿಕಾಡ್, ಬಿ ಸುರೇಶ್, ಕೃಷ್ಣ ಹೆಬ್ಬಾಳೆ, ಧರ್ಮೇಂದ್ರ ಅರಸ್, ನೀನಾಸಂ ಅಶ್ವತ್ ಮುಂತಾದ ಹೆಸರಾಂತ ಕಲಾವಿದರು ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಯುವ ಸಂಗೀತ ನಿರ್ದೇಶಕ ಪ್ರಾನ್ಶು ಝಾ ಸಂಗೀತವಿರುವ ಈ ಚಿತ್ರಕ್ಕೆ ಛಾಯಾಗ್ರಾಹಕ ಸುಂದರನಾಥ ಸುವರ್ಣ ಅವರ ಜತೆಯಲ್ಲಿ ದೀರ್ಘ ಕಾಲ ಕೆಲಸ ಮಾಡಿದ ಅನುಭವವಿರುವ ಡಿ. ನಾಗಾರ್ಜುನ್ ಛಾಯಾಗ್ರಹಣವಿದೆ.

ಕಲಾ ನಿರ್ದೇಶಕ ವರದರಾಜ್ ಕಾಮತ್, ಕೆ. ಎಂ. ಪ್ರಕಾಶ್ ಸಂಕಲನದ ಜತೆಯಲ್ಲಿ ನಾಗೇಂದ್ರ ಪ್ರಸಾದ್, ಕವಿರಾಜ್ ಮತ್ತು ಸಡಗರ ರಾಘವೇಂದ್ರ ಸಾಹಿತ್ಯ ಮತ್ತು ವಿಕ್ರಂ ಮೊರ್, ಅರ್ಜುನ್ ಮತ್ತು ಮಾಸ್ ಮಾದ ವಿಶೇಷವಾಗಿ ಸಂಯೋಜಿಸಿದ ಸಾಹಸವಿದೆ.

ಇಂಡಿಯನ್ ಫಿಲಂ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂ ಲಾಂಛನದ ಅಡಿಯಲ್ಲಿ ಅದ್ಧೂರಿಯಾಗಿ ನಿರ್ಮಾಣಗೊಳ್ಳುತ್ತಿರುವ ಈ ಚಿತ್ರವನ್ನು ಉಡುಪಿಯ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ, ದೀಪಕ್ ರಾಣೆ ಮತ್ತು ವಿಜಯ್ ಪ್ರಕಾಶ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

Exit mobile version