ಬಿಗ್‌ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿ ನಮ್ರತಾ ಗೌಡ (Namratha Gowda) ಮತ್ತು ಬಿಗ್‌ಬಾಸ್ ಕನ್ನಡ ಸೀಸನ್ 7ರ ಕಿಶನ್ ಬಿಳಗಲಿ ಆಗಾಗ ಒಟ್ಟಿಗೆ ಡ್ಯಾನ್ಸ್ ಮಾಡಿರುವ ವಿಡಿಯೊ ಪೋಸ್ಟ್ ಮಾಡುತ್ತಲೇ ಇರುತ್ತಾರೆ. ಹಿಂದಷ್ಟೇ ಇವರಿಬ್ಬರು ರವಿಚಂದ್ರನ್ ನಟನೆಯ ಶಾಂತಿಕ್ರಾಂತಿ ಸಿನಿಮಾದ “ಮಧ್ಯರಾತ್ರಿಲಿ ಹೈವೆ ರಸ್ತೇಲಿ” ಹಾಡಿಗೆ ನರ್ತಿಸಿದ್ದರು. ಬಳಿಕ ಪರವಶನಾದೆನು ಹಾಡಿಗೆ ಹೆಜ್ಜೆ ಹಾಕಿ ಅಭಿಮಾನಿಗಳ ಹೃದಯ ಗೆದ್ದಿದ್ದರು. ಇದೀಗ ಈ ಜೋಡಿ ʻಸಪ್ತಸಾಗರದಾಚೆ ಎಲ್ಲೋʼ ಹಾಡಿಗೆ ಡಾನ್ಸ್ ಮಾಡಿದೆ.
ಇದಕ್ಕೂ ಮುಂಚೆ ಬಿಗ್‌ಬಾಸ್ ಮಾಜಿ ಸ್ಪರ್ಧಿ, ಡ್ಯಾನ್ಸರ್ ಕಿಶನ್ ಬಿಳಗಲಿ (Kishen Bilagali) ಸ್ಯಾಂಡಲ್‌ವುಡ್ ‘ಟೋಬಿ’ ಸುಂದರಿ ಚೈತ್ರಾ ಆಚಾರ್ (Chaithra J Achar) ಜತೆ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ್ದರು.
ಇದನ್ನೂ ಓದಿ: Niveditha Shivarajkumar: ʻಫೈರ್ ಫ್ಲೈ’ ಸಿನಿಮಾಗೆ ‘ಹೆಂಗೆ ನಾವು’ ಹುಡುಗಿ ನಾಯಕಿ! ಯಾವಾಗ ತೆರೆಗೆ?