Site icon Vistara News

Actor Darshan: ಬಂಧಿತರಲ್ಲಿ ಹಲವರಿಗೆ ದರ್ಶನ್ ನೇರ ಪರಿಚಯವೇ ಇಲ್ವಂತೆ; ʻದಚ್ಚುʼ ಅರೆಸ್ಟ್ ಆದ ಬಳಿಕವೇ ಮುಖಾಮುಖಿ!

Actor Darshan of many acquaintance unknown of darshan

ಬೆಂಗಳೂರು: ನಟ ದರ್ಶನ್‌ (Actor Darshan) ಟೀಮ್‌ನಿಂದ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Murder Case) ಮೊಬೈಲ್‌ಗಾಗಿ (mobile phone) ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾಗಿ ಹತ್ತು ದಿನ ಕಳೆಯುತ್ತಿದ್ದರೂ ಮೊಬೈಲ್ ಪತ್ತೆಯಾಗಿಲ್ಲ. ಇನ್ನು ಕೊಲೆ ಕೇಸ್‌ಗೆ ಸಂಬಂಧಪಟ್ಟಂತೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಭಾಗಿಯಾದವರ ಸಂಖ್ಯೆ 19 ಮಂದಿ. 19 ಮಂದಿಯಲ್ಲಿ ಹಲವರಿಗೆ ದರ್ಶನ್‌ ಅವರ ನೇರ ಪರಿಚಯವೇ ಇಲ್ಲ ಎಂದು ತಿಳಿದು ಬಂದಿದೆ.

ಹಲವರು ದರ್ಶನ್‌ ಅವರನ್ನು ಭೇಟಿಯಾಗಿದ್ದೇ ಕೊಲೆ ಕೇಸ್‌ನಲ್ಲಿ ದರ್ಶನ್ ಅರೆಸ್ಟ್ ಆದ ಬಳಿಕ ಎನ್ನಲಾಗಿದೆ. ದರ್ಶನ್‌ಗಾಗಿ ಕೃತ್ಯ ಎಸಗಿದವರಲ್ಲಿ ಕೆಲವರು ದರ್ಶನ್‌ ಅವರನ್ನು ಮುಖಾಮುಖಿ ನೋಡಿದ್ದೇ ಪೊಲೀಸ್ ಸ್ಟೇಷನ್ ನಲ್ಲಿ ಎನ್ನಲಾಗಿದೆ. ಪ್ರಕರಣದಲ್ಲಿ ಪವಿತ್ರಾಗೌಡ, ಪವಿತ್ರಾಗೌಡ ಮ್ಯಾನೇಜರ್ ಪವನ್‌, ಸ್ಟೋನಿಬ್ರೂಕ್ಸ್ ಮಾಲೀಕ ವಿನಯ್, ದರ್ಶನ್ ಮ್ಯಾನೇಜರ್ ನಾಗರಾಜ್, ಸ್ಕಾರ್ಪಿಯೋ ಕಾರು ಮಾಲೀಕ ಪುನೀತ್, ವಿನಯ್,ದೀಪಕ್, ಪ್ರದೋಶ್, ಚಿತ್ರದುರ್ಗದ ರಾಘವೇಂದ್ರ, ಮಂಡ್ಯದ ನಂದೀಶ್ ಮಾತ್ರ ದರ್ಶನ್‌ಗೆ ನೇರ ಪರಿಚಯ ಇದ್ದರಂತೆ. ರಾಘವೇಂದ್ರ ಜತೆ ಕಿಡ್ನಾಪ್ ಮಾಡಿದ್ದ ಅನುಕುಮಾರ್, ಈಟಿಯೋಸ್ ಕಾರು ಚಾಲಕ ರವಿ, ಲಕ್ಷ್ಮಣ್, ಜಗದೀಶ್ ಇವರುಗಳು ದರ್ಶನ್ ಅವರನ್ನು ಕಂಡಿದ್ದೆ ಪೊಲೀಸ್ ಸ್ಟೇಷನ್‌ನಲ್ಲಿ ಎಂದು ತಿಳಿದು ಬಂದಿದೆ.

ದರ್ಶನ್‌ಗಾಗಿ ರೇಣುಕಾಸ್ವಾಮಿ ಮೃತ ದೇಹ ಬಿಸಾಡಿದ್ದ ಕೇಶವ್, ಕಾರ್ತಿಕ್, ನಿಖಿಲ್ ನಾಯಕ್
ದರ್ಶನ್‌ ಅವರನ್ನು ಮೊದಲು ಭೇಟಿಯಾಗಿದ್ದು ಕೊಲೆಯಾದ ಮಾರನೇ ದಿನ ಅಂದರೆ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಎನ್ನಲಾಗಿದೆ. ದರ್ಶನ್ ತಂಗಿದ್ದ ಮೈಸೂರಿನ ಖಾಸಗಿ ಹೋಟೆಲ್‌ಗೆ ಕೇಶವ್, ಕಾರ್ತಿಕ್, ನಿಖಿಲ್ ರನ್ನು ಕರೆದೊಯ್ದು ದೀಪಕ್ ಭೇಟಿ ಮಾಡಿಸಿದ್ದ . ದೀಪಕ್ ಸೂಚನೆಯಂತೆ ರೇಣುಕಾಸ್ವಾಮಿ ಮೃತದೇಹವನ್ನು ಸುಮ್ಮನಹಳ್ಳಿ ರಾಜಕಾಲುವೆಗೆ ಬಿಸಾಡಿದ್ರು. ನಂತರ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಹೋಗಿ ಹಣಕಾಸಿನ ವಿಚಾರಕ್ಕೆ ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾಗಿ ಸರೆಂಡರ್ ಆಗಿದ್ದರು ಕೇಶವ್, ಕಾರ್ತಿಕ್‌, ನಿಖಿಲ್‌ನಾಯಕ್.

ಇದನ್ನೂ ಓದಿ: Actor Darshan: ಹತ್ಯೆಯಾದ ರೇಣುಕಾಸ್ವಾಮಿ ಮೊಬೈಲ್‌ ಹೋಯಿತೆಲ್ಲಿ?

ಮೊಬೈಲ್ ಪತ್ತೆಯಾಗಿಲ್ಲ

ಕಳೆದ ಹತ್ತು ದಿನಗಳಿಂದ ಹುಡುಕಾಡಿದರೂ ರೇಣುಕಾಸ್ವಾಮಿ ಮೊಬೈಲ್ ಪತ್ತೆಯಾಗಿಲ್ಲ. ರೇಣುಕಾಸ್ವಾಮಿ ಮೊಬೈಲ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದೆ. ಅಶ್ಲೀಲ ಕಮೆಂಟ್ ಸಂಬಂಧಪಟ್ಟಂತೆ ಇದರಿಂದ ಸಾಕ್ಷಿಗಳನ್ನು ರಿಟ್ರೀವ್‌ ಮಾಡಬೇಕಾಗಿದೆ. ಆರೋಪಿಗಳು ರೇಣುಕಾಸ್ವಾಮಿ ಮೊಬೈಲ್‌ನಲ್ಲೇ ಕ್ಷಮಾಪಣಾ ವಿಡಿಯೋ ಮಾಡಿಸಿದ್ದರು. ಆರ್‌ಆರ್ ನಗರ ಪಟ್ಟಣಗೆರೆ ಶೆಡ್, ಕಿಡ್ನಾಪ್ ಮಾಡಿದ ರವಿಯ ಈಟಿಯೋಸ್ ಕಾರು ಸೇರಿ ಹಲವು ಕಡೆ ಹುಡುಕಿದರೂ ಮೊಬೈಲ್ ಪತ್ತೆಯಾಗಿಲ್ಲ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆದರೆ, ವಿಚಾರಣೆ ವೇಳೆ ಮೊಬೈಲ್‌ ಪಾಸ್‌ವರ್ಡ್‌ (Mobile Password) ನೀಡಲು ದರ್ಶನ್‌ ಮತ್ತು ಆತನ ಗ್ಯಾಂಗ್‌ ನಿರಾಕರಿಸುತ್ತಿದೆ. ಇದರಿಂದ ಪೊಲೀಸರ ತನಿಖೆಗೆ ಅಡಚಣೆಯಾಗುತ್ತಿದೆ ಎಂದು ತಿಳಿದುಬಂದಿದೆ.

ದರ್ಶನ್‌ & ಗ್ಯಾಂಗ್‌ನಿಂದ ಪೊಲೀಸರು ಇದುವರೆಗೆ 10 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಡೇಟಾ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಇನ್ನು ಕೆಲವು ಮೊಬೈಲ್‌ಗಳಲ್ಲಿದ್ದ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳು ಇನ್ನೂ ಕೆಲವು ಮೊಬೈಲ್‌ಗಳ ಪಾಸ್‌ವರ್ಡ್‌ ನೀಡುತ್ತಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇಷ್ಟಾದರೂ ಪಟ್ಟು ಬಿಡದ ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Exit mobile version