ಬೆಂಗಳೂರು: ಬಹಳ ದಿನಗಳ ಬಳಿಕ ʻಲವ್ಲಿ ಸ್ಟಾರ್ ಪ್ರೇಮ್ʼ (Nenapirali Prem) ಪ್ರಮುಖ ಪಾತ್ರದಲ್ಲಿ ನಟಿಸಿರುವ ಕನ್ನಡ ಸಿನಿಮಾವೊಂದು ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈ ಚಿತ್ರದಲ್ಲಿ ಟಗರು ಪುಟ್ಟಿ ಮಾನ್ವಿತಾ ಕಾಮತ್ (manvita kamath) ಕೂಡ ನಟಿಸುತ್ತಿದ್ದಾರೆ. ಈ ಜೋಡಿ ಇದೇ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದೆ. ಆ ಸಿನಿಮಾದ ಹೆಸರು ‘ಅಪ್ಪಾ ಐ ಲವ್ ಯೂ’.
ಅಥರ್ವ್ ಆರ್ಯ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ ‘ಅಪ್ಪಾ ಐ ಲವ್ ಯೂ’ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಏಪ್ರಿಲ್ 12ಕ್ಕೆ ಅಥರ್ವ್ ಎರಡನೇ ಪ್ರಯತ್ನಕ್ಕೆ ತೆರೆಗೆ ಬರುತ್ತಿದೆ. ಟೈಟಲ್ ಹೇಳುವಂತೆ ಇದು ತಂದೆಯ ಮಹತ್ವ ಸಾರುವ ಸಿನಿಮಾ. ಈ ಸಿನಿಮಾದಲ್ಲಿ ತಂದೆಯಾಗಿ ತಬಲಾನಾಣಿ ಬಣ್ಣ ಹಚ್ಚಿದ್ದಾರೆ.
ಪ್ರೇಮ್ ಹಾಗೂ ಮಾನ್ವಿತಾ ಕಾಮತ್ ಜತೆಗೆ ಸಂಜಯ್, ಜೀವಿತಾ, ರಂಗೀತರಂಗ ಅರವಿಂದ್ ರಾವ್ , ವಿಜಯ್ ಚೆಂಡೂರ್, ಬಲ ರಾಜ್ವಾಡಿ, ಮಿಮಿಕ್ರಿ ಗೋಪಿ, ಅರುಣ ಬಾಲರಾಜ್, ವರ್ಧನ್ ತೀರ್ಥಹಳ್ಳಿ, ಗಿರೀಶ್ ಜತ್ತಿ, ಪಟೇಲ್ ಅಣ್ಣಯ್ಯಪ್ಪ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ.
‘ಅಪ್ಪಾ ಐ ಲವ್ ಯೂ’ ಸಿನಿಮಾಗೆ (Nenapirali Prem) ನಾಗಾರ್ಜುನ್ ಆರ್ ಡಿ ಛಾಯಾಗ್ರಹಣ, ವೇಧಿಕ್ ವೀರ ಸಂಕಲನ, ಗಂಗಮ್ ರಾಜು ಕೊರಿಯೋಗ್ರಫಿ ಚಿತ್ರಕ್ಕಿದೆ. ಆಕಾಶ್ ಪರ್ವ ಸಂಗೀತ ನಿರ್ದೇಶನದ ಹಾಡುಗಳಿಗೆ ಡಾ.ನಾಗೇಂದ್ರ ಪ್ರಸಾದ್, ಕವಿರಾಜ್, ಕೆ. ಕಲ್ಯಾಣ್, ಕಿನ್ನಾಳ್ ರಾಜ್ ಸಾಹಿತ್ಯ ಬರೆದಿದ್ದಾರೆ. K.R.S ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಬೆಂಗಳೂರು, ಮೈಸೂರು, ಮಂಗಳೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗಿದೆ.
ಇದನ್ನೂ ಓದಿ: Dolly Dhananjay: ಸೂರ್ಯಕಾಂತಿ ನಾನು ಎಂದು ಕುಣಿದ ಲವ್ಲಿಸ್ಟಾರ್ ಪುತ್ರಿ!
ಸಿನಿಮಾ ಬಗ್ಗೆ ಈ ಮೊದಲು ಸಾಂಗ್ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರೇಮ್ ಮಾತನಾಡಿ ʻʻನೆನಪಿರಲಿ ಪ್ರೇಮ್ ಮಾತನಾಡಿ, ʻʻಸಿನಿಮಾದಲ್ಲಿ 22 ವರ್ಷ ಪೂರೈಸಿದ್ದೇನೆ ಅಂದರೆ ಅದು ನಮ್ಮ ತಂದೆಯಿಂದ ಎಂದು ಹೆಮ್ಮೆಯಿಂದ ಹೇಳಲು ಇಷ್ಟಪಡುತ್ತೇನೆ. ಕಾರಣ ಏನೆಂದರೆ ಸಿನಿಮಾ ಹೀರೊ ಆಗಬೇಕು ಎಂದು ಕನಸು ಕಟ್ಟಿಕೊಂಡಾಗ ಗಾಂಧಿನಗರದಲ್ಲಿ ಫೋಟೋ ಇಟ್ಟುಕೊಂಡು ತಿರುಗಾಡುತ್ತಿದ್ದೆ. ಮದುವೆ ಆಗಿತ್ತು. ಆಗ ತಾನೇ ಮಗಳು ಹುಟ್ಟಿದ್ದಳು. ಆಗ ಕಷ್ಟದಲ್ಲಿ ಇದ್ದೆ. ಕೆಲಸ ಮಾಡು ಎಂದು ಎಲ್ಲರು ಹೇಳುವವರು. ಆಗ ನಮ್ಮತಂದೆ ಬಳಿ ಕೆಲಸ ಹೋಗುತ್ತೇನೆ ಎಂದೆ. ನನ್ನ ತಂದೆ ಹೇಳಿದ ಒಂದು ಮಾತು ನಾನು ಸ್ಟಾರ್ ಆಗಿ ಇಲ್ಲಿ ನಿಂತಿದ್ದೇನೆ. ತಬಲನಾಣಿ ಸಿನಿಮಾರಂಗದಲ್ಲಿ ಆದ ಛಾಪೂ ಮೂಡಿಸಿದ್ದಾರೆ. ಹೆಮ್ಮೆಯಾಗುತ್ತದೆ ಈಗ ಸ್ನೇಹಿತರ ಜೊತೆಗೂಡಿ ಅವರು ನಿರ್ಮಾಪಕ ಆಗಿದ್ದಾರೆ. ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅವರ ಮೊದಲ ಪ್ರೊಡಕ್ಷನ್ ನಲ್ಲಿ ಹೊಸಬರಿಗೆ ಅವಕಾಶ ಕೊಟ್ಟಿದ್ದಾರೆ. ಅಥರ್ವ ಆರ್ಯ ಮೊದಲ ಸಿನಿಮಾದಲ್ಲಿ ಅದ್ಭುತ ಕಂಟೆಂಟ್ ತೆಗೆದುಕೊಂಡು ಬಂದಿದ್ದಾರೆ. ನಮಗೆಲ್ಲರಿಗೂ ಅವಕಾಶ ಕೊಟ್ಟಿದ್ದಾರೆ. ಇಡೀ ತಂಡಕ್ಕೆ ಒಳ್ಳೆಯದಾಗಲಿʼʼ ಎಂದಿದ್ದರು.