ಬೆಂಗಳೂರು: ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಮತ್ತು ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ ಪಿ ಸುಶೀಲಾ ಅವರನ್ನು ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. 86 ವರ್ಷದ ಪಿ ಸುಶೀಲಾ ಅವರು ಹೊಟ್ಟೆ ನೋವಿನಿಂದ ನಿನ್ನೆ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ವೈದ್ಯರು ಗಾಯಕಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
ವರದಿಗಳ ಪ್ರಕಾರ, ನಿನ್ನೆ ಹೊಟ್ಟೆ ನೋವಿನಿಂದ ಪಿ ಸುಶೀಲಾ ಆಸ್ಪತ್ರೆಗೆ ದಾಖಲಾಗಿದ್ದರು. ಸುಮಧುರ ಕಂಠದ ಗಾಯಕಿ ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಆಕೆ ಬೇಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬೇಕೆಂದು ಚಿತ್ರರಂಗ ಮತ್ತು ಅಭಿಮಾನಿಗಳು ಬಯಸುತ್ತಿದ್ದಾರೆ.
ಇದನ್ನೂ ಓದಿ: Kundapura Kannada Habba: ನನ್ನ ಸಿನಿಮಾ ಕಥೆಗಳಿಗೆ ಊರು, ಯಕ್ಷಗಾನವೇ ಪ್ರೇರಣೆ; ರಿಷಬ್ ಶೆಟ್ಟಿ
ಗಾಯನಕ್ಕಾಗಿ 5 ರಾಷ್ಟ್ರಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಗೌರವಗಳನ್ನು ಪಿ. ಸುಶೀಲ ಪಡೆದಿದ್ದಾರೆ. ವಿವಿಧ ಭಾಚೆಗಳಲ್ಲಿ ಹಾಡುಗಳನ್ನು ಹಾಡಿ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್, ಏಷಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ. 1935ರ ನವೆಂಬರ್ 13ರಂದು ಆಂಧ್ರ ಪ್ರದೇಶದ ವಿಜಯನಗರಂನಲ್ಲಿ ಜನಿಸಿದ ಸುಶೀಲ ಎಂಟನೇ ತರಗತಿಗೆ ಓದು ನಿಲ್ಲಿಸಿದರು. ಆದರೆ ಸಂಗೀತದಲ್ಲಿ ಡಿಪ್ಲೋಮಾ ಪದವಿ ಪಡೆದರು. ಪೆಂಡ್ಯಾಲ ನಾಗೇಶ್ವರರಾಯರು ಆಕೆಯನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದರು. ‘ಇದೇನ ಸಭ್ಯತೆ ಇದೇನ ಸಂಸ್ಕೃತಿ, ‘ಹದಿನಾಲ್ಕು ವರ್ಷ ವನವಾಸದಿಂದ ಮರಳಿ ಬಂದಳು ಸೀತೆ’, ‘ಫಲಿಸಿತು ಒಲವಿನ ಪೂಜಾ ಫಲ’, ‘ಒಲವೆ ಜೀವನ ಸಾಕ್ಷಾತ್ಕಾರ’ ಹೀಗೆ ಕನ್ನಡದಲ್ಲೇ 5000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.