ಬೆಂಗಳೂರು: ಮಾಡೆಲ್ ಪವಿತ್ರ ಗೌಡ ಅವರು ಕೆಲವು ದಿನಗಳ ಹಿಂದೆಯಷ್ಟೇ ನಟ ದರ್ಶನ್ (Darshan Thoogudeepa) ಜತೆಗಿನ ಫೋಟೊಗಳನ್ನು ಹಂಚಿಕೊಂಡಿದ್ದರು. ಇದಾದ ಮೇಲೆ ಆ ಪೋಸ್ಟ್ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಖಡಕ್ ಆಗಿಯೇ ಪ್ರತಿಕ್ರಿಯಿಸಿದ್ದರು. ಆದರೀಗ ಈ ಪೋಸ್ಟ್ ವಿರುದ್ಧ ಈಗ ಪವಿತ್ರಾ ಗೌಡ ಅಸಮಾಧಾನ ಹೊರಹಾಕಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರನ್ನು ಟ್ಯಾಗ್ ಮಾಡಿ, ಎಚ್ಚರಿಕೆಯ ಸಂದೇಶವನ್ನು ಬರದು ಪೋಸ್ಟ್ ಮಾಡಿದ್ದಾರೆ.
ಪವಿತ್ರ ಗೌಡ ತಮ್ಮ ಇನ್‌ಸ್ಟಾ ಪೋಸ್ಟ್‌ನಲ್ಲಿ ʻʻನಾನು ಪವಿತ್ರ ಗೌಡ, ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ ಜೀವನದಲ್ಲಿ ಉಂಟಾದ ಸಮಸ್ಯೆಗಳಿಂದ ಇಂದು ನಾನು ಸಂಜಯ್ ಅವರಿಂದ ಡಿವೋರ್ಸ್ ಪಡೆದಿದ್ದೇನೆ. ಇಲ್ಲಿಯವರಗೂ ಖುಷಿ ಗೌಡ ದರ್ಶನ್ ಶ್ರೀನಿವಾಸರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ!! ನಾನು ಹಾಗೂ ದರ್ಶನ್ ಶ್ರೀನಿವಾಸರವರು ಕಳೆದ 10 ವರ್ಷಗಳಿಂದ ಜತೆಯಲ್ಲಿ ಸಂತೋಷವಾಗಿದ್ದೀವಿ. ನಾನು ಯಾವುದೇ ಖಾಸಗಿ ಅವಶ್ಯಕತೆ ಅಥವಾ ಖಾಸಗಿ ಉದ್ದೇಶಗಳಿಗಾಗಿ ಇಲ್ಲಿಲ್ಲ. ನನ್ನದು ಏನಿದ್ದರೂ ಪರಿಪೂರ್ಣ ಪ್ರೀತಿ ಮತ್ತು ಕಾಳಜಿ, ಅದೂ ಕಳೆದ 10 ವರ್ಷದಿಂದ, ಅದು ಸುಲಭದ್ದಾಗಿರಲಿಲ್ಲ. ಈ ವಿಷಯ ವಿಜಯಲಕ್ಷ್ಮಿ ಅವರಿಗೂ ಮೊದಲೇ ತಿಳಿದಿರುತ್ತದೆ. ಈ ವಿಚಾರವಾಗಿ ವಿಜಯಲಕ್ಷ್ಮಿಯವರೆ ನನಗೆ ಹಲವಾರು ಸಾರಿ ಕರೆ ಮಾಡಿ ನನ್ನ ಬಳಿ ಮಾತನಾಡಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಇಲ್ಲವೆಂದು ತಿಳಿಸಿರುತ್ತಾರೆ. (ಅದರ ಕೆಲವು ದಾಖಲೆಗಳು ಹಾಗೂ ನನ್ನ ಡಿವೋರ್ಸ್ ಡಾಕ್ಯುಮೆಂಟ್ ಸಮಯ ಬಂದಾಗ ಹಂಚಿಕೊಳ್ಳುತ್ತೇನೆ). ಇದೀಗ ವಿಜಯಲಕ್ಷ್ಮಿರವರು ನನ್ನ ವಿರುದ್ಧವಾಗಿ ಪೋಸ್ಟ್‌ಗಳನ್ನು ಹಾಕುತ್ತಿರುವುದು ನನಗೆ ಬೇಸರ ಉಂಟು ಮಾಡಿದೆ. ನನ್ನ ಹಾಗೂ ವಯಸ್ಸಿಗೆ ಬಂದ ನನ್ನ ಮಗಳಾದ ಖುಷಿ ಗೌಡಳ ಬಗ್ಗೆ, ಬಹಳಷ್ಟು ಜನ ಕೆಟ್ಟ ಪದಗಳಿಂದ ನಿಂದಿಸುವುದು ನನಗೆ ಮಾನಸಿಕ ನೋವು ಉಂಟು ಮಾಡಿದೆ. ನನ್ನ ಜೀವನದ ಹಳೆಯ ವಿಚಾರಗಳನ್ನು ಹಾಗೂ ನನ್ನ ವೈಯಕ್ತಿಕ ಫೋಟೊಗಳನ್ನು ಪೋಸ್ಟ್ ಮಾಡುವ ಹಕ್ಕು ಯಾರಿಗೂ ಇರುವುದಿಲ್ಲ. ಈ ಮೂಲಕ ನಾನು ಹೇಳುವುದೇನೆಂದರೆ ಕಾನೂನು ಮೂಲಕ ಕ್ರಮ ತೆಗೆದುಕೊಳ್ಳುವ ಹಕ್ಕು ನನಗೂ ಇದೆ. ಆದರೂ ನಾನು ಈ ವಿಚಾರವನ್ನು ದೊಡ್ಡದು ಮಾಡುತ್ತಿಲ್ಲ. ಎಚ್ಚರ ಇರಲಿ. ಕಾರಣ ನಾನು ನನ್ನನ್ನು ಪ್ರೀತಿಸುವವರ ಜತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆʼʼಎಂದು ವಿಜಯಲಕ್ಷ್ಮೀ ಅವರನ್ನು ಟ್ಯಾಗ್ ಮಾಡಿದ್ದಾರೆ.
ಇದನ್ನೂ ಓದಿ: Darshan Thoogudeepa: ದರ್ಶನ್ ಜತೆ ಪದೇಪದೆ ಕಾಣಿಸಿಕೊಳ್ಳುತ್ತಿರುವ ಈ ಪವಿತ್ರಗೌಡ ಯಾರು?
ಪವಿತ್ರಾ ಗೌಡ ಪೋಸ್ಟ್ (Darshan Thoogudeepa)
ವಿಜಯಲಕ್ಷ್ಮಿ ಬರೆದುಕೊಂಡಿದ್ದೇನು?
ವಿಜಯಲಕ್ಷ್ಮಿ ಈ ಬಗ್ಗೆ ಪೋಸ್ಟ್ ಮಾಡಿ ʻʻಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುವ ಮೊದಲು ಈ ಮಹಿಳೆಗೆ ಸೆನ್ಸ್ ಮೊದಲು ಇರಬೇಕು. ಇದೀಗ ಆಕೆಯ ಕ್ಯಾರೆಕ್ಟರ್ ಹಾಗೂ ನೈತಿಕ ನಿಲುವಿನ ಬಗ್ಗೆ ತೋರಿಸುತ್ತಿದೆ. ವಿವಾಹಿತನೆಂದು ತಿಳಿದರೂ ಕೂಡ ತಮ್ಮ ವೈಯಕ್ತಿಕ ಅಗತ್ಯತೆಯಿಂದ ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ಈ ಎಲ್ಲ ಫೋಟಗಳು ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು ಖುಷಿ ಗೌಡ ಅವರದ್ದು. ನಾನು ಸಾಮಾನ್ಯವಾಗಿ ವೈಯಕ್ತಿಕ ವಿಷಯಗಳ ಬಗ್ಗೆ ಧ್ವನಿ ಎತ್ತಲು ಸೋಷಿಯಲ್ ಮೀಡಿಯಾವನ್ನು ಬಖಸುವುದಿಲ್ಲ. ಆದರೆ ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಇಡೀ ಸಮಾಜಕ್ಕೆ ವಿಭಿನ್ನ ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಅಂದರೆ ಸಂಜಯಸಿಂಗ್ , ಖುಷಿಗೌಡ, ಪವಿತ್ರ ಗೌಡ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದುʼʼಎಂದು ಬರೆದುಕೊಂಡಿದ್ದರು.