Site icon Vistara News

Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

Covishield vaccine Puneeth Rakumar

ಬೆಂಗಳೂರು: ಭಾರತದಲ್ಲಿ ಕೊರೊನಾ ವೈರಸ್‌ (Corona Virus) ಎದುರಿಸಲು ಕೋವಿಶೀಲ್ಡ್‌ ಲಸಿಕೆ (Covishield vaccine) ತೆಗೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವ (blood clotting) ಅಡ್ಡ ಪರಿಣಾಮದ (Side effects) ಅಪಾಯದ ಸಾಧ್ಯತೆಗಳು ತೀರಾ ಕಡಿಮೆ ಎಂದು ಭಾರತದ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ, (Covishield vaccine) ಮಾಜಿ ICMR ವಿಜ್ಞಾನಿ ಡಾ. ರಾಮನ್ ಗಂಗಾಖೇಡ್ಕರ್ ಹೇಳಿಕೆ ನೀಡಿದ್ದಾರೆ. ಆದರೂ ಕೊರೊನಾ ಲಸಿಕೆ ತೆಗೆದುಕೊಂಡ ಬಳಿಕ ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ ಎಂಬ ವರದಿಗಳೂ ಇವೆ. ಇದೀಗ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರ ಕುರಿತು ಪೋಸ್ಟ್‌ ವೊಂದು ವೈರಲ್‌ ಆಗುತ್ತಿದೆ. ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದಲೇ ಪುನೀತ್​ಗೆ ಹೃದಯಾಘಾತ ಆಯಿತು ಎಂದು ಕೆಲವರು ಆರೋಪಿಸಿದ್ದಾರೆ.

ಪುನೀತ್ ರಾಜ್‌ಕುಮಾರ್‌ ಅವರು 2021ರ ಅಕ್ಟೋಬರ್‌ 29ರಂದು ಹೃದಯಾಘಾತದಿಂದ ನಿಧನರಾದರು. ಇದೀಗ ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದಲೇ ಪುನೀತ್​ಗೆ ಹೃದಯಾಘಾತ ಆಯಿತು ಎಂದು ಕೆಲವರು ಆರೋಪಿಸಿದ್ದಾರೆ. ಏಕೆಂದರೆ ಈ ಕುರಿತ ಹಳೆಯ ಟ್ವೀಟ್‌ವೊಂದು ವೈರಲ್‌ ಆಗಿದೆ. ಬೃಂದಾವನಾ ಹೆಸರಿ ಖಾತೆಯಿಂದ ಅಭಿಮಾನಿಯೊಬ್ಬರು ʻʻ‘ನೀವು 45 ವರ್ಷ ಮೇಲ್ಪಟ್ಟಿದ್ದರೆ ವ್ಯಾಕ್ಸಿನ್ ಹಾಕಿಸಿಕೊಳ್ಳಿ. ಕೋವಿಶೀಲ್ಡ್ ತೆಗೆದುಕೊಳ್ಳಬೇಡಿ. 45 ವರ್ಷ ಮೇಲ್ಪಟ್ಟವರಿಗೆ ಇದು ಒಳ್ಳೆಯದಲ್ಲ’ ಎಂದು ಬರೆಯಲಾಗಿತ್ತುʼʼಸದ್ಯ ಈ ಪೋಸ್ಟ್ ಮತ್ತೆ ವೈರಲ್ ಆಗುತ್ತಿದೆ.

ಇದನ್ನೂ ಓದಿ: Ashwini Puneeth Rajkumar: ಐಶಾರಾಮಿ ಆಡಿ ಕ್ಯೂ7 ಕಾರು ಖರೀದಿಸಿದ ಅಶ್ವಿನಿ ಪುನೀತ್​ರಾಜ್​ಕುಮಾರ್

ಕೋವಿಶೀಲ್ಡ್ ಅನ್ನು ಸ್ವೀಕರಿಸುವ 10 ಲಕ್ಷ ಜನರಲ್ಲಿ ಏಳರಿಂದ ಎಂಟು ವ್ಯಕ್ತಿಗಳು ಮಾತ್ರ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮವನ್ನು ಅನುಭವಿಸುತ್ತಾರೆ. ಭಾರತದಲ್ಲಿ ಇದರ ಪ್ರಮಾಣ ಇನ್ನೂ ಕಡಿಮೆ ಇದೆ ಎಂದು ವರದಿಯಾಗಿದೆ. ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಅಡ್ಡ ಪರಿಣಾಮ ಕಾಣಿಸಿಕೊಳ್ಳಬಹುದು ಎಂದು ಮೊನ್ನೆ ಅದರ ತಯಾರಿಕಾ ಕಂಪನಿ ಅಸ್ಟ್ರಾಜೆನೆಕಾ ಯುಕೆ ನ್ಯಾಯಾಲಯದಲ್ಲಿ ಒಪ್ಪಿಕೊಂಡ ಬಳಿಕ ಈ ಬಗ್ಗೆ ಆತಂಕ ಮೂಡಿತ್ತು.

ಬ್ರಿಟನ್‌ನ ಮಾಧ್ಯಮ ವರದಿಗಳು ಉಲ್ಲೇಖಿಸಿರುವ ನ್ಯಾಯಾಲಯದ ದಾಖಲೆಗಳ ಪ್ರಕಾರ, ತನ್ನ ಕೋವಿಡ್ ಲಸಿಕೆ ಅಪರೂಪವಾಗಿ ರಕ್ತ ಹೆಪ್ಪುಗಟ್ಟುವಿಕೆಯನ್ನು ಒಳಗೊಂಡ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿದೆ. ಈ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಸಹ ಉತ್ಪಾದಿಸಿದೆ. ಇದನ್ನು ಕೋವಿಶೀಲ್ಡ್ ಎಂದು ಕರೆಯಲಾಗುತ್ತದೆ. ಭಾರತೀಯ ಜನಸಂಖ್ಯೆಯ ಕನಿಷ್ಠ 90 ಪ್ರತಿಶತದಷ್ಟು ಜನರು ಈ ಲಸಿಕೆಯನ್ನು ಪಡೆದಿದ್ದಾರೆ. ಭಾರತದಲ್ಲಿ ಸುಮಾರು 175 ಕೋಟಿ ಕೋವಿಶೀಲ್ಡ್‌ ಲಸಿಕೆ ಡೋಸ್‌ ನೀಡಲಾಗಿದೆ.

Exit mobile version