Site icon Vistara News

Radhika Pandit: ಅಭಿಮಾನಿಗಳ ಪ್ರಶ್ನೆ ಎದುರಿಸಲು ನಟಿ ರಾಧಿಕಾ ಪಂಡಿತ್ ಸಿದ್ಧ; ಹೊಸ ಸಿನಿಮಾ ಘೋಷಿಸ್ತಾರಾ ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ?

Radhika Pandit

Radhika Pandit

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರಾಧಿಕಾ ಪಂಡಿತ್‌ (Radhika Pandit) ಕನ್ನಡದ ಪ್ರತಿಭಾವಂತ ಕಲಾವಿದೆ. ಹಲವು ಚಿತ್ರಗಳಲ್ಲಿ ನಾಯಕಿಯಾಗಿ ಮಿಂಚಿದ ಅವರು ತಮ್ಮ ಅಭಿನಯ ಸಾಮರ್ಥ್ಯದಿಂದಲೇ ಅಭಿಮಾನಿಗಳ ಮನ ಗೆದ್ದವರು. ರಾಜ್ಯ ಪ್ರಶಸ್ತಿ ಪುರಸ್ಕೃತ ನಟಿ ಸದ್ಯ ನಟನೆಯಿಂದ ವಿರಾಮ ತೆಗೆದುಕೊಂಡಿದ್ದಾರೆ. ರಾಕಿಂಗ್‌ ಸ್ಟಾರ್‌ ಯಶ್‌ (Yash) ಜತೆ ಸಪ್ತಪದಿ ತುಳಿದ ಬಳಿಕ ಅವರು ಅಭಿನಯದಿಂದ ವಿಮುಖರಾಗಿದ್ದಾರೆ. ಅದರಲ್ಲಿಯೂ ಎರಡು ಮಕ್ಕಳಾದ ಬಳಿಕ ಅವರು ಸಿನಿಮಾ ರಂಗದಿಂದ ದೂರ ಉಳಿದು ಅವರ ಲಾಲನೆ-ಪಾಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯ ಅವರು ನಟನೆಗೆ ಮರಳಲಿದ್ದಾರಾ? ಎನ್ನುವ ಪ್ರಶ್ನೆ ಮೂಡಿದೆ. ಅದಕ್ಕೆ ಕಾರಣವಾಗಿದ್ದು ರಾಧಿಕಾ ಪಂಡಿತ್‌ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದ ಪೋಸ್ಟ್‌. ಅದೇನು ಎನ್ನುವ ವಿವರ ಇಲ್ಲಿದೆ.

ಇದನ್ನೂ ಓದಿ: Radhika Pandit: ಹೇಗಿತ್ತು ರಾಧಿಕಾ ಪಂಡಿತ್‌ ಬರ್ತಡೇ ಸೆಲೆಬ್ರೇಷನ್‌? ಇಲ್ಲಿದೆ ವಿಡಿಯೊ!

Exit mobile version