ಬೆಂಗಳೂರು: ರಕ್ಷಿತ್ ಶೆಟ್ಟಿ ( Rakshit Shetty) ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ʻರಿಚರ್ಡ್ ಆಂಟನಿʼ (Richard Anthony) ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ. ವರದಿ ಪ್ರಕಾರ ಈ ಸಿನಿಮಾದಲ್ಲಿ ಕರಾವಳಿಯ ಕಲಾವಿದರು ಮಾತ್ರ ಮುಖ್ಯವಾಗಿ ನಟಿಸಲಿದ್ದಾರಂತೆ. ಜತೆಗೆ 2025ರ ವೇಳೆಗೆ ಸಿನಿಮಾ ತೆರೆಗೆ ಬರಲಿದೆ ಎಂದು ವರದಿಯಾಗಿದೆ.
ಮೂಲಗಳ ಪ್ರಕಾರ ರಿಚರ್ಡ್ ಆಂಟನಿ ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸಗಳು ಆರಂಭಗೊಂಡಿವೆ. ರಕ್ಷಿತ್ ಶೆಟ್ಟಿಯವರು ಈಗಾಗಲೇ ಉಡುಪಿಗೆ ಶಿಫ್ಟ್ ಆಗಿದ್ದಾರೆ. ಅವರ ಟೀಂ ಕೂಡ ಶೀಘ್ರವೇ ಉಡುಪಿಗೆ ಬರಲಿದೆ. ಮೇ 1ರಿಂದ ಸಿನಿಮಾದ ಪ್ರೀ ಪ್ರೊಡಕ್ಷನ್ ಕಾರ್ಯಗಳು ನೇರವೇರಲಿದೆಯಂತೆ. ಶೇ. 50ರಷ್ಟು ಸಿನಿಮಾ ಕರಾವಳಿಯಲ್ಲಿಯೇ ಶೂಟಿಂಗ್ ನಡಯಲಿದ್ದು, ಕೆಲವು ಸೀಕ್ವೆನ್ಸ್‌ಗಳು ಗೋಕರ್ಣ, ಕೇರಳದಲ್ಲಿ ಶೂಟ್ ಆಗಬಹುದು ಎನ್ನಲಾಗಿದೆ.
ಇದನ್ನೂ ಓದಿ: Rakshit Shetty: ಕಿರುತೆರೆಗೂ ಲಗ್ಗೆ ಇಟ್ಟ ʼಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿʼ ಚಿತ್ರ; ಎಲ್ಲಿ, ಯಾವಾಗ ಪ್ರಸಾರ?
ರಕ್ಷಿತ್ ಶೆಟ್ಟಿ ಅವರು ಈ ಸಿನಿಮಾಗಾಗಿ ಮುಖ್ಯವಾಗಿ ಕರಾವಳಿ ಕಲಾವಿದರನ್ನೇ ಆಯ್ಕೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಸಿನಿಮಾದಲ್ಲಿ ಉಡುಪಿ ಭಾಷೆಯೇ ಪ್ರಮುಖ ಹೈಲೈಟ್ ಆಗಿದ್ದು, ಬೇರೆಯವರು ಮಾತನಾಡಿದರೆ ಅನುಕರಣೆಯಂತಾಗುತ್ತದೆ. ಹೀಗಾಗಿ ಉಡುಪಿ ಭಾಷೆ ಬರುವವರಿಗೆ ಮಾತ್ರ ಮೊದಲ ಆದ್ಯತೆ ನೀಡುತ್ತಿದ್ದಾರೆ ಎನ್ನಲಾಗಿದೆ. 2025ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.
ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ರಿಚರ್ಡ್ ಆಂಟನಿ ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್ ನಿರ್ದೇಶನ ಮಾಡುತ್ತಿದ್ದಾರೆ. ನನ್ನ ಮುಂದಿನ ಎರಡು ಸಿನಿಮಾಗಳಿಗೆ (ʻರಿಚರ್ಡ್ ಆಂಟನಿ’ ಹಾಗೂ ‘ಪುಣ್ಯಕೋಟಿ’) ಪರಶುರಾಮ ಹಾಗೂ ಆತನ ಕೊಡಲಿಯೇ ಸ್ಫೂರ್ತಿ. ಈ ಕಥೆ ಜತೆ ಹೀಗಾಗಲೇ 4 ವರ್ಷ ಕಳೆದಿದ್ದೇನೆ. ಇನ್ನೂ ನಾಲ್ಕು ವರ್ಷ ಕಳೆಯೋದು ಇದೆ ಅನಿಸುತ್ತಿದೆ ಎಂದು ರಕ್ಷಿತ್ ಶೆಟ್ಟಿ ಈ ಹಿಂದೆ ಹೇಳಿಕೊಂಡಿದ್ದರು.
ರಿಚರ್ಡ್ ಆಂಟನಿ ಜತೆಗೆ ರಕ್ಷಿತ್ ಶೆಟ್ಟಿ ಹಲವು ಯೋಜನೆಗಳನ್ನು ಹೊಂದಿದ್ದಾರೆ. ಈ ಬಗ್ಗೆ ಈ ಹಿಂದೆ ಅವರು ಟ್ವೀಟ್ ಹಂಚಿಕೊಂಡಿದ್ದರು. ʻʻಸಪ್ತ ಸಾಗರದಾಚೆ ಎಲ್ಲೋ ನಂತರ ನನ್ನ ಲೈನ್ ಅಪ್‌ಗಳು ಸಾಕಷ್ಟು ಸ್ಪಷ್ಟವಾಗಿವೆ. ಅಂದರೆ ರಿಚರ್ಡ್ ಆಂಟನಿ, ಪುಣ್ಯ ಕೋಟಿ 1 (PK 1), ಪುಣ್ಯ ಕೋಟಿ 2 (PK 2), (RA), PK 1 ಮತ್ತು 2,ಮಿಡ್ನೈಟ್ ಟು ಮೋಕ್ಷ (M2M) ಇವುಗಳು ನನಗೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡುವ ನಾಲ್ಕು ಚಲನಚಿತ್ರಗಳಾಗಿವೆ. ಆದರೆ ಕಿರಿಕ್ ಪಾರ್ಟಿ 2 (KP2) ಗಾಗಿ ನಾನು ವಿಭಿನ್ನ ಯೋಜನೆಗಳನ್ನು ಹೊಂದಿದ್ದೇನೆʼʼ ಎಂದಿದ್ದರು.