Site icon Vistara News

Rakshit Shetty: ‘ರಿಚರ್ಡ್ ಆಂಟನಿ’ ಸಿನಿಮಾವನ್ನು ನಿರ್ಮಾಣ ಮಾಡಲಿದ್ಯಾ ಹೊಂಬಾಳೆ?

Rakshit Shetty Richard Anthony Produce By Hombale

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ರಿಚರ್ಡ್​ ಆಂಟನಿ ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್‌ ನಿರ್ದೇಶನ ಮಾಡುತ್ತಿದ್ದಾರೆ.  ರಿಚರ್ಡ್​ ಆಂಟನಿ (Richard Anthony) ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣ ಮಾಡುವುದಾಗಿ ಹೇಳಿಕೊಂಡಿತ್ತು. ಇದಾದ ಬಳಿಕ ರಕ್ಷಿತ್ ಶೆಟ್ಟಿ ಸ್ವತ: ಅವರದ್ದೇ ನಿರ್ಮಾಣ ಸಂಸ್ಥೆಯಿಂದ ಸಿನಿಮಾ ಮಾಡುತ್ತಾರೆ ಎಂದು ವರದಿಯಾದವು. ಕೆವಿಎನ್ ಪ್ರೊಡಕ್ಷನ್ ಕೂಡ ಹಣ ಹೂಡಲಿದೆ ಎಂಬ ವದಂತಿಗಳು ಹರದಾಡಿದವು. ಆದರೀಗ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯೇ ‘ರಿಚರ್ಡ್ ಆಂಟನಿ’ ಸಿನಿಮಾವನ್ನು ನಿರ್ಮಾಣ ಮಾಡಲಿದೆ ಎಂದು ವರದಿಯಾಗಿದೆ.

ಮಾರ್ಚ್ ಕೊನೆಯ ವಾರ ಇಲ್ಲವೇ ಏಪ್ರಿಲ್ ಮೊದಲ ವಾರ ಸಿನಿಮಾ ಸೆಟ್ಟೇರಲಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಸಿನಿಮಾದ ಸ್ಕ್ರಿಪ್ಟ್ ಕೆಲಸಗಳು ಬಹುತೇಕ ಮುಗಿದಿದ್ದು, ಶೀಘ್ರದಲ್ಲಿಯೇ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ ಎನ್ನಲಾಗುತ್ತಿದೆ. ಕಾಂತಾರ 2 ಚಿತ್ರಕ್ಕೆ ಮುಹೂರ್ತಕ್ಕೆ ಕಾಲ ಕೂಡಿ ಬಂದಿತ್ತು, ದೈವದ ಅಭಯ ಸಿಕ್ಕಿತ್ತು. ಹಾಗಾಗಿ ಅದರ ಮುಹೂರ್ತವನ್ನು ಬೇಗ ಮಾಡಲಾಯಿತು. ರಿಚರ್ಡ್ ಆಂಟನಿಗೂ ಒಳ್ಳೆಯ ದಿನಾಂಕ ಹುಡುಕುತ್ತಿದ್ದಾರೆ ಎಂದು ಮೂಲ ತಿಳಿಸಿದೆ.

ಇದನ್ನೂ ಓದಿ: Rakshit Shetty:`ರಿಚರ್ಡ್​ ಆಂಟನಿ’ ಸಿನಿಮಾ ಅಪ್‌ಡೇಟ್‌ ಹಂಚಿಕೊಂಡ ರಕ್ಷಿತ್‌ ಶೆಟ್ಟಿ

ರಿಚರ್ಡ್‌ ಆಂಟನಿ ಜತೆಗೆ ರಕ್ಷಿತ್‌ ಶೆಟ್ಟಿ ಹಲವು ಯೋಜನೆಗಳನ್ನು ಹೊಂದಿದ್ದಾರೆ. ಈ ಬಗ್ಗೆ ಈ ಹಿಂದೆ ಅವರು ಟ್ವೀಟ್‌ ಹಂಚಿಕೊಂಡಿದ್ದರು. ʻʻಸಪ್ತ ಸಾಗರದಾಚೆ ಎಲ್ಲೋ ನಂತರ ನನ್ನ ಲೈನ್ ಅಪ್‌ಗಳು ಸಾಕಷ್ಟು ಸ್ಪಷ್ಟವಾಗಿವೆ. ಅಂದರೆ ರಿಚರ್ಡ್​ ಆಂಟನಿ, ಪುಣ್ಯ ಕೋಟಿ 1 (PK 1), ಪುಣ್ಯ ಕೋಟಿ 2 (PK 2), (RA), PK 1 ಮತ್ತು 2,‌ ಮಿಡ್ನೈಟ್ ಟು ಮೋಕ್ಷ (M2M) ಇವುಗಳು ನನಗೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡುವ ನಾಲ್ಕು ಚಲನಚಿತ್ರಗಳಾಗಿವೆ. ಆದರೆ ಕಿರಿಕ್‌ ಪಾರ್ಟಿ 2 (KP2) ಗಾಗಿ ನಾನು ವಿಭಿನ್ನ ಯೋಜನೆಗಳನ್ನು ಹೊಂದಿದ್ದೇನೆʼʼ ಎಂದಿದ್ದರು.

Exit mobile version