Site icon Vistara News

Rakshit Shetty: ಅಯೋಧ್ಯೆಯಲ್ಲಿ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ!

Rakshit Shetty visit ayodhya ram mandir

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (ಜನವರಿ 22)ರಂದು ರಾಮ ಮಂದಿರ (Ayodhya Ram Mandir) ಉದ್ಘಾಟನೆಯಾಗಿತ್ತು. ಕನ್ನಡದ ನಟ ನಿಖಿಲ್ ಕುಮಾರ್‌, ರಿಷಬ್‌ ಅವರು ಈ ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಅಯೋಧ್ಯೆಗೆ ತೆರಳಿದ್ದರು. ಇದು ಸಖತ್‌ ಸೌಂಡ್‌ ಮಾಡಿತ್ತು.

ಇದೀಗ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ಅವರು ಅಯೋಧ್ಯೆಗೆ ತೆರಳಿ ರಾಮನ ದರ್ಶನ ಮಾಡಿದ್ದಾರೆ.

ರಕ್ಷಿತ್‌ ಶೆಟ್ಟಿ ಅವರು ತಮ್ಮ ಗೆಳೆಯರ ಜತೆ ಅಯೋಧ್ಯೆಯಲ್ಲಿ ಇರುವ ಫೋಟೊಗಳು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ; Rakshit Shetty: ಕಾಪು ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ನಟ ರಕ್ಷಿತ್ ಶೆಟ್ಟಿ

ರಕ್ಷಿತ್‌ ಶೆಟ್ಟಿ ಆಗಾಗ ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗೆ ಕರಾವಳಿಯ ಕಾರ್ಣಿಕದ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ರಕ್ಷಿತ್ ಪಾಲ್ಗೊಂಡಿದ್ದರು.

ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಕೋಲದಲ್ಲಿ ಅವರು ಭಾಗಿ ಆಗಿದ್ದರು. ಅಲೆವೂರು ಜೋಡು ರಸ್ತೆಯಲ್ಲಿ ನಡೆದ 118ನೇ‌ ನೇಮೋತ್ಸವದಲ್ಲಿ ಪಾಲ್ಗೊಂಡು, ಪೂಜೆ ನೆರವೇರಿಸಿ ಪ್ರಸಾದ ಸ್ವೀಕರಿಸಿದ್ದರು.

Exit mobile version