ಬೆಂಗಳೂರು: ಉಡುಪಿಯ ಕಾಪು ಮಾರಿಗುಡಿ ದೇವಾಲಯಕ್ಕೆ ನಟ ರಕ್ಷಿತ್ ಶೆಟ್ಟಿ (Rakshit Shetty) ಭೇಟಿ ನೀಡಿ ದೇವರ ದರ್ಶನವನ್ನು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಪಡೆದುಕೊಂಡಿದ್ದಾರೆ . ಕರಾವಳಿಯಲ್ಲಿ ಉಡುಪಿಯ ಕೃಷ್ಣನ ದೇವಾಲಯ ಬಿಟ್ಟರೆ ಕಾಪು ಮಾರಿಯಮ್ಮ ದೇವಾಲಯವೇ ಸುಪ್ರಸಿದ್ಧ ಎಂಬುದು ಅಲ್ಲಿಯ ನಂಬಿಕೆ. ಈ ದೇವಾಲಯದಲ್ಲಿ ವರ್ಷಕೊಮ್ಮೆ ಜಾತ್ರೆ ನಡೆಯುತ್ತದೆ. ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಬಹು ಕೋಟಿ ವೆಚ್ಚದಲ್ಲಿ ಹೊಸ ಮಾರಿಗುಡಿ ನಿರ್ಮಾಣದ ಕಾರ್ಯ ಕೂಡ ಆಗುತ್ತಿದೆ. ರಕ್ಷಿತ್ ಶೆಟ್ಟಿ ಕೂಡ ಇಳಕಲ್ ಕಲಾತ್ಮಕ ಶೈಲಿಯ ಕೆತ್ತನೆಗಳ ಬಗ್ಗೆ ಮಾಹಿತಿ ಪಡೆದರು.
ರಕ್ಷಿತ್ ಶೆಟ್ಟಿ ಆಗಾಗ ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗೆ ಕರಾವಳಿಯ ಕಾರ್ಣಿಕದ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ರಕ್ಷಿತ್ ಪಾಲ್ಗೊಂಡಿದ್ದರು. ಹಾಗೆಯೇ ಉಡುಪಿಯ ಅಲೆವೂರಿನಲ್ಲಿ (alevoor udupi kola) ದೈವಗಳ ಪುನರ್ ಪ್ರತಿಷ್ಠೆ, ಕೋಲ ಇತ್ತು. ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಕೋಲದಲ್ಲಿ ಅವರು ಭಾಗಿ ಆಗಿದ್ದರು. ಅಲೆವೂರು ಜೋಡು ರಸ್ತೆಯಲ್ಲಿ ನಡೆದ 118ನೇ ನೇಮೋತ್ಸವದಲ್ಲಿ ಪಾಲ್ಗೊಂಡು, ಪೂಜೆ ನೆರವೇರಿಸಿ ಪ್ರಸಾದ ಸ್ವೀಕರಿಸಿದ್ದರು.
ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ರಿಚರ್ಡ್ ಆಂಟನಿ ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್ ನಿರ್ದೇಶನ ಮಾಡುತ್ತಿದ್ದಾರೆ. ನನ್ನ ಮುಂದಿನ ಎರಡು ಸಿನಿಮಾಗಳಿಗೆ (ʻರಿಚರ್ಡ್ ಆಂಟನಿ’ ಹಾಗೂ ‘ಪುಣ್ಯಕೋಟಿ’) ಪರಶುರಾಮ ಹಾಗೂ ಆತನ ಕೊಡಲಿಯೇ ಸ್ಫೂರ್ತಿ. ಈ ಕಥೆ ಜತೆ ಹೀಗಾಗಲೇ 4 ವರ್ಷ ಕಳೆದಿದ್ದೇನೆ. ಇನ್ನೂ ನಾಲ್ಕು ವರ್ಷ ಕಳೆಯೋದು ಇದೆ ಅನಿಸುತ್ತಿದೆ ಎಂದು ರಕ್ಷಿತ್ ಶೆಟ್ಟಿ ಈ ಹಿಂದೆ ಹೇಳಿಕೊಂಡಿದ್ದರು.
ಇದನ್ನೂ ಓದಿ: Rakshit Shetty: ‘ರಿಚರ್ಡ್ ಆಂಟನಿ’ ಸಿನಿಮಾವನ್ನು ನಿರ್ಮಾಣ ಮಾಡಲಿದ್ಯಾ ಹೊಂಬಾಳೆ?
ದೇಗುಲದ ಕಾಮಗಾರಿ ವೀಕ್ಷಿಸಿದ ನಟ ರಕ್ಷಿತ್ ಶೆಟ್ಟಿ
ಕಾಪು ಮಾರಿಯಮ್ಮನ ದರ್ಶನ ಪಡೆದಿದ್ದ ಪ್ರಕಾಶ್ ರಾಜ್!
ಉಡುಪಿಯ ಕಾಪು ಮಾರಿಗುಡಿ ದೇವಾಲಯಕ್ಕೆ ಬಹುಭಾಷಾ ನಟ ಪ್ರಕಾಶ್ ರಾಜ್ ಈ ಮುಂಚೆ ಭೇಟಿ ನೀಡಿದ್ದರು. ನಂತರ ಭರದಿಂದ ಸಾಗುತ್ತಿರುವ ಕಾಮಗಾರಿ ವೀಕ್ಷಿಸಿದ ನಟ ಪ್ರಕಾಶ್ ರೈ ಅವರು ಇಳಕಲ್ಲಿನ ಕಲಾತ್ಮಕ ಶೈಲಿಯ ಕೆತ್ತನೆಗಳ ಬಗ್ಗೆ ಮಾಹಿತಿಯನ್ನು ಪಡೆದಿದ್ದರು. ದಕ್ಷಿಣ ಭಾರತದಲ್ಲೇ ವಿಶಿಷ್ಟವಾಗಿ ಮೂಡಿಬರುತ್ತಿರುವ ದೇಗುಲದ ಕಲಾ ಪ್ರಕಾರಗಳನ್ನು ಕಂಡು ಸಂತಸ ವ್ಯಕ್ತಪಡಿಸಿದ್ದರು.