ರಾಜ್ಯದ ಪ್ರಸಿದ್ಧ ಪ್ರವಾಸಿ ಜಿಲ್ಲೆಗಳಲ್ಲೊಂದಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಹರಿಹರಪುರ ಕ್ಷೇತ್ರಕ್ಕೆ ಪೌರಾಣಿಕ (Rishab shetty) ಮಹತ್ವವಿದೆ.
ಇದೀಗ ಹರಿಹರಪುರ ಕ್ಷೇತ್ರಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಪತ್ನಿ ಮಗ, ಮಗಳ ಜತೆ ಕುಟುಂಬ ಸಮೇತರಾಗಿ ಭೇಟಿ ಕೊಟ್ಟಿದ್ದಾರೆ.
ರಿಷಬ್ ದಂಪತಿ ಶಾರದಾ ಲಕ್ಷ್ಮಿ ನರಸಿಂಹಸ್ವಾಮಿಯ ದರ್ಶನ ಪಡೆದರು. ಜತೆಗೆ ಹರಿಹರಪುರದ ಶ್ರೀ ಸ್ವಯಂ ಸಚ್ಚಿದಾನಂದ ಶ್ರೀಗಳ ಆಶೀರ್ವಾದ ಪಡೆದರು.
ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!
ತುಂಗಾ ನದಿ ತಟದಲ್ಲಿರುವ ಇತಿಹಾಸ ಪ್ರಸಿದ್ಧ ದೇಗುಲ ಇದಾಗಿದೆ. ಮಠದ ಆವರಣದ ಆಂಜನೇಯನ ಬಳಿ ಅಭಿಮಾನಿಗಳ ಜತೆ ರಿಷಬ್ ಫೋಟೊ ಕ್ಲಿಕ್ಕಿಸಿಕೊಂಡರು.
ಸ್ಕಂದ ಪುರಾಣದಲ್ಲಿ ಉಲ್ಲೇಖಿಸಿರುವಂತೆ ಇಲ್ಲಿ ದಕ್ಷಯಜ್ಞ ನಡೆದಿತ್ತಂತೆ. ಆಗ ಪರಶಿವನು ಯಜ್ಞಕುಂಡದಲ್ಲಿ ಆವಿರ್ಭವಿಸಿ ಸಮಸ್ತ ಭಕ್ತರನ್ನು ಅನುಗ್ರಹಿಸಿದನಂತೆ. ಇಂದಿಗೂ ದಕ್ಷಹರ ಸೋಮೇಶ್ವರನ ದೇವಸ್ಥಾನವು ಹರಿಹರಪುರದಲ್ಲಿದೆ.