Site icon Vistara News

Rishab Shetty: ಈ ಪ್ರಶಸ್ತಿ ದೈವಕ್ಕೆ ಸಲ್ಲಬೇಕು ಎಂದ ರಿಷಬ್ ಶೆಟ್ಟಿ; ನಟನ ಫಸ್ಟ್‌ ರಿಯಾಕ್ಷನ್‌ ಹೀಗಿತ್ತು!

Rishab Shetty first reaction after kantara national award

ಬೆಂಗಳೂರು: ಇಂದು (ಆಗಸ್ಟ್ 16) ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಯವು 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ರಿಷಬ್ ಶೆಟ್ಟಿಗೆ (Rishab Shetty) ಅವರಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ದೊರಕಿದೆ. ‘ಕಾಂತಾರ’ದ ಅತ್ಯುತ್ತಮ ನಟನೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ. ಇದೀಗ ನಟ ಪತ್ರಿಕಾಗೋಷ್ಠಿ ಮೂಲಕ ಇಡೀ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ಮಾತ್ರವಲ್ಲ ಈ ಪ್ರಶಸ್ತಿ ದೈವಕ್ಕೆ ಸಲ್ಲಬೇಕು ಎಂದು ಹೇಳಿಕೆ ನೀಡಿದರು.

ರಿಷಬ್‌ ಶೆಟ್ಟಿ ಮಾತನಾಡಿ ʻ ಇಡೀ ತಂಡದ ಎಲ್ಲರಿಗೂ ಧನ್ಯವಾದ ಹೇಳಬೇಕು. ಅರವಿಂದ್‌ ಕಶ್ಯಪ್‌ ಸಿನಿಮಾ ಬೆನ್ನೆಲಬು ಆಗಿದ್ದರು. ಎಲ್ಲ ಕಲಾವಿದರಗೂ ಧನ್ಯವಾದ. ಕಾಂತರ ಚಿತ್ರಕ್ಕೆ ಪ್ರಶಸ್ತಿ ಸಿಕ್ಕಿದ್ದು ಖುಷಿ ತಂದಿದೆ. ನಮ್ಮ ಇಡೀ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ. ಜನ ಸಿನಿಮಾ ನೋಡಿ ಮೆಚ್ಚಿದ್ದು ಮುಖ್ಯವಾಗಿದೆ. ಪ್ರಶಸ್ತಿ ಘೋಷಣೆ ಮಾಡುವಾಗಲೇ ಬಂದಿರುವುದು ಗೊತ್ತಾಗಿತ್ತು. ಈ ಹಿಂದೆ ಸರ್ಕಾರಿ ಹಿ. ಪ್ರಾ. ಶಾಲೆ. ಕಾಸರಗೋಡು’ ಚಿತ್ರಕ್ಕೆ ಪ್ರಶಸ್ತಿ ಬಂದಾಗ ಇನ್ನೂ ಹೆಚ್ಚು ಪ್ರಯತ್ನ ಮಾಡಬೇಕು ಎಂದು ನಿರ್ಧಾರ ಮಾಡಿದ್ದೆ. ಒಂದು ಒಳ್ಳೆಯ ಸಿನಿಮಾ ಮಾಡುವಾಗ ಒಳ್ಳೆಯ ತಂಡ ಮುಖ್ಯ ಕೂಡ. ಒಬ್ಬರಿಂದ ಸಿನಿಮಾ ಸಕ್ಸೆಸ್‌ ಆಗಲು ಸಾಧ್ಯವಿಲ್ಲ. ಈ ಪ್ರಶಸ್ತಿ ದೈವಕ್ಕೆ ಸಲ್ಲಬೇಕು. ದೈವಕ್ಕೆ ನಾನು ಪ್ರಶಸ್ತಿ ಸಲ್ಲಿಸುತ್ತೇನೆ. ಕಾಂತಾರ ಸಿನಿಮಾಗೆ ನಿಮ್ಮಲ್ಲೆರ ಸಪೋರ್ಟ್‌ ಇತ್ತು. ಮುಂದೆ ಕೂಡ ಹೀಗೆ ಬೆಂಬಲ ಇರಲಿʼʼಎಂದರು.

ಇದನ್ನೂ ಓದಿ: Rishab Shetty: ಅಣ್ಣಾವ್ರ ಅಪ್ಪಟ ಅಭಿಮಾನಿ ರಿಷಬ್‌ ಶೆಟ್ಟಿ ಸಿನಿ ಜರ್ನಿ ಹೀಗಿತ್ತು! ನಾಡಿಗೆ ಕೀರ್ತಿ ತಂದ ಕುಂದಾಪುರದ ಹುಡುಗ!

ಭಾರತದ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿ ಎನಿಸಿಕೊಂಡಿರುವ ರಾಷ್ಟ್ರ ಪ್ರಶಸ್ತಿ (70th National Film Awards) ಇಂದು (ಆಗಸ್ಟ್ 16) ಘೋಷಣೆ ಆಗಿದೆ. ‘ಕಾಂತಾರ’ ಸಿನಿಮಾಗಾಗಿ ರಿಷಬ್‌ ಶೆಟ್ಟಿ (Rishab Shetty) ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡರೆ, ಅತ್ಯುತ್ತಮ ಮನರಂಜನಾ ಚಿತ್ರ ಪ್ರಶಸ್ತಿ ಕೂಡ ಕಾಂತಾರ ಪಡೆದುಕೊಂಡಿದೆ. 2022ರಲ್ಲಿ ತೆರೆಕಂಡು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆದ, ರಿಷಬ್‌ ಶೆಟ್ಟಿ ನಿರ್ದೇಶಿಸಿ, ನಟಿಸಿದ ʼಕಾಂತಾರʼ ಚಿತ್ರ ಈಗಾಗಲೇ ಹಲವು ಪ್ರಶಸ್ತಿಗಳಿಗೆ ಭಾಜನವಾಗಿದೆ. 

ರಿಷಬ್‌ ಶೆಟ್ಟಿ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ (dada saheb phalke award 2023) ಪ್ರಶಸ್ತಿ ಪಡೆದ ಬೆನ್ನಲ್ಲೇ ಬಾಲಿವುಡ್ ಲೈಫ್ ಅವಾರ್ಡ್ಸ್‌ನ (BLAwards2023) (BLAwards) ದಕ್ಷಿಣ ಸಿನಿಮಾ ವಿಭಾಗದಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದಿದ್ದರು. 2023ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮಾ ಉತ್ಸವದಲ್ಲಿ ‘ಭರವಸೆಯ ನಟ’ ಎಂಬ ಪ್ರಶಸ್ತಿ ಸ್ವೀಕರಿಸಿದ್ದರು.  ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದೈವಿಕ ಕತೆಯನ್ನು ಹೊಂದಿರುವ ಕಾಂತಾರ ಸಿನಿಮಾ ಚೊಚ್ಚಲ ಆವೃತ್ತಿಯ “ಸಿಲ್ವರ್ ಪಿಕಾಕ್​ ಅವಾರ್ಡ್’​​ ತನ್ನದಾಗಿಸಿಕೊಂಡಿತ್ತು.  ಕಾಂತಾರ ಸಿನಿಮಾ ತಂಡದ ಹಾಗೂ ಕನ್ನಡಿಗರ ಪಾಲಿಗೆ ವಿಶೇಷವಾಗಿದೆ. ಇದು ಕನ್ನಡ ಸಿನಿಮಾ ಒಂದಕ್ಕೆ ದೊರೆತ ಮೊಟ್ಟ ಮೊದಲ ಪ್ರಶಸ್ತಿಯೂ ಹೌದು. ದುಬೈನಲ್ಲಿ ನಡೆದ ಸೈಮಾ ಅವಾರ್ಡ್ಸ್ 2023 (SIIMA 2023) ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳಲ್ಲಿ ಕಾಂತಾರ ಸಿನಿಮಾ 10 ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು.

Exit mobile version