ಬೆಂಗಳೂರು: ಭಾರತದ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿ ಎನಿಸಿಕೊಂಡಿರುವ ರಾಷ್ಟ್ರ ಪ್ರಶಸ್ತಿ (70th National Film Awards) ಇಂದು (ಆಗಸ್ಟ್ 16) ಘೋಷಣೆ ಆಗಿದೆ. ‘ಕಾಂತಾರ’ ಸಿನಿಮಾಗಾಗಿ ರಿಷಬ್ ಶೆಟ್ಟಿ (Rishab Shetty) ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡರೆ, ಅತ್ಯುತ್ತಮ ಮನರಂಜನಾ ಚಿತ್ರ ಪ್ರಶಸ್ತಿ ಕೂಡ ಕಾಂತಾರ ಪಡೆದುಕೊಂಡಿದೆ. 2022ರಲ್ಲಿ ತೆರೆಕಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆದ, ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ ʼಕಾಂತಾರʼ ಚಿತ್ರ ಈಗಾಗಲೇ ಹಲವು ಪ್ರಶಸ್ತಿಗಳಿಗೆ ಭಾಜನವಾಗಿದೆ. ಕೆಜಿಎಫ್ 2ಗೆ ಅತ್ತುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿ ಲಭಿಸಿದೆ. ಸಾಹಸ ವಿಭಾಗದಲ್ಲೂ ಕೆಜಿಎಫ್ 2ಗೆ ಪ್ರಶಸ್ತಿ ಸಿಕ್ಕಿದೆ. ಇದೀಗ ಹೊಂಬಾಳೆ ಫಿಲ್ಮ್ಸ್ ಸಂಸ್ಥಾಪಕ ವಿಜಯ್ ಕಿರಗಂದೂರು ಇದೀಗ ವಿಶಸ್ ತಿಳಿಸಿದ್ದಾರೆ.
ವಿಜಯ್ ಕಿರಗಂದೂರು ಮಾತನಾಡಿ ʻʻಪ್ರಶಸ್ತಿ ಕನ್ನಡ ಜನತೆ ಮತ್ತು ಕನ್ನಡ ಚಿತ್ರರಂಗಕ್ಕೆ ಪ್ರಶಸ್ತಿ ಸೇರಬೇಕು. ಕಾಂತಾರ, ಕೆಜಿಎಫ್ ತಂಡದ ಪ್ರತಿಯೊಬ್ಬರು ಶ್ರಮ ವಹಿಸಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ಸಂಸ್ಥೆಯಿಂದ ಒಳ್ಳೊಳ್ಳೆ ಸಿನಿಮಾಗಳನ್ನು ಕೊಡಲು ಪ್ರಯತ್ನಿಸುತ್ತೇವೆ. ನಮಗೂ ಜವಬ್ದಾರಿ ಜಾಸ್ತಿ ಆಗಿದೆ. ಕಾಂತಾರದಲ್ಲಿ ನನಗೆ ಎಲ್ಲ ದೃಶ್ಯಗಳು ಇಟ್ಟವಾಗಿದೆ. ಆದರೆ ಕೊನೆಯ ದೃಶ್ಯ ನನಗೆ ತುಂಬ ಇಷ್ಟವಾಯ್ತು. ಮೊದಲನೇ ಭಾಗ ಪ್ರಿಕ್ವೆಲ್ ಆಗುತ್ತಿದೆ. ಇನ್ನು ದೊಡ್ಡ ಮಟ್ಟಕ್ಕೆ ಮಾಡಲಾಗುತ್ತಿದೆ. ಪ್ರಶಾಂತ್ ಮತ್ತು ಯಶ್‌ಗೂ ಕೂಡ ಗೌರವ ಸಲ್ಲಬೇಕುʼʼಎಂದರು.
ಕಾಂತಾರ 2 ಪೂರ್ವಭಾವಿ ಕತೆಯಾಗಿದ್ದು, ಇದು ಗ್ರಾಮಸ್ಥರು, ದೇವತೆ ಮತ್ತು ತೊಂದರೆಗೊಳಗಾದ ರಾಜನ ನಡುವಿನ ಸಂಬಂಧವನ್ನು ಅನ್ವೇಷಿಸುತ್ತದೆ. ರಾಜನು ಗ್ರಾಮಸ್ಥರನ್ನು ಮತ್ತು ತನ್ನ ಸುತ್ತಲಿನ ಭೂಮಿಯನ್ನು ರಕ್ಷಿಸಲು ದೇವತೆಯೊಂದಿಗೆ ಒಪ್ಪಂದ ಮಾಡಿಕೊಂಡಿರುತ್ತಾನೆ. ʻಮನುಷ್ಯ ಮತ್ತು ಪ್ರಕೃತಿಯ ಕದನʼ ಚಿತ್ರದ ತಿರುಳು ಎಂದು ವಿಜಯ್ ಕಿರಗಂದೂರು ಈ ಮುಂಚೆ ಹೇಳಿಕೆ ನೀಡಿದ್ದರು.
ಇದನ್ನೂ ಓದಿ: Rishab Shetty: ಈ ಪ್ರಶಸ್ತಿ ದೈವಕ್ಕೆ ಸಲ್ಲಬೇಕು ಎಂದ ರಿಷಬ್ ಶೆಟ್ಟಿ; ನಟನ ಫಸ್ಟ್ ರಿಯಾಕ್ಷನ್ ಹೀಗಿತ್ತು!
ಇದನ್ನೂ ಓದಿ: Rishab Shetty: ಈ ಪ್ರಶಸ್ತಿ ದೈವಕ್ಕೆ ಸಲ್ಲಬೇಕು ಎಂದ ರಿಷಬ್ ಶೆಟ್ಟಿ; ನಟನ ಫಸ್ಟ್ ರಿಯಾಕ್ಷನ್ ಹೀಗಿತ್ತು!
ಹೆಚ್ಚಿನ ಪಾತ್ರವರ್ಗದ ಸದಸ್ಯರನ್ನು ಸೇರಿಸಲಾಗುತ್ತಿದೆ ಎನ್ನಲಾಗಿದೆ. ಮೊದಲ ಚಿತ್ರಕ್ಕೆ ಹೋಲಿಸಿದರೆ ಚಿತ್ರತಂಡದ ಸದಸ್ಯರು ಹೆಚ್ಚು ಸಂಭಾವನೆ ಪಡೆಯುವ ಸಾಧ್ಯತೆಯಿದೆ. ರಿಷಬ್ ಶೆಟ್ಟಿ ಮೊದಲ ಚಿತ್ರಕ್ಕೆ ರೂ. 4 ಕೋಟಿ ಸಂಭಾವನೆ ಪಡೆದಿದ್ದಾರೆ ಎಂದು ವದಂತಿಗಳಿವೆ. ಅವರು ಪ್ರಿಕ್ವೆಲ್‌ನೊಂದಿಗೆ ದುಪ್ಪಟ್ಟು ಗಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಕಾಂತಾರ-1 , 16 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಿಸಿಲಾಗಿದ್ದು, ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಸುಮಾರು 400 ಕೋಟಿ ರೂ. ಗಳಿಸಿತು. ಕಾಂತಾರ ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ಸು ಕಂಡಾಗ ಹಿಂದಿ, ತಮಿಳು, ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ತೆರೆಕಂಡಿತು. ಕಾಂತಾರ ಚಿತ್ರದಲ್ಲಿ ಕಿಶೋರ್, ಅಚ್ಯುತ್ ಕುಮಾರ್, ಸಪ್ತಮಿ ಗೌಡ ಮತ್ತು ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.