ಬೆಂಗಳೂರು: ರಂಗಾಯಣ ರಘು ನಟನೆಯ ʻಶಾಖಾಹಾರಿʼ ಸಿನಿಮಾ (Shakhahaari Movie) ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿತ್ತು. ನಿರ್ದೇಶಕ ಸಂದೀಪ್ ಸುಂಕದ್ ಬೇರೊಂದು ದಿಕ್ಕಿನಲ್ಲಿ ಯೋಚಿಸಿ ಹೊಸತನಕ್ಕೆ ಒತ್ತುಕೊಟ್ಟು ಸಿನಿರಸಿಕರನ್ನು ರಂಜಿಸುವಲ್ಲಿ ಗೆದ್ದಿದ್ದಾರೆ. ಪಕ್ಕಾ ಪೈಸಾ ವಸೂಲ್ ಸಿನಿಮಾ ಎನಿಸಿಕೊಂಡಿರುವ ಶಾಖಾಹಾರಿ ರೋಚಕ ತಿರುವು, ಭಾವನಾತ್ಮಕ ಸಂಬಂಧ, ಪ್ರೀತಿ, ಸ್ನೇಹ, ನಂಬಿಕೆ ಇವೆಲ್ಲವುದರ ಬಗ್ಗೆ ಬಹಳ ಸೂಕ್ಷ್ಮವಾಗಿ ಪ್ರೇಕ್ಷಕರಿಗೆ ಮುಟ್ಟಿಸಿ ಎಲ್ಲಾ ರೀತಿಯ ರಸಾನುಭವ ನೀಡಿತ್ತು. ವಿಮರ್ಶಕರ ಮೆಚ್ಚುಗೆ ಪಡೆದುಕೊಂಡು ಉತ್ತಮ ಪ್ರದರ್ಶನ ಕಾಣುತ್ತಿದ್ದ ಈ ಸಿನಿಮಾವ ಒಟಿಟಿಗೆ ಲಗ್ಗೆ ಇಡುತ್ತಿದೆ. ಮೂಲಗಳ ಪ್ರಕಾರ ʻಶಾಖಾಹಾರಿʼ ಸಿನಿಮಾ (Shakhahaari Movie OTT) ಡಿಜಿಟಲ್ ರೈಟ್ಸ್ ಅಮೆಜಾನ್ ಪ್ರೈಂ (Amazon Prime) ಪಾಲಾಗಿದೆ. ಮುಂದಿನ ವಾರ ಒಟಿಟಿಗೆ ಕಾಲಿಡಿದೆ ಎಂದು ವರದಿಯಾಗಿದೆ.
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿನ ಒಂದು ಪುಟ್ಟ ಗ್ರಾಮದಲ್ಲಿ ನಡೆಯುವ ಬಲು ರೋಚಕವಾದ ಕಥೆ ‘ಶಾಖಾಹಾರಿ’ . ಈ ಸಿನಿಮಾದ ಕಥಾನಾಯಕ ಸುಬ್ಬಣ್ಣ ಭಟ್ ರಂಗಾಯಣ ರಘು ಒಂದು ವೆಜಿಟೇರಿಯನ್ ಹೋಟೆಲ್ ನಡೆಸುತ್ತಾನೆ. ಆದರೆ ಅಲ್ಲಿ ನಡೆಯುವ ಕೆಲವು ಘಟನೆಗಳಿಂದಾಗಿ ಶಾಕಾಹಾರಿ ಹೋಟೆಲ್‌ನ ಇಮೇಜ್ ‘ಶಾಖಾಹಾರಿ’ಯಾಗಿ ಬದಲಾಗುತ್ತದೆ. ಇಂಥ ಒಗಟಿನಂತಹ ಟೈಟಲ್ ಹಿಂದಿರುವ ಕಥೆ ಏನು ಎಂಬುದು ಸಿನಿಮಾದ ತಿರುಳು.
ಇದನ್ನೂ ಓದಿ: Shakhahaari Movie: ಬೆಂಗಳೂರಿನಲ್ಲೇ ಕನ್ನಡದ “ಶಾಖಾಹಾರಿʼಯನ್ನು ಕೊಂದ ಮಲಯಾಳಂ ಸಿನಿಮಾ! ಕನ್ನಡಿಗರಿಗೇ ಸವಾಲ್!
#Shakhahaari #Shakhahari #Shakahari #Shakahaari https://t.co/iGiDeUSeXx
— Kannadiga (@KannadigaTwiter) March 3, 2024
#Shakhahaari #Shakhahari #Shakahari #Shakahaari https://t.co/Ewd93QSmow
— Kannadiga (@KannadigaTwiter) March 2, 2024
ಶಾಖಾಹಾರಿ ಚಿತ್ರಕ್ಕೆ ಕಥೆ, ಸಂಭಾಷಣೆ ಬರೆದು ಸಂದೀಪ್ ಸುಂಕದ್ ಆಕ್ಷನ್ ಕಟ್ ಹೇಳಿದ್ದಾರೆ. ವಿಶ್ವಜಿತ್ ರಾವ್ ಕ್ಯಾಮೆರಾ. ಶಶಾಂಕ್ ನಾರಾಯಣ್ ಸಂಕಲನ, ಮಯೂರ್ ಅಂಬೇಕಲ್ಲು ಸಂಗೀತ ಚಿತ್ರಕ್ಕೆ ಪುಷ್ಟಿ ನೀಡಿದೆ. ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನ ಕೀಳಂಬಿ ಮೀಡಿಯಾ ಲ್ಯಾಬ್ ಪ್ರೈ.ಲಿ.ನ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಹಾಗೇ ಸುಜಯ್ ಶಾಸ್ತ್ರಿ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನುಳಿದಂತೆ ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.