Site icon Vistara News

Shiva Rajkumar: ಕರುನಾಡ ಚಕ್ರವರ್ತಿಯ ಬಹು ನಿರೀಕ್ಷಿತ ಲುಕ್ ಬಿಡುಗಡೆ ಮಾಡಿದ ʻಉತ್ತರಕಾಂಡʼ!

Shiva Rajkumar awaited look Uttarakanda released

ಬೆಂಗಳೂರು: ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಚಿತ್ರ”ಉತ್ತರಕಾಂಡ” ಇದೀಗ ಬಹು ಬೇಡಿಕೆಯಲ್ಲಿದ್ದ ಲುಕ್ ಒಂದನ್ನು ಬಿಡುಗಡೆ ಮಾಡಿದೆ. ಕರುನಾಡ ಡಾ.ಚಕ್ರವರ್ತಿ ಶಿವರಾಜ್ ಕುಮಾರ್ (Shiva Rajkumar) ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿ ಎಲ್ಲೆಡೆ ಸದ್ದು ಮಾಡಿದೆ. “ಮಾಲೀಕ” ನ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ಶಿವಣ್ಣ ತಮ್ಮ ಲುಕ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಪ್ರತಿ ಒಂದು ಪಾತ್ರದಲ್ಲೂ, ವಿಶಿಷ್ಟವಾಗಿ ಕಾಣುವ ಶಿವಣ್ಣ, ಇದೀಗ “ಉತ್ತರಕಾಂಡ”ದಲ್ಲೂ ತಮ್ಮ ಲುಕ್ ಮೂಲಕ ಎಲ್ಲರ ಮನೆ ಮಾತಾಗಿದ್ದಾರೆ‌.

ಬಹು ನಿರೀಕ್ಷಿತ ಚಿತ್ರ “ಉತ್ತರಕಾಂಡ” ಒಂದು ಆಕ್ಷನ್‌ ಡ್ರಾಮಾ ಚಿತ್ರವಾಗಿದ್ದು, ಇದು ರೋಹಿತ್‌ ಪದಕಿಯ ಕೃತಿಯಾಗಿದೆ. ಚಿತ್ರಕ್ಕೆ ಖ್ಯಾತ ಗಾಯಕ, ಸಂಯೋಜಕ ಅಮಿತ್‌ ತ್ರಿವೇದಿ ಸಂಗೀತ ಸಂಯೋಜನೆ ಮಾಡಿದ್ದು, ಅಧ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ. ಚಿತ್ರಕ್ಕೆ ವಿಶ್ವಾಸ್‌ ಕಶ್ಯಪ್‌ ಪ್ರೊಡಕ್ಷನ್‌ ವಿನ್ಯಾಸ ಮಾಡಿದ್ದು, ಅನಿಲ್ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿರುತ್ತಾರೆ. ಕಾರ್ತಿಕ್‌ ಗೌಡ ಮತ್ತು ಯೋಗಿ ಜಿ ರಾಜ್‌ ಕೆ.ಆರ್.ಜಿ. ಸ್ಟೂಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ:Shiva Rajkumar: ನಾಳೆ ಶಿವ ರಾಜ್​ಕುಮಾರ್​​ ಬರ್ತ್​ಡೇ: ‘45’ ಸಿನಿಮಾದಿಂದ ಫ್ಯಾನ್ಸ್‌ಗೆ ಬಿಗ್‌ ಸರ್ಪ್ರೈಸ್

ಇದನ್ನೂ ಓದಿ: Shiva Rajkumar: ನಾಳೆ ಶಿವ ರಾಜ್​ಕುಮಾರ್​​ ಬರ್ತ್​ಡೇ: ‘45’ ಸಿನಿಮಾದಿಂದ ಫ್ಯಾನ್ಸ್‌ಗೆ ಬಿಗ್‌ ಸರ್ಪ್ರೈಸ್

ಬಹು ಪ್ರಮುಖ ತಾರಾಬಳಗವನ್ನು ಹೊಂದಿರುವ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ.ಶಿವರಾಜ್‌ ಕುಮಾರ್‌, ನಟರಾಕ್ಷಸ ಡಾಲಿ ಧನಂಜಯ, ಭಾವನಾ ಮೆನನ್‌, ಐಶ್ವರ್ಯ ರಾಜೇಶ್‌, ದಿಗಂತ್‌ ಮುಂತಾದವರು ಬಣ್ಣ ಹಚ್ಚಿದ್ದಾರೆ.

ಏ.18ರಂದು ಚಿತ್ರತಂಡ ದೂದ್‌ಪೇಡ ದಿಗಂತ್‌ ಅವರ ಲುಕ್‌ ಅನಾವರಣಗೊಳಿಸಿತ್ತು. ಮಿರ್ಚಿ “ಮಲ್ಲಿಗೆ” ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಟೋಬಿʼ, ʼಸಪ್ತ ಸಾಗರದಾಚೆ ಸೈಡ್‌ ಬಿʼ ಮುಂತಾದ ಸಿನಿಮಾಗಳಲ್ಲಿ ಗಮನ ಸೆಳೆದಿದ್ದ ಚೈತ್ರಾ ʼಉತ್ತರಕಾಂಡʼ ಚಿತ್ರತಂಡವನ್ನು ಸೇರಿದ್ದು, ಇನ್ನಷ್ಟು ನಿರೀಕ್ಷೆ ಮೂಡಿಸಿದೆ.ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯನ್ನು ಒಳಗೊಂಡ ʼಉತ್ತರಕಾಂಡʼ ಸಿನಿಮಾಕ್ಕೆ ರೋಹಿತ್ ಪದಕಿ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಚೈತ್ರಾ ಆಚಾರ್ ಈ ಚಿತ್ರದಲ್ಲಿ ಲಚ್ಚಿ ಎಂಬ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ನಾಯಕಿ ಪಾತ್ರದಿಂದ ಹೊರ ಬಂದಿದ್ದ ರಮ್ಯಾ

ಚಿತ್ರತಂಡ ಆರಂಭದಲ್ಲಿ ನಾಯಕಿಯಾಗಿ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಅವರನ್ನು ಹೆಸರಿಸಿತ್ತು. ಮಾತ್ರವಲ್ಲ ರಮ್ಯಾ ಚಿತ್ರದ ಮುಹೂರ್ತದಲ್ಲಿಯೂ ಭಾಗವಹಿಸಿದ್ದರು. ಆದರೆ ಇತ್ತೀಚೆಗೆ ಅವರು ಚಿತ್ರತಂಡದಿಂದ ಹೊರಬಂದು ಶಾಕ್‌ ನೀಡಿದ್ದರು. ಕಳೆದ ವರ್ಷ ʼಸ್ವಾತಿ ಮುತ್ತಿನ ಮಳೆ ಹನಿಯೇʼ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದಿದ್ದ ರಮ್ಯಾ ಕೆಲವು ದಿನಗಳ ಹಿಂದೆ ʼಉತ್ತರಕಾಂಡʼ ಸಿನಿಮಾದಿಂದಲೂ ಹೊರ ಬಂದಿದ್ದರು. ʼ‘ಡೇಟ್ಸ್​ ಕೊರತೆಯಿಂದಾಗಿ ನಾನು ʼಉತ್ತರಕಾಂಡʼದಲ್ಲಿ ಕೆಲಸ ಮಾಡುತ್ತಿಲ್ಲ (ಸಿನಿಮಾ ಮತ್ತು ರಾಜಕೀಯದ ಕೆಲಸಗಳನ್ನು ನಾನು ಸದ್ಯಕ್ಕೆ ಸ್ಥಗಿತಗೊಳಿಸಿದ್ದೇನೆ). ಚಿತ್ರತಂಡಕ್ಕೆ ನಾನು ಶುಭ ಹಾರೈಸುತ್ತೇನೆ’ʼ ಎಂದು ರಮ್ಯಾ ಕಾರಣ ತಿಳಿಸಿದ್ದರು. ಆ ಮೂಲಕ ಅನೇಕ ವರ್ಷಗಳ ಬಳಿಕ ಅವರನ್ನು ತೆರೆ ಮೇಲೆ ನೋಡಬೇಕೆಂಬ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು.

Exit mobile version