Site icon Vistara News

Vinay Rajkumar: ವಿನಯ್‌ ರಾಜ್‌ಕುಮಾರ್ ನಟನೆಯ ʻಗ್ರಾಮಾಯಣʼ ಸೆಟ್‌ಗೆ ಭೇಟಿ ಕೊಟ್ಟ ಶಿವಣ್ಣ-ಗೀತಾ!

shivaraj kumar visit gramayan Vinay Rajkumar

ಬೆಂಗಳೂರು: ವಿನಯ್‌ ರಾಜ್ ಕುಮಾರ್ (Vinay Rajkumar) ಅವರು ʻಒಂದು ಸರಳ ಪ್ರೇಮ ಕಥೆʼ ಸಿನಿಮಾ ಬಳಿಕ ʻಗ್ರಾಮಾಯಣʼ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ನಟ ಶಿವರಾಜ್ ಕುಮಾರ್ (Shivaraj Kumar) ಮತ್ತು ಗೀತಾ ಶಿವರಾಜ್ ಕುಮಾರ್ ಅವರು ಸೆಟ್‌ಗೆ ಭೇಟಿ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ‘ಗ್ರಾಮಾಯಣ’ ಸಿನಿಮಾ ಆರಂಭವಾಗಿ ಮೂರ್ನಾಲ್ಕು ವರ್ಷಗಳಾಗಿವೆ. ಆದರೆ ಹಲವು ಕಾರಣಗಳಿಂದ ನಿಂತು ಹೋಗಿದ್ದ ಚಿತ್ರವನ್ನು ಖ್ಯಾತ ನಿರ್ಮಾಪಕ ಕೆ.ಪಿ ಶ್ರಿಕಾಂತ್ ಅವರು ಲಹರಿ ಫಿಲ್ಮ್ಸ್ ಮನೋಹರ್ ನಾಯ್ಡು ಜತೆಗೆ ಸೇರಿ ಆರಂಭಿಸುತ್ತಿದ್ದಾರೆ.

‘ಯುಐ’ ಸಿನಿಮಾದ ನಂತರ ಶ್ರಿಕಾಂತ್ ಮತ್ತು ಮನೋಹರ್ ನಾಯ್ಡು ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಖ್ಯಾತ ಕಲಾವಿದ ಗೋಪಾಲಕೃಷ್ಣ ದೇಶಪಾಂಡೆ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಟಿ ಅಪರ್ಣಾ ಕೂಡ ಇದರಲ್ಲಿದ್ದಾರೆ. ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ಮತ್ತು ಅಭಿಷೇಕ್ ಕಾಸರಗೋಡು ಅವರ ಛಾಯಾಗ್ರಹಣವಿದೆ. ದೇವನೂರು ಚಂದ್ರು (Devanur Chandru) ನಿರ್ದೇಶನದ ‘ಗ್ರಾಮಾಯಣ’ ಸಿನಿಮಾ ಒಂದೇ ಒಂದು ಟೀಸರ್‌ನಿಂದ ಹಲವರ ಗಮನ ಸೆಳೆದಿತ್ತು.

ವಿನಯ್ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ ಸಿನಿಮಾ ಬಹಳ ಹಿಂದೆ ಸೆಟ್ಟೇರಿತ್ತು. ಆದರೆ ನಾಯಕಿ ಯಾರೆಂಬುದರ ಬಗ್ಗೆ ಸಿನಿರಸಿಕರು ಕುತೂಹಲದಿಂದ ಕಾದಿದ್ದರು. ಇದೀಗ ಮೇಘಾ ಶೆಟ್ಟಿ ನಾಯಕಿ ಎಂಬುದು ಕನ್‌ಫರ್ಮ್‌ ಆಗಿದೆಸತತ ನಾಲ್ಕು ವರ್ಷಗಳ ಕಾಲ ಪ್ರೇಕ್ಷಕರನ್ನು ರಂಜಿಸಿರುವ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಮೇಘಾ ಶೆಟ್ಟಿಯ ಅಭಿನಯಕ್ಕೆ ಫ್ಯಾನ್ಸ್‌ ಫಿದಾ ಆಗಿದ್ದರು.

ಇದನ್ನೂ ಓದಿ: Rakshit Shetty: ರಕ್ಷಿತ್‌ ಶೆಟ್ಟಿ ವಿಶೇಷ ಮನವಿಗೆ ಪ್ರತಿಕ್ರಿಯೆ ಕೊಟ್ಟ ರಾಮಲಲ್ಲಾ ವಿಗ್ರಹ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್!

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ʻಟ್ರಿಬಲ್ ರೈಡಿಂಗ್ʼ ಸಿನಿಮಾ ಮೂಲಕ ಚಂದನವನಕ್ಕೆ ಕಾಲಿಟ್ಟರು ಮೇಘಾ ಶೆಟ್ಟಿ. ಧನ್ವೀರ್ ನಟನೆಯ ʻಕೈವʼ ಸಿನಿಮಾದಲ್ಲೂ ನಾಯಕಿಯಾಗಿ ನಟಿಸಿದ್ದಾರೆ. ಇತ್ತೀಚೆಗೆ ಮರಾಠಿ ಭಾಷೆಗೂ ಕಾಲಿಟ್ಟಿದ್ದಾರೆ. ‘ಲಂಡನ್ ಕೆಫೆ’ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಕೃಷ್ಣ ಅಭಿನಯದ “ದಿಲ್‌ಪಸಂದ್ʼ ಚಿತ್ರದಲ್ಲಿಯೂ ನಟಿಸಿದ್ದರು.

Exit mobile version