ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಸವದತ್ತಿ ಯಲ್ಲಮ್ಮ (Savadatti Yallamma) ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋಗಳು ಲಭ್ಯವಾಗಿವೆ. ಬೆಳಗಾವಿಯಲ್ಲಿ “ಉತ್ತರಕಾಂಡ” ಚಿತ್ರದ ಚಿತ್ರೀಕರಣವನ್ನು ಮುಗಿಸಿಕೊಂಡು ದೇವಿಯ ದರ್ಶನ ಪಡೆದ ಶಿವಣ್ಣನಿಗೆ ಈ ಕ್ಷೇತ್ರ ಅದೃಷ್ಟವಂತೆ. ಹಿಂದೆ “ಶ್ರೀರಾಮ್”, “ಮೈಲಾರಿ” ಮುಂತಾದ (Uttarakaanda Movie) ಬ್ಲಾಕ್ ಬಸ್ಟರ್ ಚಿತ್ರಗಳ ಪಾಲಿಗೂ ಸವದತ್ತಿ ಯಲ್ಲಮ್ಮ ಅದೃಷ್ಟ ದೇವತೆ. ಹಾಗಾಗಿ “ಉತ್ತರಕಾಂಡ”ದ ಚಿತ್ರೀಕರಣದ ನಂತರ ಶಿವಣ್ಣ ತಾಯಿ ಆಶಿರ್ವಾದವನ್ನು ಪಡೆದಿದ್ದಾರೆ.
ಕೆ.ಆರ್.ಜಿ. ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸಿರುವ “ಉತ್ತರಕಾಂಡ” ರೋಹಿತ್ ಪದಕಿ ನಿರ್ದೇಶನದ ಬಹು ನಿರೀಕ್ಷಿತ ಆಕ್ಷನ್ ಡ್ರಾಮಾ ಚಿತ್ರವಾಗಿದೆ. ಈ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್, ನಟರಾಕ್ಷಸ ಡಾಲಿ ಧನಂಜಯ, ಐಶ್ವರ್ಯ ರಾಜೇಶ್,ಭಾವನಾ ಮೆನನ್, ದಿಗಂತ್ ಮಂಚಾಲೆ, ರಂಗಾಯಣ ರಘು, ವಿಜಯ್ ಬಾಬು ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಬಾಲಿವುಡ್ ಹೆಸರಾಂತ ಗಾಯಕ,ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿದ್ದಾರೆ.
ಏ.18ರಂದು ಚಿತ್ರತಂಡ ದೂದ್‌ಪೇಡ ದಿಗಂತ್ ಅವರ ಲುಕ್ ಅನಾವರಣಗೊಳಿಸಿತ್ತು. ಮಿರ್ಚಿ “ಮಲ್ಲಿಗೆ” ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಟೋಬಿʼ, ʼಸಪ್ತ ಸಾಗರದಾಚೆ ಸೈಡ್ ಬಿʼ ಮುಂತಾದ ಸಿನಿಮಾಗಳಲ್ಲಿ ಗಮನ ಸೆಳೆದಿದ್ದ ಚೈತ್ರಾ ʼಉತ್ತರಕಾಂಡʼ ಚಿತ್ರತಂಡವನ್ನು ಸೇರಿದ್ದು, ಇನ್ನಷ್ಟು ನಿರೀಕ್ಷೆ ಮೂಡಿಸಿದೆ.ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯನ್ನು ಒಳಗೊಂಡ ʼಉತ್ತರಕಾಂಡʼ ಸಿನಿಮಾಕ್ಕೆ ರೋಹಿತ್ ಪದಕಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಚೈತ್ರಾ ಆಚಾರ್ ಈ ಚಿತ್ರದಲ್ಲಿ ಲಚ್ಚಿ ಎಂಬ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಖ್ಯಾತ ನಿರ್ದೇಶಕ ಯೋಗರಾಜ್ ಭಟ್ `ಉತ್ತರಾಕಾಂಡ’ದಲ್ಲಿ (Uttarakaanda Movie) ನಟಿಸಲಿದ್ದಾರೆ. “ಪಾಟೀಲ” ಎಂಬ ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ನಿರ್ದೇಶಕರಾಗಿ ಆ್ಯಕ್ಷನ್ ಕಟ್ ಹೇಳುತ್ತಿದ್ದ ಭಟ್ಟರು,ಇದೀಗ ವಿಭಿನ್ನವಾಗಿ ಆ್ಯಕ್ಷನ್ ಕಟ್ ಹೇಳಿಸಿಕೊಳ್ಳಲಿದ್ದಾರೆ.
ನಾಯಕಿ ಯಾರು?
ಚಿತ್ರತಂಡ ಆರಂಭದಲ್ಲಿ ನಾಯಕಿಯಾಗಿ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಅವರನ್ನು ಹೆಸರಿಸಿತ್ತು. ಮಾತ್ರವಲ್ಲ ರಮ್ಯಾ ಚಿತ್ರದ ಮುಹೂರ್ತದಲ್ಲಿಯೂ ಭಾಗವಹಿಸಿದ್ದರು. ಆದರೆ ಇತ್ತೀಚೆಗೆ ಅವರು ಚಿತ್ರತಂಡದಿಂದ ಹೊರಬಂದು ಶಾಕ್ ನೀಡಿದ್ದರು. ಕಳೆದ ವರ್ಷ ʼಸ್ವಾತಿ ಮುತ್ತಿನ ಮಳೆ ಹನಿಯೇʼ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದಿದ್ದ ರಮ್ಯಾ ಕೆಲವು ದಿನಗಳ ಹಿಂದೆ ʼಉತ್ತರಕಾಂಡʼ ಸಿನಿಮಾದಿಂದಲೂ ಹೊರ ಬಂದಿದ್ದರು. ʼ‘ಡೇಟ್ಸ್ ಕೊರತೆಯಿಂದಾಗಿ ನಾನು ʼಉತ್ತರಕಾಂಡʼದಲ್ಲಿ ಕೆಲಸ ಮಾಡುತ್ತಿಲ್ಲ (ಸಿನಿಮಾ ಮತ್ತು ರಾಜಕೀಯದ ಕೆಲಸಗಳನ್ನು ನಾನು ಸದ್ಯಕ್ಕೆ ಸ್ಥಗಿತಗೊಳಿಸಿದ್ದೇನೆ). ಚಿತ್ರತಂಡಕ್ಕೆ ನಾನು ಶುಭ ಹಾರೈಸುತ್ತೇನೆ’ʼ ಎಂದು ರಮ್ಯಾ ಕಾರಣ ತಿಳಿಸಿದ್ದರು. ಆ ಮೂಲಕ ಅನೇಕ ವರ್ಷಗಳ ಬಳಿಕ ಅವರನ್ನು ತೆರೆ ಮೇಲೆ ನೋಡಬೇಕೆಂಬ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು.
ಉತ್ತರಕಾಂಡʼದ ಮುಹೂರ್ತ 2022ರಲ್ಲಿಯೇ ಆಗಿತ್ತು. ಆದರೆ ಇದುವರೆಗೆ ಚಿತ್ರೀಕರಣ ಆರಂಭವಾಗಿರಲಿಲ್ಲ. ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ ಹಾಗೂ ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲ್ಯಾನಿಂಗ್‌ನ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೆ ಇದೀಗ ಸರ್ವ ಸಿದ್ಧತೆಗಳೊಂದಿಗೆ ಚಿತ್ರೀಕರಣ ಆರಂಭಗೊಂಡಿದೆʼʼ ಎಂದು ಚಿತ್ರತಂಡ ತಿಳಿಸಿದೆ. ಖ್ಯಾತ ಬಾಲಿವುಡ್ ಗಾಯಕ ಹಾಗೂ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.