ಕನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ (Tharun Sudhir) ಹಾಗೂ ಸೋನಾಲ್ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅದಕ್ಕೂ ಮೊದಲು ಅದ್ದೂರಿಯಾಗಿ ಅರಿಶಿಣ ಶಾಸ್ತ್ರಗಳನ್ನು ಮಾಡಿಕೊಳ್ಳಲಾಗಿದೆ.
ಚಿತ್ರರಂಗದ ಅನೇಕರ ಜೊತೆ ತರುಣ್ ಸುಧೀರ್ಗೆ ಒಳ್ಳೆಯ ಗೆಳೆತನ ಇದೆ. ಹೀಗಾಗಿ ನೆನಪಿರಲಿ ಪ್ರೇಮ್, ಶರಣ್ ಸೇರಿದಂತೆ ಅನೇಕರು ಅರಿಶಿಣ ಶಾಸ್ತ್ರಕ್ಕೆ ಬಂದು ಪೋಸ್ ಕೊಟ್ಟಿದ್ದಾರೆ.
ಇದನ್ನೂ ಓದಿ: Tharun Sudhir: ಸೋನಾಲ್- ತರುಣ್ ಕಲ್ಯಾಣ: ಸಿನಿಮಾ, ರಾಜಕೀಯದ ಗಣ್ಯರಿಗೆ ತಲುಪಿತು ಆಮಂತ್ರಣ ಪತ್ರ!
ಸೋನಲ್ ಅವರು ಮಂಗಳೂರಿನವರು. ಅವರು ಮೊದಲು ತಮಿಳು ಸಿನಿಮಾದಲ್ಲಿ ನಟಿಸಿದ್ದರು. ಆನ್ಲೈನ್ನಲ್ಲಿ ಇರುವ ಮಾಹಿತಿ ಪ್ರಕಾರ ಅವರು ಜನಿಸಿದ್ದು 1995ರ ಆಗಸ್ಟ್ 11ರಂದು. ಕೆಲವೇ ದಿನಗಳಲ್ಲಿ 29 ವರ್ಷ ತುಂಬಲಿದೆ. ತರುಣ್ ಸುಧೀರ್ ಅವರಿಗೆ 41 ವರ್ಷ ಎನ್ನಲಾಗಿದೆ. ಈಗ ಅವರು ಜನಿಸಿದ್ದು 1983ರಲ್ಲಿ. ಅಂದರೆ, ಇಬ್ಬರ ಮಧ್ಯೆ ಸುಮರು 12 ವರ್ಷಗಳ ಅಂತರ ಇದೆ.