Site icon Vistara News

Vinay Rajkumar: ವಿನಯ್ ರಾಜ್ ಕುಮಾರ್ ಪ್ರೇಮಕಥೆಯ ಮತ್ತೊಂದು ಹಾಡು ಬಿಡುಗಡೆ!

Vinay Rajkumar Ondu Sarala Prema Kathe ellaamaatannu Out

ಬೆಂಗಳೂರು: ಸಿಂಪಲ್ ಸುನಿ ಸಾರಥ್ಯದ ಒಂದು ಸರಳ ಪ್ರೇಮಕಥೆ ಆಗಮನಕ್ಕೆ ದಿನಗಣೆಯಷ್ಟೇ ಬಾಕಿ ಇದೆ. ಫೆಬ್ರವರಿ 8ಕ್ಕೆ ತೆರೆಗೆ ಬರುತ್ತಿರುವ ಈ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಕ್ಯಾರೆಕ್ಟರ್ ಟೀಸರ್ ಬಿಟ್ಟು ನಿರೀಕ್ಷೆ ಹೆಚ್ಚಿಸಿರುವ ಸುನಿ ಈಗ ಒಂದೊಂದೇ ಹಾಡು ಬಿಡುಗಡೆ ಮಾಡುವ ಮೂಲಕ ಚಿತ್ರಪ್ರೇಮಿಗಳಿಗೆ ಆಮಂತ್ರಣ ನೀಡುತ್ತಿದ್ದಾರೆ.

ಒಂದು ಸರಳ ಪ್ರೇಮಕಥೆ ಸಿನಿಮಾದ ಮತ್ತೊಂದು ಮೆಲೋಡಿ ಮಸ್ತಿ ಅನಾವರಣಗೊಂಡಿದೆ. ಮೋಹಕ ತಾರೆ ರಮ್ಯಾ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಾಡನ್ನು ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ. ʻಎಲ್ಲಾ ಮಾತನ್ನುʼ ಎಂಬ ಹಾಡಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ವೀರ್ ಸಮರ್ಥ್ ಸಂಗೀತ ಒದಗಿಸುವುದರ ಜತೆಗೆ ಶಿವಾನಿ ಸ್ವಾಮಿ ಜತೆಗೂಡಿ ಧ್ವನಿಯಾಗಿದ್ದಾರೆ. ದೊಡ್ಮನೆ ಕುವರ ವಿನಯ್ ರಾಜ್ ಕುಮಾರ್ ಹಾಗೂ ನಾಯಕಿ ‌ಮಲ್ಲಿಕಾ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಒಂದು ಸರಳ ಪ್ರೇಮಕಥೆ ಮೊದಲ ಹಾಡು ರಿಲೀಸ್; ಪ್ರಿಯತಮೆ ಹುಡುಕಾಟದಲ್ಲಿ ವಿನಯ್ ರಾಜ್ ಕುಮಾರ್

ವಿನಯ್ ರಾಜ್ ಕುಮಾರ್ ಆತಿಷಯ ಎಂಬ ಪಾತ್ರದಲ್ಲಿ ‌ನಟಿಸಿದ್ದು, ಅವರಿಗೆ ಜೋಡಿಯಾಗಿ
ಮಲ್ಲಿಕಾ ಸಿಂಗ್ ಹಾಗೂ ಸ್ವಾತಿಷ್ಠಾ ಕೃಷ್ಣನ್ ಅಭಿನಯಿಸಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸಾಧುಕೋಕಿಲಾ ಹಾಗೂ ರಾಜೇಶ್ ನಟರಂಗ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಒಂದು ಸರಳ ಪ್ರೇಮಕಥೆಗೆ ಮೈಸೂರು ರಮೇಶ್ ಹಣ ಹಾಕಿದ್ದಾರೆ. ಒಂದು ಸರಳ ಪ್ರೇಮಕಥೆಗೆ ಆದಿ ಅವರ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಹಾಗೂ ಕಾರ್ತಿಕ್ ಅವರ ಕ್ಯಾಮರಾ ಶ್ರಮವಿದೆ.

Exit mobile version