Site icon Vistara News

Actor Yash: ವಿಚಿತ್ರ ಲುಕ್‌ನಲ್ಲಿ ಕಂಡ ರಾಕಿಂಗ್‌ ಸ್ಟಾರ್‌ ಯಶ್‌: ಫ್ಯಾನ್ಸ್‌ಗೆ ಹೆಚ್ಚಿತು ಕುತೂಹಲ!

Yash clicked wearing a turban fans wonder his look

ಬೆಂಗಳೂರು: ʼಕೆಜಿಎಫ್‌ 2ʼ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ (Actor Yash) ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ. ಇತ್ತೀಚೆಗೆ, ನಟ ತಲೆಗೆ ಶಾಲು ರೀತಿಯ ವಸ್ತ್ರ ಸುತ್ತಿಕೊಂಡು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಅವರ ಸ್ನೇಹಿತರ ಮದುವೆ ಸಮಾರಂಭದಲ್ಲಿ ಯಶ್ ಮತ್ತು ರಾಧಿಕಾ ಪಂಡಿತ್ ಭಾಗಿ ಆಗಿದ್ದು, ಯಶ್ ಲುಕ್ ಎಲ್ಲರ ಗಮನ ಸೆಳೆದಿದೆ. ಅವರ ಕಾಸ್ಟ್ಯೂಮ್ ಕೂಡ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ವಿಡಿಯೊ ವೈರಲ್ ಆಗಿದೆ.

ಯಶ್‌ ಅವರ ಈ ಲುಕ್‌ ಕಂಡು ‘ಟಾಕ್ಸಿಕ್’ ಸಿನಿಮಗಾಗಿ ನಟ ಲುಕ್‌ ಬದಲಾಯಿಸಿಕೊಂಡಿದ್ದಾರೆ. ಅದು ರಿವೀಲ್‌ ಆಗಬಾರದೆಂದು ಯಶ್‌ ಈ ರೀತಿ ಕಾಣಿಸಿಕೊಂಡಿದ್ದಾರೆ. ಹೇರ್‌ಸ್ಟೈಲ್‌ ಗೊತ್ತಾಗಬಾರದೆಂದು ಮುಚ್ಚಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಯಶ್‌ ಫ್ಯಾನ್ಸ್‌ ಕಮೆಂಟ್‌ ಮಾಡುತ್ತಿದ್ದಾರೆ.

ಮಲಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಟಾಕ್ಸಿಕ್‌ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಇದೀಗ ಚಿತ್ರದ ಬಗ್ಗೆ ಮಹತ್ವದ ಅಪ್‌ಡೇಟ್‌ ಹೊರಬಂದಿದ್ದು, ಬಾಲಿವುಡ್‌ ಖ್ಯಾತ ನಟಿ ಕರೀನಾ ಕಪೂರ್‌ (Kareena Kapoor) ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಡುತ್ತಿದ್ದಾರೆ ಎಂದು ವರದಿಯೂ ಆಗಿದೆ.
ಡಿಸೆಂಬರ್‌ನಲ್ಲಿ ಟೈಟಲ್‌ ರಿವೀಲ್‌ ಮಾಡಿದ ಬಳಿಕ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬಂದಿರಲಿಲ್ಲ. ಶೀಘ್ರದಲ್ಲೇ ಗೋವಾ ಸೇರಿದಂತೆ ವಿವಿಧ ಕಡೆಗಳಲ್ಲಿ ಚಿತ್ರೀಕರಣ ಆರಂಭವಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Actor Yash: ಯಶ್ ಬೆಂಗಾವಲು ವಾಹನ ಹರಿದು ಗಾಯಗೊಂಡಿದ್ದ ಯುವಕನಿಂದ ದೂರು

ನಾಯಕಿ ಯಾರು?

ʼಟಾಕ್ಸಿಕ್‌ʼ ಚಿತ್ರದಲ್ಲಿ ಟಾಲಿವುಡ್‌ನ ಸಾಯಿ ಪಲ್ಲವಿ ನಾಯಕಿಯಾಗಿ ಅಭಿನಯಿಸುತ್ತಾರೆ. ಜತೆಗೆ ಮಲೆಯಾಳಂ ನಟಿ ಸಂಯುಕ್ತಾ ಮೆನನ್‌ ಮತ್ತೊಬ್ಬ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಮಾತ್ರವಲ್ಲ ಬಹುಭಾಷಾ ನಟಿ ರಾಶಿ ಖನ್ನಾ ಅವರ ಹೆಸರೂ ಕೇಳಿ ಬಂದಿದೆ. ಇದರ ಜತೆಗೆ ಮಲಯಾಳಂ ನಟ ಟೊವಿನೋ ಥಾಮಸ್ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸುತ್ತಾರೆ ಎನ್ನಲಾಗಿದೆ. ಬರೋಬ್ಬರಿ 170 ಕೋಟಿ ರೂಪಾಯಿ ಬಜೆಟ್‌ನ ಈ ಯಶ್‌ ಚಿತ್ರ ಡ್ರಗ್‌ ಮಾಫಿಯಾ ಬಗ್ಗೆ ಬೆಳಕು ಚೆಲ್ಲಲಿದೆ ಎಂದು ಮೂಲಗಳು ತಿಳಿಸಿದ್ದು, ಪ್ರಮುಖ ಪಾತ್ರದಲ್ಲಿ ಯಾರೆಲ್ಲ ನಟಿಸುತ್ತಿದ್ದಾರೆ ಎನ್ನುವ ವಿಚಾರವನ್ನು ಚಿತ್ರತಂಡ ಇದುವರೆಗೆ ಬಹಿರಂಗಪಡಿಸಿಲ್ಲ. 2025ರಲ್ಲಿ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ.

ಕರೀನಾ ಪಾತ್ರವೇನು?

ಕಥೆಗೆ ಬಹು ಮುಖ್ಯ ತಿರುವು ನೀಡುವ ಪಾತ್ರದಲ್ಲಿ ಕರೀನಾ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆಯೂ ಯಶ್‌ ಬಾಲಿವುಡ್‌ ಕಲಾವಿದರ ಜತೆ ತೆರೆ ಹಂಚಿಕೊಂಡಿದ್ದಾರೆ. ಪ್ರಶಾಂತ್‌ ನೀಲ್‌ ನಿರ್ದೇಶನದ ʼಕೆಜಿಎಫ್‌ 2ʼ ಚಿತ್ರದಲ್ಲಿ ಬಾಲಿವುಡ್‌ ತಾರೆಯರಾದ ಸಂಜಯ್‌ ದತ್‌ ಮತ್ತು ರವೀನಾ ಟಂಡನ್‌ ಕಾಣಿಸಿಕೊಂಡಿದ್ದರು. ಯಶ್‌ ಜತೆ ಇವರ ಪಾತ್ರಗಳೂ ಮೆಚ್ಚುಗೆ ಪಡೆದಿದ್ದವು. ಕೆವಿಎನ್ ಪ್ರೊಡಕ್ಷನ್ಸ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ ʼಟಾಕ್ಸಿಕ್‌ʼ ಚಿತ್ರವನ್ನು ನಿರ್ಮಿಸಲಿದ್ದಾರೆ.

Exit mobile version