ಗದಗ: ಜಿಲ್ಲೆಯ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದ ಕೆಲವು ಯುವಕರು ಸೇರಿ ಬೃಹತ್ ಗಾತ್ರದ ಕಟೌಟ್ ರೂಪಿಸಿ ಅದನ್ನು ಕಟ್ಟುವ ಹಂತದಲ್ಲಿ ಅದು ವಿದ್ಯುತ್ ತಂತಿಗೆ ಸ್ಪರ್ಶಿಸಿತ್ತು. ಇದರಿಂದ ಹನುಮಂತ ಹರಿಜನ (21), ಮುರಳಿ ನಡುವಿನಮನಿ (20) ಮತ್ತು ನವೀನ್ ಗಾಜಿ (19) ಎಂಬ ಮೂವರು ಯುವಕರು ಮೃತಪಟ್ಟರೆ, ಮಂಜುನಾಥ್ ಹರಿಜನ, ದೀಪಕ್ ಹರಿಜನ, ಪ್ರಕಾಶ್ ಮ್ಯಾಗೇರಿ ಎಂಬುವವರು ಗಾಯಗೊಂಡಿದ್ದರು. ಯಶ್ (Actor Yash) ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಮೃತ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್ ನೀಡಿದ್ದರು. ಅದೇ ವೇಳೆ ಗಾಯಾಳುಗಳ ಬ್ಯಾಂಕ್ ಮಾಹಿತಿ ಪಡೆದು ಪರಿಹಾರದ ಭರವಸೆ ನೀಡಿ ಹೋಗಿದ್ದರು. ಇದೀಗ ನಾಲ್ಕು ಜನ ಗಾಯಾಳುಗಳ ಕುಟುಂಬಕ್ಕೆ ತಲಾ ಒಂದು ಲಕ್ಷ ರೂ. ಬ್ಯಾಂಕ್ ಖಾತೆಗೆ ನೇರವಾಗಿ ಹಾಕಿದ್ದಾರೆ.
ಏನಿದು ಘಟನೆ?
ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದ ಕೆಲವು ಯುವಕರು ಸೇರಿ ಬೃಹತ್ ಗಾತ್ರದ ಕಟೌಟ್ ರೂಪಿಸಿ ಅದನ್ನು ಕಟ್ಟುವ ಹಂತದಲ್ಲಿ ಅದು ವಿದ್ಯುತ್ ತಂತಿಗೆ ಸ್ಪರ್ಶಿಸಿತ್ತು. ಇದರಿಂದ ಹನುಮಂತ ಹರಿಜನ (21), ಮುರಳಿ ನಡುವಿನಮನಿ (20) ಮತ್ತು ನವೀನ್ ಗಾಜಿ (19) ಎಂಬ ಮೂವರು ಯುವಕರು ಮೃತಪಟ್ಟರೆ, ಮಂಜುನಾಥ್ ಹರಿಜನ, ದೀಪಕ್ ಹರಿಜನ, ಪ್ರಕಾಶ್ ಮ್ಯಾಗೇರಿ ಎಂಬುವವರು ಗಾಯಗೊಂಡಿದ್ದರು. ಇದಾದ ಬಳಿಕ ಯಶ್ ಅವರು ಮೃತಪಟ್ಟ ಮೂವರು ಅಭಿಮಾನಿಗಳ (Actor Yash) ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು.
ಇದನ್ನೂ ಓದಿ: Actor Yash: ಮಲೇಷಿಯಾಗೆ ಹಾರಿದ ʻರಾಕಿಂಗ್ ಸ್ಟಾರ್’ ಯಶ್ʼ: ಫೋಟೊ ವೈರಲ್!
ಅಭಿಮಾನಿಗಳು ಹುಟ್ಟು ಹಬ್ಬದ ಸಂದರ್ಭದಲ್ಲಿ (Yash Birthday) ತಮ್ಮ ಅಭಿಮಾನವನ್ನು ಬ್ಯಾನರ್, ಕಟೌಟ್‌ಗಳ ಮೂಲಕ ತೋರಿಸುವ ಬದಲು ಒಳ್ಳೆಯ ಕೆಲಸದ ಮೂಲಕ, ಒಳ್ಳೆಯ ಬದುಕಿನ ಮೂಲಕ ತೋರಿಸಬೇಕು ಎಂದು ಯಶ್ ಈ ಹಿಂದೆ ಮನವಿ ಮಾಡಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಚಿತ್ರ ನಟ ಯಶ್ ಅವರು ಸಂಜೆಯ ಹೊತ್ತಿಗೆ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ಮೂಲಕ ಸೂರಣಗಿಗೆ ಆಗಮಿಸಿದ್ದರು. ಅಲ್ಲಿ ಮೃತರ ಮನೆಗಳಿಗೆ ಭೇಟಿ ನೀಡಿ ಮನೆ ಮಂದಿಗೆ ಸಾಂತ್ವನ ಹೇಳಿದ್ದರು.