Site icon Vistara News

Yuva Rajkumar: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಯುವ ರಾಜ್​ಕುಮಾರ್​ ; ಅಣ್ಣಾವ್ರ ಕುಟುಂಬದಲ್ಲಿ ಇದೇ ಮೊದಲ ಪ್ರಕರಣ!

Yuva Rajkumar son of raghavendra Rajkumar yuva divorce

ಬೆಂಗಳೂರು: ವರನಟ ಡಾ. ರಾಜ್‌ ಕುಮಾರ್‌ (Yuva Rajkumar) ಕುಟುಂಬದ ಕುಡಿ ಯುವ ರಾಜ್‌ಕುಮಾರ್ ಪತ್ನಿ ಶ್ರೀದೇವಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜ್‌ಕುಮಾರ್‌ ಭಾರತೀಯ ವಿವಾಹ ಕಾಯ್ದೆ 13(1)ಅಡಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜೂನ್​ 6ರಂದು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿದೆ. ಹೆಂಡತಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಎದುರಿಸುತ್ತಿದ್ದೆ ಎಂದು ಯುವ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಯುವ ಕೇಸ್ ಕೂಡ ದಾಖಲು ಮಾಡಿದ್ದಾರೆ.

ಯುವರಾಜ್​ ಕುಮಾರ್​ ಮದುವೆಯಾಗಿ ನಾಲ್ಕು ವರ್ಷಗಳ ಬಳಿಕ ಡಿವೋರ್ಸ್‌ ಪಡೆದುಕೊಳ್ಳಲು ಮುಂದಾಗಿದ್ದಾರೆ. ಶ್ರೀದೇವಿ ಅವರು ರಾಜ್ ಅಕಾಡೆಮಿ ನಡೆಸಿಕೊಂಡು ಹೋಗುತ್ತಿದ್ದರು. ಮೈಸೂರು ಮೂಲದ ಹುಡುಗಿ ಶ್ರೀದೇವಿಯನ್ನ ವರಿಸಿದ್ದ ಯುವ ಈಗ ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಕೇಸ್ ಕೂಡ ದಾಖಲಿಸಿದ್ದಾರೆ. ಶ್ರೀದೇವಿಗೆ ಈಗಾಗಲೇ ಯುವ ನೋಟಿಸ್‌ ಕೊಟ್ಟಿದ್ದಾರೆ. ಸದ್ಯಕ್ಕೆ ಅಮೆರಿಕಾದಲ್ಲಿ ಶ್ರೀದೇವಿ ನೆಲೆಸಿದ್ದಾರೆ. ಶಾಂತಿನಗರ ಫ್ಯಾಮಿಲಿ ಕೋರ್ಟ್‌ನಲ್ಲಿ ಇದೇ ತಿಂಗಳು 6ನೇ ತಾರೀಕು ವಿಚ್ಛೇದನ ಅರ್ಜಿ ಸಲ್ಲಿಸಿದ್ದರು ಯುವರಾಜ್.

ಇದನ್ನೂ ಓದಿ: Yuva Rajkumar: ಯುವ ಅಭಿಮಾನಿಗಳಿಗೆ ನಿರಾಸೆ; ಹುಟ್ಟುಹಬ್ಬ ಆಚರಣೆಗೆ ಬ್ರೇಕ್‌

2019ರಲ್ಲಿ ಈ ಜೋಡಿ ಪ್ರೀತಿಸಿ ಮದುವೆಯಾಗಿತ್ತು. ಅಂದಹಾಗೆ ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು.ಶ್ರೀದೇವಿ ಅವರು ವಿನಯ್ ರಾಜ್ ಕುಮಾರ್ ಅಭಿನಯದ ರನ್ ಆಂಟನಿ ಸಿನಿಮಾದ ಪ್ರಚಾರದಲ್ಲೂ ಭಾಗಿಯಾಗಿದ್ದರು. ಇನ್ನೂ ಪವರ್ ಸ್ಟಾರ್‌ ಪುನೀತ್‌ ನಿಧನರಾದಾಗ ಮುಂದೆ ನಿಂತು ಸಾಕಷ್ಟು ಕೆಲಸಗಳು ಮಾಡಿದ್ದರು. ಕೆಲವು ದಿನಗಳಿಂದ ಇಬ್ಬರೂ ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇನ್ನೂ ಯುವ ಸಿನಿಮಾ ಪ್ರಚಾರದಲ್ಲಿ ಪತ್ನಿ ಶ್ರೀದೇವಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.

ಇನ್ನೂ ಅಚ್ಚರಿ ಅಂದರೆ ನಿವೇದಿತಾ ಹಾಗೂ ಚಂದನ್‌ ಕೂಡ ಇದೇ ಕೋರ್ಟ್‌ನಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಇದೀಗ ಮತ್ತೊಂದು ಜೋಡಿ ಕೂಡ ವೈವಾಹಿಕ ಜೀವನಕ್ಕೆ ಫುಲ್‌ಸ್ಟಾಪ್‌ ಇಡಲು ಮುಂದಾಗಿದೆ.

ʻಯುವʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಯುವ ರಾಜ್‌ಕುಮಾರ್ (Yuva Rajkumar) ಎಂಟ್ರಿ ಕೊಟ್ಟಿದ್ದರು. ವರನಟ ಡಾ. ರಾಜ್‌ ಕುಮಾರ್‌ ಕುಟುಂಬದ ಮತ್ತೊಂದು ಕುಡಿ ಸಿನಿಮಾ ರಂಗದಲ್ಲಿ ಮಿಂಚಿದ್ದರು. ಕನ್ನಡದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣದ ʼಯುವʼ ಚಿತ್ರಕ್ಕೆ ಯಶಸ್ವಿ ನಿರ್ದೇಶಕ ಸಂತೋಷ್ ಆನಂದ್​ರಾಮ್ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಯುವ ರಾಜ್​ಕುಮಾರ್ ಜತೆಗೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ, ಹಿತಾ ಚಂದ್ರಶೇಖರ್ ಮೊದಲಾದವರು ನಟಿಸಿದ್ದರು. . ಎಲೆಕ್ಷನ್ ಅಬ್ಬರದ ಮಧ್ಯೆಯೂ ಈ ಚಿತ್ರ ಪ್ರೇಕ್ಷಕರ ಗಮನ ಸೆಳೆದಿತ್ತು. ಸಿನಿಮಾ ತೆರೆ ಕಂಡ 21 ದಿನಕ್ಕೆ ಒಟಿಟಿಗೆ ಬಂದಿತ್ತು. ಸದ್ಯ ʼಯುವʼ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

Exit mobile version