Site icon Vistara News

Sanjay Dutt: ‘ಡಬಲ್ ಇಸ್ಮಾರ್ಟ್’ಗೆ ʻಬಿಗ್ ಬುಲ್ʼ ಎಂಟ್ರಿ; ಸಂಜಯ್ ದತ್ ಬರ್ತ್‌ಡೇ ಸ್ಪೆಷಲ್‌!

Sanjay Dutt first look as Big Bull

ಬೆಂಗಳೂರು: ಉಸ್ತಾದ್ ರಾಮ್ ಪೋತಿನೇನಿ (Ram Pothineni) ಹಾಗೂ ಡೈರೆಕ್ಟರ್ ಪುರಿ ಜಗನ್ನಾಥ್ ಜೋಡಿಯ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ `ಡಬಲ್ ಇಸ್ಮಾರ್ಟ್‘ (Double iSmart) ಕಳೆದ ತಿಂಗಳಷ್ಟೇ ಅದ್ಧೂರಿಯಾಗಿ ಹೈದರಾಬಾದ್‌ನಲ್ಲಿ ಸೆಟ್ಟೇರಿತ್ತು. ಈ ಚಿತ್ರಕ್ಕಾಗಿ ರಾಮ್ ಅವರ ಲುಕ್‌ ಬದಲಾಗಿದೆ. ಸಿನಿಮಾ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಪುರಿ ಕನೆಕ್ಟ್ಸ್ ಬ್ಯಾನರ್‌ನಡಿ ಪುರಿ ಜಗನ್ನಾಥ್ ಹಾಗೂ ಚಾರ್ಮಿ ಕೌರ್ ಅದ್ಧೂರಿಯಾಗಿ ನಿರ್ಮಿಸುತ್ತಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾ ಅಂಗಳಕ್ಕೆ ಬಾಲಿವುಡ್ (Sanjay Dutt) ಸೂಪರ್ ಸ್ಟಾರ್ ಎಂಟ್ರಿಯಾಗಿದೆ.

ಬಿಗ್ ಬುಲ್ ಪಾತ್ರದಲ್ಲಿ ಸಂಜಯ್ ದತ್

ಬಾಲಿವುಡ್ ಸೂಪರ್ ಸ್ಟಾರ್ ಸಂಜಯ್‌ದತ್‌ ಇತ್ತೀಚೆಗೆ ಸೌತ್ ಸಿನಿಮಾಗಳದತ್ತ ಚಿತ್ತ ಹರಿಸುತ್ತಿದ್ದಾರೆ. ಕೆಜಿಎಫ್ ಬಳಿಕ ಬ್ಯಾಕ್ ಟು ಬ್ಯಾಕ್ ದಕ್ಷಿಣ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಸಂಜು ಬಾಬಾ ಈಗ ‘ಡಬಲ್ ಇಸ್ಮಾರ್ಟ್’ ಭಾಗವಾಗಿದ್ದಾರೆ. ಸಂಜಯ್ ದತ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಚಿತ್ರತಂಡ ಸ್ಪೆಷಲ್ ಪೋಸ್ಟರ್ ಬಿಡುಗಡೆ ಮಾಡಿದೆ ಶುಭ ಕೋರಿದೆ. ಗಡ್ಡ ಬಿಟ್ಟು ಬಿಟ್ಟು ಸ್ಟೈಲೀಶ್ ಲುಕ್‌ನಲ್ಲಿ ಸಿಗಾರ್ ಸೇದುತ್ತಾ ರಗಡ್ ಆಗಿ ಮುನ್ನಾಭಾಯಿ ಕಾಣಿಸಿಕೊಂಡಿದ್ದು, ಈ ಪಾತ್ರಕ್ಕೆ ಬಿಗ್ ಬುಲ್ ಎಂದು ಹೆಸರಿಡಲಾಗಿದೆ. ಸಂಜಯ್ ದತ್ ಹಿಂದೆಂದೂ ಕಾಣದ ರೀತಿಯಲ್ಲಿ ತೋರಿಸಲು ನಿರ್ದೇಶಕ ಪುರಿ ಜಗನ್ನಾಥ್ ಪ್ಲಾನ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Ram Pothineni : ʻಡಬಲ್ ಇಸ್ಮಾರ್ಟ್’ ಮೂಲಕ ಮತ್ತೆ ಒಂದಾದ ಪುರಿ ಜಗನ್ನಾಥ್-ರಾಮ್ ಪೋತಿನೇನಿ

ಪುರಿ ಜಗನ್ನಾಥ್ ಕಥೆ ಬರೆದು ನಿರ್ದೇಶಿಸುತ್ತಿರುವ ಡಬಲ್ ಇಸ್ಮಾರ್ಟ್ ಸಿನಿಮಾಗೆ ಹಾಲಿವುಡ್ ಗಿಯಾನಿ ಜಿಯಾನೆಲ್ಲಿ ಕ್ಯಾಮೆರಾ ಹಿಡಿಯಲಿದ್ದಾರೆ. ಲೈಗರ್ ಸಿನಿಮಾದಲ್ಲಿ ಖಳನಾಯಕ ಘರ್ಜಿಸಿದ್ದ ವಿಷು ರೆಡ್ಡಿ ಪುರಿ ಕನೆಕ್ಟ್ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಭಾರೀ ಬಜೆಟ್‌ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ. ಮುಂದಿನ ವರ್ಷದ ಶಿವರಾತ್ರಿ ಹಬ್ಬಕ್ಕೆ ಬಿಡುಗಡೆಯಾಗಲಿರುವ ಈ ಚಿತ್ರ ತೆಲುಗು, ತಮಿಳು, ಕನ್ನಡ, ಹಿಂದಿ ಹಾಗೂ‌ ಮಲಯಾಳಂ ಭಾಷೆಯಲ್ಲಿ ಮೂಡಿ ಬರಲಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.

Exit mobile version