ಬೆಂಗಳೂರು: ಸ್ಯಾಂಡಲ್‌ವುಡ್ ನಟ ರಕ್ಷಿತ್ ಶೆಟ್ಟಿ (Rakshit Shetty) ಹಾಗೂ ರುಕ್ಮಿಣಿ ವಸಂತ್ (rukmini vasanth) ಅಭಿನಯದ ʻಸಪ್ತ ಸಾಗರದಾಚೆ ಎಲ್ಲೋʼ (saptha sagaradache ello) ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲಿ ಸಕ್ಸಸ್ ಕಂಡಿದೆ. ಪ್ರೇಕ್ಷಕರು ಭಾಗ 2ಕ್ಕೆ ಕಾಯುತ್ತಿದ್ದರು. ಅ.27ಕ್ಕೆ ಸಿನಿಮಾ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿತ್ತು. ಆದರೀಗ ಸಿನಿಮಾ ನವೆಂಬರ್ 17ರಂದು ರಿಲೀಸ್ ಆಗುತ್ತಿದೆ. ವಿಶೇಷ ಅಂದರೆ ಈ ಬಾರಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ.
ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲಿ ಏಕಕಾಲಕ್ಕೆ ನವೆಂಬರ್ 17ರಂದು ರಿಲೀಸ್ ಆಗುತ್ತಿದೆ. ‘ಸಪ್ತ ಸಾಗರಾಲು ದಾಟಿ’ ಟೈಟಲ್‌ನಲ್ಲಿ ಚಿತ್ರವನ್ನು ತೆಲುಗಿನಲ್ಲಿ ಡಬ್ ಮಾಡಿ ರಿಲೀಸ್ ಮಾಡಿದ್ದಾಗಿದೆ. ಸೈಡ್- A ಒಟಿಟಿಗೆ ಎಂಟ್ರಿ ಕೊಟ್ಟಿದೆ. ಭಾಗ 1 (‘Sapta Sagaralu Dhaati) ಒಟಿಟಿಯಲ್ಲಿ ನೋಡದೆ ಇರುವವರು ನೋಡಬಹುದು. ಅಮೆಜಾನ್ ಪ್ರೈಮ್‌ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಆಗುತ್ತಿದೆ. ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆಗಳನ್ನು ಬದಲಿಸಿಕೊಂಡು ಸಿನಿಮಾ ನೋಡುವ ಅವಕಾಶ ಕೂಡ ಸಿಕ್ಕಿದೆ.
ಇದನ್ನೂ ಓದಿ: Rakshit Shetty: ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ʻಬಿʼ ರಿಲೀಸ್ ಮುಂದಕ್ಕೆ?
ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಜತೆಗೆ ಅಚ್ಯುತ್ ಕುಮಾರ್, ಅವಿನಾಶ್, ಚೈತ್ರಾ ಆಚಾರ್ ಇನ್ನೂ ಕೆಲವರು ನಟಿಸಿದ್ದಾರೆ. ಸಿನಿಮಾ ನಿರ್ಮಾಣ ಮಾಡಿರುವುದು ಸ್ವತಃ ರಕ್ಷಿತ್ ಶೆಟ್ಟಿ. ರಕ್ಷಿತ್ ಶೆಟ್ಟಿ, ನಿರ್ದೇಶಕ ಹೇಮಂತ್ ರಾವ್, ಚೈತ್ರಾ ಆಚಾರ್ಯ, ರುಕ್ಮಿಣಿ, ಚರಣ್ ರಾಜ್ ಹೀಗೆ ಸಿನಿಮಾದ ಕಲಾವಿದರು ಮತ್ತು ತಂತ್ರಜ್ಞರಿಗೆ ತಮ್ಮ ಬರಹವನ್ನು ಟ್ಯಾಗ್ ಮಾಡಿದ್ದಾರೆ.