ಬೆಂಗಳೂರು: ನ್ಯಾಚುರಲ್ ಸ್ಟಾರ್ ನಾನಿ (Actor Nani) ಈಗ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ದಸರಾ ಸಿನಿಮಾದ ಬ್ಲಾಕ್ ಬಸ್ಟರ್ ಹಿಟ್ ಬಳಿಕ ಅವರು ಸಾಲು ಸಾಲು ಚಿತ್ರಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ನಾನಿ 31ನೇ ಸಿನಿಮಾ ಅನೌನ್ಸ್ ಆಗಿತ್ತು. ಈ ಹಿಂದೆ ಕಾಮಿಡಿ ಕಥಾಹಂದರದ ʻಅಂಟೆ ಸುಂದರಾನಿಕಿʼ ಎಂಬ ಚಿತ್ರ ನಿರ್ದೇಶನ ಮಾಡಿದ್ದ ವಿವೇಕ್ ಆತ್ರೇಯಾ ಮತ್ತೊಮ್ಮೆ ನಾನಿ ಜತೆ ಕೈ ಜೋಡಿಸಿದ್ದಾರೆ. ದಸರಾ ಹಬ್ಬದ ಅಂಗವಾಗಿ ಹೈದರಾಬಾದ್ ನಲ್ಲಿ ’ಸೂರ್ಯನ ಶನಿವಾರ’ ಸಿನಿಮಾ ಸೆಟ್ಟೇರಿದೆ. ನಿರ್ಮಾಪಕ ಡಿವಿವಿ ದಾನಯ್ಯ ಚಿತ್ರಕಥೆಯನ್ನು ನಿರ್ದೇಶಕರಿಗೆ ಹಸ್ತಾಂತರಿಸಿದರು. ನಿರ್ಮಾಪಕ ದಿಲ್ ರಾಜು ಕ್ಯಾಮೆರಾಗೆ ಚಾಲನೆ ನೀಡಿದರು.
ವಿವಿ ವಿನಾಯಕ್ ಕ್ಲಾಪ್ ಮಾಡಿದರು. ನಟ ಎಸ್.ಜೆ.ಸೂರ್ಯ ಸೇರಿದಂತೆ ಇಡೀ ಚಿತ್ರತಂಡ ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ʻಸೂರ್ಯನ ಶನಿವಾರ’ ಪಕ್ಕ ಮಾಸ್ ಆ್ಯಕ್ಷನ್ ಎಂಟರ್ ಟೈನರ್ ಚಿತ್ರವಾಗಿದ್ದು, ಈ ಸಿನಿಮಾದ ಕಥೆ ಹಾಗೂ ಪಾತ್ರಕ್ಕಾಗಿ ನಾನಿ ಸಾಕಷ್ಟು ವರ್ಕೌಟ್ ಮಾಡುತ್ತಿದ್ದಾರೆ. ಪ್ರಿಯಾಂಕಾ ಅರುಳ್ ಮೋಹನ್ ನಾಯಕಿಯಾಗಿದ್ದು, ತಮಿಳು ಸ್ಟಾರ್ ನಟ ಎಸ್‌ಜೆ ಸೂರ್ಯ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ.
ಇದನ್ನೂ ಓದಿ: Actor Nani: ಮೃಣಾಲ್ ಠಾಕೂರ್ ಜತೆ ನಾನಿ ಲಿಪ್ ಲಾಕ್; ಅಭಿಪ್ರಾಯ ಹಂಚಿಕೊಂಡ ನಟ!
ಈ ಚಿತ್ರಕ್ಕೆ ಜೇಕ್ಸ್ ಬಿಜಾಯ್ ಸಂಗೀತ, ಮುರಳಿ ಜಿ ಛಾಯಾಗ್ರಹಣವಿದೆ. ’ಸೂರ್ಯನ ಶನಿವಾರ’ ಪ್ಯಾನ್ ಇಂಡಿಯಾ ಚಲನಚಿತ್ರವಾಗಿದ್ದು, ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಮೂಡಿಬರಲಿದೆ. ತ್ರಿಬಲ್ ಆರ್ ಸೇರಿದಂತೆ ಹಲವರು ಸೂಪರ್ ಹಿಟ್ ಚಿತ್ರ ಕೊಟ್ಟಿರುವ ಡಿಡಿವಿ ಎಂಟರ್ ಟೈನರ್ ಬ್ಯಾನರ್ ಅಡಿಯಲ್ಲಿ ದಾನಯ್ಯ ಹಾಗೂ ಕಲ್ಯಾಣ್ ದಾಸರಿ ’ಸೂರ್ಯನ ಶನಿವಾರ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.
ನಾನಿ ಸದ್ಯ ʻಹಾಯ್ ನಾನ್ನʼ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಮೃಣಾಲ್ ಠಾಕೂರ್ (Mrunal Thakur) ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ. ಅ.15ರಂದು ಸಿನಿಮಾದ ಟೀಸರ್ (Nani and Mrunal Thakur) ಅನಾವರಣಗೊಂಡಿದ್ದು, ಲಿಪ್ ಲಾಕ್ ಸೀನ್‌ಗಳು ಹೈಲೈಟ್ ಆಗಿವೆ. ಹಾಯ್ ನಾನ್ನ ಸಿನಿಮಾಗೆ ಯುವ ನಿರ್ದೇಶಕ ಶೌರ್ಯುವ್ ಆಕ್ಷನ್ ಕಟ್ ಹೇಳಿದ್ದು, ನಿರ್ದೇಶಕನಾಗಿ ಇದು ಇವರ ಮೊದಲ ಚಿತ್ರವಾಗಿದೆ. ಎಮೋಶನಲ್ ಫ್ಯಾಮಿಲಿ ಎಂಟರ್‌ಟೇನ್‌ಮೆಂಟ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಅಪ್ಪ-ಮಗಳ ಬಾಂಧವ್ಯದ ಸುತ್ತ ಹೆಣೆಯಲಾದ ವಿಭಿನ್ನ ಕಥಾಹಂದರವನ್ನು ಒಳಗೊಂಡಿದೆ.
ಇದನ್ನೂ ಓದಿ: Actor Nani: ʻಹಾಯ್ ನಾನ್ನʼ ಟೀಸರ್ ರಿಲೀಸ್; ಅಪ್ಪ ಮಗಳ ಬಾಂಧವ್ಯದ ಜತೆಗೊಂದು ಪ್ರೀತಿಯ ಪಯಣ!
ನಾನಿ ಜೋಡಿಯಾಗಿ ‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ ತೆರೆ ಹಂಚಿಕೊಳ್ಳುತ್ತಿದ್ದಾರೆ. ಅಪ್ಪನಾಗಿ ನಾನಿ ಹಾಗೂ ಮಗಳಾಗಿ ಬೇಬಿ ಕಿಯಾರಾ ಖಾನ್ ನಟಿಸಿದ್ದಾರೆ.ಮೋಹನ್ ಚೆರುಕುರಿ, ಮೂರ್ತಿ ಕಲಗಾರ, ಡಾ. ವಿಜೇಂದ್ರ ರೆಡ್ಡಿ ಅವರು ‘ವೈರ ಎಂಟರ್ಟೇನ್ಮೆಂಟ್’ ಬ್ಯಾನರ್ ಮೂಲಕ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಸಾನೂ ಜಾನ್ ವರ್ಗೀಸ್ ಅವರ ಛಾಯಾಗ್ರಹಣ ಈ ಚಿತ್ರಕ್ಕೆ ಇರಲಿದೆ. ‘ಹೃದಯಂ’ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಅವರು ಸಂಗೀತ ನಿರ್ದೇಶನ ಮಾಡುತ್ತಿರುವುದು ವಿಶೇಷ. ಸಂಕಲನದ ಜವಾಬ್ದಾರಿಯನ್ನು ಪ್ರವೀಣ್ ಆಂಥೋನಿ ಅವರು ನಿಭಾಯಿಸುತ್ತಿದ್ದಾರೆ. ಡಿಸೆಂಬರ್ 7ಕ್ಕೆ ಪಂಚ ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.