ಬೆಂಗಳೂರು : ಶಾರುಖ್-ದೀಪಿಕಾ ಪಡುಕೋಣೆ ಒಟ್ಟಿಗೆ ನಟಿಸಿರುವ ಪಠಾಣ್ ಸಿನಿಮಾ (Pathaan Film) CBFCಗೆ ಸೆನ್ಸಾರ್‌ಶಿಪ್‌ಗಾಗಿ ಕಳುಹಿಸಲಾಗಿದೆ. ಸೆನ್ಸಾರ್ ಮಂಡಳಿ, ಚಿತ್ರವನ್ನು ಪರಿಶೀಲಿಸಿದ ನಂತರ, ಹಾಡುಗಳನ್ನು ಒಳಗೊಂಡಂತೆ ಚಿತ್ರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಚಿತ್ರತಂಡಕ್ಕೆ ಆದೇಶ ನೀಡಿದೆ. ಮತ್ತೊಮ್ಮೆ ಪರಿಶೀಲಿಸಿದ ನಂತರ ಪರಿಷ್ಕೃತ ಆವೃತ್ತಿಯನ್ನು ಸಲ್ಲಿಸುವಂತೆ ತಿಳಿಸಿದೆ ಎಂದು ವರದಿಯಾಗಿದೆ.
ʻಬೇಷರಮ್ ರಂಗ್’ ವಿವಾದ
ಪಠಾಣ್ ಸಿನಿಮಾದ ʻಬೇಷರಮ್ ರಂಗ್’ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿತ್ತು. ಇದು ಅವಮಾನಿಸಲೆಂದೇ ಮಾಡಿದ ಕೃತ್ಯ ಎಂದು ಹಿಂದುಪರ ಸಂಘಟನೆಗಳು ಆರೋಪಿಸಿದ್ದವು. ‘ಬೇಷರಮ್ ರಂಗ್’ ಅಂದರೆ ಕನ್ನಡದಲ್ಲಿ ನಾಚಿಕೆ ಇಲ್ಲದ ಬಣ್ಣ ಎಂದಾಗುತ್ತದೆ. ಕೇಸರಿ ಬಣ್ಣಕ್ಕೆ ನಾಚಿಕೆ ಇಲ್ಲದ ಬಣ್ಣ ಎಂದು ಜರಿದಿದ್ದಾರೆ ಎಂದು ಹೋಲಿಕೆ ಮಾಡಿಕೊಂಡು ಹಲವರು ಗರಂ ಆಗಿದ್ದರು. ಬೇಕು ಎಂತಲೇ ಈ ರೀತಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಕಮೆಂಟ್ ಕೂಡ ಮಾಡಿದ್ದರು. ಜನವರಿ 25, 2023ಕ್ಕೆ ಚಿತ್ರ ಬಿಡುಗಡೆಗೊಳ್ಳುತ್ತಿದೆ. ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ರಿಲೀಸ್ ಆಗುತ್ತಿರುವುದಾಗಿ ಚಿತ್ರ ತಂಡ ಹಂಚಿಕೊಂಡಿದೆ.
ಇದನ್ನೂ ಓದಿ | Pathan Controversy | ಪುತ್ರಿ ಜತೆ ಶಾರುಖ್ ಪಠಾಣ್ ಸಿನಿಮಾ ವೀಕ್ಷಿಸಲಿ, ನಟನಿಗೆ ಸವಾಲೆಸೆದ ಮಧ್ಯಪ್ರದೇಶ ಸ್ಪೀಕರ್
ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಮೊದಲ ಬಾರಿಗೆ ಪಠಾನ್ ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ಸಿದ್ಧಾರ್ಥ್ ಆನಂದ್ ನಿರ್ದೇಶಿಸಿದ್ದಾರೆ ಮತ್ತು ಯಶ್ ರಾಜ್ ಫಿಲ್ಮ್ಸ್ ಬಂಡವಾಳ ಹೂಡಿದ್ದಾರೆ.
ಇದನ್ನೂ ಓದಿ | Pathaan Controversy | ಮುಸ್ಲಿಂ ಸಂಘಟನೆಗಳಿಂದಲೂ ʻಪಠಾಣ್ʼ ಸಿನಿಮಾ ನಿಷೇಧಿಸುವಂತೆ ಒತ್ತಾಯ!