ಬೆಂಗಳೂರು : ಶಾರುಖ್ ಖಾನ್ ಗುರುವಾರ ಸಂಜೆ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2022 (KIFF)ದಲ್ಲಿ ಪಠಾಣ್ ಚಿತ್ರದ ಬೇಷರಮ್ ರಂಗ್ ಹಾಡಿನ ವಿವಾದ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ವಿವಾದದ ಕುರಿತು ಮಾತನಾಡಿರುವ ಶಾರುಖ್ ಖಾನ್ (Shahrukh khan), ‘ʻನಾವು ಸಿನಿಮಾವನ್ನು ಸಿನಿಮಾದಂತೆ ನೋಡಬೇಕುʼ’ ಎಂದು ಹೇಳಿಕೆ ನೀಡಿದ್ದಾರೆ.
”ಸುತ್ತಮುತ್ತಲೂ ಏನೇ ನಡೆಯಲಿ, ನಮ್ಮಂತಹ ಜನರು ಪಾಸಿಟಿವ್ ಮನೋಭಾವದಿಂದ ಇರುತ್ತೇವೆ. ವಿವಿಧ ಜಾತಿ, ಬಣ್ಣ, ಧರ್ಮಗಳ ಜನರು ಪರಸ್ಪರ ಅರಿತುಕೊಳ್ಳಲು ಸಿನಿಮಾ ಉತ್ತಮ ವೇದಿಕೆಯಾಗಿದೆ” ಎಂದು ಶಾರುಖ್ ಹೇಳಿದ್ದಾರೆ. ಪಠಾಣ್ ಚಿತ್ರದ ‘ಬೇಷರಮ್ ರಂಗ್’ ಹಾಡಿನ ವಿವಾದ ಭುಗಿಲೆದ್ದ ಬೆನ್ನಲ್ಲೇ ಶಾರುಖ್ ಈ ಹೇಳಿಕೆ ನೀಡಿರುವುದು ಕುತೂಹಲ ಕೆರಳಿಸಿದೆ.
ಇದನ್ನೂ ಓದಿ | Shahrukh Khan | ಶುರುವಾಯ್ತು ಬಾಯ್ಕಾಟ್ ಅಭಿಯಾನ: ʻಪಠಾಣ್ʼ ಸಿನಿಮಾ ವಿರುದ್ಧ ನೆಟ್ಟಿಗರ ಆಕ್ರೋಶ, ಏನಿದು ವಿವಾದ?
ʻʻನಾನಂತೂ ಸಿನಿಮಾವಾಗಿಯೇ ಅಲ್ಲಿ ಕೆಲಸ ಮಾಡಿದ್ದೇನೆ. ಈ ವಿವಾದವನ್ನು ಯಾಕೆ ಎಬ್ಬಿಸುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ನನ್ನ ಮನಸ್ಸಲ್ಲಂತೂ ಯಾವುದೇ ಕೆಟ್ಟ ಆಲೋಚನೆಗಳು ಇಲ್ಲ. ಈ ವಿವಾದದಿಂದ ಸಿನಿಮಾ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಹಾಗಾಗಿ ಜನರು ಚಿತ್ರವನ್ನು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆʼʼ ಎಂದು ಅವರು ಹೇಳಿದ್ದಾರೆ.
‘ಸಿನಿಮಾವು ಏಕತೆ, ಸಹೋದರತ್ವ ಮತ್ತು ಮಾನವೀಯ ಸಹಾನುಭೂತಿಯನ್ನು ಪ್ರತಿಬಿಂಬಿಸುತ್ತದೆ. ಸಹೋದರತ್ವದ ಮಾನವೀಯತೆಯ ಅಪಾರ ಸಾಮರ್ಥ್ಯವನ್ನು ಸಿನಿಮಾ ಮುನ್ನೆಲೆಗೆ ತರುತ್ತದೆʼʼ ಎಂದು ಶಾರುಖ್ ಹೇಳಿದ್ದಾರೆ.
ಏನಿದು ‘ಬೇಷರಮ್ ರಂಗ್’?
‘ಬೇಷರಮ್ ರಂಗ್’ ಅಂದರೆ ಕನ್ನಡದಲ್ಲಿ ನಾಚಿಕೆ ಇಲ್ಲದ ಬಣ್ಣ ಎಂದಾಗುತ್ತದೆ. ಕೇಸರಿ ಬಣ್ಣಕ್ಕೆ ನಾಚಿಕೆ ಇಲ್ಲದ ಬಣ್ಣ ಎಂದು ಜರಿದಿದ್ದಾರೆ ಎಂದು ಹೋಲಿಕೆ ಮಾಡಿಕೊಂಡು ಹಲವರು ಗರಂ ಆಗಿದ್ದಾರೆ. ಬೇಕು ಎಂತಲೇ ಈ ರೀತಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಕಾಮೆಂಟ್ ಕೂಡ ಮಾಡುತ್ತಿದ್ದಾರೆ. ಜನವರಿ 25, 2023ಕ್ಕೆ ಚಿತ್ರ ಬಿಡುಗಡೆಗೊಳ್ಳುತ್ತಿದೆ. ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ರಿಲೀಸ್ ಆಗುತ್ತಿರುವುದಾಗಿ ಚಿತ್ರ ತಂಡ ಹಂಚಿಕೊಂಡಿದೆ.
ಇದನ್ನೂ ಓದಿ | Shahrukh Khan | ʻಪಠಾಣ್ʼ ಸಿನಿಮಾ ಸಾಂಗ್ ಔಟ್: ಸಖತ್ ಹಾಟ್ ಆಗಿ ಮಿಂಚಿದ ದೀಪಿಕಾ ಪಡುಕೋಣೆ!