ಬೆಂಗಳೂರು : ಬಾಲಿವುಡ್ ನಟ ಶಾರುಖ್ ಖಾನ್ (Shahrukh Khan) ಮತ್ತು ದೀಪಿಕಾ ಪಡುಕೋಣೆ ಕಾಂಬಿನೇಶನ್‌ನ ‘ಪಠಾಣ್’ ಸಿನಿಮಾಗೆ ಕಂಟಕ ಎದುರಾಗಿದೆ. ಸಿನಿಮಾದ ‘ಬೇಷರಮ್ ರಂಗ್’ ಹಾಡು ಹಿಂದುಗಳ ಭಾವನೆಗೆ ಧಕ್ಕೆ ತಂದ ಆರೋಪದ ಮೇರೆಗೆ ಹಾಡಿನ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಕಾರಣದಿಂದಾಗಿ ಚಿತ್ರಕ್ಕೆ ಬಹಿಷ್ಕಾರ ಹಾಕುವಂತೆ ಅಭಿಯಾನ ಶುರುವಾಗಿದೆ.
‘ಬೇಷರಮ್ ರಂಗ್’ ಹಾಡಿನಲ್ಲಿ ದೀಪಿಕಾ ಕೇಸರಿ ಬಟ್ಟೆ ತೊಟ್ಟು ಕುಣಿದಿದ್ದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ‘ಪಠಾಣ್’ ಸಿನಿಮಾ ವಿರುದ್ಧ ನೆಟ್ಟಿಗರು ರೊಚ್ಚಿಗೆದ್ದಿದ್ದು, ಬಾಯ್ಕಾಟ್ ಅಭಿಯಾನ ಶುರುವಾಗಿದೆ. ಹಿಂದುಪರ ಸಂಘಟನೆಗಳಿಂದ ಪ್ರತಿಭಟನೆ ಮೂಲಕ ಎಚ್ಚರಿಕೆಯನ್ನು ನೀಡಿದ್ದಾರೆ. ಕೇಸರಿಯ ಬಿಕಿನಿಯಲ್ಲಿ ದೀಪಿಕಾ ಕಾಣಿಸಿಕೊಂಡಿದ್ದು, ನೆಟ್ಟಿಗರು ಗರಂ ಆಗಿದ್ದಾರೆ. ಈ ಕಾರಣದಿಂದಾಗಿ ಚಿತ್ರಕ್ಕೆ ಬಹಿಷ್ಕಾರ ಹಾಕುವಂತೆ ಸೋಷಿಯಲ್ ಮೀಡಿಯಾದಲ್ಲಿ ಕರೆ ನೀಡುತ್ತಿದ್ದಾರೆ.
ಏನಿದು ‘ಬೇಷರಮ್ ರಂಗ್’?
‘ಬೇಷರಮ್ ರಂಗ್’ ಅಂದರೆ ಕನ್ನಡದಲ್ಲಿ ನಾಚಿಕೆ ಇಲ್ಲದ ಬಣ್ಣ ಎಂದಾಗುತ್ತದೆ. ಕೇಸರಿ ಬಣ್ಣಕ್ಕೆ ನಾಚಿಕೆ ಇಲ್ಲದ ಬಣ್ಣ ಎಂದು ಜರಿದಿದ್ದಾರೆ ಎಂದು ಹೋಲಿಕೆ ಮಾಡಿಕೊಂಡು ಹಲವರು ಗರಂ ಆಗಿದ್ದಾರೆ. ಬೇಕು ಎಂತಲೇ ಈ ರೀತಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಕಾಮೆಂಟ್ ಕೂಡ ಮಾಡುತ್ತಿದ್ದಾರೆ.
ಇದನ್ನೂ ಓದಿ | Pathaan Film | ಶಾರುಖ್ ಖಾನ್ ಜನುಮದಿನಕ್ಕೆ ʻಪಠಾಣ್ʼಸಿನಿಮಾ ಟೀಸರ್ ಔಟ್: ರಗಡ್ ಲುಕ್ ಅಂದ್ರು ಫ್ಯಾನ್ಸ್!
ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಸಂಗೀತಕ್ಕೆ ಫ್ಯಾನ್ಸ್ ಫಿದಾ ಆಗಿದ್ದು, ದೀಪಿಕಾ ಪಡುಕೋಣೆ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
ಜನವರಿ 25, 2023ಕ್ಕೆ ಚಿತ್ರ ಬಿಡುಗಡೆ
ಹಾಡು ರಿಲೀಸ್ ಆಗುತ್ತಿರುವ ವಿಷಯವನ್ನು ಸ್ವತಃ ಶಾರುಖ್ ಖಾನ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಈ ಹಾಡನ್ನು ನೋಡಲು ತಾವೂ ಕೂಡ ಕಾತುರದಿಂದ ಕಾಯುತ್ತಿರುವುದಾಗಿಯೂ ಅವರು ಹೇಳಿಕೊಂಡಿದ್ದರು. ಅಲ್ಲದೇ ಅಭಿಮಾನಿಗಳು ಕೂಡ ಅಷ್ಟೇ ಕುತೂಹಲದಿಂದಲೇ ಹಾಡಿಗಾಗಿ ಕಾದಿದ್ದರು.
ಚಿತ್ರದಲ್ಲಿ ಜಾನ್ ಅಬ್ರಾಹಂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜನವರಿ 25, 2023ಕ್ಕೆ ಚಿತ್ರ ಬಿಡುಗಡೆಗೊಳ್ಳುತ್ತಿದೆ. ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ರಿಲೀಸ್ ಆಗುತ್ತಿರುವುದಾಗಿ ಚಿತ್ರ ತಂಡ ಹಂಚಿಕೊಂಡಿದೆ. ʻಪಠಾಣ್’ ಸಿನಿಮಾವನ್ನು ಭಾರತ, ಇಟಲಿ, ಯುಎಇ, ಫ್ರಾನ್ಸ್, ಟರ್ಕಿ, ಸ್ಪೇನ್, ರಷ್ಯಾ ಹಾಗೂ ಅಫಘಾನಿಸ್ತಾನದಲ್ಲಿ ಚಿತ್ರೀಕರಣ ಮಾಡಲಾಗಿದೆ. ಸಿನಿಮಾದ ಕೆಲವು ಸ್ಟಿಲ್‌ಗಳನ್ನು ನಿರ್ಮಾಪಕ ಆದಿತ್ಯ ಚೋಪ್ರಾ ಹಂಚಿಕೊಂಡಿದ್ದು, ಇದೊಂದು ಭರ್ಜರಿ ಆ್ಯಕ್ಷನ್ ಸಿನಿಮಾ ಆಗಿದ್ದು, ಹಲವು ಮೈನವಿರೇಳಿಸುವ ದೃಶ್ಯಗಳು ಸಿನಿಮಾದಲ್ಲಿರಲಿವೆʼʼ ಎಂದಿದ್ದಾರೆ.
ಇದನ್ನೂ ಓದಿ | Shahrukh Khan | ʻಪಠಾಣ್ʼ ಸಿನಿಮಾ ಸಾಂಗ್ ಔಟ್: ಸಖತ್ ಹಾಟ್ ಆಗಿ ಮಿಂಚಿದ ದೀಪಿಕಾ ಪಡುಕೋಣೆ!