Shamita Shetty: ವಿಚಿತ್ರ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ: ಆಸ್ಪತ್ರೆಗೆ ದಾಖಲು - Vistara News

ಸಿನಿಮಾ

Shamita Shetty: ವಿಚಿತ್ರ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ: ಆಸ್ಪತ್ರೆಗೆ ದಾಖಲು

Shamita Shetty: ಇತ್ತೀಚೆಗಷ್ಟೇ ಶಮಿತಾ ತಾಯಿ ಸುನಂದಾ ಶೆಟ್ಟಿ ಮತ್ತು ಸಹೋದರಿ ನಟಿ ಶಿಲ್ಪಾ ಶೆಟ್ಟಿ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರದ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಶಿಲ್ಪಾ ಅವರು ಪ್ರವಾಸದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಜಾರಿ ನಿರ್ದೇಶನಾಲಯ ಶಿಲ್ಪಾ ಶೆಟ್ಟಿ ಅವರಿಗೆ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶ ಪಡಿಸಿಕೊಂಡ ಪ್ರಕರಣ ತನಿಖೆ ಹಂತದಲ್ಲೇ, ಮತ್ತೊಂದು ವೈಯಕ್ತಿಕ ಸಮಸ್ಯೆ ಎದುರಾಗಿದೆ.

VISTARANEWS.COM


on

Shamita Shetty Undergoes Surgery For Endometriosis
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ಶಮಿತಾ ಶೆಟ್ಟಿ (Shamita Shetty ) ಅವರು ಎಂಡೊಮೆಟ್ರಿಯೊಸಿಸ್ (endometriosis ) ಎನ್ನುವ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಸ್ವತಃ ಶಮಿತಾ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ತಿಳಿಸಿದ್ದು, ಎಲ್ಲಾ ಮಹಿಳೆಯರೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಎಂಡೊಮೆಟ್ರಿಯೊಸಿಸ್ ಎಂದರೆ ಗರ್ಭಾಶಯದ ಒಳಪದರವನ್ನು ಹೋಲುವ ಅಂಗಾಂಶವು ಗರ್ಭಾಶಯದ ಹೊರಗೆ ಬೆಳೆಯಲು ಪ್ರಾರಂಭಿಸುತ್ತದೆ.

ಆಸ್ಪತ್ರೆಯ ಹಾಸಿಗೆಯಲ್ಲಿ ಕುಳಿತು ವಿಡಿಯೊ ಶೇರ್‌ ಮಾಡಿಕೊಂಡಿದ್ದಾರೆ. ಶಮಿತಾ ಮಾತನಾಡಿ ʻಮಹಿಳೆಯರೇ, ದಯವಿಟ್ಟು ಎಂಡೊಮೆಟ್ರಿಯೊಸಿಸ್ ಗೂಗಲ್ ಮಾಡಿ. ಸಮಸ್ಯೆ ಏನು ಎಂದು ನೀವು ತಿಳಿದುಕೊಳ್ಳಬೇಕು. ಸುಮಾರು 40% ಮಹಿಳೆಯರು ಎಂಡೊಮೆಟ್ರಿಯೊಸಿಸ್‌ನಿಂದ ಬಳಲುತ್ತಿದ್ದಾರೆ ಎಂದು ನಿಮಗೆ ತಿಳಿದಿದೆಯೇ..? ನಮ್ಮಲ್ಲಿ ಹೆಚ್ಚಿನವರಿಗೆ ಈ ರೋಗದ ಬಗ್ಗೆ ತಿಳಿದಿಲ್ಲ !!! ನನ್ನ ನೋವಿನ ಮೂಲ ಕಾರಣವನ್ನು ಕಂಡುಕೊಳ್ಳಲು ಸಹಾಯ ಮಾಡಿದ ನನ್ನ ವೈದ್ಯರಾದ ಗೈನಾಕ್ ಡಾ ನೀತಾ ವಾರ್ಟಿ ಮತ್ತು ನನ್ನ ಜಿಪಿ ಡಾ ಸುನೀತಾ ಬ್ಯಾನರ್ಜಿ ಇಬ್ಬರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ! ಈಗ ನಾನು ಈ ರೋಗವನ್ನು ಶಸ್ತ್ರಚಿಕಿತ್ಸೆಯಿಂದ ತೆಗೆದುಹಾಕಿದ್ದೇನೆ ನನ್ನ ಆರೋಗ್ಯ ಮತ್ತಷ್ಟು ಸುಧಾರಿಸಲು ಎದುರು ನೀಡುತ್ತಿದ್ದೇನೆ. ಈಗೀಗ ನೋವಿಲ್ಲದ ದಿನಗಳನ್ನು ಕಳೆಯುತ್ತಿದ್ದೇನೆ. ಹೀಗಾಗಿ ಎಲ್ಲಾ ಮಹಿಳೆಯರೂ ಈ ಎಂಡೊಮೆಟ್ರಿಯೊಸಿಸ್ ಬಗ್ಗೆ ಜಾಗೃತರಾಗಿ ಮತ್ತು ಚಿಕಿತ್ಸೆ ಪಡೆಯಿರಿʼʼ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Shilpa Shetty: ಅಮ್ಮ , ಸಹೋದರಿ ಜತೆ ಕೇದಾರನಾಥಕ್ಕೆ ಭೇಟಿ ನೀಡಿದ ಶಿಲ್ಪಾ ಶೆಟ್ಟಿ

ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ವೈರಲ್‌ ಆಗುತ್ತಿದ್ದಂತೆ ಶಮಿತಾ ಅವರ ಸಹೋದ್ಯೋಗಿಗಳು ಮತ್ತು ಬಾಲಿವುಡ್‌ನ ಅನೇಕ ಗಣ್ಯರು ಬೇಗ ಗುಣಮುಖರಾಗಿ ಎಂದು ಕಮೆಂಟ್‌ ಮಾಡಿದ್ದಾರೆ.

ಏನಿದು ಎಂಡೊಮೆಟ್ರಿಯೊಸಿಸ್ ಕಾಯಿಲೆ?

ಗರ್ಭಕೋಶಕ್ಕೆ ಸಂಬಂಧಿಸಿದ್ದು, ಗರ್ಭಾಶಯದ ಒಳಪದರವನ್ನು ಹೋಲುವ ಅಂಗಾಂಶವು ಗರ್ಭಾಶಯದ ಹೊರಗೆ ಬೆಳೆಯಲು ಪ್ರಾರಂಭಿಸುತ್ತದೆ. ಇದಕ್ಕೆ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ಮಹಿಳೆಯರಿಗೆ ಗರ್ಭಿಣಿಯಾಗಲು ಕಷ್ಟವಾಗುತ್ತದೆ. ಹಾಗೂ ಮುಟ್ಟಿನ ಸಮಯದಲ್ಲಿ ಕಷ್ಟವಾಗುತ್ತದೆ.

ಇತ್ತೀಚೆಗಷ್ಟೇ ಶಮಿತಾ ತಾಯಿ ಸುನಂದಾ ಶೆಟ್ಟಿ ಮತ್ತು ಸಹೋದರಿ ನಟಿ ಶಿಲ್ಪಾ ಶೆಟ್ಟಿ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರದ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಶಿಲ್ಪಾ ಅವರು ಪ್ರವಾಸದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಜಾರಿ ನಿರ್ದೇಶನಾಲಯ ಶಿಲ್ಪಾ ಶೆಟ್ಟಿ ಅವರಿಗೆ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶ ಪಡಿಸಿಕೊಂಡ ಪ್ರಕರಣ ತನಿಖೆ ಹಂತದಲ್ಲೇ, ಮತ್ತೊಂದು ವೈಯಕ್ತಿಕ ಸಮಸ್ಯೆ ಎದುರಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada New Movie: ‘ಚಿಲ್ಲಿ ಚಿಕನ್​’ ಟ್ರೈಲರ್‌ ಔಟ್‌; ಚೈನೀಸ್ ಹೋಟೆಲ್ ಹುಡುಗರ ಸ್ಟೋರಿ!

Kannada New Movie: ಇದೇ ಸಂದರ್ಭದಲ್ಲಿ ಚಿತ್ರದ ನಾಯಕಿ ರಿನಿ, ಮಣಿಪುರ ನಟ ಬಿಜು ತಾಂಜಿಂ, ಆಸಾಂ ಕಲಾವಿದ ಹಿರಾಕ್ ಸೋನಾವಾಲ್, ಉತ್ತರಕಾಂಡದ ನಟ ಜಿಂಪಾ ಭುಟಿಯಾ, ನಿರ್ಮಾಪಕ ದೀಪ್ ಭೀಮಾಜಿಹಾನಿ ತಮ್ಮ ಅನುಭವ ಹಂಚಿಕೊಂಡರು. ಅಂದಂಗೆ ಈಗಾಗಲೇ ಈ ಚಿತ್ರವನ್ನು ನೋಡಿದ ನಟ ರಮೇಶ್‌ ಅರವಿಂದ್, ಹೇಮಂತ್ ರಾವ್ ಹಾಗೂ ಬೇರೆ ಭಾಷೆಯ ಪ್ರಮುಖರು ಮೆಚ್ಚಿದ್ದಾರೆ. ಈ ತಂಡ ಬೆಂಗಳೂರಿನಲ್ಲಿ ಒಡೆದು ಹಾಕಿರುವ ಕಾವೇರಿ ಥಿಯೇಟರ್ ಬಗ್ಗೆ ಸಾಂಗ್ ಮಾಡಿ ಅದನ್ನು ಟ್ರಿಬ್ಯೂಟ್ ಕೊಡುತ್ತಿದೆ.

VISTARANEWS.COM


on

Kannada New Movie Chilli Chicken Official Trailer
Koo

ಬೆಂಗಳೂರು: ಹೋಟೆಲ್ ಕೆಲಸ ಮಾಡುವ (Kannada New Movie) ಐವರು ಹುಡುಗರ ಸುತ್ತ ನಡೆಯುವ ಕಥೆ ಇಟ್ಟುಕೊಂಡು ಪ್ರತೀಕ್ ಪ್ರಜೋಷ್ ಅವರು ನಿರ್ದೇಶಿಸಿರುವ ಚಿತ್ರ `ಚಿಲ್ಲಿ ಚಿಕನ್’. ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದಲ್ಲಿ ನಡೆಯಿತು.

ಬೆಂಗಳೂರಿನ ಹೋಟೆಲೊಂದರಲ್ಲಿ ದುಡಿಯುತ್ತಾ ಚೈನೀಸ್ ರೆಸ್ಟೋರೆಂಟ್ ಒಂದನ್ನು ಪ್ರಾರಂಭಿಸಬೇಕೆಂಬ ಕನಸು ಕಾಣುವ ಈ ಹುಡುಗರ ಕನಸಿಗೆ ಏನೆಲ್ಲಾ ಅಡೆ ತಡೆಗಳು ಬರುತ್ತವೆ ಎಂಬುದೇ ಒನ್ ಲೈನ್ ಕಥೆ. ಇದು ಬೆಂಗಳೂರಿನಲ್ಲಿ ನಡೆದ ನೈಜ ಘಟಕ ಆಧಾರಿತ ಸಿನಿಮಾ ಎಂಬುದು ವಿಶೇಷ. ಕಳೆದ ತಿಂಗಳು ಟೀಸರ್ ಬಿಡುಗಡೆ ಮಾಡಿದ್ದ ಈ ಚಿತ್ರತಂಡ ಇದೀಗ ಟ್ರೈಲರ್‌ ಹೊರತಂದಿದೆ. ಈ ಚಿತ್ರದ ಕಥೆ ಹುಟ್ಟಿರುವುದೇ ವಿಶೇಷವಾದ ಸ್ಥಳದಲ್ಲಿ.

ಹೌದು ರೆಸ್ಟೋರೆಂಟ್‌ವೊಂದರಲ್ಲಿ ಕುಳಿತಾಗ ಸಂಗೀತ ನಿರ್ದೇಶಕ ಸಿದ್ಧಾಂತ ಸುಂದರ್ ಅವರಿಗೆ ಈ ಕಾನ್ಸೆಪ್ಟ್ ಹೊಳೆದಿದೆ. ಅದನ್ನು ನಿರ್ದೇಶಕ ಪ್ರತೀಕ್ ಪ್ರಜೋಶ್ ಅವರಿಗೆ ಹೇಳುತ್ತಾರೆ. ಅವರು ಆ ಒಂದು ಲೈನ್ ಕಥೆಯ ಮೇಲೆ ಸಾಕಷ್ಟು ವರ್ಕ್ ಮಾಡಿ ಈಗ ಸಿನಿಮಾ ಮಾಡಿ ಬಿಡುಗಡೆಗೆ ಸಿದ್ದಗೊಳಿಸಿದ್ದಾರೆ.

ಸಿದ್ಧಾಂತ ಸುಂದರ್ ಮಾತನಾಡಿ ʻʻನೈಜ ಘಟನೆಯನ್ನು ಕಥೆ ಮಾಡಿ ಸಿನಿಮಾ ಮಾಡೋದು ಸುಲಭವಲ್ಲ. ಚಿತ್ರ ಚೆನ್ನಾಗಿ ಬಂದಿದೆ.‌ ಚಿತ್ರದಲ್ಲಿ 5 ಹಾಡುಗಳಿದ್ದು ಅವುಗಳಿಗೆ ಮಾರ್ಟಿನ್ ಯೋ ಸಾಹಿತ್ಯ ಬರೆದಿದ್ದಾರೆ. ಇದರಲ್ಲಿ ಒಳ್ಳೇ ಕಥೆ, ಜತೆಗೆ ಮನರಂಜನೆ ಎಲ್ಲಾ ಇದೆʼʼ ಎಂದು ಹೇಳಿದರು.

ನಿರ್ದೇಶಕ ಪ್ರತೀಕ್ ಪ್ರಜೋಶ್. ಮಾತನಾಡಿ ʻʻಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಸದ್ಯದಲ್ಲೇ ರಿಲೀಸಾಗಲಿದೆ. ನಿಮ್ಮಗಳ ಸಹಕಾರವಿರಲಿ ಎಂದಷ್ಟೇ ಹೇಳಿದರು. ಈ ಚಿತ್ರದ ನಾಯಕನಾಗಿ ಬಿ.ವಿ. ಶೃಂಗಾ ಅಭಿನಯಿಸಿದ್ದು, ಪಾತ್ರದ ಬಗ್ಗೆ ಮಾಹಿತಿ ನೀಡುವ ಅವರು ‘ನಾವೆಲ್ಲಾ ಇಂದು ದೊಡ್ಡ ಸಾಹಸಕ್ಕೆ ಕೈ ಹಾಕಿದ್ದು, ನಿಮ್ಮಗಳ ಸಹಕಾರ ಬೇಕು. ನಾನಿಲ್ಲಿ ರೆಸ್ಟೋರೆಂಟ್ ಮಾಲಿಕನ ಪಾತ್ರ ಮಾಡಿದ್ದೇನೆ. ಕಥೆ ಕೇಳಿದಾಗ ಇಂದಿನ ಜನರೇಷನ್ ಗೆ ಹೇಳಬೇಕಾದ ವಿಷಯವಿದೆ ಅನಿಸಿತು. ಇದರಲ್ಲಿ ಹ್ಯೂಮರ್, ಫ್ಯಾಮಿಲಿ ಡ್ರಾಮಾವನ್ನು ನಿರ್ದೇಶಕರು ಚನ್ನಾಗಿ ಬಳಸಿದ್ದಾರೆ. ನಂದಿಲ್ಲಿ ಮಿಡ್ಲ್ ಕ್ಲಾಸ್ ಕುಟುಂಬದಿಂದ ಬಂದು, ಚೈನೀಸ್ ರೆಸ್ಟೋರೆಂಟ್ ಮಾಡುವ ಆಸೆಯಿಂದ ಹೇಗೆಲ್ಲಾ ಅಲೆದಾಡುತ್ತಾನೆ ಎಂಬುದನ್ನು ನೋಡಬಹುದು’ʼ ಎಂದರು.

ಇದನ್ನೂ ಓದಿ: Kannada New Movie: ʻರಮೇಶ್ ಸುರೇಶ್‌ʼ ಸಿನಿಮಾದಲ್ಲಿ ಇಬ್ಬರು ನಿರ್ದೇಶಕರು, ಇಬ್ಬರು ನಾಯಕರು ; ಜೂನ್ 21ರಂದು ತೆರೆಗೆ!

ನಟಿ ನಿತ್ಯಶ್ರೀ ಮಾತನಾಡಿ ʻʻನನಗೆ ಕನ್ನಡದಲ್ಲಿ ಇದು 2ನೇ ಸಿನಿಮಾ. ತಮಿಳು, ತೆಲಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಒಂದಿಷ್ಟು ಸಿನಿಮಾ ಮಾಡಿದ್ದೇನೆ. ಚಿತ್ರಕ್ಕೆ ತಂಡದ ಶ್ರಮ ತುಂಬಾ ಇದ್ದು ಎಲ್ಲಾ ಕಲಾವಿದರು ಭಾಷೆ ಕಲೆತು ಅಭಿನಯ ಮಾಡುವ ಜೊತೆಗೆ ಡಬ್ಬಿಂಗ್ ಕೂಡ ಮಾಡಿದ್ದಾರೆ’ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಚಿತ್ರದ ನಾಯಕಿ ರಿನಿ, ಮಣಿಪುರ ನಟ ಬಿಜು ತಾಂಜಿಂ, ಆಸಾಂ ಕಲಾವಿದ ಹಿರಾಕ್ ಸೋನಾವಾಲ್, ಉತ್ತರಕಾಂಡದ ನಟ ಜಿಂಪಾ ಭುಟಿಯಾ, ನಿರ್ಮಾಪಕ ದೀಪ್ ಭೀಮಾಜಿಹಾನಿ ತಮ್ಮ ಅನುಭವ ಹಂಚಿಕೊಂಡರು. ಅಂದಂಗೆ ಈಗಾಗಲೇ ಈ ಚಿತ್ರವನ್ನು ನೋಡಿದ ನಟ ರಮೇಶ್‌ ಅರವಿಂದ್, ಹೇಮಂತ್ ರಾವ್ ಹಾಗೂ ಬೇರೆ ಭಾಷೆಯ ಪ್ರಮುಖರು ಮೆಚ್ಚಿದ್ದಾರೆ. ಈ ತಂಡ ಬೆಂಗಳೂರಿನಲ್ಲಿ ಒಡೆದು ಹಾಕಿರುವ ಕಾವೇರಿ ಥಿಯೇಟರ್ ಬಗ್ಗೆ ಸಾಂಗ್ ಮಾಡಿ ಅದನ್ನು ಟ್ರಿಬ್ಯೂಟ್ ಕೊಡುತ್ತಿದೆ. ಈ ಗೀತೆಗೆ ಪತ್ರಕರ್ತ ಶ್ರೀಧರ್ ಶಿವಮೊಗ್ಗ ಸಾಹಿತ್ಯ ಬರೆದಿದ್ದಾರೆ.

Continue Reading

South Cinema

Kalki 2898 AD: ʼಕಲ್ಕಿ 2898 ಎಡಿʼ ಚಿತ್ರದಿಂದ ಹೊಸ ಪೋಸ್ಟರ್‌ ಔಟ್; ಗಾಬರಿ ಲುಕ್‌ನಲ್ಲಿ ದೀಪಿಕಾ!

Kalki 2898 AD: ʼ ಈ ಪೋಸ್ಟರ್ ಅನ್ನು ಸ್ವತಃ ದೀಪಿಕಾ ಅವರೇ ಅನಾವರಣಗೊಳಿಸಿದ್ದಾರೆ. ಪೋಸ್ಟರ್‌ನಲ್ಲಿ ದೀಪಿಕಾ ಅವರು ಅತ್ಯಂತ ಗಾಬರಿಯಾಗಿ ಕಂಡಿದ್ದಾರೆ. ದೀಪಿಕಾ ಲುಕ್‌ಗೆ ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಸಿನಿಮಾ ನೋಡುವ ತವಕ ಹೆಚ್ಚಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಕೆಲವು ದಿನಗಳ ಹಿಂದೆ ಚಿತ್ರತಂಡ ಅವರ ಪಾತ್ರ ಹೇಗಿರಲಿದೆ ಎನ್ನುವುದನ್ನು ರಿವೀಲ್ ಮಾಡಿತ್ತು.

VISTARANEWS.COM


on

Kalki 2898 AD Deepika Padukone looks poster
Koo

ಬೆಂಗಳೂರು: ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼ (Kalki 2898 ADಸದ್ಯ ನಿರೀಕ್ಷೆ ಹುಟ್ಟು ಹಾಕಿದೆ. ಜೂನ್‌ 27ರಂದು ತೆರೆಗೆ ಬರಲಿರುವ ಈ ಸಿನಿಮಾ ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ‌, ಕನ್ನಡತಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇದೀಗ ಚಿತ್ರತಂಡ ದೀಪಿಕಾ ಪಡುಕೋಣೆ ಒಳಗೊಂಡಿರುವ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಚಿತ್ರದ ಟ್ರೈಲರ್‌ ನಾಳೆ (ಜೂನ್‌ 10) ಬಿಡುಗಡೆಯಾಗಲಿದೆ.

ಈ ಪೋಸ್ಟರ್ ಅನ್ನು ಸ್ವತಃ ದೀಪಿಕಾ ಅವರೇ ಅನಾವರಣಗೊಳಿಸಿದ್ದಾರೆ. ಪೋಸ್ಟರ್‌ನಲ್ಲಿ ದೀಪಿಕಾ ಅವರು ಅತ್ಯಂತ ಗಾಬರಿಯಾಗಿ ಕಂಡಿದ್ದಾರೆ. ದೀಪಿಕಾ ಲುಕ್‌ಗೆ ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಸಿನಿಮಾ ನೋಡುವ ತವಕ ಹೆಚ್ಚಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ನಾಳೆ ಟ್ರೈಲರ್‌ ರಿಲೀಸ್‌

ಜೂನ್‌ 10ರಂದು ʼಕಲ್ಕಿ 2898 ಎಡಿʼ ಟ್ರೈಲರ್‌ ರಿಲೀಸ್‌ ಆಗಲಿದೆ. ಈ ಮುಂಚೆ ಹೊಸ ಪೋಸ್ಟರ್‌ ರಿಲೀಸ್‌ ಮಾಡಿ ಚಿತ್ರತಂಡ ಟ್ರೈಲರ್‌ ರಿಲೀಸ್‌ ದಿನಾಂಕವನ್ನು ಘೋಷಿಸಿತ್ತು. ಪೋಸ್ಟರ್‌ನಲ್ಲಿ ಗುಡ್ಡದ ಮೇಲೆ ಪ್ರಭಾಸ್‌ ನಿಂತಿರುವ ಚಿತ್ರ ಕಂಡು ಬಂದಿದ್ದು, ‘ಎಲ್ಲವೂ ಬದಲಾಗುವ ಸಮಯ ಬಂದಿದೆ’ ಎಂದು ಬರೆಯಲಾಗಿತ್ತು. ಭೂತ ಮತ್ತು ಭವಿಷ್ಯತ್‌ ಕಾಲದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ವೈಜಯಂತಿ ಮೂವೀಸ್‌ ಅದ್ಧೂರಿಯಾಗಿ ಚಿತ್ರವನ್ನು ನಿರ್ಮಿಸುತ್ತಿದೆ.

ಇದನ್ನೂ ಓದಿ: Kalki 2898 AD: ಪ್ರಭಾಸ್‌-ದೀಪಿಕಾ ಜೋಡಿಯ ʼಕಲ್ಕಿʼ ಚಿತ್ರದ ಟ್ರೈಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್‌

ಕುತೂಹಲ ಮೂಡಿಸಿದ ಅಮಿತಾಭ್‌

ಈ ಸಿನಿಮಾದಲ್ಲಿ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಕೆಲವು ದಿನಗಳ ಹಿಂದೆ ಚಿತ್ರತಂಡ ಅವರ ಪಾತ್ರ ಹೇಗಿರಲಿದೆ ಎನ್ನುವುದನ್ನು ರಿವೀಲ್ ಮಾಡಿತ್ತು. ಬಿಗ್ ಬಿ ಅಶ್ವತ್ಥಾಮನಾಗಿ ಕಾಣಿಸಿಕೊಳ್ಳುತ್ತಿದ್ದು, ಅವರ ಪಾತ್ರದ ಟೀಸರ್‌ ನೋಡಿ ಅಭಿಮಾನಿಗಳು ಫಿದಾ ಆಗಿದ್ದರು. ಗುಹೆಯೊಂದರಲ್ಲಿ ಮಗುವೊಂದು ನೀನು ಯಾರು? ಎಂದು ಕೇಳಿದಾಗ ʻʻಪ್ರಾಚೀನ ಕಾಲದಿಂದಲೂ ನಾನು ಕಲ್ಕಿಯ ಅವತಾರದ ಆಗಮನಕ್ಕಾಗಿ ಕಾಯುತ್ತಿದ್ದೇನೆ. ನಾನು ಗುರು ದ್ರೋಣರ ಮಗ ಅಶ್ವತ್ಥಾಮʼʼ ಎಂದು ಅಮಿತಾಭ್‌ ಹೇಳುವ ಮೂಲಕ ಈ ಸಿನಿಮಾದ ಕಥೆ ಪುರಾಣ ಕಾಲದಿಂದ ಭವಿಷ್ಯದತ್ತ ಸಾಗುತ್ತದೆ ಎನ್ನುವ ಸುಳಿವು ಲಭಿಸಿತ್ತು. ಭಾರತ ಚಿತ್ರರಂಗದ ಮಟ್ಟಿಗೆ ಇಂತಹ ಪ್ರಯೋಗ ಬಹಳ ಅಪರೂಪ.

ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಿರ್ದೇಶಕ ಅಶ್ವಿನ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

ಈ ಸಿನಿಮಾದಲ್ಲಿ ಪ್ರಭಾಸ್‌ ಭೈರವನಾಗಿ ಮಿಂಚಲಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ, ಕಮಲ್‌ ಹಾಸನ್‌ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಮತ್ತೊಂದು ವಿಶೇಷ ಎಂದರೆ ವಿವಿಧ ಭಾಷೆಗಳಲ್ಲಿ ತೆರೆಗೆ ಬರಲಿರುವ ಈ‌ ಸಿನಿಮಾದ ಕನ್ನಡ ಅವತರಣಿಕೆಯಲ್ಲಿ ತಮ್ಮ ಪಾತ್ರಕ್ಕೆ ದೀಪಿಕಾ ಪಡುಕೋಣೆಯೇ ಧ್ವನಿ ನೀಡಲಿದ್ದಾರೆ. ಜತೆಗೆ ಹಿಂದಿಯಲ್ಲಿಯೂ ಅವರು ಡಬ್‌ ಮಾಡಲಿದ್ದಾರೆ.

Continue Reading

ಸಿನಿಮಾ

Ramoji Rao Funeral: ರಾಮೋಜಿ ರಾವ್ ಪಾರ್ಥಿವ ಶರೀರ ಹೊತ್ತ ಚಂದ್ರಬಾಬು ನಾಯ್ಡು; ವಿಡಿಯೊ ನೋಡಿ

ರಾಮೋಜಿ ಫಿಲ್ಮ್ ಸಿಟಿ ಮತ್ತು ಈಟಿವಿ ನೆಟ್‌ವರ್ಕ್‌ನ ಸಂಸ್ಥಾಪಕ ರಾಮೋಜಿ ರಾವ್ (Ramoji Rao Funeral) ಅವರು ಶನಿವಾರ ನಿಧನರಾಗಿದ್ದು, ಭಾನುವಾರ ನಡೆದ ಅವರ ಅಂತ್ಯಕ್ರಿಯೆಯಲ್ಲಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಪಾಲ್ಗೊಂಡರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

VISTARANEWS.COM


on

By

Ramoji Rao Funeral
Koo

ಹೈದರಾಬಾದ್: ರಾಮೋಜಿ ಫಿಲ್ಮ್ ಸಿಟಿ (Ramoji Film City) ಮತ್ತು ಈಟಿವಿ ನೆಟ್‌ವರ್ಕ್‌ನ (ETV Network) ಸಂಸ್ಥಾಪಕ 87 ವರ್ಷದ ರಾಮೋಜಿ ರಾವ್ (Ramoji Rao Funeral) ಅವರು ಶನಿವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯಲ್ಲಿ ಟಿಡಿಪಿ (TDP) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು (N Chandrababu Naidu) ಅವರು ಭಾನುವಾರ ಪಾಲ್ಗೊಂಡರು. ರಾಮೋಜಿ ರಾವ್‌ ಅವರ ಪಾರ್ಥಿವ ಶರೀರ ಹೊರಲು ಚಂದ್ರಬಾಬು ನಾಯ್ಡು ಅವರು ಹೆಗಲು ಕೊಟ್ಟಿದ್ದು ಗಮನ ಸೆಳೆಯಿತು.

ಈ ಕುರಿತು ಎಕ್ಸ್ ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ನಾಯ್ಡು ಅವರು ರಾಮೋಜಿ ಅವರ ಪಾರ್ಥಿವ ಶರೀರವನ್ನು ಸಾಗಿಸಲು ಅವರ ಕುಟುಂಬ ಸದಸ್ಯರು ಮತ್ತು ಸ್ನೇಹಿತರೊಂದಿಗೆ ಸೇರಿಕೊಂಡರು. ಅಂತ್ಯಕ್ರಿಯೆಯ ಸ್ಥಳದಲ್ಲಿ ಅಭಿಮಾನಿಗಳು, ಕುಟುಂಬ ಸದಸ್ಯರು ಮತ್ತು ಸ್ನೇಹಿತರು ಅಂತಿಮ ನಮನ ಸಲ್ಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದಾಗ ರಾಜಕೀಯ ನಾಯಕ ನಾಯ್ಡು ಅವರು ಮೆರವಣಿಗೆಯನ್ನು ಮುನ್ನಡೆಸಿದರು.


ರಾಮೋಜಿ ರಾವ್ ಅವರು ನಗರದ ಸ್ಟಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶನಿವಾರ ಬೆಳಗಿನ ಜಾವ 3.45ಕ್ಕೆ ಕೊನೆಯುಸಿರೆಳೆದಿದ್ದಾರೆ. ಅಧಿಕ ರಕ್ತದೊತ್ತಡ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜೂನ್ 5ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆಯ ಅನಂತರ ಅವರನ್ನು ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿತ್ತು. ಬಳಿಕ ಅವರು ನಿಧನರಾದರು. ಅವರ ಪಾರ್ಥಿವ ಶರೀರವನ್ನು ರಾಮೋಜಿ ಫಿಲಂ ಸಿಟಿಯಲ್ಲಿರುವ ಅವರ ನಿವಾಸಕ್ಕೆ ಕರೆತರಲಾಗಿತ್ತು.

ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಿಗೆ ಹಲವಾರು ಪ್ರಮುಖ ರಾಜಕೀಯ ನಾಯಕರು ಮತ್ತು ಚಿತ್ರರಂಗದ ಗಣ್ಯರು ಅಂತಿಮ ನಮನ ಸಲ್ಲಿಸಿದರು.


ಮೋದಿ ಸಂತಾಪ

ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಶ್ರೀ ರಾಮೋಜಿ ರಾವ್ ಅವರ ನಿಧನವು ಅತ್ಯಂತ ದುಃಖಕರವಾಗಿದೆ. ಅವರು ಭಾರತೀಯ ಮಾಧ್ಯಮದಲ್ಲಿ ಕ್ರಾಂತಿಯನ್ನು ಮಾಡಿದ ದಾರ್ಶನಿಕರಾಗಿದ್ದರು. ಅವರ ಶ್ರೀಮಂತ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ. ಗಮನಾರ್ಹ ಪ್ರಯತ್ನಗಳು, ಅವರು ಮಾಧ್ಯಮ ಮತ್ತು ಮನರಂಜನಾ ಜಗತ್ತಿನಲ್ಲಿ ನಾವೀನ್ಯತೆ ಮತ್ತು ಶ್ರೇಷ್ಠತೆಗೆ ಹೊಸ ಮಾನದಂಡಗಳನ್ನು ಸ್ಥಾಪಿಸಿದರು ಎಂದು ಹೇಳಿದ್ದರು.


ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗ್ಗೆ ಅಪಾರವಾದ ಉತ್ಸುಕರಾಗಿದ್ದರು. ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರ ಬುದ್ಧಿವಂತಿಕೆಯಿಂದ ಪ್ರಯೋಜನ ಪಡೆಯಲು ಹಲವಾರು ಅವಕಾಶಗಳನ್ನು ಪಡೆದಿರುವುದು ನನ್ನ ಅದೃಷ್ಟ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ ಎಂದು ಅವರು ವರ್ಣಿಸಿದ್ದರು.

ಇದನ್ನೂ ಓದಿ: Kangana Ranaut: ಕಂಗನಾ ರಣಾವತ್‌ಗೆ ಕಪಾಳಮೋಕ್ಷ; ಹೃತಿಕ್ ರೋಷನ್ ರಿಯಾಕ್ಷನ್‌ ಏನು?

ಮಹೇಶ್ ಬಾಬು ಸಂತಾಪ

ನಟ ಮಹೇಶ್ ಬಾಬು ಅವರು, ರಾಮೋಜಿ ರಾವ್ ಅವರ ಅಗಲುವಿಕೆಯಿಂದ ತೀವ್ರ ದುಃಖವಾಗಿದೆ. ಅವರ ಸಮಯಕ್ಕಿಂತ ಯಾವಾಗಲೂ ಮುಂದಿರುವ ದಾರ್ಶನಿಕ. ರಾಮೋಜಿ ಫಿಲ್ಮ್ ಸಿಟಿ ಅವರ ತೇಜಸ್ಸಿಗೆ ಮತ್ತು ಸಿನಿಮಾದ ಮೇಲಿನ ಉತ್ಸಾಹಕ್ಕೆ ಸಾಕ್ಷಿಯಾಗಿದೆ. ಅವರ ಪರಂಪರೆ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತದೆ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತಿಳಿಸಿದ್ದಾರೆ.

ರಿತೇಶ್ ದೇಶ್‌ಮುಖ್ ಸಂತಾಪ

ರಿತೇಶ್ ದೇಶ್‌ಮುಖ್ ಅವರು, ಐಕಾನ್, ಲೆಜೆಂಡ್ ಶ್ರೀ ರಾಮೋಜಿ ರಾವ್ ಅವರು ಇನ್ನಿಲ್ಲ ಎಂದು ತಿಳಿದು ನನಗೆ ತುಂಬಾ ದುಃಖವಾಗಿದೆ. ಹೊಸಬರಿಗೆ ಅವಕಾಶಗಳನ್ನು ನೀಡುವ ಅವರ ನಂಬಿಕೆಗೆ ಧನ್ಯವಾದಗಳು. ಅವರು ಯಾರೂ ಮಾಡದ ಕೆಲಸವನ್ನು ಮಾಡಲು ಧೈರ್ಯ ಮಾಡಿದರು. ಅವರ ಪರಂಪರೆಯು ಶಾಶ್ವತವಾಗಿ ಉಳಿಯುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

Continue Reading

ಬಾಲಿವುಡ್

Kangana Ranaut: ಕಂಗನಾ ರಣಾವತ್‌ಗೆ ಕಪಾಳಮೋಕ್ಷ; ಹೃತಿಕ್ ರೋಷನ್ ರಿಯಾಕ್ಷನ್‌ ಏನು?

Kangana Ranaut: ಆಲಿಯಾ ಭಟ್, ಸೋನಾಕ್ಷಿ ಸಿನ್ಹಾ, ಜೋಯಾ ಅಖ್ತರ್, ಸೋನಿ ರಜ್ದಾನ್, ಅರ್ಜುನ್ ಕಪೂರ್ ಮತ್ತು ಪ್ರಜಕ್ತಾ ಕೋಲಿ ಸೇರಿದಂತೆ ಹಲವು ಬಾಲಿವುಡ್ ಗಣ್ಯ ವ್ಯಕ್ತಿಗಳು ಕಂಗನಾ ರಣಾವತ್‌ಗೆ​ ಬೆಂಬಲವನ್ನು ನೀಡಿದ್ದಾರೆ. ಅನುಪಮ್ ಖೇರ್, ಮಿಕಾ ಸಿಂಗ್, ರವೀನಾ ಟಂಡನ್ ಮತ್ತು ಶೇಖರ್ ಸುಮನ್ ಸೇರಿದಂತೆ ಹಲವಾರು ವ್ಯಕ್ತಿಗಳು ಘಟನೆಯನ್ನು ಖಂಡಿಸಿದ್ದಾರೆ.

VISTARANEWS.COM


on

Kangana Ranaut Slapped incident Hrithik Roshan Backs Post
Koo

ಬೆಂಗಳೂರು: ಲೋಕಸಭಾ ಚುನಾವಣೆ(Lok Sabha Election 2024)ಯಲ್ಲಿ ಹಿಮಾಚಲಪ್ರದೇಶದ ಮಂಡಿಯಿಂದ ಸಂಸದರಾಗಿ ಆಯ್ಕೆಯಾದ ಕಂಗನಾ ರಣಾವತ್ (Kangana Ranaut)ಗೆ ಕಪಾಳಮೋಕ್ಷ ಮಾಡಿದ್ದ ಕಾನ್‌ಸ್ಟೇಬಲ್‌ ಕುಲ್ವಿಂದರ್‌ ಕೌರ್‌ರನ್ನು ಅರೆಸ್ಟ್‌ ಮಾಡಲಾಗಿದೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ಗುರುವಾರ ಕಂಗನಾ ಮೇಲೆ CISF ಸಿಬ್ಬಂದಿ ಕೌರ್‌ ಹಲ್ಲೆ ನಡೆಸಿದ್ದರು. ಇದಾದ ಬಳಿಕ ಆಲಿಯಾ ಭಟ್, ಸೋನಾಕ್ಷಿ ಸಿನ್ಹಾ, ಜೋಯಾ ಅಖ್ತರ್, ಸೋನಿ ರಜ್ದಾನ್, ಅರ್ಜುನ್ ಕಪೂರ್ ಮತ್ತು ಪ್ರಜಕ್ತಾ ಕೋಲಿ ಸೇರಿದಂತೆ ಹಲವು ಬಾಲಿವುಡ್ ಗಣ್ಯ ವ್ಯಕ್ತಿಗಳು ಕಂಗನಾ ರಣಾವತ್‌ಗೆ​ ಬೆಂಬಲವನ್ನು ನೀಡಿದ್ದಾರೆ. ಅನುಪಮ್ ಖೇರ್, ಮಿಕಾ ಸಿಂಗ್, ರವೀನಾ ಟಂಡನ್ ಮತ್ತು ಶೇಖರ್ ಸುಮನ್ ಸೇರಿದಂತೆ ಹಲವಾರು ವ್ಯಕ್ತಿಗಳು ಘಟನೆಯನ್ನು ಖಂಡಿಸಿದ್ದಾರೆ.

ಪತ್ರಕರ್ತೆ ಫಾಯೆ ಡಿಸೋಜಾ ಅವರು ಕಪಾಳಮೋಕ್ಷ ಘಟನೆಯನ್ನು ಖಂಡಿಸಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ, “ಹಿಂಸೆ ಎಂದಿಗೂ ಉತ್ತರವಾಗುವುದಿಲ್ಲ” ಎಂದು ಹೇಳಿದ್ದಾರೆ. “ವಿಶೇಷವಾಗಿ ಗಾಂಧಿಯವರ ಅಹಿಂಸೆಯ ಆದರ್ಶಗಳಿಂದ ಹುಟ್ಟಿದ ನಮ್ಮ ದೇಶದಲ್ಲಿ ಅಲ್ಲ. ಯಾರೋ ಮಾಡಿದ ಅಭಿಪ್ರಾಯಗಳು ಮತ್ತು ಹೇಳಿಕೆಗಳೊಂದಿಗೆ ನಾವು ಎಷ್ಟು ಭಿನ್ನಾಭಿಪ್ರಾಯ ಹೊಂದಿದ್ದೇವೆ ಎಂಬುದು ಮುಖ್ಯವಲ್ಲ, ನಾವು ಹಿಂಸೆಯಿಂದ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಮತ್ತು ನಾವು ಅದನ್ನು ಕ್ಷಮಿಸಬಾರದು, ಹಿಂಸೆ ಎಂದಿಗೂ ಉತ್ತರವಾಗುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟ್‌ಗೆ ಹೃತಿಕ್ ರೋಷನ್, ಆಲಿಯಾ ಭಟ್, ಅರ್ಜುನ್ ಕಪೂರ್, ಸೋನಾಕ್ಷಿ ಸಿನ್ಹಾ, ಜೋಯಾ ಅಖ್ತರ್ ಮತ್ತು ಸೋನಿ ರಜ್ದಾನ್ ಸೇರಿದಂತೆ ಅನೇಕರು ಲೈಕ್‌ ಕೊಟ್ಟಿದ್ದಾರೆ.

ಇದನ್ನೂ ಓದಿ: Kangana Ranaut: ಕಾರಣ ಇದ್ದರೆ ಕೊಲೆ, ಅತ್ಯಾಚಾರ ಮಾಡಬಹುದೆ? ; ವಿರೋಧಿಗಳ ವಿರುದ್ಧ ಗುಡುಗಿದ ಕಂಗನಾ

Liked by Hrithik
byu/Icy-One-5297 inBollyBlindsNGossip

ಏನಿದು ಘಟನೆ?

2020 ರಲ್ಲಿ, ಕಂಗನಾ ರಣಾವತ್‌ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್​ಸ್ಟೇಬಲ್​ ಕುಲ್ವಿಂದರ್ ಕೌರ್​ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ.

100 ರೂಪಾಯಿಗೆ ಸಿಗುವ ಮಹಿಳೆಯರು ಎಂದು ಕಂಗನಾ ಕೊಟ್ಟಿರುವ ಹೇಳಿಕೆಯು ಎಕ್ಸ್ ನಲ್ಲಿ(ಟ್ವಿಟರ್​) ಕಂಗನಾ ಮತ್ತು ಗಾಯಕ-ನಟ ದಿಲ್ಜೀತ್ ದೋಸಾಂಜ್ ನಡುವೆ ಗಲಾಟೆಗೆ ಕಾರಣವಾಗಿತ್ತು. ಫೆಬ್ರವರಿ 2021 ರಲ್ಲಿ, ಅಂತಾರಾಷ್ಟ್ರೀಯ ಪಾಪ್ ಸೆನ್ಸೇಷನ್ ರಿಹಾನ್ನಾ ಅವರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಂಗನಾ ರನೌತ್ ಪ್ರತಿಭಟನಾಕಾರರನ್ನು “ಭಯೋತ್ಪಾದಕರು” ಎಂದು ಕರೆದಿದ್ದರು ಮತ್ತು ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಸಿಬ್ಬಂದಿ ರೈತರ ಚಳವಳಿ ಕುರಿತು ನೀಡಿದ್ದ ಹೇಳಿಕೆಯಿಂದ ನನಗೆ ನೋವಾಗಿತ್ತು ಎಂದು ವಿಚಾರಣೆ ವೇಳೆ ಹೇಳಿದ್ದಾರೆ. ಕಂಗನಾ ರಣಾವತ್ ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದರು. ನಟಿಯ ಮುಂದೆ ಕಾಂಗ್ರೆಸ್ ಪಕ್ಷದ ನಾಯಕ ವಿಕ್ರಮಾದಿತ್ಯ ಸಿಂಗ್ ಇದ್ದರು. ಕಂಗನಾ ಅವರನ್ನು 74,755 ಮತಗಳಿಂದ ಸೋಲಿಸಿದರು.

Continue Reading
Advertisement
Fake CBI Gang
ಕ್ರೈಂ7 mins ago

Fake CBI Gang: ನಿವೃತ್ತ ಅಧಿಕಾರಿಯ 85 ಲಕ್ಷ ರೂ. ಎಗರಿಸಿದ ನಕಲಿ ಸಿಬಿಐ ಗ್ಯಾಂಗ್!

Kannada New Movie Chilli Chicken Official Trailer
ಸ್ಯಾಂಡಲ್ ವುಡ್21 mins ago

Kannada New Movie: ‘ಚಿಲ್ಲಿ ಚಿಕನ್​’ ಟ್ರೈಲರ್‌ ಔಟ್‌; ಚೈನೀಸ್ ಹೋಟೆಲ್ ಹುಡುಗರ ಸ್ಟೋರಿ!

IND vk PAK
ಕ್ರಿಕೆಟ್21 mins ago

IND vs PAK : ​ ವಿರಾಟ್​ ಕೊಹ್ಲಿಯ ಚಪ್ಪಲಿಗೂ ಸಮವಲ್ಲ ಬಾಬರ್ ಅಜಂ; ಪಾಕಿಸ್ತಾನದ ಮಾಜಿ ಆಟಗಾರನ ಟೀಕೆ

Champions Trophy 2025
ಕ್ರೀಡೆ24 mins ago

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಮುಹೂರ್ತ ಫಿಕ್ಸ್​; ಪಾಕ್​ಗೆ ತೆರಳಲಿದೆಯೇ ಭಾರತ?

Killer Python
ಕ್ರೈಂ27 mins ago

Killer Python: ಮಹಿಳೆಯನ್ನು ಜೀವಂತವಾಗಿ ನುಂಗಿದ ಹೆಬ್ಬಾವು! ಹೊಟ್ಟೆ ಸೀಳಿ ಹೊರ ತೆಗೆದರು!

Dupatta Selection Tips
ಫ್ಯಾಷನ್32 mins ago

Dupatta Selection Tips: ಪರ್ಫೆಕ್ಟ್ ದುಪಟ್ಟಾ ಸೆಲೆಕ್ಷನ್‌ಗೆ ಇಲ್ಲಿದೆ 5 ಸಿಂಪಲ್‌ ಸೂತ್ರ

Viral Video
ಕ್ರೈಂ32 mins ago

Viral Video: ಹೋಟೆಲ್‌ನೊಳಗೆ ಪಿಜ್ಜಾ ತಿನ್ನುತ್ತಿರುವಾಗಲೇ ಮಹಿಳೆಯ ಸರ ಅಪಹರಣ!

Dharwad News The monkey sat on the corpse during the funeral
ಧಾರವಾಡ33 mins ago

Dharwad News : ಅಗ್ನಿ ಸ್ಪರ್ಶ ಮಾಡುವಾಗಲೇ ಶವದ ಮೇಲೆ ಹಾರಿ ಕುಳಿತ ಮಂಗ! ಮುಂದೇನಾಯಿತು?

Kalki 2898 AD Deepika Padukone looks poster
South Cinema41 mins ago

Kalki 2898 AD: ʼಕಲ್ಕಿ 2898 ಎಡಿʼ ಚಿತ್ರದಿಂದ ಹೊಸ ಪೋಸ್ಟರ್‌ ಔಟ್; ಗಾಬರಿ ಲುಕ್‌ನಲ್ಲಿ ದೀಪಿಕಾ!

VK Pandian
ದೇಶ1 hour ago

VK Pandian: ಉತ್ತರಾಧಿಕಾರಿ ವದಂತಿ ಬೆನ್ನಲ್ಲೇ ವಿ.ಕೆ.ಪಾಂಡಿಯನ್‌ ರಾಜಕೀಯ ನಿವೃತ್ತಿ; ಬಿಜೆಡಿ ಸೋಲಿಗೆ ಹೊಣೆ ಹೊತ್ತು ವಿದಾಯ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌