Site icon Vistara News

Shamita Shetty: ವಿಚಿತ್ರ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ: ಆಸ್ಪತ್ರೆಗೆ ದಾಖಲು

Shamita Shetty Undergoes Surgery For Endometriosis

ಬೆಂಗಳೂರು: ನಟಿ ಶಮಿತಾ ಶೆಟ್ಟಿ (Shamita Shetty ) ಅವರು ಎಂಡೊಮೆಟ್ರಿಯೊಸಿಸ್ (endometriosis ) ಎನ್ನುವ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಸ್ವತಃ ಶಮಿತಾ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ತಿಳಿಸಿದ್ದು, ಎಲ್ಲಾ ಮಹಿಳೆಯರೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಎಂಡೊಮೆಟ್ರಿಯೊಸಿಸ್ ಎಂದರೆ ಗರ್ಭಾಶಯದ ಒಳಪದರವನ್ನು ಹೋಲುವ ಅಂಗಾಂಶವು ಗರ್ಭಾಶಯದ ಹೊರಗೆ ಬೆಳೆಯಲು ಪ್ರಾರಂಭಿಸುತ್ತದೆ.

ಆಸ್ಪತ್ರೆಯ ಹಾಸಿಗೆಯಲ್ಲಿ ಕುಳಿತು ವಿಡಿಯೊ ಶೇರ್‌ ಮಾಡಿಕೊಂಡಿದ್ದಾರೆ. ಶಮಿತಾ ಮಾತನಾಡಿ ʻಮಹಿಳೆಯರೇ, ದಯವಿಟ್ಟು ಎಂಡೊಮೆಟ್ರಿಯೊಸಿಸ್ ಗೂಗಲ್ ಮಾಡಿ. ಸಮಸ್ಯೆ ಏನು ಎಂದು ನೀವು ತಿಳಿದುಕೊಳ್ಳಬೇಕು. ಸುಮಾರು 40% ಮಹಿಳೆಯರು ಎಂಡೊಮೆಟ್ರಿಯೊಸಿಸ್‌ನಿಂದ ಬಳಲುತ್ತಿದ್ದಾರೆ ಎಂದು ನಿಮಗೆ ತಿಳಿದಿದೆಯೇ..? ನಮ್ಮಲ್ಲಿ ಹೆಚ್ಚಿನವರಿಗೆ ಈ ರೋಗದ ಬಗ್ಗೆ ತಿಳಿದಿಲ್ಲ !!! ನನ್ನ ನೋವಿನ ಮೂಲ ಕಾರಣವನ್ನು ಕಂಡುಕೊಳ್ಳಲು ಸಹಾಯ ಮಾಡಿದ ನನ್ನ ವೈದ್ಯರಾದ ಗೈನಾಕ್ ಡಾ ನೀತಾ ವಾರ್ಟಿ ಮತ್ತು ನನ್ನ ಜಿಪಿ ಡಾ ಸುನೀತಾ ಬ್ಯಾನರ್ಜಿ ಇಬ್ಬರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ! ಈಗ ನಾನು ಈ ರೋಗವನ್ನು ಶಸ್ತ್ರಚಿಕಿತ್ಸೆಯಿಂದ ತೆಗೆದುಹಾಕಿದ್ದೇನೆ ನನ್ನ ಆರೋಗ್ಯ ಮತ್ತಷ್ಟು ಸುಧಾರಿಸಲು ಎದುರು ನೀಡುತ್ತಿದ್ದೇನೆ. ಈಗೀಗ ನೋವಿಲ್ಲದ ದಿನಗಳನ್ನು ಕಳೆಯುತ್ತಿದ್ದೇನೆ. ಹೀಗಾಗಿ ಎಲ್ಲಾ ಮಹಿಳೆಯರೂ ಈ ಎಂಡೊಮೆಟ್ರಿಯೊಸಿಸ್ ಬಗ್ಗೆ ಜಾಗೃತರಾಗಿ ಮತ್ತು ಚಿಕಿತ್ಸೆ ಪಡೆಯಿರಿʼʼ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Shilpa Shetty: ಅಮ್ಮ , ಸಹೋದರಿ ಜತೆ ಕೇದಾರನಾಥಕ್ಕೆ ಭೇಟಿ ನೀಡಿದ ಶಿಲ್ಪಾ ಶೆಟ್ಟಿ

ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ವೈರಲ್‌ ಆಗುತ್ತಿದ್ದಂತೆ ಶಮಿತಾ ಅವರ ಸಹೋದ್ಯೋಗಿಗಳು ಮತ್ತು ಬಾಲಿವುಡ್‌ನ ಅನೇಕ ಗಣ್ಯರು ಬೇಗ ಗುಣಮುಖರಾಗಿ ಎಂದು ಕಮೆಂಟ್‌ ಮಾಡಿದ್ದಾರೆ.

ಏನಿದು ಎಂಡೊಮೆಟ್ರಿಯೊಸಿಸ್ ಕಾಯಿಲೆ?

ಗರ್ಭಕೋಶಕ್ಕೆ ಸಂಬಂಧಿಸಿದ್ದು, ಗರ್ಭಾಶಯದ ಒಳಪದರವನ್ನು ಹೋಲುವ ಅಂಗಾಂಶವು ಗರ್ಭಾಶಯದ ಹೊರಗೆ ಬೆಳೆಯಲು ಪ್ರಾರಂಭಿಸುತ್ತದೆ. ಇದಕ್ಕೆ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ಮಹಿಳೆಯರಿಗೆ ಗರ್ಭಿಣಿಯಾಗಲು ಕಷ್ಟವಾಗುತ್ತದೆ. ಹಾಗೂ ಮುಟ್ಟಿನ ಸಮಯದಲ್ಲಿ ಕಷ್ಟವಾಗುತ್ತದೆ.

ಇತ್ತೀಚೆಗಷ್ಟೇ ಶಮಿತಾ ತಾಯಿ ಸುನಂದಾ ಶೆಟ್ಟಿ ಮತ್ತು ಸಹೋದರಿ ನಟಿ ಶಿಲ್ಪಾ ಶೆಟ್ಟಿ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರದ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಶಿಲ್ಪಾ ಅವರು ಪ್ರವಾಸದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಜಾರಿ ನಿರ್ದೇಶನಾಲಯ ಶಿಲ್ಪಾ ಶೆಟ್ಟಿ ಅವರಿಗೆ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶ ಪಡಿಸಿಕೊಂಡ ಪ್ರಕರಣ ತನಿಖೆ ಹಂತದಲ್ಲೇ, ಮತ್ತೊಂದು ವೈಯಕ್ತಿಕ ಸಮಸ್ಯೆ ಎದುರಾಗಿದೆ.

Exit mobile version