ಬೆಂಗಳೂರು: ಡಾ.ರಾಜ್ ಕುಮಾರ್ (dr rajkumar) ಹಾಗೂ ಪಾರ್ವತಮ್ಮ ರಾಜ್‌ಕುಮಾರ್ ಅವರ ಮೊಮ್ಮಗ ಷಣ್ಮುಖ ಗೋವಿಂದರಾಜ್ (Shanmukha Govindaraj) ಅಭಿನಯದ ‘ನಿಂಬಿಯಾ ಬನಾದ ಮ್ಯಾಗ’ (Nimbiya Banada Myaga) ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗೆಗೊಂಡಿದೆ. ಅಶೋಕ್ ಕಡಬ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ಲುಕ್ ಕಂಡೊಡನೇ (Nimbiya Banada Myaga First Look Teaser) ಸಿನಿರಸಿಕರು ಥ್ರಿಲ್ ಆಗಿದ್ದಾರೆ .
ಖಾಸಗಿ ವಲಯದಲ್ಲಿ ಒಂದಷ್ಟು ಕಾಲ ಕಾರ್ಯ ನಿರ್ವಹಿಸಿ, ಅದರ ನಡುವೆಯೇ ನಟನಾಗಬೆಂಕೆಂಬ ಹಂಬಲ ಹೊಂದಿದ್ದವರು ಷಣ್ಮುಖ ಗೋವಿಂದರಾಜ್. ಸೂಕ್ಷ್ಮ ಕಥಾ ಹಂದರದೊಂದಿಗೆ ನಿರ್ದೇಶಕ ಅಶೋಕ್ ಕಡಬ ಷಣ್ಮುಖ ಗೋವಿಂದರಾಜ್ ಕನಸನ್ನು ನನಸು ಮಾಡಿದ್ದಾರೆ. ಫಸ್ಟ್ ಲುಕ್ ಟೀಸರ್ ಮೂಲಕವೇ ಈ ಸಿನಿಮಾವನ್ನು ಪ್ರೇಕ್ಷಕರ ಆಸಕ್ತಿ ಕೇಂದ್ರಕ್ಕೆ ತಂದು ನಿಲ್ಲಿಸುವಲ್ಲಿ ಅಶೋಕ್ ಕಡಬ ಗೆದ್ದಿದ್ದಾರೆ.
ಈಗಾಗಲೇ ಅಣ್ಣಾವ್ರ ಕುಟುಂಬದ ಬಹುತೇಕರು ಈ ಫಸ್ಟ್ ಲುಕ್ ಟೀಸರ್ ನೋಡಿ ಬಹುವಾಗಿ ಮೆಚ್ಚಿಕೊಂಡಿದ್ದಾರೆ. ಅತ್ಯಂತ ಕಡಿಮೆ ಅವಧಿಯಲ್ಲಿ ಈ ಫಸ್ಟ್ ಲುಕ್ ಟೀಸರ್ ಲಕ್ಷ ವೀಕ್ಷಣೆಯ ಗಡಿ ದಾಟಿಕೊಂಡಿದೆ. ಎಮ್.ಜಿ.ಪಿ.ಎಕ್ಸ್ ಎಂಟರ್ ಪ್ರೈಸಸ್ ಲಾಂಛನದಡಿಯಲ್ಲಿ ವಿ. ಮಾದೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಹಿರಿಯ ನಟ ರಾಮಕೃಷ್ಣ, ಉಮೇಶ್, ಶಶಿಧರ ಕೋಟೆ ಮೊದಲಾದ ಘಟಾನುಘಟಿ ಕಲಾವಿದರ ತಾರಾಗಣ ಈ ಚಿತ್ರದಲ್ಲಿದೆ.
ಇದನ್ನೂ ಓದಿ: Shanmukha Govindaraj: ರಾಜ್ ಮೊಮ್ಮಗನ ಸಿನಿಮಾಗೆ ತಾತನ ಹಾಡೇ ಟೈಟಲ್!
ಹಿರಿಯ ನಿರ್ದೇಶಕ ಎಸ್ ನಾರಾಯಣ್ ಪುತ್ರ ಪಂಕಜ್ ಕೂಡಾ ಇಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಹಿರಿಯ ನಟಿ ಭವ್ಯಾ ಬಹು ಕಾಲದ ನಂತರ ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಇನ್ನುಳಿದಂತೆ ಪ್ರಮುಖ ನಟರೊಬ್ಬರು ಈ ಸಿನಿಮಾದಲ್ಲಿ ಮುಖ್ಯ ಪಾತ್ರವೊಂದರಲ್ಲಿ ನಟಿಸಲಿದ್ದಾರಂತೆ. ಆ ನಟ ಯಾರೆಂಬುದೂ ಸೇರಿದಂತೆ ಹಲವು ವಿಚಾರಗಳನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳುವುದಾಗಿ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
‘ನಿಂಬಿಯಾ ಬನಾದ ಮ್ಯಾಗ’ ಇನ್ನೂ ಬಿಡುಗಡೆಯಾಗಿಲ್ಲ. ಆಗಲೇ ಎರಡನೇ ಚಿತ್ರಕ್ಕೆಕ್ಕೂ ಷಣ್ಮುಖ ಗೋವಿಂದರಾಜ್ ಚಾಲನೆ ಕೊಟ್ಟಿದ್ದಾರೆ.
ಇದನ್ನೂ ಓದಿ: Kannada New Movie: ರಂಗಾಯಣ ರಘು ‘ಶಾಖಾಹಾರಿ’ ಸಿನಿಮಾಗೆ ಯೋಗರಾಜ್ ಭಟ್ ಸಾಥ್!
‘ಚಿನ್ನದ ಮಲ್ಲಿಗೆ ಹೂವೇ’ ಸಿನಿಮಾ
ಜನಪ್ರಿಯ ಲೇಖಕಿ ಸಾರಾ ಅಬೂಬಕ್ಕರ್ ಬರೆದ ‘ವಜ್ರಗಳು’ ಕಾದಂಬರಿಯನ್ನು ಆಧರಿಸಿದ ‘ಸಾರಾ ವಜ್ರ’ ಸಿನಿಮಾವನ್ನು ನಿರ್ದೇಶಿಸಿದ್ದ ನಿರ್ದೇಶಕಿ ಆರ್‍ನಾ ಸಾಧ್ಯ ಈ ಸಿನಿಮಾ ಮೂಲಕ ಈಗ ನಿರ್ಮಾಪಕಿಯಾಗಿದ್ದಾರೆ. ಸಂಭ್ರಮ ಮೀಡಿಯಾ ಹೌಸ್ ಎಂಬ ಸಂಸ್ಥೆಯಿಂದ ‘ಚಿನ್ನದ ಮಲ್ಲಿಗೆ ಹೂವೇ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಆ ಸಿನಮಾದಲ್ಲಿಯೇ ಷಣ್ಮುಖ ಗೋವಿಂದರಾಜು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ‘ಚಿನ್ನದ ಮಲ್ಲಿಗೆ ಹೂವೆ’ ಚಿತ್ರದ ಶೀರ್ಷಿಕೆಯನ್ನು ತಮ್ಮ ಅಕ್ಷರದ ಮೂಲಕ ಖ್ಯಾತ ಸಾಹಿತಿ ಡಾ ವಿ ನಾಗೇಂದ್ರ ಪ್ರಸಾದ್ ಬರೆದುಕೊಟ್ಟರು. ನಟ ಡಾ ರಾಘವೇಂದ್ರ ರಾಜ್ ಕುಮಾರ್ ಶೀರ್ಷಿಕೆ ಅನಾವರಣ ಮಾಡಿದರು.
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ನವಿಲುಗರಿ ನವೀನ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸೆಪ್ಟೆಂಬರ್‌ನಿಂದ ಸಿನಿಮಾ ಸೆಟ್ಟೇರುತ್ತಿದೆ.