Sharad Kelkar: 'ಬಾಹುಬಲಿ'ಗೆ ಧ್ವನಿ ನೀಡಿದ್ದು ಮರೆಯಲಾಗದ ಅನುಭವ ಎಂದ ಶರದ್ ಕೇಳ್ಕರ್ - Vistara News

ಸಿನಿಮಾ

Sharad Kelkar: ‘ಬಾಹುಬಲಿ’ಗೆ ಧ್ವನಿ ನೀಡಿದ್ದು ಮರೆಯಲಾಗದ ಅನುಭವ ಎಂದ ಶರದ್ ಕೇಳ್ಕರ್

ಬಾಹುಬಲಿ: ಕ್ರೌನ್ ಆ ಬ್ಲಡ್ ಅನಿಮೇಟೆಡ್ ಸರಣಿ ಡಿಸ್ನಿ+ಹಾಟ್‌ಸ್ಟಾರ್‌ ನಲ್ಲಿ ಬಿಡುಗಡೆಯಾಗಿದ್ದು, ಶರದ್ ಕೇಲ್ಕರ್ (Sharad Kelkar) ಚಿತ್ರದೊಂದಿಗಿನ ತಮ್ಮ ನಂಟನ್ನು ನೆನಪಿಸಿಕೊಂಡಿದ್ದಾರೆ.

VISTARANEWS.COM


on

Sharad Kelkar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅದ್ಧೂರಿ ಬಜೆಟ್‌ನ ʼಬಾಹುಬಲಿʼ (bahubali) ಚಿತ್ರದ ಒಂದೊಂದು ದೃಶ್ಯಗಳು ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಸಿನಿಮಾದ ಮೊದಲ ಭಾಗ ಬಿಡುಗಡೆಯಾಗಿ ಹತ್ತು ವರ್ಷ ಸಮೀಪಿಸಿದರೂ ಈಗಲೂ ಚಿತ್ರದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇದೆ. ʼಬಾಹುಬಲಿʼ ಪಾತ್ರಧಾರಿ ಪ್ರಭಾಸ್‌ಗೆ (actor prabhas) ಧ್ವನಿ ನೀಡಿರುವ ಶರದ್ ಕೇಳ್ಕರ್ (Sharad Kelkar) ತಮ್ಮ ಮರೆಯಲಾಗದ ಅನುಭವವನ್ನು ಹಂಚಿಕೊಂಡಿದ್ದಾರೆ.

ಡಿಸ್ನಿ+ಹಾಟ್‌ಸ್ಟಾರ್‌ ನಲ್ಲಿ (Disney Plus star) ಬಿಡುಗಡೆಯಾಗಿರುವ “ಬಾಹುಬಲಿ: ಕ್ರೌನ್ ಆ ಬ್ಲಡ್” (Baahubali: Crown of Blood) ಅನಿಮೇಟೆಡ್ ಸರಣಿಯು ಈಗ ಚರ್ಚೆಯಲ್ಲಿದೆ. ಬಾಹುಬಲಿ ಮತ್ತು ಮಾಹಿಷ್ಮತಿಯ ಜಗತ್ತಿನಲ್ಲಿ ಇದೂವರೆಗೂ ಕೇಳಿರದ, ಕಂಡಿರದ ಹಾಗೂ ತಿಳಿಯಲಾಗದಿದ್ದ ಅನೇಕ ಘಟನೆಗಳು ಕಥೆಗಳು ಒಂದೊಂದಾಗಿ ಕೇಳಿ ಬರುತ್ತಿವೆ.


ಅನೇಕ ಐತಿಹಾಸಿಕ ಚಿತ್ರಗಳಿಗೆ ಧ್ವನಿ ನೀಡಿ ಖ್ಯಾತರಾಗಿರುವ ಮೂಲತಃ ನಟರೂ ಆಗಿರುವ ಶರದ್ ಕೇಳ್ಕರ್ ಅವರು ಬಾಹುಬಲಿ ನಾಯಕ ಪ್ರಭಾಸ್‌ ಅವರಿಗೆ ಕಂಠದಾನ ಮಾಡಿದ್ದರು. ಈ ಕುರಿತಂತೆ ಅವರು ತಮ್ಮ ಸಂತಸವನ್ನು ಈಗ ಹಂಚಿಕೊಂಡಿದ್ದಾರೆ.

ತನ್ನ ಬಲವಾದ ಧ್ವನಿಗಾಗಿ ಹೆಸರಾಗಿರುವ ಶರದ್ , ಐಕಾನಿಕ್ ‘ಬಾಹುಬಲಿ’ ಸರಣಿಯನ್ನು ಹಿಂದಿ ಭಾಷೆಗೆ ಡಬ್‌ ಮಾಡುವಾಗ ಚಲನಚಿತ್ರ ನಿರ್ಮಾಪಕ ಎಸ್‌.ಎಸ್. ರಾಜಮೌಳಿ ಅವರು ತಮ್ಮ ಆಯ್ಕೆ ಬಗ್ಗೆ ಮೊದಲು ಸಂದೇಹ ಪಟ್ಟಿದ್ದರು. ‘ಬಾಹುಬಲಿ: ದಿ ಬಿಗಿನಿಂಗ್’ ಮತ್ತು ‘ಬಾಹುಬಲಿ: ದಿ ಕನ್‌ಕ್ಲೂಷನ್’ ಎರಡರಲ್ಲೂ ರೆಬೆಲ್ ಸ್ಟಾರ್ ಪ್ರಭಾಸ್ ಮೂಲತಃ ಚಿತ್ರಿಸಿದ ಅಮರೇಂದ್ರ ಬಾಹುಬಲಿ ಮತ್ತು ಮಹೇಂದ್ರ ಬಾಹುಬಲಿ ಪಾತ್ರಗಳಿಗೆ ಧ್ವನಿ ನೀಡಿದ ಕೇಳ್ಕರ್‌ ಅವರು ಎಪಿಕ್ ಸಾಹಸದ ಡಬ್ಬಿಂಗ್ ಕಾರ್ಯದ ಬಗ್ಗೆ ಅನೇಕ ವಿಚಾರಗಳನ್ನು ಹೇಳಿಕೊಂಡಿದ್ದಾರೆ.

ಪವನ್ ಕಲ್ಯಾಣ್ ಅಭಿನಯದ 2016 ರ ತೆಲುಗು ಆಕ್ಷನ್- ಕಾಮಿಡಿ ಚಿತ್ರ ‘ಸರ್ದಾರ್ ಗಬ್ಬರ್ ಸಿಂಗ್’ ನಲ್ಲಿ ಕೇಳ್ಕರ್ ತೊಡಗಿಸಿಕೊಂಡಿದ್ದರು. ಈ ವೇಳೆ ಸಿಬ್ಬಂದಿಯೊಬ್ಬ ಅವರ ಗಾಯನವನ್ನು ಗುರುತಿಸಿ ರಾಜಮೌಳಿ ಅವರಿಗೆ ಇವರ ಹೆಸರು ಶಿಫಾರಸು ಮಾಡಿದ್ದರು ಎನ್ನಲಾಗಿದೆ.


ನನಗೆ ‘ಬಾಹುಬಲಿ’ ಬಗ್ಗೆ ಯಾವುದೇ ಕಲ್ಪನೆ ಇರಲಿಲ್ಲ. ಆದರೆ ನಾನು ರಾಜಮೌಳಿ ಅವರ ಹಿಂದಿನ ಚಿತ್ರಗಳಾದ ‘ಮಗಧೀರ’ ನೋಡಿದ್ದೇನೆ. ಒಬ್ಬ ನಟನಾಗಿ ನಾನು ಈ ಮಾಸ್ಟರ್‌ಪೀಸ್‌ನ ಸೃಷ್ಟಿಕರ್ತನನ್ನು ಭೇಟಿಯಾಗಲು ಬಯಸಿದ್ದೆ. ಹಾಗಾಗಿ ನಾನು ನನ್ನ ಧ್ವನಿ ಪರೀಕ್ಷೆಯನ್ನು ಮಾಡಿದೆ. ಟೇಪ್ ನೊಂದಿಗೆ ಮರುದಿನ ಅವರನ್ನು ಸ್ಟುಡಿಯೋದಲ್ಲಿ ಭೇಟಿಯಾದೆ. ನೀವು ಬಾಹುಬಲಿಗಾಗಿ ಡಬ್ಬಿಂಗ್ ಮಾಡುತ್ತಿದ್ದೀರಿ ಎಂದು ಅವರು ಹೇಳಿದಾಗ ನಂಬಲು ಅಸಾಧ್ಯವಾಯಿತು ಎಂದಿದ್ದಾರೆ ಕೇಳ್ಕರ್.

ಈ ಪಾತ್ರವು ಕೇಳ್ಕರ್ ಅವರ ವೃತ್ತಿಜೀವನವನ್ನು ಗಮನಾರ್ಹವಾಗಿ ಹೆಚ್ಚಿಸಿತು. ಮಾತ್ರವಲ್ಲದೆ ಅವರನ್ನು ಅಪಾರ ಅಭಿಮಾನಿಗಳ ಗುಂಪಿಗೆ ಪ್ರೀತಿಸುವಂತೆ ಮಾಡಿತು, ಅವರಿಗೆ “ಬಾಹುಬಲಿಯ ಧ್ವನಿ” ಮತ್ತು ಪ್ರೀತಿಯಿಂದ “ಭಾರತದ ಧ್ವನಿ” ಎಂಬ ಬಿರುದು ಸಿಗುವಂತಾಯಿತು. ಮೊದಲು ನಾನೊಬ್ಬ ನಟ. ಉತ್ತಮವಾಗಿ ಅಭಿನಯಿಸಬಲ್ಲೆ. ವಿವಿಧ ಬಗೆಯ ಪಾತ್ರಗಳನ್ನು ಮಾಡುತ್ತಾ ಬಂದಿದ್ದೇನೆ. ಆದರೂ ಒಳ್ಳೆಯ ಕಾಲಕ್ಕೆ ಕಾಯುತ್ತಿದ್ದೇನೆ. ಅತ್ಯುತ್ತಮವಾದದ್ದು ಇನ್ನು ಬರಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ ಎನ್ನುತ್ತಾರೆ ಶರದ್.

ಇದನ್ನೂ ಓದಿ: Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ

ಎ ಗ್ರಾಫಿಕ್ ಇಂಡಿಯಾ ಮತ್ತು ಆರ್ಕ ಮೀಡಿಯಾ ವರ್ಕ್ಸ್ ಪ್ರೊಡಕ್ಷನ್ ಅಡಿಯಲ್ಲಿ ಎಸ್.ಎಸ್. ರಾಜಮೌಳಿ- ಶರದ್‌ದೇವರಾಜನ್ ಕ್ರಿಯೆಟೀವ್ ಮುಖ್ಯಸ್ಥರಾಗಿದ್ದು, ಜೀವನ್ ಜೆ. ಕಾಂಗ್, ನವೀನ್ ಜಾನ್ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. ಇವರೆಲ್ಲರೂ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ ಎಂದು ಶರದ್ ಹೇಳಿದ್ದಾರೆ.


ಅನಿಮೇಟೆಡ್ ಸರಣಿ ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಹಿಂದಿ ಭಾಷೆಗೆ ಭಾಷಾಂತರವಾಗಿದ್ದು, ಕೇಲ್ಕರ್ ಧ್ವನಿ ನೀಡಿದ್ದಾರೆ. ಈ ಸರಣಿಯು ಮೇ 17ರಿಂದ ಡಿಸ್ನಿ ಪ್ಲಸ್‌ನಲ್ಲಿ ಪ್ರದರ್ಶನ ಕಾಣುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

Kannada New Movie: ಇಂಡಿಯನ್ ಫಿಲಂ ಹೌಸ್‌ನಿಂದ ಉತ್ತಮ ಕಥೆ ಮತ್ತು ಚಿತ್ರಕಥೆಗಾಗಿ ಪ್ರಶಸ್ತಿಗಳನ್ನು ಕೂಡ ಪಡೆದಿದ್ದಾರೆ. ಇದರ ಅನುಭವದಿಂದಲೇ ಈಗ ಸಿನಿಮಾಕ್ಕೆ ಕಥೆ,ಚಿತ್ರಕಥೆ ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರೊಫೆಸರ್, ಇಂಜಿನಿಯರ್ ಹಾಗೂ ಇತರೆ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವವರು ಚಿತ್ರದಲ್ಲಿ ಕಲಾವಿದರು, ತಂತ್ರಜ್ಘರಾಗಿ ಗುರುತಿಸಿಕೊಳ್ಳುತ್ತಿರುವುದು ವಿಶೇಷ.

VISTARANEWS.COM


on

Kannada New Movie Nava Digantha latest news
Koo

ಬೆಂಗಳೂರು: ’ನವ ದಿಗಂತ’ ಚಿತ್ರದ ಮುಹೂರ್ತ ಸಮಾರಂಭವು ಶಕ್ತಿ ದೇವತೆ ಸರ್ಕಲ್ ಮಾರಮ್ಮನ ಸನ್ನಿದಿಯಲ್ಲಿ ಸರಳವಾಗಿ ಮುಹೂರ್ತ ನಡೆಯಿತು. ’ಉಸಿರೆ’ ಸಿನಿಮಾದ ನಿರ್ಮಾಪಕಿ ಲಕ್ಷೀಹರೀಶ್ ಕ್ಯಾಮೆರ ಆನ್ ಮಾಡಿದರೆ, ಉದಯೋನ್ಮುಖ ಯುವ ನಟ ಭಾರ್ಗವ್ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಐಟಿ ಕಂಪೆನಿಯಲ್ಲಿ ವ್ಯವಸ್ಥಾಪಕರಾಗಿರುವ ದುರ್ಗಾಮೋಹನ್ ಅವರು ಚಿನ್ಮಯ ಸಿನಿ ಕ್ರಿಯೇಶನ್ಸ್ ನಿರ್ಮಾಣ ಸಂಸ್ಥೆ ಶುರು ಮಾಡಿ ಮೂರು ಕಿರುಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಅಲ್ಲದೆ ಇಂಡಿಯನ್ ಫಿಲಂ ಹೌಸ್‌ನಿಂದ ಉತ್ತಮ ಕಥೆ ಮತ್ತು ಚಿತ್ರಕಥೆಗಾಗಿ ಪ್ರಶಸ್ತಿಗಳನ್ನು ಕೂಡ ಪಡೆದಿದ್ದಾರೆ. ಇದರ ಅನುಭವದಿಂದಲೇ ಈಗ ಸಿನಿಮಾಕ್ಕೆ ಕಥೆ,ಚಿತ್ರಕಥೆ ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರೊಫೆಸರ್, ಇಂಜಿನಿಯರ್ ಹಾಗೂ ಇತರೆ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವವರು ಚಿತ್ರದಲ್ಲಿ ಕಲಾವಿದರು, ತಂತ್ರಜ್ಘರಾಗಿ ಗುರುತಿಸಿಕೊಳ್ಳುತ್ತಿರುವುದು ವಿಶೇಷ.

ಸಿನಿಮಾದ ಕುರಿತು ಹೇಳುವುದಾದರೆ, ಪ್ರತಿಯೊಬ್ಬರಿಗೂ ಪ್ರತಿಭೆ ಅನ್ನುವುದು ಹುಟ್ಟಿನಿಂದಲೇ ಬಂದಿರುತ್ತದೆ. ಆದರೆ ಅದನ್ನು ಮರೆತು ಜೀವನಕ್ಕೋಸ್ಕರ ಬೇರೆ ಉದ್ಯೋಗ ಮಾಡುತ್ತಿರುತ್ತೇವೆ. ನಿಜವಾದ ಸಂತೋಷ ಸಿಗುವುದು ಕಲೆಯಿಂದ ಅಂತ ತಿಳಿಯದೆ ಜೀವನ ಸಾಗಿಸುತ್ತಿರುತ್ತೇವೆ. ವೃತ್ತಿ-ಪ್ರವೃತ್ತಿಯನ್ನು ಬದುಕಿನಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ವಿದ್ಯಾರ್ಥಿ ದೆಸೆಯಿಂದ ಬಂದಾಗ ಮಾತ್ರ, ಕೊನೆತನಕ ಸಾರ್ಥಕ ಜೀವನ ನಡೆಸಬಹುದು. ಕಲೆಯ ಕಡೆ ಗಮನ ಹರಿಸಿದರೆ ಅಡ್ಡದಾರಿಗೆ ಹೋಗಲು ಮನಸು ಬಾರದೆ, ಸಕರಾತ್ಮಕ ಚಿಂತನೆ ನಡೆಸಲು ಪ್ರೇರಣೆ ಸಿಗುತ್ತದೆ. ಸಂಗೀತ, ವಾಗ್ಮಿ, ನೃತ್ಯ, ಕ್ರೀಡೆ, ಬರವಣಿಗೆ ಏನೇ ತೆಗೆದುಕೊಂಡರೂ ಅದೇ ಕಲೆಯಾಗಿರುತ್ತದೆ ಹೊರತು ಬೇರೇನೂ ಆಗಿರುವುದಿಲ್ಲ. ಕಲೆಗೆ ಸಾವಿಲ್ಲ. ಕಲೆಯಲ್ಲಿ ತೊಡಗಿಸಿಕೊಂಡವರು ಸದಾ ಉತ್ಸಾಹಿಗಳಾಗಿ ಆನಂದದಿಂದಿರುತ್ತಾರೆ. ಇಂತಹ ಅಂಶಗಳನ್ನು ಬಳಸಿಕೊಂಡು ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ. ಪೋಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಒಂದು ಒಳ್ಳೆಯ ಸಂದೇಶ ಕೊಡಲಿದೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಪ್ರೊಫೆಸರ್ ಆಗಿ ಮೇಘನಾ, ವಿದ್ಯಾರ್ಥಿಗಳಾಗಿ ಚೇತನ್, ರೋಷನ್, ಅಭಿಜಿತ್, ಪುಷ್ಪ, ಯಮುನಾ, ಆಶುತೋಷ್, ಭೋಜರಾಜ, ಸಹದ್ಯೋಗಿಗಳಾಗಿ ಅಜಯ್, ಸಂಕೀರ್ತ್ ಉಳಿದಂತೆ ಅನಿಲ್ ಮಾರ್ಟಿಬನ್, ಪ್ರೀತಿಪಾಟೀಲ್, ನವೀನ್, ಸಂಧ್ಯಾ, ಮೂರ್ತಿ, ಲಕ್ಷೀ, ಪ್ರೀತಂ, ವಾಸುದೇವಚಾರ್. ಇವರೆಲ್ಲರಿಗೂ ಪ್ರಥಮ ಅವಕಾಶ. ನಟ ಭಾರ್ಗವ್ ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬುವ ಪಾತ್ರದಲ್ಲಿ ರೀಲ್‌ದಲ್ಲಿ ಅದೇ ರೀತಿ ಕಾಣಿಸಿಕೊಳ್ಳುತ್ತಿದ್ದಾರೆ.

ನಾಲ್ಕು ಹಾಡುಗಳಿಗೆ ಶರತ್-ಪ್ರಫುಲ್ಲಾ ಸಂಗೀತ, ಪ್ರಜ್ವಲ್ ವಿನೋದ್ ಛಾಯಾಗ್ರಹಣ, ಸಂಕಲನ ನೊಮಾಡಿಕ್ ಸ್ಟುಡಿಯೋ, ನೃತ್ಯ ರೋಶನ್, ಮೇಕಪ್ ಪವಿತ್ರಾ, ಹಾಗೂ ಎರಡು ಸಾಹಸ ದೃಶ್ಯಗಳನ್ನು ಕ್ಯಾಮೆರಾ ಟ್ರಿಕ್ಸ್‌ದಲ್ಲಿ ಚಿತ್ರೀಕರಿಸಲಾಗುವುದು. ಡಾಬಸಪೇಟೆ, ಬೆಂಗಳೂರು ಸುತ್ತಮುತ್ತ ೩೦ ದಿನಗಳ ಕಾಲ ಎರಡು ಹಂತದಲ್ಲಿ ಚಿತ್ರೀಕರಣ ನಡೆಸಲು ತಂಡವು ಯೋಜನೆ ರೂಪಿಸಿಕೊಂಡಿದೆ.

Continue Reading

ಬಿಗ್ ಬಾಸ್

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

Drone Prathap: , ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ.

VISTARANEWS.COM


on

Drone Prathap Eye surgery for an old woman with her own money
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (Bigboss kannada season 10)ರ ಪ್ರಬಲ ಸ್ಪರ್ಧಿಯಾಗಿದ್ದ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿ ಹೊರ ಹೊಮ್ಮಿದ್ದರು. ಬಿಗ್​ಬಾಸ್ ವೇದಿಕೆ ಮೇಲೆ ಮಾತನಾಡಿದ್ದ ಪ್ರತಾಪ್, ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ. ಅಜ್ಜಿಯೋರ್ವರಿಗೆ ಆಪರೇಶನ್ ಮಾಡಿಸಿದ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಮುಂಚೆ ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿ ತಾವು ಮಾಡಲು ಹೊರಟಿರುವ ಸಮಾಜ ಸೇವಾ ಕಾರ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದರು. ಡ್ರೋನ್‌ ಪ್ರತಾಪ್‌ ಇನ್‌ಸ್ಟಾದಲ್ಲಿ ವಿಡಿಯೊ ಪೋಸ್ಟ್‌ ಮಾಡಿ ʻʻಎಲ್ಲರಿಗೂ ನಮಸ್ಕಾರಗಳು. ಡಾ. ರಾಜ್‌ಕುಮಾರ್‌ ಅವರು ಹೇಳ್ತಾರೆ. ನೇತ್ರದಾನ ಮಹಾದಾನ ಎಂದು. ಮುಂಬರುವ ಜೂನ್‌ 11ಕ್ಕೆ ನನ್ನ ಹುಟ್ಟು ಹಬ್ಬ ಇದೆ ಸ್ನೇಹಿತರೆ. ನನಗೆ ತುಂಬ ಕುತೂಹಲ ಇದೆ. ನನ್ನ ಹುಟ್ಟು ಹಬ್ಬವನ್ನು ಈ ಬಾರಿ ವಿಶೇಷವಾಗಿ ಆಚರಿಸಿಸಬೇಕು ಎಂದು ನಿರ್ಧಾರ ಮಾಡಿದ್ದೇನೆ. ಹಾಗಾಗಿ ಯಾರಿಗಾದರೂ ಬಡವರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಬೇಕು ಎಂದು ತೀರ್ಮಾನ ಮಾಡಿದ್ದೇನೆ.  ಯಾರಾದರೂ ಬಡವರಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಹಣ ಭರಿಸಲು ಸಾಧ್ಯವಾಗದೇ ಇರುವವರು ಇದ್ದರೆ ದಯವಿಟ್ಟು ನಮಗೆ ತಿಳಿಸಿ. ನಮಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ಕಳಿಸಿ ಅಥವಾ ಕಮೆಂಟ್ ಸೆಕ್ಷನ್​ನಲ್ಲಿ ಅವರನ್ನು ಮೆನ್ಷನ್ ಮಾಡಿ, ನಾವು ಅಗತ್ಯವಿರುವ ಐದು ಮಂದಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುತ್ತೇವೆ’ ಎಂದಿದ್ದರು.

ಅದರಂತೆ ಇಬ್ಬರು ಮಕ್ಕಳಿದ್ದರೂ ಕೂಡ ಗುಡಿಸಿಲಿನಲ್ಲಿ ಇದ್ದುಕೊಂಡು ವಾಸ ಮಾಡುತ್ತಿದ್ದ ಬಡ ಅಜ್ಜಿಯ ಕಣ್ಣಿನ ಆಪರೇಶನ್ ಮಾಡಿಸಿದ್ದಾರೆ. ಆ ಅಜ್ಜಿಯು ಪ್ರತಾಪ್ ಅವರನ್ನು ಹರಿಸಿದ್ದು, ನನಗೆ ಈಗ ಸರಿಯಾಗಿ ಕಣ್ಣು ಕಾಣುತ್ತಿದೆ ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ಡ್ರೋನ್ ಪ್ರತಾಪ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. “ಇಷ್ಟುದಿನ ನನಗೆ ಒಬ್ಬ ಮೊಮ್ಮಗ ಇದ್ದನು, ಈಗ ಇನ್ನೊಬ್ಬ ಮೊಮ್ಮಗನಾಗಿ ನೀನು ಇದ್ದೀಯಾ. ನನಗೆ ನಿಜವಾಗಿಯೂ ಖುಷಿಯಾಗಿದೆ, ನಿನಗೆ ದೇವರು ಆಯುಷ್ಯ, ಆರೋಗ್ಯ ಕೊಟ್ಟು ಒಳ್ಳೆಯದನ್ನು ಮಾಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಈ ಎಲ್ಲದಕ್ಕೂ ಮುಂಚೆ ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾಗಿದ್ದರು.

Continue Reading

ಕ್ರಿಕೆಟ್

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Ashwini Puneeth Rajkumar: ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

VISTARANEWS.COM


on

Ashwini Puneeth Rajkumar launched Appu Cup season 2
Koo

ಬೆಂಗಳೂರು: ಅಪ್ಪು ನೆನಪನ್ನು ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಅಪ್ಪು ಕಪ್‌ ಸೀಸನ್‌ 2 ಬ್ಯಾಡ್ಮಿಂಟನ್‌ ಟೂರ್ನಿಗೆ ಇಂದು ನಾಗರಬಾವಿಯ ಕಿಂಗ್ಸ್‌ ಕ್ಲಬ್‌ನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸ್ಪರ್ಧಾಳುಗಳಿಗೆ ಶುಭ ಕೋರಿ, ಮೊದಲ ಪಂದ್ಯದ ಆರಂಭಕ್ಕೆ ಟಾಸ್‌ ಹಾಕಿದರು.

PRK ಸಂಸ್ಥೆಯ ಸಹಯೋಗದೊಂದಿಗೆ ಚೇತನ್‌ ಸೂರ್ಯ ಅವರು ಈ ಟೂರ್ನಮೆಂಟ್‌ ಅನ್ನು ಆಯೋಜಿಸಿದ್ದು, ಈ ಪಂದ್ಯಾವಳಿಯು ಮೂರು ದಿನಗಳ ಕಾಲ ನಡೆಯಲಿದೆ. ಅಪ್‌ ಕಪ್‌ ಸೀಸನ್‌ 2ನಲ್ಲಿ ಹತ್ತು ತಂಡಗಳು ಭಾಗವಹಿಸಲಿದ್ದು, ಸಿನಿಮಾ, ಧಾರಾವಾಹಿ ಮತ್ತು ಮಾಧ್ಯಮದವರು ಆಡಲಿದ್ದಾರೆ.

ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಹಾಗೂ ಸಿಇಒ ದಿವ್ಯಾ ರಂಗೇನಹಳ್ಳಿ, ಡಿಪಿಐಎಸ್ ಫೌಂಡರ್‌, ಚೇರ್‌ಪರ್ಸನ್ ಸುನಿತಾ ಗೌಡ, ‌ಹಿರಿಯ ನಿರ್ಮಾಕರಾದ ಸಾರಾ ಗೋವಿಂದು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

Ghuspaithia Hindi movie: ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

VISTARANEWS.COM


on

Ghuspaithia Hindi movie release on August 9
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರಮೇಶ್ ರೆಡ್ಡಿ, ಜ್ಯೋತಿಕ ಶೆಣೈ ಹಾಗೂ ಮಂಜರಿ ಸುಸಿ ಗಣೇಶನ್ ನಿರ್ಮಿಸಿರುವ ಈ ಚಿತ್ರವನ್ನು ಸುಸಿ ಗಣೇಶನ್ ನಿರ್ದೇಶಿಸಿದ್ದಾರೆ.

ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ಮಾಪಕ ರಮೇಶ್ ರೆಡ್ಡಿ, ಈ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ. ಮುಂದೆ ಕೂಡ ಹಿಂದಿ ಚಿತ್ರಗಳನ್ನು ನಿರ್ಮಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

ಆಗಸ್ಟ್ 9ರಂದು AA ಫಿಲಂಸ್ ಮೂಲಕ ಬಿಡುಗಡೆಯಾಗಲಿರುವ ಈ ಚಿತ್ರದ ತಾರಾಬಳಗದಲ್ಲಿ ವಿನೀತ್ ಕುಮಾರ್ ಸಿಂಗ್, ಊರ್ವಶಿ ರೌಟೇಲ, ಅಕ್ಷಯ್ ಒಬೆರಾಯ್ ಮುಂತಾದವರಿದ್ದಾರೆ.

Continue Reading
Advertisement
Kannada New Movie Nava Digantha latest news
ಸಿನಿಮಾ2 mins ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

DK Shivakumar
ಕರ್ನಾಟಕ23 mins ago

Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Drone Prathap Eye surgery for an old woman with her own money
ಬಿಗ್ ಬಾಸ್28 mins ago

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

ದೇಶ30 mins ago

Chandipura Virus: ಗುಜರಾತ್‌ನಲ್ಲಿ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್‌ಗೆ 48 ಬಲಿ; 39 ಮಂದಿಗೆ ಚಾಂದಿಪುರ ವೈರಸ್ ದೃಢ

Ricky Ponting
ಕ್ರೀಡೆ33 mins ago

Ricky Ponting : ಡೆಲ್ಲಿ ಕ್ಯಾಪಿಟಲ್ಸ್​ ಕೋಚಿಂಗ್ ಹುದ್ದೆಯಿಂದ ಪಾಂಟಿಂಗ್ ನಿರ್ಗಮಿಸಿದ್ದು ಯಾಕೆ? ಕಾರಣ ಕೊಟ್ಟ ಮಾಲೀಕ ಪಾರ್ಥ್​ ಜಿಂದಾಲ್​

karnataka Rain
ಮಳೆ33 mins ago

Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು

PARIS 2024 OLYMPICS
ಕ್ರೀಡೆ51 mins ago

PARIS 2024 OLYMPICS: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಸೋಲು

Road Accident
ದೇಶ58 mins ago

Road Accident: ಕಣಿವೆಗೆ ಉರುಳಿದ ಕಾರು; ಐವರು ಮಕ್ಕಳು ಸೇರಿ 8 ಮಂದಿ ಸಾವು

Ashwini Puneeth Rajkumar launched Appu Cup season 2
ಕ್ರಿಕೆಟ್1 hour ago

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Money Guide
ಮನಿ-ಗೈಡ್1 hour ago

Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ3 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ4 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ22 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ23 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌